ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು: ದ.ಕ.ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿ ನಿವಾಸಿ ಬಾಲಕೃಷ್ಣ (58) ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಕರುಳು ಹಾಗೂ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕರ್ತವ್ಯ ಮಾಡುತ್ತಿದ್ದರು. ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೃತರ ಪುತ್ರ ಚೇತನ್ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕ ನೇಣು ಬಿಗಿದು ಆತ್ಮಹತ್ಯೆ Read More »








