ಅಪರಾಧ

ವರ್ಗಾವಣೆ ಪತ್ರ ನೀಡದ ಮುಖ್ಯ ಶಿಕ್ಷಕರು | ವಿದ್ಯಾರ್ಥಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣು

ಉಡುಪಿ : ವರ್ಗಾವಣೆ ಪ್ರಮಾಣ ಪತ್ರ ನೀಡಿಲ್ಲ ಎಂದು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣನಾದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ ಆತ್ಮಹತ್ಯೆ ಮಾಡಿಕೊಂಡವ. ವರ್ಗಾವಣೆ ಪ್ರಮಾಣ ಪತ್ರ ಟಿಸಿ ಕೊಡದೆ ಮುಖ್ಯ ಶಿಕ್ಷಕರು ಬೈದಿದ್ದಾರೆ ಎಂದು ಡೆತ್‍ ನೋಟ್ ಬರೆದಿಟ್ಟು ನಿತಿನ್ ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿತಿನ್ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದರೆ ಮುಖ್ಯ ಶಿಕ್ಷಕ […]

ವರ್ಗಾವಣೆ ಪತ್ರ ನೀಡದ ಮುಖ್ಯ ಶಿಕ್ಷಕರು | ವಿದ್ಯಾರ್ಥಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣು Read More »

ಕಂಪೌಂಡ್ ಕುಸಿದು ಬಿದ್ದು ಶಾಲಾ ವಿದ್ಯಾರ್ಥಿನಿ ಮೃತ್ಯು

ಕೊಣಾಜೆ : ಶಾಲಾ ಕಂಪೌಂಡ್ ಕುಸಿದು ಬಿದ್ದ ಪರಿಣಾಮ ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ನ್ಯೂಪಡ್ಪು ನಿವಾಸಿ ಸಿದ್ದೀಖ್ ಹಾಗೂ ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತಪಟ್ಟ ಬಾಲಕಿ. ಸಂಜೆ ವೇಳೆ ಸುರಿದ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ. ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ

ಕಂಪೌಂಡ್ ಕುಸಿದು ಬಿದ್ದು ಶಾಲಾ ವಿದ್ಯಾರ್ಥಿನಿ ಮೃತ್ಯು Read More »

ಬೆಂಗಳೂರಿನಲ್ಲಿ ಆತ್ಮಹತ್ಯೆಗೈದ ಎಡಮಂಗಲದ ಯುವಕ

ಸುಳ್ಯ,: ಎಡಮಂಗಲದ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪುಚ್ಚಜ್ಜೆ  ನಿವಾಸಿ ದಿ.ಪುಟ್ಟಣ್ಣ ಗೌಡ ಎಂಬವರ ಪುತ್ರ ಪ್ರಸನ್ನ ಕುಮಾರ್ (26) ಆತ್ಮಹತ್ಯೆ ಮಾಡಿಕೊಂಡವರು ಪ್ರಸನ್ನ ಅವರು ಬೆಂಗಳೂರಿನ ಮಾರತಹಳ್ಳಿಯ ಸಂಸ್ಥೆಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು, ಭಾನುವಾರ ರಾತ್ರಿ ಪಾಳಿನ ಕೆಲಸ ನಿರ್ವಹಿಸುತ್ತಿದ್ದು ಸೋಮವಾರ ಬೆಳಗ್ಗೆ ಸಂಸ್ಥೆಯ ಕೊಠಡಿಯಲ್ಲಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು.ತಾಯಿ, ಇಬ್ಬರು ಸಹೋದರನ್ನು ಅಗಲಿದ್ದಾರೆ.

ಬೆಂಗಳೂರಿನಲ್ಲಿ ಆತ್ಮಹತ್ಯೆಗೈದ ಎಡಮಂಗಲದ ಯುವಕ Read More »

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರ ಬಂಧನ | ಬಿಜೆಪಿಯಿಂದ ಪ್ರತಿಭಟನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆಗೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ವತಿಯಿಂದ  ಬೆಳ್ತಂಗಡಿಯಲ್ಲಿ ಪ್ರತಿಭಟನೆ ಬೆಳ್ತಂಗಡಿಯಲ್ಲಿ ನಡೆಯಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿಗರು ಪೊಲೀಸ್ ಇಲಾಖೆಯ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಲೋಕಸಭಾ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಸಹಿತ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರ ಬಂಧನ | ಬಿಜೆಪಿಯಿಂದ ಪ್ರತಿಭಟನೆ Read More »

ಇರಾನ್ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪಥನ | ಪ್ರಯಾಣಿಕರೆಲ್ಲರೂ ದುರ್ಮರಣ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವ ಹುಸೇನ್ ಅಮಿರಾಬೊಲ್ಲಿಯನ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತದ ಸ್ಥಳದಲ್ಲಿ ಬದುಕುಳಿದವರು ಕಂಡುಬಂದಿಲ್ಲ ಎಂದು ಇರಾನಿನ ಸರ್ಕಾರಿ ಮಾಧ್ಯಮ ಸೋಮವಾರ ತಿಳಿಸಿದೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಪತ್ತೆಯಾಗಿದೆ ಆದರೆ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಇರಾನ್ ನ ರೆಡ್ ಕ್ರೆಸೆಂಟ್ ಮುಖ್ಯಸ್ಥರು ಹೇಳಿದ್ದಾರೆ. ಅಧ್ಯಕ್ಷ ರೈಸಿ ಮತ್ತು ಅಜೆರ್ಬೈಜಾನ್ ಅಧ್ಯಕ್ಷ ಇಲ್ಲಾಮ್ ಅಲಿಯನ್ ತಮ್ಮ ಹಂಚಿಕೆಯ ಗಡಿಯಲ್ಲಿರುವ ಕ್ವಿಜ್ ಖಲಾಸಿ ಅಣೆಕಟ್ಟನ್ನು ಉದ್ಘಾಟಿಸಿದ ನಂತರ ಅಧ್ಯಕ್ಷ

ಇರಾನ್ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪಥನ | ಪ್ರಯಾಣಿಕರೆಲ್ಲರೂ ದುರ್ಮರಣ Read More »

ಮಾರ್ಗದ ಬದಿ ಜೂಜಾಡುತ್ತಿದ್ದ 9 ಮಂದಿಯ ಬಂಧನ

ಮಂಗಳೂರು: ಮಾರ್ಗದ ಬದಿಯಲ್ಲೇ ಜೂಜಾಡುತ್ತಿದ್ದ 9 ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಝಾಕೀರ್ ಅಹಮ್ಮದ್, ವಿಲ್ಫ್ರೇಡ್ ಡಿಸೋಜಾ, ಹನೀಫ್, ಅನಿಲ್ ಕುಮಾರ್, ಮುರ್ತೋಝ ಸಾಬ್‍, ಶಶಿ ದೇವಾಡಿಗ, ಮೈಲಾರಪ್ಪ, ರಾಯ್ ಡಾಯಸ್, ಜೋಸ್ ರಾಬರ್ಟ್‍ ಬಂಧಿತರು. ಬೈಕಂಪಾಡಿ ರೈಲು ರಸ್ತೆಯ ಬಳಿ ಮಾರ್ಗದ ಬದಿಯಲ್ಲಿ ಜೂಜಾಡುತ್ತಿದ್ದರು ಎನ್ನಲಾಗಿದ್ದು, ಪೊಲೀಸರು ಬಂಧಿತರಿಂದ ಆಟಕ್ಕೆ ಬಳಸಿದ 11,265 ರೂ. ಹಾಗೂ ಇನ್ನಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಾರ್ಗದ ಬದಿ ಜೂಜಾಡುತ್ತಿದ್ದ 9 ಮಂದಿಯ ಬಂಧನ Read More »

ಉಡುಪಿ ಕಾಲೇಜು ವಿದ್ಯಾರ್ಥಿನಿ‌ ನಾಪತ್ತೆ !

ಉಡುಪಿ : ಮನೆಯಿಂದ ಕಾಲೇಜಿಗೆ ಹೋಗುತ್ತೇನೆ ಎಂದು ಹೋಗಿದ್ದ ವಿಧ್ಯಾರ್ಥಿನಿ ನಾಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ನಾಪತ್ತೆಯಾದ ವಿಧ್ಯಾರ್ಥಿನಿ ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ(20), ಎಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ, 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್‌ ಠಾಣೆ ದೂ.ಸಂಖ್ಯೆ: 0820-2542248, ಮೊ.ನಂ. 9480805452, ಉಡುಪಿ ಕಂಟ್ರೋಲ್ ರೂಂ

ಉಡುಪಿ ಕಾಲೇಜು ವಿದ್ಯಾರ್ಥಿನಿ‌ ನಾಪತ್ತೆ ! Read More »

ನಟಿ ಪವಿತ್ರಾ ಜಯರಾಮ್ ಆಪ್ತ, ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆ

ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಬೆನ್ನಲ್ಲೇ ಪವಿತ್ರಾ ಜಯರಾಮ್ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್ ಜೊತೆ ಚಂದು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಹೈದರಾಬಾದ್ ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು

ನಟಿ ಪವಿತ್ರಾ ಜಯರಾಮ್ ಆಪ್ತ, ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆ Read More »

ರಾಂಗ್ ಸೈಡ್ ನಲ್ಲಿ ಬಂದ ವಿದ್ಯಾರ್ಥಿಗಳ ಬೈಕ್ : ಕಾರಿಗೆ ಡಿಕ್ಕಿ

ಪುತ್ತೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ರಾಂಗ್ ಸೈಡ್ ನಿಂದ ಬಂದು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆ ಸಮೀಪ ನಡೆದಿದೆ. ಆಕ್ಟಿವಾದಲ್ಲಿ ಮೂವರು ವಿದ್ಯಾರ್ಥಿಗಳು ಹೆಲ್ಮಟ್ ಧರಿಸದೆ ರಾಂಗ್ ಸೈಡ್ ನಿಂದ ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ರಾಂಗ್ ಸೈಡ್ ನಲ್ಲಿ ಬಂದ ವಿದ್ಯಾರ್ಥಿಗಳ ಬೈಕ್ : ಕಾರಿಗೆ ಡಿಕ್ಕಿ Read More »

ಉಗ್ರ ಸಂಘಟನೆ ಐಸಿಸ್ ಜತೆ ನಂಟು | ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟ ಶಾಸಕ ದಿ.ಇದಿನಬ್ಬ ಮೊಮ್ಮಗ ಅಮರ್ ಅಬ್ದುಲ್ ರೆಹಮಾನ್ ಗೆ ಜಾಮೀನು ಮಂಜೂರು

ಮಂಗಳೂರು: ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದ ಪ್ರಕರಣದಲ್ಲಿ ಮೂರು ವರ್ಷಗಳ ಹಿಂದೆ ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟಿದ್ದ ಮಾಜಿ ಶಾಸಕ ದಿವಂಗತ ಇದಿನಬ್ಬ ಮೊಮ್ಮಗ ಅಮ‌ರ್ ಅಬ್ದುಲ್ ರೆಹಮಾನ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದ್ದರೆ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಐಸಿಸ್ ನಂಟಿನ ಆರೋಪದಡಿ ಯುಎಪಿಎ ಕಾಯ್ದೆಯಡಿ ಅಮ‌ರ್ ಅಬ್ದುಲ್ ರೆಹಮಾನ್ ನನ್ನು ಅಗಸ್ಟ್ 21,

ಉಗ್ರ ಸಂಘಟನೆ ಐಸಿಸ್ ಜತೆ ನಂಟು | ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟ ಶಾಸಕ ದಿ.ಇದಿನಬ್ಬ ಮೊಮ್ಮಗ ಅಮರ್ ಅಬ್ದುಲ್ ರೆಹಮಾನ್ ಗೆ ಜಾಮೀನು ಮಂಜೂರು Read More »

error: Content is protected !!
Scroll to Top