ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಗೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ನಗ, ನಗದು ಕಳವು
ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್‍ಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ, ಹಣ ಕಳವು ಮಾಡಿ ಪರಾರಿಯಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ವಿಟ್ಲ ಅಡ್ಯನಡ್ಕದಲ್ಲಿ ಕಾರ್ಯಾಚರಿಸುತ್ತಿದ್ದ ಸುಮಾರು 20 ವರ್ಷ ಹಳೆಯ ಕಟ್ಟಡದಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯ ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆ. ಯಾವುದೇ ಭದ್ರತೆಯಿಲ್ಲದ ಈ ಬ್ಯಾಂಕ್ ನಿಂದ ಕಳ್ಳತನಕ್ಕೆ ಅಜಾಗರೂಕತೆಯೇ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕಳವಾದ ಸೊತ್ತುಗಳ ನಿಖರವಾದ ಮೌಲ್ಯ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.
ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಗೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ನಗ, ನಗದು ಕಳವು Read More »










