ಅಪರಾಧ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಮತ್ತೋರ್ವ ಆರೋಪಿ ಬಂಧನ

ಬೆಳ್ಳಾರೆ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಎನ್‌ಐಎ ಇಂದು ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಒಟ್ಟು 19 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಮತ್ತೋರ್ವ ಆರೋಪಿ ಬಂಧನ Read More »

ಪ್ರಜ್ವಲ್ ರೇವಣ್ಣ ಮಾದರಿ ಲೈಂಗಿಕ ದೌರ್ಜನ್ಯ ಪ್ರಕರಣ ಪತ್ತೆ | ಪ್ರಕರಣ ದಾಖಲಾಗುತ್ತಲೇ ಆರೋಪಿ ಉದ್ಯಮಿ ಪರಾರಿ

ಉಡುಪಿ : ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣವೊಂದು ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಯುವ ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ. ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೋಕ್ಷ ಪ್ರಕರಣ ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ. ಉದ್ಯಮಿ ಶ್ರೇಯಸ್ ನಾಯ್ಕ (25) ಅರೋಪಿ. ಬಾಲಕಿಯೊಬ್ಬಳ ಮೇಲೆ ಒಂದು ವರ್ಷದಿಂದ ಆರೋಪಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ

ಪ್ರಜ್ವಲ್ ರೇವಣ್ಣ ಮಾದರಿ ಲೈಂಗಿಕ ದೌರ್ಜನ್ಯ ಪ್ರಕರಣ ಪತ್ತೆ | ಪ್ರಕರಣ ದಾಖಲಾಗುತ್ತಲೇ ಆರೋಪಿ ಉದ್ಯಮಿ ಪರಾರಿ Read More »

ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಛತ್ತೀಸ್ ಗಢದ ಯುವಕ

ಪುತ್ತೂರು: ಯುವಕನೊಬ್ಬ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುರ ಎಂಬಲ್ಲಿ ನಿನ್ನೆ ಬೆಳಕಿಗೆ ಬಂದಿದ್ದು, ಛತ್ತೀಸ್‌ಗಢದ ಮನಮೋಹನದಾಸ್ (24) ಎಂದು ತಿಳಿದು ಬಂದಿದೆ. ಪ್ರೇಮ ವೈಫಲ್ಯಕ್ಕೆ ಒಳಗಾಗಿ ಮನಮೋಹನದಾಸ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಛತ್ತೀಸ್‌ಗಢದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಅವರಿಬ್ಬರ ಮಧ್ಯೆ ವಿರಸ ಉಂಟಾಗಿದ್ದು ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪ್ರೇಯಸಿಯ ದೂರವಾಣಿಗೆ ಸಂದೇಶ ಕಳುಹಿಸಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಕಳೆದ ಒಂದು ತಿಂಗಳಿನಿಂದ ಪುತ್ತೂರಿನಲ್ಲಿ ಎಳನೀರು ಕೀಳುವ

ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಛತ್ತೀಸ್ ಗಢದ ಯುವಕ Read More »

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ದುರುಪಯೋಗ | ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಎಸ್ಐಟಿ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ (SIT) ವಶಕ್ಕೆ ಪಡೆದುಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್‌ಐಟಿ ವಶದಲ್ಲಿರುವ ಈ ಇಬ್ಬರು ಅಧಿಕಾರಿಗಳು ವಿಚಾರಣೆ ವೇಳೆ ಸಚಿವರ ಹೆಸರು ಹೇಳಿದ್ದೇ ಆದರೆ, ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ “ಎಸ್‌ಐಟಿ

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ದುರುಪಯೋಗ | ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಎಸ್ಐಟಿ Read More »

ಸಹೋದ್ಯೋಗಿ ಮಹಿಳೆಗೆ ಮಾನಸಿಕ, ಲೈಂಗಿಕ ಕಿರುಕುಳ | ಪ್ರಕರಣ ದಾಖಲು

ಉಡುಪಿ: ಸಹೋದ್ಯೋಗಿ ವೈದ್ಯ ಮಹಿಳೆಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ನೀಡಿದ ಹಿನ್ನಲೆಯಲ್ಲಿ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಆರು ತಿಂಗಳಿಂದ ತನಗೆ ಹಗಲು ರಾತ್ರಿಯೆನ್ನದೇ ವೈದ್ಯಾಧಿಕಾರಿಯೊಬ್ಬ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ, ರಾಬರ್ಟ್ ರೆಬೆಲ್ಲೋ ವಿರುದ್ಧ ಮಾನಭಂಗಕ್ಕೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ ಸರ್ಕಾರಿ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಹಿಂದಿನಿಂದಲೇ ಹಲವು ಆರೋಪಗಳಿದ್ದವು.

ಸಹೋದ್ಯೋಗಿ ಮಹಿಳೆಗೆ ಮಾನಸಿಕ, ಲೈಂಗಿಕ ಕಿರುಕುಳ | ಪ್ರಕರಣ ದಾಖಲು Read More »

ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು

ಪುತ್ತೂರು: ಆನ್ಲೈನ್ ಮೂಲಕ ಡ್ರಮ್ ಉತ್ಪನ್ನಗಳನ್ನು ಪೂರೈಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಕೃಷಿ ಉಪಕರಣಗಳನ್ನು ಪೂರೈಸದೆ ವಂಚಿಸಿರುವುದಾಗಿ ವ್ಯಕ್ತಿಯೋರ್ವರು ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನಗರದ ನರಿಮೊಗರು ನಿವಾಸಿ ಗಣೇಶ್ ಪ್ರಭು (40) ಎಂಬವರು ಈ ಕುರಿತು  ದೂರು ನೀಡಿದ್ದಾರೆ. ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ, ಅಗ್ರೋ ಉತ್ಪನ್ನಗಳನ್ನು ಕೃಷಿಕರಿಗೆ ಮಾರಾಟ ಮಾಡುತ್ತಿದ್ದು, ಯುನಿಟಿ ಪಾಲಿ ಬ್ಯಾರೆಲ್ಸ್ ಪ್ರೈವೇಟ್ ಲಿಮಿಟೆಡ್ ಅಶೋಕ ನಗರ, ಶಿವಾಜಿ ನಗರ, ಪುಣೆ, ಮಹಾರಾಷ್ಟ್ರ ಎಂಬ ಹೆಸರಿನಿಂದ ಗಣೇಶ್

ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು Read More »

ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು !

ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರದಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಕುರಿತು ಇಂದು ಮುಂಜಾನೆ ಬೆಳಕಿಗೆ ಬಂದಿದೆ. ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿದ್ದಾರೆ.

ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು ! Read More »

ರಸ್ತೆಯಲ್ಲಿ ನಮಾಜ್‍ ಪ್ರಕರಣ | ಹೇಳಿಕೆ ನೀಡಿದ ಹಿಂದೂ ಪ್ರಮುಖರ ಮೇಲಿನ ಕೇಸ್ ಹಿಂಪಡೆಯುವಂತೆ ಆಗ್ರಹ

ಪುತ್ತೂರು: ಮಂಗಳೂರಿನಲ್ಲಿ ರಸ್ತೆ ಬದಿಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಕೃತ್ಯವನ್ನು ಖಂಡಿಸಿ ಹೇಳಿಕೆ ನೀಡಿರುವ ವಿಹಿಂಪ ನ ಪ್ರಮುಖರಾದ ಶರಣ್ ಪಂಪ್‍ ವೆಲ್‍ ಹಾಗೂ ಪ್ರದೀಪ್ ಸರಿಪಲ್ಲ ಅವರ ಮೇಲೆ ಎಫ್‍ ಐಆರ್ ದಾಖಲಿಸಿರುವುದು ಖಂಡನೀಯ ಎಂದು ವಿಹಿಂಪ ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದರು. ರಾಜ್ಯ ಸರಕಾರ ಅಲ್ಪಸಂಖ್ಯಾತರ ತುಷ್ಠೀಕರಣದ ಪರಾಕಾಷ್ಟೇಯನ್ನು ತಲುಪಿದ್ದು, ಮುಂದೆ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ಅವರು ತಿಳಿಸಿದ್ದಾರೆ. ಕೂಡಲೇ ಹಿಂದೂ ನಾಯಕರ ಮೇಲೆ

ರಸ್ತೆಯಲ್ಲಿ ನಮಾಜ್‍ ಪ್ರಕರಣ | ಹೇಳಿಕೆ ನೀಡಿದ ಹಿಂದೂ ಪ್ರಮುಖರ ಮೇಲಿನ ಕೇಸ್ ಹಿಂಪಡೆಯುವಂತೆ ಆಗ್ರಹ Read More »

ಪೆನ್ ಡ್ರೈವ್ ಪ್ರಕರಣ : ವಿಮಾನ ಇಳಿಯುತ್ತಿದ್ದಂತೆ ಮಹಿಳಾ ಪೊಲೀಸ್ ಅಧಿಕಾರಿಗಳಿಂದ ಬಂಧನ

ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಜರ್ಮನಿಯಿಂದ ಬಂದು ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ನಿನ್ನೆ ಸಂಜೆ 4.05ಕ್ಕೆ ಮ್ಯೂನಿಕ್ ನಿಂದ ಹೊರಟ ಲುಫ್ತಾನ್ನಾ ಏರ್ ಲೈನ್ಸ್ ವಿಮಾನ ತಡರಾತ್ರಿ 12.50 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಯ್ತು. ಪ್ರಜ್ವಲ್ ರೇವಣ್ಣ ಅರೆಸ್ಟ್ ಮಾಡಲಿಕ್ಕಾಗಿ ಏರ್ ಪೋರ್ಟ್ ನಲ್ಲಿ ಎಸ್ಐಟಿ ಅಧಿಕಾರಿಗಳ ಟೀಂ ಕಾದು ಕುಳಿತಿತ್ತು.

ಪೆನ್ ಡ್ರೈವ್ ಪ್ರಕರಣ : ವಿಮಾನ ಇಳಿಯುತ್ತಿದ್ದಂತೆ ಮಹಿಳಾ ಪೊಲೀಸ್ ಅಧಿಕಾರಿಗಳಿಂದ ಬಂಧನ Read More »

ವ್ಯಕ್ತಿಯಿಂದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ | ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ನ್ಯಾಯವಾದಿಗಳು

ಇಂದೋರ್: ನ್ಯಾಯಾಧೀಶರ ಮೇಲೆ ಚಪ್ಪಲಿ ಹಾರ ಎಸೆದ ವ್ಯಕ್ತಿಯೊಬ್ಬನನ್ನು ನ್ಯಾಯವಾದಿಗಳು ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದೋರ್ ನಲ್ಲಿ ನಡೆದಿದೆ. ಮಹಮ್ಮದ್ ನಲಿಂ ಎಂಬಾತ  ನ್ಯಾಯಾಧೀಶರ ಮೇಲೆ ಚಪ್ಪಲಿಯ ಹಾರ ಎಸೆದವನು. ಈ ಘಟನೆಯ ನಂತರ ನ್ಯಾಯಾಲಯದ ಪರಿಸರದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಯಿತು. ವಿಚಿತ್ರವೆಂದರೆ ಈ ನ್ಯಾಯಾಲಯದಲ್ಲಿ ಈ ಹಿಂದೆಯು ಕೂಡ ಈ ರೀತಿಯ ಘಟನೆಗಳು ನಡೆದಿದ್ದವು. ಪೊಲೀಸರು ಕೂಡಾ ಯಾಕೆ ಜಾಗರೂಕರಾಗುತ್ತಿಲ್ಲ ಎಂಬುದು ಪ್ರಶ್ನೆ ಉದ್ಭವಿಸಿದೆ. ಈ ನ್ಯಾಯಾಲಯದಲ್ಲಿ ಇಬ್ಬರು ಮೌಲ್ವಿಗಳ  ವಿರುದ್ಧದ

ವ್ಯಕ್ತಿಯಿಂದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ | ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ನ್ಯಾಯವಾದಿಗಳು Read More »

error: Content is protected !!
Scroll to Top