ಪಶ್ಚಿಮ ಬಂಗಾಳದಲ್ಲಿ ಪಂಚಾಯಿತಿ ಚುನಾವಣೆ ವೇಳೆ ಹಿಂಸಾಚಾರ | ಒಂಭತ್ತು ಮಂದಿ ಮೃತ್ಯು
ಕೊಲ್ಕತ್ತಾ: ಪಂಚಾಯಿತಿ ಚುನಾವಣೆ ವೇಳೆ ಹಿಂಸಾಚಾರ ಭುಗಿಲೆದ್ದ ಪರಿಣಾಮ ಒಂಭತ್ತು ಮಂದಿ ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತಿ ಚುನಾವಣೆಗೆ ಮತದಾನ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆ ವೇಳೆ ತೀವ್ರ ಹಿಂಸಾಚಾರ ನಡೆದಿತ್ತು. ಪರಿಣಾಮ ಟಿಎಂಸಿ ಕಾರ್ಯಕರ್ತ ಸಹಿತ ಒಂಭತ್ತು ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಮತದಾನ ಆರಂಭಕ್ಕೂ ಕೆಲವೇ ಗಂಟೆಗಳ ಮೊದಲು ಮುರ್ಷಿದಾಬಾದ್‌ನಲ್ಲಿ ತಡರಾತ್ರಿ ಟಿಎಂಸಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದು, ಮನೆಯೊಂದನ್ನು ಧ್ವಂಸಮಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಪಂಚಾಯಿತಿ ಚುನಾವಣೆ ವೇಳೆ ಹಿಂಸಾಚಾರ | ಒಂಭತ್ತು ಮಂದಿ ಮೃತ್ಯು Read More »









