ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ ಆತ್ಮಹತ್ಯೆ
ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪ್ಯದಲ್ಲಿ ನಡೆದಿದೆ. ಸಂಪ್ಯ ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ (46) ಮೃತರು. ಪ್ರಕಾಶ್ ಅವರು ಕೂಲಿ ಕೆಲಸ ಮಾಡಿಕೊಂಡಿದ್ದು, ಮನೆಯವರು ಬೇರೆ ಕಡೆ ತೆರಳಿದ್ದ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಂಡು ಎರಡು, ಮೂರು ದಿನ ಕಳೆದಿದೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಮಗ ಹಾಗೂ ಮನೆಯವರನ್ನು ಅಗಲಿದ್ದಾರೆ. ಸಂಪ್ಯ ಠಾಣಾ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ ಆತ್ಮಹತ್ಯೆ Read More »










