ಅಪರಾಧ

ಪ್ರಚೋದನಕಾರಿ ವಿಡಿಯೋ ಹಂಚಿದ ಆರೋಪಿ ಸೆರೆ

ಫೇಸ್‌ಬುಕ್‌ ನಕಲಿ ಖಾತೆ ಮೂಲಕ ವಿಡಿಯೋ ಹಂಚುತ್ತಿದ್ದ ಪಾತಕಿ ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೂಲಕ ತಿರುಚಿದ ವಿಡಿಯೋಗಳನ್ನು ಸೃಷ್ಟಿಸಿ ಹಂಚಿಕೊಂಡು ಸಮಾಜದಲ್ಲಿ ಕೋಮು ದ್ವೇಷದ ಕಿಚ್ಚು ಹಚ್ಚಲು ಯತ್ನಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ನಿವಾಸಿ ಮಹಮ್ಮದ್ ರಫೀಕ್ (38) ಬಂಧಿತ ಆರೋಪಿ, ಈತ ನಝೀರ ಮಂಗಳೂರು ಫೇಸ್‌ಬುಕ್ ಖಾತೆಯ ಮೂಲಕ ವಿಡಿಯೋಗಳನ್ನು ಹರಿಬಿಡುತ್ತಿದ್ದ. ಕಳೆದ ಅಕ್ಟೋಬಋನಲ್ಲಿ ಈತ ತನ್ನ ಫೇಸ್‌ಬುಕ್ ಖಾತೆಯ ಮೂಲಕ ಎಐ ತಂತ್ರಜ್ಞಾನ […]

ಪ್ರಚೋದನಕಾರಿ ವಿಡಿಯೋ ಹಂಚಿದ ಆರೋಪಿ ಸೆರೆ Read More »

ಮಸೀದಿ ವಿಚಾರದಲ್ಲಿ ಮಾರಾಮಾರಿ : ಮೂರು ಪ್ರಕರಣ ದಾಖಲು

ಗುಂಪು ಕಟ್ಟಿಕೊಂಡು ಹೊಡೆದಾಟ; ಹಲವರಿಗೆ ಗಾಯ ಬಂಟ್ವಾಳ : ಉಳ್ಳಾಲ ತಾಲೂಕಿನ ಸಜಿಪಪಡು ಗ್ರಾಮದ ತಲೆಮೊಗರು ಮಸೀದಿಯ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಮಾರಾಮಾರಿ ನಡೆದಿದ್ದು, ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಹೊಡೆದಾಟದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಮೊದಲ ಪ್ರಕರಣದಲ್ಲಿ ಸಜಿಪಪಡು ನಿವಾಸಿ ಅಬ್ದುಲ್ ನವಾಝ್ (42) ಎಂಬವರು ನೀಡಿದ ದೂರಿನಂತೆ ಮಾರ್ಚ್ 22ರಂದು ಬೆಳಗ್ಗೆ ಇವರು ಮತ್ತು ಅವರ

ಮಸೀದಿ ವಿಚಾರದಲ್ಲಿ ಮಾರಾಮಾರಿ : ಮೂರು ಪ್ರಕರಣ ದಾಖಲು Read More »

ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ಪ್ರಕರಣ ಸಿಐಡಿಗೆ ವರ್ಗಾವಣೆ

ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಆದೇಶಿಸಿದ ಸರ್ಕಾರ ಮಂಗಳೂರು : ಮೂಡುಬಿದಿರೆಯ ಅಮಾನತಿನಲ್ಲಿರುವ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ಪಿ.ಜಿ.ಯ ಹೊಸ ಹೊಸ ಪ್ರಕರಣಗಳು ಬಯಲಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದೆ. ಸರ್ಕಾರ ಆದೇಶ ಹೊರಬಿದ್ದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. 2018ರಲ್ಲಿ ವೇಣೂರು ಠಾಣೆಯಲ್ಲಿ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಅಕ್ಕನ ವಿರುದ್ಧ ತಂಗಿ ದೂರು ನೀಡಿದ್ದರು. ಆ ಮಹಿಳೆ

ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ಪ್ರಕರಣ ಸಿಐಡಿಗೆ ವರ್ಗಾವಣೆ Read More »

ಮಾದಕ ದ್ರವ್ಯ ಸೇವಿಸಿದ ಯುವಕನಿಂದ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ: ಬಂಧನ

ಉಪ್ಪಿನಂಗಡಿ: ಮಾದಕ ದ್ರವ್ಯ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕಾಸರಗೋಡು ನಿವಾಸಿ ಯೂಸುಫ್ ಸಿ. ಇ. ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯ ಕರ್ವೇಲು ಎಂಬಲ್ಲಿ ಯುವಕನೊಬ್ಬ ಅಸಭ್ಯವಾಗಿ ವರ್ತಿಸುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ಹೋಗಿತ್ತು. ಅದರಂತೆ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿದೆ. ಪರೀಕ್ಷಾ ವರದಿಯಲ್ಲಿ ಯುವಕ ಡ್ರಗ್ಸ್ ಸೇವನೆ ಮಾಡಿರುವುದು ದೃಢಪಟ್ಟಿದೆ.

ಮಾದಕ ದ್ರವ್ಯ ಸೇವಿಸಿದ ಯುವಕನಿಂದ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ: ಬಂಧನ Read More »

ನಿಷೇಧಿತ ಡ್ರಗ್ಸ್ ಮಾರಾಟ: ಆರೋಪಿಗಳ ಬಂಧನ

ಮಂಗಳೂರು: ಅಟೋರಿಕ್ಷಾದಲ್ಲಿ ನಿಷೇಧಿತ ಡ್ರಗ್ಸ್ ಎಂಡಿಎಂಎ ಅನ್ನು ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನ ನಡೆಸುತ್ತಿದ್ದ ಮೂವರು ಪೆಡ್ಲರ್‌ಗಳನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹೈದರ್ ಯಾನೆ ಹೈದರ್ ಆಲಿ, ಚೆಂಬುಗುಡ್ಡೆ ನಿವಾಸಿ ಮೊಹಮ್ಮದ್ ಆಜಾದ್ ಮತ್ತು ಜೈಸನ್ ‌ಮಿನೇಜಸ್ ಎಂದು ಗುರುತಿಸಲಾಗಿದೆ. ಆರೋಪಿಗಳು ಪಂಪ್ವೆಲ್ ಮತ್ತು ಎಕ್ಕೂರು ಪ್ರದೇಶಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಅದರಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳು ಮತ್ತು ಅಟೋ‌ರಿಕ್ಷಾವನ್ನು ಪೊಲೀಸರು ವಶಕ್ಕೆ

ನಿಷೇಧಿತ ಡ್ರಗ್ಸ್ ಮಾರಾಟ: ಆರೋಪಿಗಳ ಬಂಧನ Read More »

ನಿವೃತ್ತ ಸಂಶೋಧಕನನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 5 ಕೋಟಿ ರೂ. ಲೂಟಿ

ಬೆಂಗಳೂರು: ನಗರದ ನಿವೃತ್ತ ಸಂಶೋಧಕರೊಬ್ಬರಿಗೆ ಬರೋಬ್ಬರಿ 5 ಕೋಟಿ ರೂ. ಸೈಬರ್ ವಂಚನೆ ಮಾಡಿದ್ದು, ವೃದ್ಧನನ್ನು ಬೆದರಿಸಿ ಹಣ ವರ್ಗಾಯಿಸಿಕೊಳ್ಳಲಾಗಿದೆ ಎನ್ನಲಾಗಿದೆ. 94 ವರ್ಷದ ನಿವೃತ್ತ ಸಂಶೋಧಕರಿಗೆ ಅಪರಿಚಿತ ವ್ಯಕ್ತಿಯೊಬ್ಬ ಲ್ಯಾಂಡ್ ಲೈನ್‌ಗೆ ಕರೆ ಮಾಡಿ, ನಿಮ್ಮ ವಿರುದ್ಧ ಬಳ್ಳಾರಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ಪ್ರಕರಣ ದಾಖಲಾಗಿದೆ ಎಂದು ಹೇಳಿ ಬೆದರಿಕೆ ಹಾಕಿದ್ದಾನೆ. ನಂತರ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡ ಮತ್ತೊಬ್ಬ ವ್ಯಕ್ತಿ ಸಂದೀಪ್ ರಾವ್ ಎಂಬ ಹೆಸರಿನಲ್ಲಿ ಕರೆ ಮಾಡಿ, ಆಧಾರ್ ಕಾರ್ಡ್ ವಿವರಗಳನ್ನು

ನಿವೃತ್ತ ಸಂಶೋಧಕನನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 5 ಕೋಟಿ ರೂ. ಲೂಟಿ Read More »

ಕೋರ್ಟ್‌ ಕೆಲಸದ ಆಮಿಷವೊಡ್ಡಿ 500 ಜನರಿಗೆ ವಂಚನೆ : ದಂಪತಿ ಸೆರೆ

ನಿರುದ್ಯೋಗಿಗಳಿಗೆ 25 ಕೋಟಿಗೂ ಅಧಿಕ ಮೊತ್ತ ವಂಚಿಸಿದ್ದ ದಂಪತಿ ಬೆಂಗಳೂರು: ಕೋರ್ಟ್‍ನಲ್ಲಿ ಕೆಲಸ ಕೊಡಿಸುವುದಾಗಿ 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತ ಆರೋಪಿಗಳು. ಈ ದಂಪತಿ ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಕೋರ್ಟ್‍ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸುವುದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಪಡೆದು ವಂಚಿಸಿದ್ದಾರೆ. ಹೀಗೆ ಸುಮಾರು ಐನೂರಕ್ಕೂ ಹೆಚ್ಚು ಜನರಿಂದ

ಕೋರ್ಟ್‌ ಕೆಲಸದ ಆಮಿಷವೊಡ್ಡಿ 500 ಜನರಿಗೆ ವಂಚನೆ : ದಂಪತಿ ಸೆರೆ Read More »

ಪುತ್ತೂರು : ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಪುತ್ತೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದು, ಈ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.169/2018ರ ಕಲಂ 323, 504, 506, 406, 424 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳದ ಮಲಪ್ಪುರಂ ನಿವಾಸಿ ನಿಖಿಲ್ ಕೆ (36) ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತನನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಜನಾರ್ದನ ಕೆ.ಎಂ ಹಾಗೂ ಸಿಬ್ಬಂದಿ ತಂಡ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಶಿಲುವೈಪುರದಲ್ಲಿ

ಪುತ್ತೂರು : ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಅತ್ಯಾಚಾರ ದೂರು ದಾಖಲಿಸಿದ ಶಿಕ್ಷಕಿಗೆ ಬೆದರಿಕೆ?

ಇನ್‌ಸ್ಪೆಕ್ಟರ್‌ ಸಂದೇಶ್‌ ಪರವಾಗಿ ಮಹಿಳೆಯರಿಬ್ಬರಿಂದ ಬೆದರಿಕೆ ಎಂದು ಆರೋಪ ಮಂಗಳೂರು: ಅಮಾನತಿನಲ್ಲಿರುವ ಮೂಡುಬಿದಿರೆ ಇನ್‌ಸ್ಪೆಕ್ಟರ್​​​ ಸಂದೇಶ್ ವಿರುದ್ಧ ಬೆಳ್ತಂಗಡಿ ತಾಲೂಕಿನ ವೇಣೂರು ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಿಸಿದ್ದ ಸಂತ್ರಸ್ತ ಶಿಕ್ಷಕಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಪ್ರಕರಣ ಬಯಲಾಗುತ್ತಲೇ ಸಂತ್ರಸ್ತೆಗೆ ಮಾ.19ರಂದು ಸ್ಮಿತಾ ಮತ್ತು ಸುನೀತಾ ಲೋಬೊ ಎಂಬಿಬ್ಬರು ಮಹಿಳೆಯರ ಮೂಲಕ ಸಂದೇಶ್​​ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ. ಇಬ್ಬರು ಮಹಿಳೆಯರನ್ನು ಸಂತ್ರಸ್ತೆ ಶಿಕ್ಷಕಿಯ ಮನೆಗೆ ಕಳುಹಿಸಿ ಇಲ್ಲಿಯವರೆಗೂ ನಡೆದ ವಿಚಾರಗಳ ಬಗ್ಗೆ ಬಾಯಿ ಬಿಡಬಾರದು. ಬಾಯಿ

ಅತ್ಯಾಚಾರ ದೂರು ದಾಖಲಿಸಿದ ಶಿಕ್ಷಕಿಗೆ ಬೆದರಿಕೆ? Read More »

ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ವಿರುದ್ಧ ಅತ್ಯಾಚಾರ ದೂರು ದಾಖಲು

ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಶಿಕ್ಷಕಿ ಮಂಗಳೂರು : ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಅಸಭ್ಯ ವರ್ತನೆಯ ಕಾರಣಕ್ಕೆ ಅಮಾನತುಗೊಂಡಿರುವ ಮೂಡುಬಿದಿರೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ.ವಿರುದ್ಧ ಬೆಳ್ತಂಗಡಿಯ ವೇಣೂರು ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಶಿಕ್ಷಕಿಯೊಬ್ಬರು ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ದೂರು ನೀಡಿದ್ದಾರೆ. ಶಿಕ್ಷಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು ಸಂದೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಗಂಡಂದಿರ ಮೇಲೆ ಕೇಸ್ ಹಾಕಿ ಅವರ

ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ವಿರುದ್ಧ ಅತ್ಯಾಚಾರ ದೂರು ದಾಖಲು Read More »

error: Content is protected !!
Scroll to Top