ಅಪರಾಧ

ಸುಳ್ಯ ಎಂ.ಎಸ್. ರಾಮಕೃಷ್ಣ ಕೊಲೆ ಪ್ರಕರಣದ ತೀರ್ಪು ಪ್ರಕಟ | ಡಾ. ರೇಣುಕಾ ಪ್ರಸಾದ್ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಸುಳ್ಯದ ಕೆವಿಜಿ ಪಾಲಿಟೆಕ್ನಿಟ್ ಪ್ರಾಂಶುಪಾಲರಾಗಿದ್ದ ಎಂ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಕುರುಂಜಿ ವೆಂಕಟರಮಣ ಗೌಡರ ಪುತ್ರ ಡಾ| ರೇಣುಕಾ ಪ್ರಸಾದ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹೈ ಕೋರ್ಟ್ ನ್ಯಾಯಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಬಸವರಾಜ ಅವರನ್ನೊಳಗೊಂಡ ವಿಭಾಗೀಯ ಪೀಠ ಶಿಕ್ಷೆ ಪ್ರಮಾಣ ಪ್ರಕಟ ಮಾಡಿದೆ. ಕೆಲ ದಿನಗಳ ಹಿಂದೆ ರೇಣುಕಾ ಪ್ರಸಾದ್ ಸೇರಿ ಆರು ಮಂದಿ ದೋಷಿಗಳೆಂದು ಹೈಕೋರ್ಟ್ ತೀರ್ಪು […]

ಸುಳ್ಯ ಎಂ.ಎಸ್. ರಾಮಕೃಷ್ಣ ಕೊಲೆ ಪ್ರಕರಣದ ತೀರ್ಪು ಪ್ರಕಟ | ಡಾ. ರೇಣುಕಾ ಪ್ರಸಾದ್ ಸಹಿತ ಐವರಿಗೆ ಜೀವಾವಧಿ ಶಿಕ್ಷೆ Read More »

ಪುತ್ತೂರು ದೇವಳ ಮುಂಭಾಗ ಶವ ಪತ್ತೆ!!

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಮೃತರನ್ನು ಬಸವರಾಜ ಕಲ್ಲಪ್ಪ ಜಂಲಾಳಿ ಎಂದು ಗುರುತಿಸಿದ್ದು, ಇವರಿಗೆ ಸುಮಾರು 60 ವರ್ಷ ಆಗಿರಬಹುದೆಂದು ಅಂದಾಜಿಸಲಾಗಿದೆ. ಗದಗ ಮೂಲದ ಬಸವರಾಜ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ರೈಲ್ವೇ ನಿಲ್ದಾಣಗಳಲ್ಲಿ ಭಿಕ್ಷೆ ಬೇಡುತ್ತಿರುವುದನ್ನು ಕಂಡವರಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ.

ಪುತ್ತೂರು ದೇವಳ ಮುಂಭಾಗ ಶವ ಪತ್ತೆ!! Read More »

ಪತ್ನಿ, ಪುತ್ರಿಯರ ಗುಂಡಿಕ್ಕಿ ಹತ್ಯೆಗೈದ ಪೊಲೀಸ್ ಆತ್ಮಹತ್ಯೆ!

ಕಡಪಾ: ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದ 55 ವರ್ಷದ ಆಂಧ್ರ ಪ್ರದೇಶದ ಪೊಲೀಸ್  ಹೆಡ್ ಕಾನ್ ಸ್ಟೆಬಲ್ ಒಬ್ಬರು ಬಳಿಕ ತಾನೂ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ನಡೆದಿರುವ ಘಟನೆಯು ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮನೆಯಿಂದ ಸೂಸೈಡ್ ನೋಟ್ ವಶಕ್ಕೆ ಪಡೆಯಲಾಗಿದೆ. ಕಡಪಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ವರಲು, ಬುಧವಾರ ರಾತ್ರಿ 11 ಗಂಟೆಯವರೆಗೂ ಕೆಲಸ ಮಾಡಿ ಠಾಣೆಯಿಂದ

ಪತ್ನಿ, ಪುತ್ರಿಯರ ಗುಂಡಿಕ್ಕಿ ಹತ್ಯೆಗೈದ ಪೊಲೀಸ್ ಆತ್ಮಹತ್ಯೆ! Read More »

ನಾಪತ್ತೆಯಾಗಿದ್ದ ವ್ಯಕ್ತಿ ಅಸ್ವಸ್ಥರಾಗಿ ಪತ್ತೆ; ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು

ಕಡಬ: ನಾಪತ್ತೆಯಾಗಿದ್ದ ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ಆರಾಟಿಗೆ ನಿವಾಸಿ ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ(65) ಅ.4ರಂದು ಮಧ್ಯಾಹ್ನ ಬಿ.ಸಿ.ರೋಡ್‌ನ ಬಸ್‌ನಿಲ್ದಾಣದಲ್ಲಿ ಅಸ್ವಸ್ಥರಾಗಿ ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹಳೆನೇರೆಂಕಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅ.3ರಂದು ಮಧ್ಯಾಹ್ನ ಮೊಬೈಲ್ ಅಂಗಡಿಯಲ್ಲೇ ಬಿಟ್ಟು ತೆರಳಿದ್ದ ಅವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಹಾಗೂ ಇತರೆಡೆ ಹುಡುಕಾಟ

ನಾಪತ್ತೆಯಾಗಿದ್ದ ವ್ಯಕ್ತಿ ಅಸ್ವಸ್ಥರಾಗಿ ಪತ್ತೆ; ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು Read More »

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟು | ಅರ್ಜಿ ವಜಾಗೊಳಿಸಲು ಕೋರ್ಟ್ ನೀಡಿದೆ ಮಹತ್ವದ ಕಾರಣ

ಬೆಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್‌ ಆದೇಶಿಸಿದೆ. ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ ಹಾಗೂ ನ್ಯಾಯಮೂರ್ತಿ ಅನಿಲ್ ಕೆ. ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಸಂಚಿನಲ್ಲಿ ಆರೋಪಿಗಳಾದ ಕೆ. ಇಸ್ಮಾಯಿಲ್ ಶಫಿ, (ಆರೋಪಿ 9), ಕೆ.ಮೊಹಮ್ಮದ್ ಇಕ್ಬಾಲ್ (ಆರೋಪಿ 10) ಹಾಗೂ ಎಂ.ಶಾಹೀದ್ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟು | ಅರ್ಜಿ ವಜಾಗೊಳಿಸಲು ಕೋರ್ಟ್ ನೀಡಿದೆ ಮಹತ್ವದ ಕಾರಣ Read More »

ಶಿವಮೊಗ್ಗ ಗಲಭೆ ಪ್ರಕರಣವನ್ನು ಎನ್.ಐ.ಎ.ಗೆ ವಹಿಸಲು ವಿಹಿಂಪ, ಭಜರಂಗದಳ ಆಗ್ರಹ

ಪುತ್ತೂರು: ಕಳೆದ ಎರಡು ದಿನಗಳ ಹಿಂದೆ ಶಿವಮೊಗ್ಗದಲ್ಲಿ ಮಿಲಾದ್ ಆಚರಣೆ ಸಂದರ್ಭ ಹಿಂದೂಗಳ ಟಾರ್ಗೆಟ್ ಮಾಡಿ ನಡೆಸಿದ ದಾಳಿಯನ್ನು ವಿಶ್ವ ಹಿಂದೂ ಪರಿಷತ್, ಬಜರಂಗದಳ ಖಂಡನೆ ವ್ಯಕ್ತಪಡಿಸಿದ್ದು, ಘಟನೆಯಲ್ಲಿ ಭಾಗಿಯಾದವರನ್ನು ತಕ್ಷಣ ಬಂಧಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದೆ. ಬಜರಂಗಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಿಲಾದ್ ಮೆರವಣಿಗೆ ವೇಳೆ ಅಳವಡಿಸಿದ ಬೃಹತ್ ಕಟೌಟ್ಗಳನ್ನು ಪೊಲೀಸರು ತೆಗೆಸಿದ್ದಾರೆ. ಇದನ್ನು ನೆಪವಾಗಿಟ್ಟುಕೊಂಡು ಜಾಥಾ ವೇಳೆ ತಲವಾರು ಹಿಡಿದ ಸುಮಾರು 400ಕ್ಕೂ ಅಧಿಕ ಮಂದಿ ಗ್ರಾಮವೊಂದರ

ಶಿವಮೊಗ್ಗ ಗಲಭೆ ಪ್ರಕರಣವನ್ನು ಎನ್.ಐ.ಎ.ಗೆ ವಹಿಸಲು ವಿಹಿಂಪ, ಭಜರಂಗದಳ ಆಗ್ರಹ Read More »

ಮಹಡಿಯಿಂದ ಬಿದ್ದು 2 ವರ್ಷದ ಮಗು ಮೃತ್ಯು!!

ಬೆಂಗಳೂರು: ಮಹಡಿ ಮೇಲಿಂದ ಬಿದ್ದು 2 ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ. ಮೃತ ಮಗುವನ್ನು ಕಲಬುರಗಿ ಮೂಲದ ಜಗದೀಶ್ ಮತ್ತು ಪೂಜಾ ದಂಪತಿಯ ಪುತ್ರ ಶ್ರೇಯನ್ ಎಂದು ಗುರುತಿಸಲಾಗಿದೆ. ಮೊದಲನೇ ಮಹಡಿಯಲ್ಲಿ ಆಟವಾಡುತ್ತಿದ್ದ ಮಗು ಆಯತಪ್ಪಿ ಕೆಳಗೆ ಬಿದ್ದಿದೆ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಮಹಡಿಯಿಂದ ಬಿದ್ದು 2 ವರ್ಷದ ಮಗು ಮೃತ್ಯು!! Read More »

ನೆಕ್ಕಿಲಾಡಿ: ತ್ಯಾಜ್ಯ ಎಸೆದವರಿಗೆ ತಕ್ಕ ಶಾಸ್ತಿ!!

ಉಪ್ಪಿನಂಗಡಿ: ರಸ್ತೆ ಬದಿ ತ್ಯಾಜ್ಯ ಎಸೆದು ಹೋಗಿದ್ದವನ್ನು ಪತ್ತೆಹಚ್ಚಿ, ದಂಡ ವಿಧಿಸಿದ ಘಟನೆ ಬೇರಿಕೆ ಎಂಬಲ್ಲಿ ನಡೆದಿದೆ. ತ್ಯಾಜ್ಯ ಎಸೆದವರನ್ನು ಪತ್ತೆ ಹಚ್ಚಿರುವ 34 ನೆಕ್ಕಿಲಾಡಿ ಗ್ರಾಪಂ, 5050 ರೂ. ದಂಡ ವಿಧಿಸಿದೆ. ಮನೆಯೊಂದರ ತ್ಯಾಜ್ಯವನ್ನು ಸಂಗ್ರಹಿಸಿ ತಂದು, ಸಾರ್ವಜನಿಕ ಸ್ಥಳದಲ್ಲಿ ಎಸೆದು ಹೋಗಿದ್ದರು. ಇಂತಹ ಘಟನೆ ಅಲ್ಲಲ್ಲಿ ನಡೆಯುತ್ತಿದ್ದು, ಸ್ಥಳೀಯಾಡಳಿತ ಅರಿವು ಕಾರ್ಯಕ್ರಮ ನಡೆಸುತ್ತಿದೆ. ಮಾತ್ರವಲ್ಲ, ತ್ಯಾಜ್ಯ ಎಸೆಯುವ ಬಗ್ಗೆ ಮಾಹಿತಿ ನೀಡಿ, ಇಂತಹ ತಪ್ಪು ಪುನರಾವರ್ತನೆ ಆಗದಂತೆ ತಿಳಿ ಹೇಳುವ ಕೆಲಸವನ್ನು ಮಾಡಿತ್ತು. ಆದರೂ

ನೆಕ್ಕಿಲಾಡಿ: ತ್ಯಾಜ್ಯ ಎಸೆದವರಿಗೆ ತಕ್ಕ ಶಾಸ್ತಿ!! Read More »

ಕೆಲಸಕ್ಕೆಂದು ತೆರಳಿದ್ದ ಇಚ್ಲಂಪಾಡಿಯ ಯುವಕ ನಾಪತ್ತೆ; ದೂರು

ಉಪ್ಪಿನಂಗಡಿ: ಇಚ್ಲಂಪಾಡಿ ಗ್ರಾಮದ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉರೆಜಾಲು ನಿವಾಸಿ  ಜೋಜು ಜೋಸೆಫ್ (35) ನಾಪತ್ತೆಯಾದವರು. ಕೂಲಿ ಕೆಲಸ ಮಾಡುತ್ತಿದ್ದ ಇವರು   ಸೆ. 30ರಂದು ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಸುಬ್ರಹ್ಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋಗಿದ್ದು ರಾತ್ರಿಯಾದರೂ ವಾಪಾಸು ಮನೆಗೆ ಬಂದಿಲ್ಲ. ಪೋನ್ ಮಾಡಿ ಸಂಪರ್ಕಿಸಲು ಪ್ರಯತ್ನಿಸಿದಾಗ ಪೋನ್ ಸ್ವಿಚ್ ಆಪ್ ಆಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಇವರನ್ನು  ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಮೇಸ್ತ್ರಿ ಪ್ರಶಾಂತ್‌ ಅವರಿಗೆ ರಾತ್ರಿ ಕರೆ

ಕೆಲಸಕ್ಕೆಂದು ತೆರಳಿದ್ದ ಇಚ್ಲಂಪಾಡಿಯ ಯುವಕ ನಾಪತ್ತೆ; ದೂರು Read More »

ಗುತ್ತಿಗಾರಿನಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ!

ಪಂಜ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ. ಪ್ರೇಮಾ (55) ಆತ್ಮಹತ್ಯೆ ಮಾಡಿಕೊಂಡವರು. ಪ್ರೇಮಾ ಅವರು ಗುತ್ತಿಗಾರಿನ ವಳಲಂಬೆಯ ಲಕ್ಷ್ಮಣ ಆಚಾರ್ಯ ಅವರ ಪತ್ನಿ. ಮೃತ ಪ್ರೇಮಾ ಅವರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುತ್ತಿಗಾರಿನಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ! Read More »

error: Content is protected !!
Scroll to Top