ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆಗೆ ಲಂಚ ಸ್ವೀಕಾರ ವರದಿ ಪ್ರಕಟ : ಹೊರಗುತ್ತಿಗೆ ನೌಕರರಿಂದ ಮುಷ್ಕರ
ಪುತ್ತೂರು: ಪುತ್ತೂರು ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಲಂಚ ಕೇಳುತ್ತಿದ್ದಾರೆ ಎಂಬ ಮಾಹಿತಿ ತಿಳಿದ ಸರಕಾರಿ ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿಗಳು ಶನಿವಾರ ದಿಢೀರ್ ಮರಣೋತ್ತರ ಪರೀಕ್ಷೆ ನಡೆಸುವುದಿಲ್ಲ ಮುಷ್ಕರ ನಡೆಸಿರುವ ಘಟನೆ ನಡೆದಿದೆ. ಮುಷ್ಕರದ ಪರಿಣಾಮ ಮರಣೋತ್ತರ ಪರೀಕ್ಷೆಗೆ ಬಂದ ಉಪ್ಪಿನಂಗಡಿ ಹಾಗೂ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎರಡು ಶವಗಳು ಮೂರು ಗಂಟೆಗೂ ಅಧಿಕ ಕಾಲ ಶವಾಗಾರದಲ್ಲಿ ಶವ ಪರೀಕ್ಷೆಗಾಗಿ ಕಾಯುವ ಪರಿಸ್ಥಿತಿ ಉಂಟಾಯಿತು. ಮೃತಪಟ್ಟವರ ಕುಟುಂಬಸ್ಥರು ಸೇರಿದಂತೆ ಆಪ್ತರಿಗೆ ಈ ಘಟನೆ […]









