ಅಪರಾಧ

ಮುಕ್ಕದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಸೆರೆ

ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬಾಂಗ್ಲಾದೇಶದ ಅಕ್ರಮ ಪ್ರಜೆ ಮಂಗಳೂರು: ಸುರತ್ಕಲ್‌ ಸಮೀಪ ಮುಕ್ಕದಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬನನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ಅನರುಲ್ ಶೇಖ್​ (25) ಸೆರೆಯಾದವ.ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್​​​ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದ. ಬಳಿಕ ಪಶ್ಚಿಮ ಬಂಗಾಳದ ಮುರ್ಷಿದಾಬಾದ್​ನಿಂದ ಉಡುಪಿಗೆ ಬಂದಿದ್ದ. ಇಲ್ಲಿಂದ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್​​ನಲ್ಲಿ ಕಟ್ಟಡ […]

ಮುಕ್ಕದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಸೆರೆ Read More »

ಮೇರಠ್‌ : ಒಂದೇ ಕುಟುಂಬದ ಐವರ ಕೊಲೆ

ಮೂರು ಮಕ್ಕಳ ಶವಗಳನ್ನು ಮಂಚದೊಳಗಿಟ್ಟಿದ್ದ ಹಂತಕರು ಲಖನೌ: ಉತ್ತರ ಪ್ರದೇಶದ ಮೇರಠ್‌ ಜಿಲ್ಲೆಯ ಲಿಸಡಿ ಗೇಟ್‌ ಎಂಬಲ್ಲಿ ಒಂದೇ ಕುಟುಂಬದ ಐದು ಮಂದಿ ಕೊಲೆಯಾದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆಯಾಗಿದ್ದಾರೆ. ತಂದೆ, ತಾಯಿ ಮತ್ತು ಮೂರು ಮಕ್ಕಳನ್ನು ಕೊಲೆಮಾಡಿದ್ದಾರೆ. ತಂದೆ, ತಾಯಿ ಶವ ನೆಲದಲ್ಲಿ ಬಿದ್ದಿದ್ದರೆ ಮಕ್ಕಳ ಶವಗಳು ಮಂಚದೊಳಗಿನ ಬಾಕ್ಸ್‌ನಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದವರನ್ನು ಮೊಯಿನ್‌, ಅವರ ಹೆಂಡತಿ ಅಸ್ಮಾ ಮಕ್ಕಳಾದ ಅಫ್ಸಾ (8), ಅಜೀಜ (4) ಮತ್ತು ಅದಿಬ(1) ಎಂದು ಗುರುತಿಸಲಾಗಿದೆ. ಕೆಲದಿನಗಳಿಂದ ಮನೆಯವರು

ಮೇರಠ್‌ : ಒಂದೇ ಕುಟುಂಬದ ಐವರ ಕೊಲೆ Read More »

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ನರಿಮೊಗರು ಮುಗೇರಡ್ಕ ಮನೆ ನಿವಾಸಿ ವಿದ್ಯಾರ್ಥಿನಿ ದೀಕ್ಷಿತ ಜೋಗಿ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ಓದುತ್ತಿರುವ ದೀಕ್ಷಿತ ಜೋಗಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ  ರಿಲೀಫ್‌ ಆದ ಪ್ರಜ್ವಲ್ ರೇವಣ್ಣ

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಕೊಂಡು ಬಂಧನದಲ್ಲಿದ್ದ ಪ್ರಜ್ವಲ್ ರೇವಣ್ಣ ರಿಗೆ ಹೈಕೋರ್ಟ್ ತಾತ್ಕಾಲಿಕವಾಗಿ ರಿಲೀಫ್ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್‌ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್ ಸಿಕ್ಕಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದೆ. ಇನ್ನು ಮುಂದಿನ

ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ  ರಿಲೀಫ್‌ ಆದ ಪ್ರಜ್ವಲ್ ರೇವಣ್ಣ Read More »

ಲಂಚ ಸ್ವೀಕರಿಸಿದ ನಿಮಿತ್ತ ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ರದ್ದು

ಮಂಗಳೂರು : ಲಂಚ ಸ್ವೀಕರಿಸುತ್ತಿದ್ದ ವೇಳೆ  ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿರುವ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್‌.ದಿನೇಶ್ ಅವರ ಜಾಮೀನು ಅರ್ಜಿಯನ್ನು ಮಂಗಳೂರು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಧೀಶೆ ಸಂಧ್ಯಾ ಎಸ್ ಅರ್ಜಿಯನ್ನು ವಜಾಗೊಳಿಸಿ, ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ. 2024ರ ಡಿಸೆಂಬರ್ 19ರಂದು 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಿನೇಶ್ ಅವರನ್ನು ಬಂಧಿಸಿದ್ದಲ್ಲದೆ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ

ಲಂಚ ಸ್ವೀಕರಿಸಿದ ನಿಮಿತ್ತ ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ರದ್ದು Read More »

ತಾಯಿಯೇ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ಪ್ರಕರಣ| 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಲಾಯ

ಸುಳ್ಯ: ತಾಯಿಯೊಬ್ಬಳು ತನ್ನ  ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಘಟನೆ ನಾವೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಹಿನ್ನಲೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಆರೋಪ ಸಾಬೀತಾಗಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ಆರೋಪಿ ತಾಯಿ ಕಾವ್ಯಶ್ರೀ ಎಂದು ಗುರುತಿಸಲಾಗಿದೆ. ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿ ತಾಯಿಯೋರ್ವಳು ಬಿಸಿ ಹಾಲಿನ ಪಾತ್ರೆಯಿಂದ ತನ್ನ ಐದು ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸುಟ್ಟಿರುವಂತದ್ದು ಆ.16  2022ರಂದು ನಡೆದಿದೆ.  ಈ ಕುರಿತು ತಾಯಿ ಕಾವ್ಯಶ್ರೀ ವಿರುದ್ಧ ಮಹಿಳಾ ಮತ್ತು

ತಾಯಿಯೇ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ಪ್ರಕರಣ| 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಲಾಯ Read More »

ನಟಿಗೆ ಕಿರುಕುಳ : ಖ್ಯಾತ ಉದ್ಯಮಿ ಬಂಧನ

ಸೋಷಿಯಲ್‌ ಮೀಡಿಯಾದಲ್ಲಿ ಅಸಭ್ಯ ಕಮೆಂಟ್‌ಗಳನ್ನು ಹಾಕಿ ವರ್ಷದಿಂದ ಕಿರುಕುಳ ತಿರುವನಂತಪುರಂ: ಮಲಯಾಳಂ ನಟಿ ಹನಿರೋಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಖ್ಯಾತ ಉದ್ಯಮಿ ಬಾಬಿ ಚೆಮ್ಮನೂರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಹನಿ ರೋಸ್ ಅವರ ದೂರಿನ ಮೇರೆಗೆ ಮಂಗಳವಾರ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಬೋಬಿ ಚೆಮ್ಮನೂರ್ ಅಲಿಯಾಸ್ ‘ಬೋಚೆ’ ಅವರನ್ನು ಕೊಚ್ಚಿ ನಗರ ಪೊಲೀಸರು ಬಂಧಿಸಿದ್ದಾರೆ. ಬುಧವಾರ ವಯನಾಡಿನಿಂದ ಚೆಮ್ಮನೂರ್‌ ಅವರನ್ನು ಬಂಧಿಸಿ ಕೊಚ್ಚಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ

ನಟಿಗೆ ಕಿರುಕುಳ : ಖ್ಯಾತ ಉದ್ಯಮಿ ಬಂಧನ Read More »

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ

ವೈಕುಂಠ ಏಕಾದಶಿ ಟೋಕನ್‌ ಪಡೆಯಲು ನೂಕುನುಗ್ಗಲು ಉಂಟಾಗಿ ದುರಂತ ತಿರುಮಲ : ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. 25ಕ್ಕೂ ಹೆಚ್ಚುಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏರ್‌ಲಿಫ್ಟ್‌ ಮಾಡಲು ಆಂಧ್ರ ಪ್ರದೇಶ ಸರಕಾರ ಆದೇಶಿಸಿದೆ.ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ Read More »

ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ | ಆರೋಪಿ ಮೊಹಮ್ಮದ್  ಜಾಬೀರ್ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ನರು ಅವರ ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರಿಂ ಕೋರ್ಟ್ ನಿರಾಕರಿಸಿದೆ. ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಜಾಬಿರ್ (32) ತನ್ನ ಕಸ್ಟಡಿ ವಿಸ್ತರಿಸಿ ಡೀಫಾಲ್ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ ಐಎ ನ್ಯಾಯಾಲಯ 2023ರ ಫೆ.9 ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‍ ಕುಮಾರ್, ಮತ್ತು

ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ | ಆರೋಪಿ ಮೊಹಮ್ಮದ್  ಜಾಬೀರ್ ಜಾಮೀನು ಅರ್ಜಿ ತಿರಸ್ಕೃತ Read More »

ಕೊನೇ ಕ್ಷಣದಲ್ಲಿ ಬದಲಾಯಿತು ನಕ್ಸಲರ ಶರಣಾಗತಿ ಪ್ಲಾನ್‌

ಅರ್ಧದಾರಿಯಲ್ಲಿರುವಾಗ ಬಂದ ಫೋನ್‌ ಕಾಲ್‌ ಇಡೀ ಯೋಜನೆಯನ್ನು ಬದಲಾಯಿಸಿತು ಬೆಂಗಳೂರು: ಇಂದು ಚಿಕ್ಕಮಗಳೂರಿನಲ್ಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಶಸ್ತ್ರತ್ಯಾಗ ಮಾಡಬೇಕಿದ್ದ ನಕ್ಸಲರು ಕೊನೇಕ್ಷಣದಲ್ಲಿ ಪ್ಲಾನ್‌ ಬದಲಾಯಿಸಿದ್ದಾರೆ. ಚಿಕ್ಕಮಗಳೂರು ಬದಲಾಗಿ ಬೆಂಗಳೂರಿಗೆ ಶರಣಾಗತಿ ಕಾರ್ಯಕ್ರಮವನ್ನು ಸ್ಥಳಾಂತರ ಮಾಡಲಾಗಿದೆ. ಚಿಕ್ಕಮಗಳೂರಿನಲ್ಲಿ ಶರಣಾಗತಿ ಕಾರ್ಯಕ್ರಮಕ್ಕೆ ಸಕಲ ತಯಾರಿಯನ್ನೂ ಮಾಡಲಾಗಿತ್ತು. ನಕ್ಸಲರು ಕೂಡ ಹೊರಟು ಅರ್ಧ ದಾರಿ ತಲುಪಿದ್ದರು. ಅಷ್ಟರಲ್ಲಿ ಬೆಂಗಳೂರಿನಿಂದ ಬಂದ ಕರೆಯೊಂದು ಯೋಜನೆಯನ್ನು ಬದಲಾಯಿಸಿದೆ ಎಂದು ಮೂಲವೊಂದು ತಿಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಕ್ಸಲರನ್ನು ಭೇಟಿ ಮಾಡಲು ಬಯಸಿದ್ದಾರೆ. ಅವರ ಸಮ್ಮುಖದಲ್ಲೇ ನಕ್ಸಲರು

ಕೊನೇ ಕ್ಷಣದಲ್ಲಿ ಬದಲಾಯಿತು ನಕ್ಸಲರ ಶರಣಾಗತಿ ಪ್ಲಾನ್‌ Read More »

error: Content is protected !!
Scroll to Top