ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಕೊಲೆಗೆ ಬಿಗ್ ಟ್ವಿಸ್ಟ್ | ಕೊಲೆ ಆರೋಪದಲ್ಲಿ ಕಾರು ಚಾಲಕ ಕಿರಣ್ ಬಂಧನ
ಬೆಂಗಳೂರು: ಸರ್ಕಾರಿ ಕರ್ತವ್ಯದಲ್ಲಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಅವರ ಕೊಲೆಗೆ ಸಂಬಂಧಪಟ್ಟಂತೆ ಇದೀಗ ಬಿಗ್ ಅಪ್ಡೇಟ್ ಸಿಕ್ಕಿದ್ದು, ಪ್ರತಿಮಾ ಅವರ ಹಿಂದಿನ ಕಾರು ಚಾಲಕನೊಬ್ಬ ಈ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಸುಬ್ರಮಣ್ಯ ಠಾಣೆಯ ಪೊಲೀಸ್ ಅಧಿಕಾರಿಗಳು ಕಾರು ಚಾಲಕ ಕಿರಣ್ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣನೇ ಹತ್ಯೆ ಮಾಡಿರಬಹುದು ಎಂಬ ಶಂಕೆ […]







