ಸಾರ್ವಜನಿಕ ಸ್ಥಳದಲ್ಲಿ ವಿದ್ಯಾರ್ಥಿಯಿಂದ ತ್ಯಾಜ್ಯ ತೆರವು ಮಾಡಿಸಿದ ಕೃತ್ಯ: ಠಾಣೆಗೆ ದೂರು! | ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು
ಪುತ್ತೂರು: 7ನೇ ತರಗತಿ ವಿದ್ಯಾರ್ಥಿಯಿಂದ ವ್ಯಕ್ತಿಯೋರ್ವರು ತ್ಯಾಜ್ಯ ತೆರವು ಮಾಡಿಸಿರುವ ಘಟನೆ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಮಾಜಿ ಶಾಸಕ ಸಂಜೀವ ಮಠಂದೂರು ಅವರು ವಿದ್ಯಾರ್ಥಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸುವ ಭರವಸೆ ನೀಡಿದ್ದಾರೆ. ವಿದ್ಯಾರ್ಥಿಯ ತಂದೆ ಬಿಳಿಯೂರು ಗ್ರಾಮದ ನಡುಮನೆ ನಿವಾಸಿ ವಾಸಪ್ಪ ನಾಯ್ಕ ಎಂಬವರು ದೂರು ನೀಡಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕನಿಗೆ ಮಾನಸಿಕ ಹಿಂಸೆ ನೀಡಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ. […]









