ಪುತ್ತೂರಿನ ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ಮಹೇಶ್ ಹೃದಯಾಘಾತದಿಂದ ನಿಧನ
ಪುತ್ತೂರು: ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಫೆ. 3ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರ್ಲಡ್ಕ ನಿವಾಸಿಯಾಗಿರುವ ಬೆಟ್ಟಂಪಾಡಿ ಪ.ಪೂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳ ಭೌತಶಾಸ್ತ್ರ ವಿಷಯದ ಸಂಯೋಜಕರಾಗಿರುವ, ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತಂದಾಗ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಹಾಗೂ ಆತ್ಮೀಯರಿಗೆ ಕರುಣಿಸಲಿ .
ಪುತ್ತೂರಿನ ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ಮಹೇಶ್ ಹೃದಯಾಘಾತದಿಂದ ನಿಧನ Read More »










