ನೇಹಾ ಬರ್ಬರ ಹತ್ಯೆ ಮೂಲಕ ಜಿಹಾದಿ ಮಾನಸಿಕತೆ ಮತ್ತೊಮ್ಮೆ ತಲೆ ಎತ್ತಿದೆ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ
ಪುತ್ತೂರು: ಹುಬ್ಬಳ್ಳಿ ಮಹಾನಗರ ಪಾಲಿಕೆಯ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಅವರನ್ನು ಬರ್ಬರವಾಗಿ ಹತ್ಯೆ ಮಾಡುವ ಮೂಲಕ ಜಿಹಾದಿ ಮಾನಸಿಕತೆ ಮತ್ತೊಮ್ಮೆ ತಲೆ ಎತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಘಟನೆಯ ನೈತಿಕ ಹೊಣೆ ಹೊತ್ತುರಾಜ್ಯ ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮತಾಂಧನಾದ ಫಯಾಝ್ ಎಂಬ ವ್ಯಕ್ತಿ ಪ್ರೀತಿಯ […]









