ಅಪರಾಧ

ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಫ್ಲಶ್ ಮಾಡುವ ಸಂದರ್ಭದಲ್ಲಿ ಕಲ್ಲು ತೂರಾಟ

ಪುರುಷರಕಟ್ಟೆ: ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಎಸ್. ಡಿ. ಪಿ. ಐ. ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಪುರುಷರಕಟ್ಟೆ ಯಲ್ಲಿರುವ ಸಾಫ್ಟ್ ಡ್ರಿಂಕ್ ಪ್ಯಾಕ್ಟರಿ ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಗಳನ್ನು ಫ್ಲಶ್ ಮಾಡುವ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕೆಲವು ಸ್ಥಳೀಯ ಎಸ್ ಡಿ ಪಿ ಐ ಕಾರ್ಯಕರ್ತರು ಬೋರ್ ವೆಲ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆ […]

ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಫ್ಲಶ್ ಮಾಡುವ ಸಂದರ್ಭದಲ್ಲಿ ಕಲ್ಲು ತೂರಾಟ Read More »

ಓವರ್ ಟೇಕ್ ವಿಚಾರ : ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಯುವಕನ ಮೇಲೆ ಹಲ್ಲೆ

ಮಂಡ್ಯ : ಓವ‌ರ್ ಟೇಕ್ ಮಾಡಲು ಹೋಗಿ ಬೈಕ್‌ಗೆ ಟಚ್ ಮಾಡಿರುವುದನ್ನು ಅಭಿಲಾಷ್ ಇಬ್ಬರು ಮುಸ್ಲಿಂ ಯುವಕರನ್ನು ಪ್ರಶ್ನಿಸಿದ್ದಾರೆ. ಇದೇ ದ್ವೇಷ ಇಟ್ಟುಕೊಂಡು ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಅಭಿಲಾಷ್ ನನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ಸ್ಥಳೀಯ ಮುಸ್ಲಿಂ ಯುವಕರ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬೆಳ್ಳೂರು ಪೊಲೀಸ್‌ ಠಾಣೆ ಎದುರು

ಓವರ್ ಟೇಕ್ ವಿಚಾರ : ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಯುವಕನ ಮೇಲೆ ಹಲ್ಲೆ Read More »

ಇಂಡಿಗೋ ವಿಮಾನಕ್ಕೆ ಬಾಂಬ್‍ ಬೆದರಿಕೆ | ತನಿಖೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರ

ದೆಹಲಿ: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿರುವುದಾಗಿ ತಿಳಿದು ಬಂದಿದ್ದು, ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬೆದರಿಕೆ ಕರೆ ಬಂದಿದ್ದು, ವಿಮಾನಯಾನ ಭದ್ರತೆ ಮತ್ತು ಬಾಂಬ್ ನಿಷ್ಕ್ರಿಯ ತಂಡವು ಸ್ಥಳದಲ್ಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ಎಎನ್ ಐಗೆ ತಿಳಿಸಿದ್ದಾರೆ. ಇಂದು ಮುಂಜಾನೆ 5.35 ಕ್ಕೆ ದೆಹಲಿಯಿಂದ ವಾರಣಾಸಿಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಇತ್ತು. QRT ಸ್ಥಳಕ್ಕೆ ತಲುಪಿತು. ಎಲ್ಲಾ ಪ್ರಯಾಣಿಕರನ್ನು ತುರ್ತು ಬಾಗಿಲಿನ

ಇಂಡಿಗೋ ವಿಮಾನಕ್ಕೆ ಬಾಂಬ್‍ ಬೆದರಿಕೆ | ತನಿಖೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರ Read More »

ವಾಹನ ಓಡಾಟದ ನಡುವೆಯೇ ರಸ್ತೆಯಲ್ಲಿ ನಮಾಜ್‍ | ಎಲ್ಲೆಡೆ ವ್ಯಾಪಕ ಆಕ್ರೋಶ

ಮಂಗಳೂರು: ವಾಹನ ಓಡಾಟದ ನಡುವೆಯೇ ರಸ್ತೆಯಲ್ಲಿ ಕುಳಿತು ನಮಾಜ್‍ ಮಾಡಿದ ಘಟನೆ ಮಂಗಳೂರಿನ ಕಂಕನಾಡಿ ಮಸೀದಿ ಎದುರು ನಡೆದಿದ್ದು, ಈ ಕುರಿತು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಮುಸ್ಲಿಮರು ನಡುರಸ್ತೆಯಲ್ಲಿ ಕೂತು ನಮಾಜ್ ಮಾಡುತ್ತಿದ್ದ ಭಾವಚಿತ್ರ ಎಲ್ಲಡೆ ಹರದಾಡಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಕಳೆದ ಶುಕ್ರವಾರ ಘಟನೆ ನಡೆದಿದ್ದು, ನಮಾಜ್ ಮಾಡಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ. ಯುವಕರು ನಡುರಸ್ತೆಯಲ್ಲೇ

ವಾಹನ ಓಡಾಟದ ನಡುವೆಯೇ ರಸ್ತೆಯಲ್ಲಿ ನಮಾಜ್‍ | ಎಲ್ಲೆಡೆ ವ್ಯಾಪಕ ಆಕ್ರೋಶ Read More »

ವಿದ್ಯಾರ್ಥಿಯ ಖಾತೆಯಿಂದ ನಗದು ಅಪಹರಿಸಿ ವಂಚನೆ : ಪ್ರಕರಣ ದಾಖಲು

ಉಜಿರೆ: ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆಯಿಂದ ನಗದು ಅಪಹರಿಸಿದ ಘಟನೆ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್ ಸುರೇಶ್ ರೂಗಿ ಎಂಬವರ ಖಾತೆಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ್ದಾರೆ. ಗುಲ್ಬರ್ಗ ಜಿಲ್ಲೆಯ ಅಫಲ್ ಪುರದ ಯೂನಿಯನ್ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದು ಈ ಖಾತೆಯಿಂದ ಹಣ ಎಗರಿಸಲಾಗಿದೆ. ಮೇ 23ರವರೆಗೆ ಅವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30ರ ಹೊತ್ತಿಗೆ ಇವರ ಮೊಬೈಲ್ ಗೆ

ವಿದ್ಯಾರ್ಥಿಯ ಖಾತೆಯಿಂದ ನಗದು ಅಪಹರಿಸಿ ವಂಚನೆ : ಪ್ರಕರಣ ದಾಖಲು Read More »

ಮನೆಗೆ ನುಗ್ಗಿದ ಕಳ್ಳರು ಡಿವಿಆರ್ ಹೊತ್ತೊಯ್ದರು

ವಿಟ್ಲ : ಮನೆಗೆ ನುಗ್ಗಿದ ಕಳ್ಳರು ಒಂದು ಲಕ್ಷ ರೂ. ಮೌಲ್ಯದ ವಾಚ್ ಜತೆಗೆ ಡಿವಿಆರ್ ಹಪತ್ತೊಯ್ದ ಘಟನೆ ವಿಟ್ಲ ಪರ್ತಿಪಾಡಿನಲ್ಲಿ ನಡೆದಿದೆ. ವಿಟ್ಲ ಪಡೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಎಂ.ಕೆ.ಖಲೀಲ್ ಎಂಬವರ ಮನೆಗೆ ಕನ್ನ ಹಾಕಿದ್ದಾರೆ. ಖಲೀಲ್ ಕುಟುಂಬ ಅರಬ್ ರಾಷ್ಟ್ರದ ಅಹ್ಮನ್ ನಲ್ಲಿದ್ದು ಆರು ತಿಂಗಳ ಹಿಂದಷ್ಟೇ ಊರಿಗೆ ಬಂದು ಹೋಗಿದ್ದರು. ಭಾನುವಾರ ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಮುಂಭಾಗದ ಬಾಗಿಲು ತೆರೆದಿರುವುದನ್ನು ಗಮನಿಸಿ ಅನುಮಾನದಿಂದ ಮನೆಗೆ ಹೋಗಿ ನೋಡಿದಾಗ ಅಂಗಳದಲ್ಲಿದ್ದ

ಮನೆಗೆ ನುಗ್ಗಿದ ಕಳ್ಳರು ಡಿವಿಆರ್ ಹೊತ್ತೊಯ್ದರು Read More »

ಬ್ಯೂಟಿಷಿಯನ್ ಅಕ್ಷತಾ ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಗತ್ಯೆ ಮಾಡಿಕೊಂಡ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಇಂದು ನಡೆದಿದೆ. ಅಕ್ಷತಾ (30)  ಆತ್ಮಹತ್ಯೆ ಮಾಡಿಕೊಂಡವರು. ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅಕ್ಷತಾ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಅಕ್ಷತಾ ಅವರು ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದವರು. ಚಂದ್ರಗುತ್ತಿ ಗ್ರಾಮದ ಸಂತೋಪ್ ಜೊತೆ ಅಕ್ಷತಾ ಅವರ ಮದುವೆ ಆಗಿತ್ತು. ಹೊಟ್ಟೆನೋವು ತಾಳಲಾರದೆ ಸೊರಬ ಪಟ್ಟಣದ ವಿದ್ಯುತ್ ನಗರದ ಮನೆಯಲ್ಲಿ ಅಕ್ಷತಾ ಆತ್ಮಹತ್ಯೆ

ಬ್ಯೂಟಿಷಿಯನ್ ಅಕ್ಷತಾ ಆತ್ಮಹತ್ಯೆಗೆ ಶರಣು Read More »

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಐದನೇ ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಮತ್ತೊಬ್ಬ ಶಂಕಿತನನ್ನು ಬಂಧಿಸಿದೆ.  ಲಷ್ಕರ್-ಎ- ತೊಯ್ಯಾ (ಎಲ್ಇಟಿ) ಪ್ರಕರಣದ ಮಾಜಿ ಅಪರಾಧಿ, ಕರ್ನಾಟಕದ ಹುಬ್ಬಳ್ಳಿ ಮೂಲದ ಶೋಯೆಬ್ ಅಹ್ಮದ್ ಮಿರ್ಜಾ (35) ಬಂಧಿತ ಐದನೇ ವ್ಯಕ್ತಿ. ಈ ಹಿಂದೆ ಎಲ್ಇಟಿ ಬೆಂಗಳೂರು ಪಿತೂರಿ ಪ್ರಕರಣದಲ್ಲಿ ಅಪರಾಧಿಯಾಗಿದ್ದ ಮಿರ್ಜಾ ಜೈಲಿನಿಂದ ಹೊರಬಂದ ನಂತರ ಹೊಸ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಎನ್ಐಎ ತನಿಖೆಗಳು ಬಹಿರಂಗಪಡಿಸಿವೆ. ಎನ್ಐಎ ಅಧಿಕಾರಿಗಳು ಮೂರು ದಿನಗಳ ಹಿಂದಷ್ಟೇ ರಾಮೇಶ್ವರಂ ಕೆಫೆ ಸ್ಫೋಟ

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಐದನೇ ಆರೋಪಿ ಬಂಧನ Read More »

ಬಾಂಗ್ಲಾ ದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ನ ಹತ್ಯೆ ಮಾಡಿ ಚರ್ಮ ಸುಲಿದ ಹಂತಕರು | ಪ್ರಮುಖ ಆರೋಪಿ ಬಂಧನ

ಹೊಸದಿಲ್ಲಿ: ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರನ್ನು ಬಾಂಗ್ಲಾದೇಶದಲ್ಲಿ ಬರ್ಬರವಾಗಿ ಕೊಲೆ ಮಾಡಿದ ವಿಚಾರ ತನಿಖೆಯಿಂದ ಬಯಲಾಗಿದ್ದು, ಹತ್ಯೆಯ ಪ್ರಮುಖ ಆರೋಪಿ ಬಾಂಗ್ಲಾ ದೇಶದ ಅಕ್ರಮ ವಲಸಿಗ ಜಿಹಾದ್ ಹವಾಲ್ದಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸಂಸದರನ್ನು ಕತ್ತು ಹಿಸುಕಿ, ಚರ್ಮ ಸುಲಿದು ಕತ್ತರಿಸಿ ಹಾಕಲಾಗಿತ್ತು. ಸಿಐಡಿ ಮೂಲಗಳ ಪ್ರಕಾರ, ಕೋಲ್ಕತ್ತಾದ ನ್ಯೂಟೌನ್‌ನಲ್ಲಿರುವ ಫ್ಲಾಟ್‌ನಲ್ಲಿ ಕೊಲೆ ಮಾಡಿ ಸಂಸದರ ದೇಹವನ್ನು ತುಂಡು ತುಂಡಾಗಿಸಿ ವಿಕೃತಿ ಮೆರೆದಿರುವ ಬಗ್ಗೆ ಜಿಹಾದ್ ಹವಾಲ್ದಾ‌ರ್ ಒಪ್ಪಿಕೊಂಡಿದ್ದಾನೆ.

ಬಾಂಗ್ಲಾ ದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ನ ಹತ್ಯೆ ಮಾಡಿ ಚರ್ಮ ಸುಲಿದ ಹಂತಕರು | ಪ್ರಮುಖ ಆರೋಪಿ ಬಂಧನ Read More »

ಮಹಿಳೆಯ ಬ್ಯಾಗ್‍ ನಿಂದ ಲಕ್ಷಾಂತರ ಮೌಲ್ಯದ ಚಿನ್ನ ಕಳವು : ದೂರು ದಾಖಲು | ಕಳ್ಳರ ತಾಣವಾಗುತ್ತಿರುವ ಬಿ.ಸಿ.ರೋಡು ಬಸ್ ನಿಲ್ದಾಣ

ಬಂಟ್ವಾಳ: ಬಿಸಿರೋಡಿನ ಬಸ್ ನಿಲ್ದಾಣ ಪಿಕ್ ಪಾಕೆಟ್ ತಾಣವಾಗಿ, ಕಳ್ಳರ ಕೇಂದ್ರವಾಗಿ ಮಾರ್ಪಾಡು ಹೊಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಬಸ್ ಗೆ ಹತ್ತುವ ಮಹಿಳೆಯರ ನಗನಗದು ಕಳವು ನಡೆಯುತ್ತಿದ್ದು, ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಕಳ್ಳರು ಹಿಡಿಯುವಲ್ಲಿ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಮತ್ತೆ ನಿನ್ನೆ ಬೆಳಿಗ್ಗೆ ಗಂಡ ಮತ್ತು ಮಗುವಿನ ಜೊತೆ ಬಸ್ ಹತ್ತುವ ವೇಳೆ ಬ್ಯಾಗಿನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವಾದ

ಮಹಿಳೆಯ ಬ್ಯಾಗ್‍ ನಿಂದ ಲಕ್ಷಾಂತರ ಮೌಲ್ಯದ ಚಿನ್ನ ಕಳವು : ದೂರು ದಾಖಲು | ಕಳ್ಳರ ತಾಣವಾಗುತ್ತಿರುವ ಬಿ.ಸಿ.ರೋಡು ಬಸ್ ನಿಲ್ದಾಣ Read More »

error: Content is protected !!
Scroll to Top