ಅಪರಾಧ

ಅಳಕೆಮಜಲು: ಯುವಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಇಲ್ಲಿನ ಅಳಕೆಮಜಲು ನಿವಾಸಿ ಧೀರಜ್ (30) ಬುಧವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಕೆಮಜಲಿನಲ್ಲಿ ಸಮೀಪ ನಡೆದಿದೆ. ಧೀರಜ್ ಅವರು ಬಿ.ಸಿ.ರೋಡ್ ನ ಹೋಂಡಾ ಶೋ ರೂಂನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿಯನ್ನು ಅಗಲಿದ್ದಾರೆ.

ಅಳಕೆಮಜಲು: ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಸಾಮಾಜಿಕ ಜಾಲತಾಣಗಳಲ್ಲಿ  ಒಂದು ಪಕ್ಷರ ಪರ ಪ್ರಚಾರ ಮಾಡುತ್ತಿರುವ ಗ್ರಂಥ ಪಾಲಕರನ್ನು ಕೆಲಸದಿಂದ ವಜಾ ಮಾಡುವಂತೆ ಮನವಿ

ಪುತ್ತೂರು: ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ಗ್ರಂಥಪಾಲಕ ಪ್ರವೀಣ್ ವಗ್ಗ ಒಂದು ರಾಜಕೀಯ ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದು ತಕ್ಷಣ ಅವರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸಿದೆ. ಸರಕಾರಿ ಒದ್ಯೋಗಿಯಾಗಿದ್ದ ಈ ರೀತಿಯಾಗಿ ಒಂದು ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಪ್ಪು. ಯಾವುದೇ ಪಕ್ಷದ ಪರ ಇರುವಂತಿಲ್ಲ. ಬೇರೆ ಬೇರೆ ಧರ್ಮ ಜಾತಿಗಳ ವಿದ್ಯಾರ್ಥಿಗಳರುವ ಈ ಕಾಲೇಜನಲ್ಲಿ ಒಬ್ಬರು ಅಧ್ಯಾಪಕರು ಈ ರೀತಿ

ಸಾಮಾಜಿಕ ಜಾಲತಾಣಗಳಲ್ಲಿ  ಒಂದು ಪಕ್ಷರ ಪರ ಪ್ರಚಾರ ಮಾಡುತ್ತಿರುವ ಗ್ರಂಥ ಪಾಲಕರನ್ನು ಕೆಲಸದಿಂದ ವಜಾ ಮಾಡುವಂತೆ ಮನವಿ Read More »

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ದಾಳಿ| ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮತ್ತೊಮ್ಮೆ ಚುರುಕು ಪಡೆದ ಎನ್.ಐ.ಎ. ದಾಳಿ

ಮಂಗಳೂರು: ಪ್ರವೀಣ್ ನೆಟ್ಟಾರು‌ ಪ್ರಕರಣದ ಬಳಿಕ ಉಗ್ರ ಕೃತ್ಯಗಳ ಜಾಡು‌ ಹಿಡಿದಿರುವ ಎನ್.ಐ.ಎ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಮಿಂಚಿನ ದಾಳಿ ನಡೆಸಿದೆ.  ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆ ಮೇಲೆ ರೇಡ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, 16 ಕಡೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ದಾಳಿ| ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮತ್ತೊಮ್ಮೆ ಚುರುಕು ಪಡೆದ ಎನ್.ಐ.ಎ. ದಾಳಿ Read More »

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ

ಕಾಸರಗೋಡು: ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ದಾಸ್ತಾನು ಇಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿ ಮಹಮ್ಮದ್ ಮುಸ್ತಫಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, 7 ಸಾವಿರ ಡಿಟೋನೇಟರ್‌ಗಳು, 2,800 ಜಿಲೆಟಿನ್ ಕಡ್ಡಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳು ದಿನನಿತ್ಯದಂತೆ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಮ್ಮದ್ ಮುಸ್ತಫಾ ಎಂಬವನ ವಾಹನದಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿವೆ. ನಂತರ ಅವನ ಮನೆಗೆ ತೆರಳಿದಾಗ ಅಲ್ಲಿ

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ Read More »

ಬನ್ನೂರು: ಹಾಡಹಗಲೇ ಮನೆಯಿಂದ ಕಳ್ಳತನ

ಪುತ್ತೂರು: ಸೋಮವಾರ ಹಾಡಹಗಲೇ ಮನೆಯಿಂದ ಕಳ್ಳತನ ನಡೆಸಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೌನಿಶ್‌ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ. ಸೋಮವಾರ ಮಧ್ಯಾಹ್ನ 12 ಗಂಟೆಗೆ ಮನೆಯವರು ಬಂದಾಗ ಮನೆ ಹಿಂಭಾಗ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಮನೆಯ ವಸ್ತುಗಳೆಲ್ಲಾ ಚಿಲ್ಲಾಪಿಲ್ಲಿಯಾಗಿ ಬಿದ್ದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಘಟನಾ ಸ್ಥಳಕ್ಕೆ ಆಗಮಿಸಿದ್ದು

ಬನ್ನೂರು: ಹಾಡಹಗಲೇ ಮನೆಯಿಂದ ಕಳ್ಳತನ Read More »

ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನದಿಗೆ ಹಾರಿ ಆತ್ಮಹತ್ಯೆ

ಕಡಬ : ವ್ಯಕ್ತಿಯೊಬ್ಬರು ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಜಿಗಿದಿದ್ದಾರೆ ಎನ್ನಲಾಗಿದ್ದು, ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು, ಶವವನ್ನು ಮೇಲಕ್ಕೆತ್ತಲಾಗಿದೆ ಎಂದು  ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನದಿಗೆ ಹಾರಿ ಆತ್ಮಹತ್ಯೆ Read More »

ಹಲ್ಲೆ ನಡೆದದ್ದು ಕಟ್ಟಿಗೆಯಿಂದ, ತಲ್ವಾರಿನಿಂದಲ್ಲ: ಎಸ್ಪಿ‌ ಸ್ಪಷ್ಟನೆ

ಮಾಣಿ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾಣಿಯಲ್ಲಿ ನಡೆದ ಜಗಳದಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಲಾಗಿದೆಯೇ ಹೊರತು, ತಲವಾರಿನಿಂದಲ್ಲ ಎಂದು ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಇಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ

ಹಲ್ಲೆ ನಡೆದದ್ದು ಕಟ್ಟಿಗೆಯಿಂದ, ತಲ್ವಾರಿನಿಂದಲ್ಲ: ಎಸ್ಪಿ‌ ಸ್ಪಷ್ಟನೆ Read More »

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಜಗದೀಶ್ ಕಾರಂತ್

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು ಬುಧವಾರ ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಕಾರ್ಯಕರ್ತರ ಜೊತೆ ಮಾತನಾಡಿದ ಅವರು ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಈ ಸಂದರ್ಭ ಪ್ರಮುಖರು ಉಪಸ್ಥಿತರಿದ್ದರು.

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಜಗದೀಶ್ ಕಾರಂತ್ Read More »

ಕಲ್ಲಾರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ

ಪುತ್ತೂರು: ಕಲ್ಲಾರೆ ಕಟ್ಟಡವೊಂದರ ಬಳಿ ವ್ಯಕ್ತಿಯೊಬ್ಬರ ಶವ ಬುಧವಾರ ಪತ್ತೆಯಾಗಿದೆ. ಉಪ್ಪಿನಂಗಡಿ ಮೂಲದ, ಗುಜರಿ ಹೆಕ್ಕುತ್ತಿದ್ದ ಮಂಜುನಾಥ ಮೃತಪಟ್ಟ ರೀತಿಯಲ್ಲಿ ಪತ್ತೆಯಾದವರು. ಮಂಜುನಾಥ್ ಅವರು ನಿತ್ಯ ಗುಜುರಿ ಹೆಕ್ಕಿ ಜೀವನ ಸಾಗಿಸುತ್ತಿದ್ದರು. ಕಲ್ಲಾರೆ ಕಟ್ಟಡವೊಂದರ ಬಳಿ ಅವರು ಮಲಗುತ್ತಿದ್ದರು. ಕಳೆದ ಮೂರು ತಿಂಗಳ ಹಿಂದೆ ಪಕ್ಷಪಾತಕ್ಕೀಡಾಗಿ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಚೇತರಿಕೆಗೊಂಡ ಬಳಿಕ ಮತ್ತೆ ಅದೇ ಕಾಯಕ ಮಾಡುತ್ತಿದ್ದರು. ಇದೀಗ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.

ಕಲ್ಲಾರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ Read More »

ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶ

ವಿಟ್ಲ : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಕಂಬಳ ಕೋಣ ಎಂದು ನೆಪವೊಡ್ಡಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶ Read More »

error: Content is protected !!
Scroll to Top