ಅಪರಾಧ

ಇನ್‌ಸ್ಪೆಕ್ಟರ್‌ಗೆ ಲವ್‌ ಲೆಟರ್‌ ಬರೆದಿದ್ದ ಸಂಜನಾ ಮೇಲಿದೆ ಹನಿಟ್ರ್ಯಾಪ್‌ ಕೇಸ್‌

ಉದ್ಯಮಿಯನ್ನು ಬಲೆಗೆ ಕೆಡವಿ ಲಕ್ಷಗಟ್ಟಲೆ ಸುಲಿಗೆ ಮಾಡಿದ್ದ ಮಹಿಳೆ ಬೆಂಗಳೂರು: ರಾಮಮೂರ್ತಿನಗರ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಲವ್ ಮಾಡುವಂತೆ ದುಂಬಾಲು ಬಿದ್ದು ಲವ್ ಲೇಟರ್ ಬರೆದು ಇನ್ನಿಲ್ಲದಂತೆ ಕಾಡಿದ್ದ ಬೆಂಗಳೂರಿನ ರಾಮಮೂರ್ತಿನಗರ ನಿವಾಸಿಯಾ ಕಾಂಗ್ರೆಸ್‌ ಕಾರ್ಯಕರ್ತೆ ಸಂಜನಾ ಅಲಿಯಾಸ್ ವನಜಾ ಹನಿಟ್ರ್ಯಾಪ್‌ ಪ್ರವೀಣೆ ಎನ್ನುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಇನ್‌ಸ್ಪೆಕ್ಟರ್‌ ಲವ್‌ ಪ್ರಪೋಸಲ್‌ ಒಪ್ಪದಿದ್ದಾಗ ಸಂಜನಾ ಆತ್ಮಹತ್ಯೆ ಬೆದರಿಕೆ ಹಾಕಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಆತ್ಮಹತ್ಯೆ ಬೆದರಿಕೆ ಆರೋಪದ ಅಡಿ ಕೇಸ್ ದಾಖಲಿಸಿ ಜೈಲಿಗೆ […]

ಇನ್‌ಸ್ಪೆಕ್ಟರ್‌ಗೆ ಲವ್‌ ಲೆಟರ್‌ ಬರೆದಿದ್ದ ಸಂಜನಾ ಮೇಲಿದೆ ಹನಿಟ್ರ್ಯಾಪ್‌ ಕೇಸ್‌ Read More »

ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್‌

ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಿ ನೋಟಿಸ್‌ ಹೊರಡಿಸಿದ ಪುತ್ತೂರು ಸಹಾಯಕ ಆಯುಕ್ತೆ ಧರ್ಮಸ್ಥಳ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್​​ ಜಾರಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ಗಡಿಪಾರು ಮಾಡಲು ಆದೇಶ ನೀಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶವನ್ನು ನೀಡಿದ್ದಾರೆ. ಮೊನ್ನೆಯಷ್ಟೇ ತಿಮರೋಡಿಗೆ ಗಡಿಪಾರು ನೋಟೀಸ್ ನೀಡಿದ್ದ ಸ್ಟೆಲ್ಲಾ ವರ್ಗೀಸ್ ಇದೀಗ ಮತ್ತೆ ಆದೇಶ ನೀಡಿದ್ದಾರೆ. ಯಾಕೆ ಗಡಿಪಾರು ಮಾಡಬಾರದು ಅಂತ

ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್‌ Read More »

ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಬುರುಡೆ ಚಿನ್ನಯ್ಯ

ಸೆಪ್ಟೆಂಬರ್‌ 9ರಿಂದ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಡಿಸಿಕೊಂಡು ಹೋದ ಪತ್ನಿ ಧರ್ಮಸ್ಥಳ: ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಬೆಳಗ್ಗೆ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ. ಸೆಪ್ಟೆಂಬರ್ 9ರಂದು ಶಿವಮೊಗ್ಗ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ ಜೆಎಂಎಫ್‌ಸಿ ಕೋರ್ಟ್ ಅದೇಶದ ಹಿನ್ನಲೆ ಶಿವಮೊಗ್ಗಕ್ಕೆ ಶಿಫ್ಟ್ ಆಗಿದ್ದ ಚಿನ್ನಯ್ಯ ಕಾರಾಗೃಹದ ಕಾವೇರಿ ಬ್ಯಾರಕ್‌ನಲ್ಲಿದ್ದ. ಚಿನ್ನಯ್ಯನಿಗೆ ಕಳೆದ ನವೆಂಬರ್ 24ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನು ವಿಧಿಸಿ ಒಂದು

ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಬುರುಡೆ ಚಿನ್ನಯ್ಯ Read More »

ಮುಡಾ ಹಗರಣ : ಇಂದು ನ್ಯಾಯಾಲಯದ ತೀರ್ಪು

ಸಿದ್ದರಾಮಯ್ಯನವರನ್ನು ನಿರ್ದೋಷಿ ಎಂದು ಹೇಳಿದ ಲೋಕಾಯುಕ್ತ ತನಿಖೆ ಮೇಲಿನ ತೀರ್ಪು ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಕೊಟ್ಟ ಕ್ಲೀನ್‌ಚಿಟ್‌ ಕುರಿತು ನ್ಯಾಯಾಲಯ ಇಂದು ತೀರ್ಪು ನೀಡಲಿದೆ. ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ನ್ಯಾಯಾಲಯ ನೀಡುವ ತೀರ್ಪು ಈ ಪ್ರಕರಣಕ್ಕೆ ಸಂಬಂಧಿಸದಂತೆ ಮಹತ್ವದ್ದಾಗಿರಲಿದೆ. ಲೋಕಾಯುಕ್ತ ನೀಡಿದ ಕ್ಲೀನ್‌ಚಿಟ್‌ ಅನ್ನು ನ್ಯಾಯಾಲಯ ಎತ್ತಿ ಹಿಡಿದರೆ ಸಿದ್ದರಾಮಯ್ಯನವರಿಗೆ

ಮುಡಾ ಹಗರಣ : ಇಂದು ನ್ಯಾಯಾಲಯದ ತೀರ್ಪು Read More »

ಮಂಗಳೂರು: ಜೈಲಿನಲ್ಲಿ ಕೈದಿಗಳ ಹೊಡೆದಾಟ, ಮೊಬೈಲ್‌ ಪತ್ತೆ

ಅಧೀಕ್ಷಕರ ತಪಾಸಣೆಗೆ ಅಡ್ಡಿಪಡಿಸಿದ್ದ ಕೈದಿಗಳು ಮಂಗಳೂರು : ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದಾಗ ಜೈಲಿನ ಕೊಠಡಿಯೊಳಗೆ 4 ಮೊಬೈಲ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಾಗಹ ಅಧೀಕ್ಷಕ ಶರಣಬಸಪ್ಪ ಸೋಮವಾರ ಅನಿರೀಕ್ಷಿತ ತಪಾಸಣೆಗೆ ಹೋದಾಗ ವಿಚಾರಣಾಧೀನ ಕೈದಿಗಳು ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಅದೇ ದಿನ ಮತ್ತೆ ಅನಿರೀಕ್ಷಿತ ತಪಾಸಣೆ ಮಾಡಲಾಗಿತ್ತು. ಸಂಜೆ ಕೈದಿಗಳು ಎರಡು ವಿಭಾಗಗಳ ಕಬ್ಬಿಣದ ಗೇಟ್‌ಗಳನ್ನು ಅಲ್ಲಾಡಿಸುತ್ತಾ ಮುರಿಯುವ ರೀತಿಯಲ್ಲಿ ಜೋರಾಗಿ ಕೂಗಾಡುತ್ತಾ ಗಲಾಟೆ ಮಾಡಿದ್ದಾರೆ

ಮಂಗಳೂರು: ಜೈಲಿನಲ್ಲಿ ಕೈದಿಗಳ ಹೊಡೆದಾಟ, ಮೊಬೈಲ್‌ ಪತ್ತೆ Read More »

ಪ್ರೀತಿಸುವಂತೆ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಒತ್ತಡ, ಆತ್ಮಹತ್ಯೆಯ ಬೆದರಿಕೆ: ಯುವತಿಯ ವಿರುದ್ಧ FIR ದಾಖಲು

ಬೆಂಗಳೂರು: ಪೊಲೀಸ್ ಇನ್ಸ್‌ಪೆಕ್ಟರ್ ಓರ್ವರಿಗೆ ಮಹಿಳೆಯೊಬ್ಬಳು ರಕ್ತದಲ್ಲಿ ಪತ್ರ ಬರೆದು, ಕಜ್ಜಾಯದ ಡಬ್ಬ, ಬೊಕ್ಕೆ ಹಾಗೂ ಎರಡು ಶೀಟ್ ಮಾತ್ರೆಗಳನ್ನು ಅವರ ಟೇಬಲ್ ಮೇಲಿರಿಸಿ ತನ್ನನ್ನು ಪ್ರೀತಿ ಮಾಡುವಂತೆ ಪೀಡಿಸಿರುವ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಅದೇ ಠಾಣೆಯ ಇನ್ಸ್‌ಪೆಕ್ಟರ್ ಸತೀಶ್ ಎಂಬವರಿಗೆ ಅದೇ ನಗರದ ನಿವಾಸಿ ವನಜಾ ಎಂಬಾಕೆ ಪ್ರೀತಿ ಮಾಡುವಂತೆ ಪೀಡಿಸಿ, ಬೆದರಿಕೆ ಹಾಕಿರುವುದಾಗಿದೆ. ಮೆಸೇಜ್ ಮೂಲಕ ನಿರಂತರವಾಗಿ ಈಕೆ ತನ್ನನ್ನು ಪ್ರೀತಿ ಮಾಡುವಂತೆ ಸತೀಶ್ ಅವರ ಬೆನ್ನು ಬಿದ್ದಿದ್ದಾಳೆ. ಸತೀಶ್

ಪ್ರೀತಿಸುವಂತೆ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಒತ್ತಡ, ಆತ್ಮಹತ್ಯೆಯ ಬೆದರಿಕೆ: ಯುವತಿಯ ವಿರುದ್ಧ FIR ದಾಖಲು Read More »

ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಯನ್ನು ಸಿನಿಮೀಯ ರೀತಿಯಲ್ಲಿ ಹಿಡಿದ ಪೊಲೀಸರು

ಪೊಲೀಸರನ್ನು ಕಂಡು ಓಡಿಹೋಗಲು ಯತ್ನಿಸಿದಾಗ ಚರಂಡಿಗೆ ಬಿದ್ದ ಕಾರು ಮಂಗಳೂರು: ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್‌ ಒಬ್ಬನನ್ನು ಬೆನ್ನಟ್ಟಿ ಮೂಡುಬಿದಿರೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಕಲ್ಲಡ್ಕ ನಿವಾಸಿ ತೌಸೀಪ್ ಯಾನೆ ಪಪ್ಪಿ ಬಂಧಿತ ಆರೋಪಿ.‌ ನಟೋರಿಯಸ್ ರೌಡಿ ತೌಸೀಪ್ ಮೂಡುಬಿದಿರೆ ಪರಿಸರದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧನಕ್ಕೆ ಮುಂದಾಗಿದ್ದರು. ಮೂಡುಬಿದಿರೆ ಹೊರವಲಯದ ಕೊಡಂಗಲ್ಲು ಸಮೀಪ ತೌಸೀಪ್ ಬಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಆರೋಪಿಯ ಕಾರನ್ನು ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್

ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಯನ್ನು ಸಿನಿಮೀಯ ರೀತಿಯಲ್ಲಿ ಹಿಡಿದ ಪೊಲೀಸರು Read More »

ಸರ್ಕಾರಿ ಉದ್ಯೋಗ ನೇಮಕಾತಿ ನಡೆಯದ ಕಾರಣ ಯುವತಿ ಆತ್ಮಹತ್ಯೆ

4 ವರ್ಷಗಳಿಂದ ತಯಾರಿ ನಡೆಸಿದರೂ ನೇಮಕಾತಿ ಆಗದೆ ಆತ್ಮಹತ್ಯೆ ಬೆಂಗಳೂರು: ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೇಮಕಾತಿಗಳು ನಡೆಯುತ್ತಿಲ್ಲ ಏಂದು ಮನನೊಂದು ಶಿವಗಿರಿಯ ರೈಲ್ವೆ ಟ್ರ್ಯಾಕ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಪಲ್ಲವಿ ಕಗ್ಗಲ್ ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಸರ್ಕಾರಿ ಉದ್ಯೋಗ ನೇಮಕಾತಿ ನಡೆಯದ ಕಾರಣ ಯುವತಿ ಆತ್ಮಹತ್ಯೆ Read More »

ಬುರ್ಖಾ ಧರಿಸಲಿಲ್ಲ ಎಂದು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಹೂತು ಹಾಕಿದ ಪಾಪಿ ತಂದೆ

ಶೌಚಾಲಯದ ಗುಂಡಿಯಲ್ಲಿ ಶವ ಮುಚ್ಚಿ ಹಾಕಿದ ಪ್ರಕರಣ ಹತ್ತು ದಿನಗಳ ಬಳಿಕ ಬೆಳಕಿಗೆ ಲಖನೌ: ಬುರ್ಖಾ ಧರಿಸದೆ ಮನೆಯಿಂದ ಹೊರಬಂದಿದ್ದಾರೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಶೌಚಾಲಯದ ಗುಂಡಿಯೊಳಗೆ ಹೂತುಹಾಕಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಢಿ ದೌಲತ್‌ ಎಂಬ ಹಳ್ಳಿಯಲ್ಲಿ ನಡೆದಿದೆ. ಪತ್ನಿ ಬುರ್ಖಾ ಧರಿಸದೆ ಹೊರಗೆ ಹೋದದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಫಾರೂಕ್ ಎಂಬಾತ ಮೂವರನ್ನು ಕೊಲೆ ಮಾಡಿ ಹೂತು ಹಾಕಿದ ಆರೋಪಿ. ಫಾರೂಕ್‌ನ

ಬುರ್ಖಾ ಧರಿಸಲಿಲ್ಲ ಎಂದು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಹೂತು ಹಾಕಿದ ಪಾಪಿ ತಂದೆ Read More »

ಆಭರಣದಂಗಡಿಯ ವ್ಯವಸ್ಥಾಪಕನಿಂದ ಮಕ್ಕಳ ಮೇಲೆ ಹಲ್ಲೆ : ದೂರು ದಾಖಲು

ಬೆಳ್ತಂಗಡಿ : ಇಲ್ಲಿನ ಸಂತೆಕಟ್ಟೆ ಜಯಶ್ರೀ ಕಾಂಪ್ಲೆಕ್ಸ್ ಕಟ್ಟಡದಲ್ಲಿರುವ ಆಭರಣ ಮಳಿಗೆಯ ವ್ಯವಸ್ಥಾಪಕ ಮಕ್ಕಳ ಮೇಲೆ ವಿನಾಕಾರಣ ಹಲ್ಲೆ ಮಾಡಿದ ಕುರಿತು ದೂರ ಉದಾಖಲಾಗಿದೆ. ಅಶೋಕ್ ಬಂಗೇರ ಹಾಗೂ ಇತರರು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಲ್ಲೆಗೆ ಒಳಗಾದ ವಿಧ್ಯಾರ್ಥಿಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಡಿ.16ರಂದು ಬಿಎನ್ ಎಸ್ u/s 126(2),115(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವೇಣೂರು ಸಮೀಪದ ಮೂವರು ವಿದ್ಯಾರ್ಥಿಗಳು ಡಿ.15ರಂದು

ಆಭರಣದಂಗಡಿಯ ವ್ಯವಸ್ಥಾಪಕನಿಂದ ಮಕ್ಕಳ ಮೇಲೆ ಹಲ್ಲೆ : ದೂರು ದಾಖಲು Read More »

error: Content is protected !!
Scroll to Top