ಅಪರಾಧ

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ನವಜಾತ ಶಿಶುಗಳು ಜೀವಂತ ದಹನ

ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡು ಸಂಭವಿಸಿದ ಭೀಕರ ದುರಂತ ಲಖನೌ : ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದ್ದು, ನಂತರ ಬೆಂಕಿಯ ಕೆನ್ನಾಲಿಗೆ ನವಜಾತ ಶಿಶುಗಳ ತೀವ್ರ ನಿಗಾ ಘಟಕಕ್ಕೆ ಹರಡಿದೆ. ಬೆಂಕಿ ಹೊತ್ತಿಕೊಂಡಾಗ ಕಂಗೆಟ್ಟ ಮಕ್ಕಳ ಪೋಷಕರು ಜೋರಾಗಿ ಕಿರುಚಾಡತೊಡಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಕೂಡ ಆಘಾತಗೊಂಡಿದ್ದು, […]

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ನವಜಾತ ಶಿಶುಗಳು ಜೀವಂತ ದಹನ Read More »

ನೇಣು ಬಿಗಿದು ಆತ್ಮಹತ್ಯೆ !

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರಿನಲ್ಲಿ ಇಂದು ನಡೆದಿದೆ. ಬನ್ನೂರು ನಂದಿಲ ನಿವಾಸಿ ಕಿರಣ್ ಕುಮಾರ್ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡವರು. ಪುತ್ತೂರಿನ ಜ್ಯುವೆಲ್ಲರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ ರವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ,ಮಗು ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೇಣು ಬಿಗಿದು ಆತ್ಮಹತ್ಯೆ ! Read More »

ದರ್ಶನ್‌ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅನುಮತಿ

ಸೋಮವಾರದಿಂದ ಮೇಲ್ಮನವಿ ಸಲ್ಲಿಕೆ ಪ್ರಕ್ರಿಯೆ ಆರಂಭ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ ನೀಡಿದ ಜಾಮೀನು ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಹೇಳಿದ್ದಾರೆ.ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಪೊಲೀಸರ

ದರ್ಶನ್‌ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅನುಮತಿ Read More »

ಬಂದೂಕು ತೋರಿಸಿ ಬೆದರಿಸಿ ಊಟ ಮಾಡಿಕೊಂಡು ಹೋಗಿದ್ದ ನಕ್ಸಲರು

ತೀವ್ರಗೊಂಡ ಕೂಂಬಿಂಗ್‌ ಕಾರ್ಯಾಚರಣೆ, ವಾಹನ ತಪಾಸಣೆ ಕೊಪ್ಪ: ಕೊಪ್ಪದ ಕಾಡಂಚಿನ ಗ್ರಾಮದ ಮನೆಯೊಂದಕ್ಕೆ ಭೇಟಿ ನೀಡಿದ್ದ ನಕ್ಸಲರು ಬಂದೂಕು ತೋರಿಸಿ ಮನೆಯವರನ್ನು ಬೆದರಿಸಿ ಅಡುಗೆ ತಯಾರಿಸಲು ಹೇಳಿ ಊಟ ಮಾಡಿಕೊಂಡು ಹೋಗಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಡೇಗುಂದಿ ಗ್ರಾಮದ ಸುಬ್ಬೇ ಗೌಡ ಎಂಬವರ ಮನೆಯಲ್ಲಿ ನಕ್ಸಲರಿಗೆ ಸೇರಿದ್ದು ಎನ್ನಲಾಗಿರುವ ಮೂರು ಬಂದೂಕುಗಳು ಸಿಕ್ಕಿದ ಬಳಿಕ ಪೊಲೀಸರು ಮನೆಯವರನ್ನು ವಿಚಾರಣೆಗೊಳಪಡಿಸಿದ್ದು, ಆಗ ಮನೆಯವರು ತಮ್ಮನ್ನು ಬಂದೂಕು ತೋರಿಸಿ ಹೆದರಿಸಿರುವ ವಿಚಾರ ತಿಳಿಸಿದ್ದಾರೆ.ನಕ್ಸಲರ ಓಡಾಟದ

ಬಂದೂಕು ತೋರಿಸಿ ಬೆದರಿಸಿ ಊಟ ಮಾಡಿಕೊಂಡು ಹೋಗಿದ್ದ ನಕ್ಸಲರು Read More »

ಮುಡಾ ಹಗರಣದಲ್ಲಿ ಇಬ್ಬರು ಸಚಿವರೂ ಭಾಗಿ?

ವಿಚಾರಣೆ ವೇಳೆ ಒತ್ತಡ ಹಾಕಿದವರ ಹೆಸರು ಬಾಯಿಬಿಟ್ಟ ಮುಡಾ ಅಧಿಕಾರಿಗಳು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯ ಆರೋಪಿಯಾಗಿರುವ ಮುಡಾ ಹಗರಣ ಈಗ ಇಬ್ಬರು ಸಚಿವರಿಗೂ ಸುತ್ತಿಕೊಳ್ಳುವ ಸಾಧ್ಯತೆ ಗೋಚರಿಸಿದೆ. ಜಾರಿ ನಿರ್ದೇಶನಾಲಯದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಮುಡಾದ ಅಧಿಕಾರಿಗಳು ಸೈಟ್‌ ನೀಡಲು ತಮ್ಮ ಮೇಲೆ ಒತ್ತಡ ಹಾಕಿದವರ ಹೆಸರು ಬಾಯಿಬಿಟ್ಟಿದ್ದು, ಈ ಪೈಕಿ ಇಬ್ಬರು ಸಚಿವರೂ ಇದ್ದಾರೆ ಎನ್ನಲಾಗುತ್ತಿದೆ.ಇ.ಡಿ ಮುಡಾದಲ್ಲಿ ಹಿಂದೆ ಕೆಲಸ ಮಾಡಿದ ಉನ್ನತ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದೆ. ಈ ವೇಳೆ 50:50 ಅನುಪಾತದಲ್ಲಿ ಸೈಟ್ ಹಂಚಿಕೆ

ಮುಡಾ ಹಗರಣದಲ್ಲಿ ಇಬ್ಬರು ಸಚಿವರೂ ಭಾಗಿ? Read More »

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯರಿಗೆ ಜಾಮೀನು ಮಂಜೂರು

ಸುಳ್ಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಫೋಕ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾದ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಯಾಯರಿಗೆ ಪುತ್ತೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿದೆ. ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೆ.19 ರಂದು ಬೆಳ್ಳಾರೆ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಇದೀಗ ಪ್ರಸಾದ್ ಪಾಂಗ್ರಣ್ಯಾಯರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಘೋಷಣೆ ಮಾಡಿದೆ. ಆರೋಪಿಯ ಪರವಾಗಿ ಪುತ್ತೂರಿನ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯರಿಗೆ ಜಾಮೀನು ಮಂಜೂರು Read More »

ಸಿದ್ದಿಕಿ ಸಾವನ್ನು ದೃಢಪಡಿಸಿಕೊಳ್ಳಲು ಆಸ್ಪತ್ರೆ ಎದುರೇ ಕಾದು ಕುಳಿತಿದ್ದ ಹಂತಕ

ಕೊಲೆ ಮಾಡಿ ಬಟ್ಟೆ ಬದಲಾಯಿಸಿ ಮರಳಿ ಅಲ್ಲಿಗೆ ಬಂದಿದ್ದ ಶೂಟರ್‌ ಮುಂಬಯಿ : ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್‌ ಗೌತಮ್‌ ಎಂಬಾತನನ್ನು ಮುಂಬಯಿ ಪೊಲೀಸರು ಇತ್ತೀಚೆಗೆ ನೇಪಾಳದ ಗಡಿಯಲ್ಲಿ ಬಂಧಿಸಿದ್ದಾರೆ. ಈತನ ವಿಚಾರಣೆಯಿಂದ ಕೊಲೆಯ ಸಂಚಿನ ರಹಸ್ಯಗಳು ಬಯಲಾಗುತ್ತಿವೆ. ಸಿದ್ದಿಕಿಗೆ ಗುಂಡಿಕ್ಕಿದ ಬಳಿಕ ಈತ ಅವರು ಸತ್ತಿರುವುದನ್ನು ದೃಢಪಡಿಸಿಕೊಳ್ಳುವ ಸಲುವಾಗಿ ಆಸ್ಪತ್ರೆ ಎದುರು ಅರ್ಧ ತಾಸಿಗೂ ಹೆಚ್ಚು ಹೊತ್ತು ಕಾದು ಕುಳಿತಿದ್ದನಂತೆ.ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಮಾಡಿದ ಈ ಹತ್ಯೆ

ಸಿದ್ದಿಕಿ ಸಾವನ್ನು ದೃಢಪಡಿಸಿಕೊಳ್ಳಲು ಆಸ್ಪತ್ರೆ ಎದುರೇ ಕಾದು ಕುಳಿತಿದ್ದ ಹಂತಕ Read More »

ಸಚಿವ ಜಮೀರ್‌ಗೆ ಜೀವ ಬೆದರಿಕೆ : ಪುನೀತ್‌ ಕೆರೆಹಳ್ಳಿ ಬಂಧನ

ಕರಿಯ ಎಂದರೆ ಹಾಸನ, ಮಂಡ್ಯ ಗಡಿ ದಾಟಲು ಬಿಡುವುದಿಲ್ಲ ಎಂದು ಧಮಕಿ ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಪುನೀತ್‌ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು. 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ

ಸಚಿವ ಜಮೀರ್‌ಗೆ ಜೀವ ಬೆದರಿಕೆ : ಪುನೀತ್‌ ಕೆರೆಹಳ್ಳಿ ಬಂಧನ Read More »

ನಕ್ಸಲರಿಗೆ ಅಸ್ತ್ರವಾಗಿ ಸಿಕ್ಕಿದ ಕಸ್ತೂರಿ ರಂಗನ್‌ ವರದಿ ಜಾರಿ ವಿಷಯ

ಮುಂಡಗಾರು ಲತಾ ನೇAತೃತ್ವದ ನಕ್ಸಲ್‌ ತಂಡ ಸಕ್ರಿಯ ಕಾರ್ಕಳ : ಪಶ್ಚಿಮ ಘಟ್ಟದ ಕಾಡಿನಂಚಿನಲ್ಲಿ ಕೊಂಚ ಸಮಯ ತಣ್ಣಗಾಗಿದ್ದ ನಕ್ಸಲ್‌ ಚಟುವಟಿಕೆ ಮತ್ತೆ ಜೀವ ಪಡೆದುಕೊಂಡಿರುವುದು ಕಳೆದ ಒಂದು ವಾರದ ಬೆಳವಣಿಗೆಯಿಂದ ದೃಢಪಟ್ಟಿದೆ. ಹೋರಾಡಲು ಗಟ್ಟಿಯಾದ ವಿಷಯ ಇಲ್ಲದೆ ಮತ್ತು ನಿರಂತರವಾದ ಪ್ರತಿರೋಧದಿಂದಾಗಿ ಕಳೆದ ಕೆಲ ವರ್ಷಗಳಿಂದ ಪಶ್ಚಿಮ ಘಟ್ಟದ ಅಂಚಿನ ಪ್ರದೇಶಗಳಲ್ಲಿ ನಕ್ಸಲರು ಹೆಚ್ಚು ಚಟುವಟಿಕೆ ನಡೆಸುತ್ತಿರಲಿಲ್ಲ. ಆದರೆ ಯಾವಾಗ ಸರಕಾರ ಕುದುರೆಮುಖ ರಾಷ್ಟ್ರೀಯ ಅರಣ್ಯದ ಒತುವರಿ ತೆರವಿಗೆ ಆದೇಶಿಸಿತೋ ಆಗಲೇ ಎದ್ದು ಕುಳಿತ ನಕ್ಸಲರು

ನಕ್ಸಲರಿಗೆ ಅಸ್ತ್ರವಾಗಿ ಸಿಕ್ಕಿದ ಕಸ್ತೂರಿ ರಂಗನ್‌ ವರದಿ ಜಾರಿ ವಿಷಯ Read More »

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | ಆರೋಪಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಜಿಲ್ಲಾ ಸತ್ರ ನ್ಯಾಯಾಲಯ

ಪುತ್ತೂರು: ಅಪ್ರಾಪ್ತ ಬಾಲಕಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿಗೆ ಪೋಕ್ಸೋ ಕಾಯ್ದೆಯಡಿ 3 ವರ್ಷಗಳ ಜೈಲು ಶಿಕ್ಷೆ ಮತ್ತು ರೂ.20 ಸಾವಿರ ದಂಡ ವಿಧಿಸಿದೆ. ದಂಡ ತೆರಲು ತಪ್ಪಿದಲ್ಲಿ ಮತ್ತೆ 6 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶ ಸರಿತಾ ಡಿ ಅವರು ತೀರ್ಪು ನೀಡಿದ್ದಾರೆ. ಕಬಕ ಗ್ರಾಮದ ವಿದ್ಯಾಪುರ ನಿವಾಸಿ ಮಹಮ್ಮದ್ ಮುಸ್ತಾಫ ಯಾನೆ ಮುಸ್ತಾಫ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | ಆರೋಪಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಜಿಲ್ಲಾ ಸತ್ರ ನ್ಯಾಯಾಲಯ Read More »

error: Content is protected !!
Scroll to Top