ಅಪರಾಧ

ನೇಮೋತ್ಸವದಲ್ಲಿ ನೂರಾರು ಜನರ ಎದುರೇ ವೃದ್ಧೆಯ ಸರ ಎಗರಿಸಿದ ಕಳ್ಳಿಯರು

ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ನಡೆದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವದ ವೇಳೆ ವೃದ್ಧೆಯೊಬ್ಬರ ಚಿನ್ನದ ಸರವನ್ನು ಕಳ್ಳಿಯರು ಎಗರಿಸಿರುವ ಘಟನೆ ನಡೆದಿದೆ. ಮೂವರು ಕಳ್ಳಿಯರು ನಡೆಸಿದ ಈ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ಹೆಜಮಾಡಿ ನಿವಾಸಿ ಕಮಲ ಎಂಬವರು ಪೂಜೆಯಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭ, ಮೂವರು ಕಳ್ಳಿಯರು ಅವರನ್ನು ಮೂರು ಕಡೆಯಿಂದ ಸುತ್ತುವರಿದು, ಗಂಟೆ ಹೊಡೆಯುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ. ಕಳ್ಳತನವಾದ ಚಿನ್ನದ ಸರದ ಮೌಲ್ಯ ಸುಮಾರು […]

ನೇಮೋತ್ಸವದಲ್ಲಿ ನೂರಾರು ಜನರ ಎದುರೇ ವೃದ್ಧೆಯ ಸರ ಎಗರಿಸಿದ ಕಳ್ಳಿಯರು Read More »

ಮೈಸೂರು ಸ್ಫೋಟ ಪ್ರಕರಣಕ್ಕೆ ಎನ್‌ಐಎ ಎಂಟ್ರಿ

ದಟ್ಟವಾಗುತ್ತಿದೆ ಭಯೋತ್ಪಾದನೆ ಕೃತ್ಯದ ಅನುಮಾನ ಮೈಸೂರು: ಮೈಸೂರಿನ ಅರಮನೆ ಸಮೀಪ ಸಂಭವಿಸಿದ ಹೀಲಿಯಂ ಸಿಲಿಂಡರ್‌ ಸ್ಫೋಟ ಪ್ರಕರಣ ಕ್ಷಣ ಕ್ಷಣಕ್ಕೂ ತಿರುವು ಪಡೆಯುತ್ತಿದ್ದು, ಇದೀಗ ತನಿಖೆಗೆ ರಾಷ್ಟ್ರೀಯ ತನಿಖೆ (ಎನ್‌ಐಎ) ದಳ ಎಂಟ್ರಿಯಾಗಿದೆ. ಹೀಗಾಗಿ ಇದು ಭಯೋತ್ಪಾದನಾ ಕೃತ್ಯವಿರಬೇಕೆಂಬ ಅನುಮಾನ ದಟ್ಟವಾಗಿದೆ. ಇಂದು ಮೈಸೂರಿಗೆ ಎನ್‌ಎಐ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಜೊತೆ ತನಿಖೆಯ ಮಾಹಿತಿ ಪಡೆಯಲಿದ್ದಾರೆ. ಸಾಧಾರಣವಾಗಿ ಹೀಲಿಯಂ ಸ್ಫೋಟವಾಗುವುದಿಲ್ಲ. ಹೀಗಿದ್ದರೂ ಅರಮನೆಯ ಆವರಣದಲ್ಲೇ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಹಲವಾರು ಅನುಮಾನಗಳು ಈಗ ವ್ಯಕ್ತವಾಗಿವೆ.

ಮೈಸೂರು ಸ್ಫೋಟ ಪ್ರಕರಣಕ್ಕೆ ಎನ್‌ಐಎ ಎಂಟ್ರಿ Read More »

ಮೈಸೂರು ಅರಮನೆ ಮುಂಭಾಗ ಸಿಲಿಂಟರ್‌ ಸ್ಫೋಟ : ಘಟನೆ ಸುತ್ತ ಅನುಮಾನದ ಹುತ್ತ

ಬಲೂನ್‌ ಮಾರಾಟ ಮಾಡುತ್ತಿದ್ದವನ ಕೈಯಲ್ಲಿದ್ದ ಹೀಲಿಯಂ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಮೈಸೂರು: ಮೈಸೂರು ಅರಮನೆ ಬಳಿ ನಿನ್ನೆ ರಾತ್ರಿ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಪ್ರಕರಣದ ಸುತ್ತ ಹಲವು ಅನುಮಾನಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸ್‌ ತನಿಖೆ ಚುರುಕುಗೊಂಡಿದೆ.ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯ ಮಾರ್ತಾಂಡ ದ್ವಾರದ ಬಳಿ ಹೀಲಿಯಂ ಬಲೂನ್‌ ಮಾರುತ್ತಿದ್ದ ಕೋಲ್ಕತ್ತಾ ಮೂಲದ ಸಲೀಂ (40) ಮೃತಪಟ್ಟಿದ್ದು, ಆತನ ದೇಹ ಛಿದ್ರವಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ನಂಜನಗೂಡಿನ

ಮೈಸೂರು ಅರಮನೆ ಮುಂಭಾಗ ಸಿಲಿಂಟರ್‌ ಸ್ಫೋಟ : ಘಟನೆ ಸುತ್ತ ಅನುಮಾನದ ಹುತ್ತ Read More »

ಶಬರಿಮಲೆ ಚಿನ್ನ ಕಳ್ಳತನ ಆರೋಪಿಗಳಿಗೆ ಸೋನಿಯಾ ಗಾಂಧಿ ನಂಟು : ಕೇರಳ ಸಿಎಂ ಗಂಭೀರ ಆರೋಪ

ಸೋನಿಯಾ ಗಾಂಧಿಗೆ ಉಡುಗೊರೆ ಕೊಡುವ ಫೋಟೊ ಹಂಚಿಕೊಂಡು ಆರೋಪ ಮಾಡಿದ ಸಿಎಂ ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್‌ ಪೊಟ್ಟಿ ಮತ್ತು ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್‌ಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನಂಟಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಪಿಣರಾಯಿ ವಿಜಯನ್‌, ಕೇರಳದ ಮಾಜಿ ಮುಖ್ಯಮಂತ್ರಿ ಕರುಣಾಕರನ್‌, ಹಿಮಂತ ಬಿಸ್ವಾ ಶರ್ಮಾ ಅವರಿಗೆ ಸೋನಿಯಾ ಗಾಂಧಿ ಅಪಾಯಿಂಟ್ಮೆಂಟ್‌ ಸಿಕ್ಕಿರಲಿಲ್ಲ. ಆದರೆ

ಶಬರಿಮಲೆ ಚಿನ್ನ ಕಳ್ಳತನ ಆರೋಪಿಗಳಿಗೆ ಸೋನಿಯಾ ಗಾಂಧಿ ನಂಟು : ಕೇರಳ ಸಿಎಂ ಗಂಭೀರ ಆರೋಪ Read More »

ಬಾಂಗ್ಲಾದಲ್ಲಿ ಇನ್ನೋರ್ವ ಹಿಂದು ವ್ಯಕ್ತಿಯ ಹತ್ಯೆ

ರಾತ್ರಿ ಹೊತ್ತು ಥಳಿಸಿ ಕೊಂದ ಗುಂಪು ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 29 ವರ್ಷದ ಅಮೃತ್ ಮಂಡಲ್ ಅಲಿಯಾಸ್ ಸಾಮ್ರಾಟ್ ಕೊಲೆಯಾದ ವ್ಯಕ್ತಿ. ರಾಜಧಾನಿ ಢಾಕಾದಿಂದ ಸುಮಾರು ಮೂರೂವರೆ ಗಂಟೆಗಳ ದೂರದಲ್ಲಿರುವ ರಾಜ್‌ಬರಿಯ ಪಂಗ್ಶಾ ಉಪಜಿಲ್ಲೆಯಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಹತ್ಯೆ ಮಾಡಲಾಗಿದೆ. ಸಾಮ್ರಾಟ್ ‘ಸಾಮ್ರಾಟ್ ಬಹಿನಿ’ ಎಂಬ ಕ್ರಿಮಿನಲ್ ಗ್ಯಾಂಗ್‌ನ ನಾಯಕನಾಗಿದ್ದು, ಇದು ಸುಲಿಗೆ ಸೇರಿದಂತೆ ಇತರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಆರೋಪ ಹೊರಿಸಿ ಹತ್ಯೆ

ಬಾಂಗ್ಲಾದಲ್ಲಿ ಇನ್ನೋರ್ವ ಹಿಂದು ವ್ಯಕ್ತಿಯ ಹತ್ಯೆ Read More »

ಮಗಳನ್ನು ವಿವಾಹ ಮಾಡಿಕೊಡಲು ನಿರಾಕರಣೆ: ಯುವತಿಯ ತಾಯಿಗೆ ಬೆಂಕಿ ಹಚ್ಚಿದ ಆರೋಪಿ

ಬೆಂಗಳೂರು: ಮಗಳನ್ನು ಮದುವೆ ಮಾಡಿಕೊಡುವುದಿಲ್ಲ ಎಂದು ಹೇಳಿದ ಕಾರಣಕ್ಕೆ ಯುವತಿಯ ತಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿ ಆರೋಪಿ ಪರಾರಿಯಾದ ಘಟನೆ ಸಾಣೆಗುರುವನಹಳ್ಳಿಯಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಗೀತಾ (40) ಎಂದು ಗುರುತಿಸಲಾಗಿದೆ. ಆರೋಪಿ ಮುತ್ತು ತಲೆಮರೆಸಿಕೊಂಡಿದ್ದಾನೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳುನಾಡು ಮೂಲದ ಗೀತಾ ಅವರು ಸಾಣೆಗುರುವನಹಳ್ಳಿಯಲ್ಲಿ ವಾಸವಿದ್ದು, ಅಲ್ಲೇ ಪ್ರಾವಿಷನ್ ಸ್ಟೋರ್ ಇಟ್ಟುಕೊಂಡಿದ್ದರು. ಮುತ್ತು ಟೀ ಸ್ಟಾಲ್ ಇಟ್ಟುಕೊಂಡಿದ್ದ. ಮುತ್ತುವಿಗೆ ತಮ್ಮ ಮಗಳನ್ನು ಮದುವೆ ಮಾಡಿ ಕೊಡಲು ಗೀತಾ

ಮಗಳನ್ನು ವಿವಾಹ ಮಾಡಿಕೊಡಲು ನಿರಾಕರಣೆ: ಯುವತಿಯ ತಾಯಿಗೆ ಬೆಂಕಿ ಹಚ್ಚಿದ ಆರೋಪಿ Read More »

ಕೌಟುಂಬಿಕ ಜಗಳ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ : ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನ ಮೃತದೇಹ ಬುಧವಾರ ಸಂಜೆ ನೆತ್ತೋಡಿ ಎಂಬಲ್ಲಿ ಪತ್ತೆಯಾಗಿದೆ. ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಲತೀಶ ಪೂಜಾರಿ (42) ಆತ್ಮಹತ್ಯೆ ಮಾಡಿಕೊಂಡವರು. ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ವಿದೇಶದಲ್ಲಿದ್ದ ಲತೀಶ ಪೂಜಾರಿ ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಭಾನುವಾರ ಮೂಡುಬಿದಿರೆಯ ಹೊಸಂಗಡಿಯಲ್ಲಿರುವ ಹೆಂಡತಿ ಬಂದಿದ್ದರೆನ್ನಲಾಗಿದೆ. ಯಾವುದೋ ವಿಷಯಕ್ಕೆ ಜಗಳ ನಡೆದಿತ್ತೆನ್ನಲಾಗಿದ್ದು ಮಿಯ್ಯಾರಿನಲ್ಲಿರುವ ತನ್ನ ಅಣ್ಣನ ಮೊಬೈಲ್‌ಗೆ ಮೆಸೇಜ್ ಮಾಡಿ ಈ ಬಗ್ಗೆ ಹೇಳಿಕೊಂಡಿದ್ದರು. ಅಣ್ಣ ಸರಿಮಾಡುವ, ಆತುರದ ನಿರ್ಧಾರ ಬೇಡ ಎಂದು

ಕೌಟುಂಬಿಕ ಜಗಳ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಕೆನಡಾದಲ್ಲಿ ಭಾರತೀಯ ಮಹಿಳೆಯ ಹತ್ಯೆ: ಆರೋಪಿಯ ಪತ್ತೆಗೆ ಬಲೆ ಬೀಸಿರುವ ಪೊಲೀಸರು

ಟೊರೊಂಟೊ: ಕೆನಡಾದಲ್ಲಿ ಭಾರತೀಯ ಮಹಿಳೆಯೊಬ್ಬರ ಹತ್ಯೆಯಾಗಿದ್ದು, ಶಂಕಿತ ಆರೋಪಿಯ ಗುರುತು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಅಬ್ದುಲ್ ಗಫೂರ್ (32) ಎಂದು ಗುರುತಿಸಲಾಗಿದೆ. ಹತ್ಯೆಯಾದ ‌ಮಹಿಳೆಯನ್ನು ಹಿಮಾಂಶಿ ಖುರಾನಾ (30) ಎಂದು ಗುರುತಿಸಲಾಗಿದೆ. ಆಕೆಯ ಪ್ರಿಯಕರನೇ ಈ ಹತ್ಯೆ ನಡೆಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಆರೋಪಿಯ ಪತ್ತೆಗಾಗಿ ಹುಡುಕಾಟ ಆರಂಭಿಸಲಾಗಿದೆ. ಡಿ. 19 ರಂದು ಹಿಮಾಂಶಿ ನಾಪತ್ತೆ ಎಂಬುದಾಗಿ ಪೋಲೀಸ್ ಠಾಣೆಗೆ ಕರೆ ಬಂದಿದ್ದು, ಡಿ. 20 ರಂದು ಆಕೆಯ ಶವವನ್ನು ಅವರು ಕಾಣೆಯಾಗಿದ್ದಾರೆ ಎಂದು

ಕೆನಡಾದಲ್ಲಿ ಭಾರತೀಯ ಮಹಿಳೆಯ ಹತ್ಯೆ: ಆರೋಪಿಯ ಪತ್ತೆಗೆ ಬಲೆ ಬೀಸಿರುವ ಪೊಲೀಸರು Read More »

ಖತರ್‌ನಾಕ್‌ ಹನಿಟ್ರ್ಯಾಪ್‌ ಗ್ಯಾಂಗ್‌ ಬಂಧನ

ಆನ್‌ಲೈನ್‌ನಲ್ಲಿ ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್‌ ಬೆಂಗಳೂರು : ಆನ್‌ಲೈನ್‌ನಲ್ಲಿ ಹನಿಟ್ರ್ಯಾಪ್‌ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ಗಾಂಗನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೋಹದ ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್‌ನ ಇಬ್ಬರು ಯುವತಿಯರು ಸೇರಿ ಐವರನ್ನು ಆರ್‌ ಆರ್‌ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಮಲತಾ ಅಲಿಯಾಸ್ ಅಂಜಲಿ (28), ಹರ್ಷಿಣಿ ಅಲಿಯಾಸ್ ಸ್ವೀಟಿ (26) ಹಾಗೂ ಅವರ ಸಹಚರರಾದ ಜಗದೀಶ್ (35), ಮಂಜುನಾಥ್ (30) ಮತ್ತು ಲೋಕೇಶ್ (32) ಎಂದು ಗುರುತಿಸಲಾಗಿದೆ. ಸಾಫ್ಟ್‌ವೇರ್

ಖತರ್‌ನಾಕ್‌ ಹನಿಟ್ರ್ಯಾಪ್‌ ಗ್ಯಾಂಗ್‌ ಬಂಧನ Read More »

ಕೊಲೆ ಪ್ರಕರಣ : ಶಾಸಕ ಬೈರತಿ ಬಸವರಾಜ್‌ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ

ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿರುವ ಶಾಸಕ ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿಮಾಡಿದ್ದಾರೆ. ಹೀಗಾಗಿ ಬೈರತಿಗೆ ಬಂಧನ ಭೀತಿ ಹೆಚ್ಚಾಗಿದ್ದು, ಯಾವುದೇ ಕ್ಷಣದಲ್ಲಿ ಅರೆಸ್ಟ್ ಮಾಡುವ ಸಾಧ್ಯತೆಯಿದೆ. ಕಳೆದ ಐದು ದಿನಗಳಿಂದ ಬೈರತಿ ಬಸವರಾಜ್ ನಾಪತ್ತೆಯಾಗಿದ್ದು, ಮಹಾರಾಷ್ಟ್ರ ತಮಿಳುನಾಡು, ಗೋವಾದಲ್ಲಿ ಮೂರು ವಿಶೇಷ ತಂಡಗಳು ಹುಡುಕಾಟ ನಡೆಸಿವೆ. ನಿರೀಕ್ಷಣಾ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಬೈರತಿ ಬಸವರಾಜ್‌ಗೆ ಕೋರ್ಟ್

ಕೊಲೆ ಪ್ರಕರಣ : ಶಾಸಕ ಬೈರತಿ ಬಸವರಾಜ್‌ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ Read More »

error: Content is protected !!
Scroll to Top