ಅಪರಾಧ

ಮಂಗಳೂರು : ಆರ್‌ಟಿಒ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ

ತೆರಿಗೆ ವಂಚಿಸಿ ಐಷರಾಮಿ ಕಾರು ನೋಂದಣಿ ಮಾಡಿದ ಪ್ರಕರಣ ಮಂಗಳೂರು : ತೆರಿಗೆ ವಂಚಿಸಿ ಐಷಾರಾಮಿ ಕಾರು ನೋಂದಣಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳೂರು ಮತ್ತು ಉಡುಪಿಯ ಆರ್ ಟಿಒ ಕಚೇರಿಯಲ್ಲಿ ಮಂಗಳವಾರ ಕಡತ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಆರ್‌ಟಿಒ ಕಚೇರಿಯಲ್ಲಿ ತೆರಿಗೆ ಕಡಿಮೆ ಮಾಡಿ ಬಿಎಂಡಬ್ಲ್ಯು ಕಾರೊಂದನ್ನು ನೋಂದಣಿ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ಸಂದಾಯ ಆಗಬೇಕಾಗಿದ್ದ ಸುಮಾರು 85 ಲಕ್ಷ ರೂ. ತೆರಿಗೆ ವಂಚನೆಯಾಗಿತ್ತು. ನೋಂದಣಿಗೆ ಸಂಬಂಧಿಸಿದಂತೆ ಮಂಗಳೂರು ಆರ್‌ಟಿಒ ಕಚೇರಿಯಲ್ಲೂ […]

ಮಂಗಳೂರು : ಆರ್‌ಟಿಒ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ Read More »

ಮಕ್ಕಾ ಅಪಘಾತ : ಮೃತ ಭಾರತೀಯರ ಸಂಖ್ಯೆ 45ಕ್ಕೇರಿಕೆ

ಹುಬ್ಬಳ್ಳಿಯ ಓರ್ವ ವ್ಯಕ್ತಿಯೂ ಸಾವು ನವದೆಹಲಿ : ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾ ನಡುವೆ ಸೋಮವಾರ ನಸುಕಿನ ವೇಳೆ ಸಂಭವಿಸಿದ ಬಸ್ ಅಪಘಾತದಲ್ಲಿ ಒಟ್ಟು 45 ಮಂದಿ ಭಾರತೀಯರು ಸಾವನ್ನಪ್ಪಿದ್ದು, ಈ ಪೈಕಿ ಓರ್ವ ಕನ್ನಡಿಗ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದ ಮೆಕ್ಕಾ-ಮದೀನಾ ರಸ್ತೆಯಲ್ಲಿ ಬಸ್ ಹಾಗೂ ಡೀಸಿಲ್‌ ಟ್ಯಾಂಕರ್ ನಡುವೆ ಡಿಕ್ಕಿಯಾದ ರಭಸಕ್ಕೆ ಬಸ್ ಹೊತ್ತಿ ಉರಿದಿತ್ತು. ದುರ್ಘಟನೆಯಲ್ಲಿ 45 ಮಂದಿ ಭಾರತೀಯರು ಸಜೀವ ದಹನವಾಗಿದ್ದಾರೆ. ಬಸ್ಸಿನಲ್ಲಿದ್ದ 46 ಜನರಲ್ಲಿ 43

ಮಕ್ಕಾ ಅಪಘಾತ : ಮೃತ ಭಾರತೀಯರ ಸಂಖ್ಯೆ 45ಕ್ಕೇರಿಕೆ Read More »

ತಲೆಗೆ 1 ಕೋಟಿ ರೂ. ಬಹುಮಾನವಿದ್ದ ನಕ್ಸಲ್‌ ಕಮಾಂಡರ್‌ ಎನ್‌ಕೌಂಟರ್‌ಗೆ ಬಲಿ

ಮೂರು ರಾಜ್ಯಗಳ ಸಂಗಮ ಸ್ಥಳದಲ್ಲಿ ಅಡಗಿಕೊಂಡಿದ್ದ ನಕ್ಸಲ್‌ ಮುಖಂಡನನ್ನು ಬೇಟೆಯಾಡಿದ ಭದ್ರತಾ ಪಡೆ ಹೈದರಾಬಾದ್‌ : ಆಂಧ್ರ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ನಡೆದ ಎನ್​ಕೌಂಟರ್‌ನಲ್ಲಿ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈತ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ. ಹಿಡ್ಮಾ ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಹಲವಾರು ಮಾವೋವಾದಿ ಅಡಗುತಾಣಗಳನ್ನು ಹೊಂದಿರುವ ಆಂಧ್ರ ಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ತ್ರಿ-ಜಂಕ್ಷನ್ ಬಳಿ ಈ

ತಲೆಗೆ 1 ಕೋಟಿ ರೂ. ಬಹುಮಾನವಿದ್ದ ನಕ್ಸಲ್‌ ಕಮಾಂಡರ್‌ ಎನ್‌ಕೌಂಟರ್‌ಗೆ ಬಲಿ Read More »

ವೈಟ್‌ ಕಾಲರ್‌ ಟೆರರ್‌ ಕೇಂದ್ರ ಸ್ಥಾನ ಅಲ್​-ಫಲಾಹ್ ವಿವಿಗೆ ಇ.ಡಿ. ದಾಳಿ

25 ಸ್ಥಳಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ತೀವ್ರ ಶೋಧ ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ 13 ಮಂದಿಯ ಸಾವಿಗೆ ಕಾರಣವಾದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಂಕಿತ ಉಗ್ರರ ಜೊತೆಗಿನ ಸಂಬಂಧ ಹೊಂದಿರುವ ಅಲ್​-ಫಲಾಹ್ ವಿಶ್ವವಿದ್ಯಾಲಯದ ಹಣಕಾಸು ವ್ಯವಹಾರದ ಕುರಿತ ತನಿಖೆಯನ್ನು ಜಾರಿ ನಿರ್ದೇಶನಾಲಯ ತೀವ್ರಗೊಳಿಸಿದ್ದು, ವಿವಿಯ ಕಚೇರಿ ಸೇರಿ 25 ಸ್ಥಳಗಳ ಮೇಲೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿ ತೀವ್ರ ಶೋಧ ನಡೆಸುತ್ತಿದೆ. ಫರಿದಾಬಾದ್‌ನಲ್ಲಿರುವ 70 ಎಕರೆ ವಿಸ್ತೀರ್ಣದ ವಿಶ್ವವಿದ್ಯಾಲಯದ ಓಖ್ಲಾ ಕಚೇರಿಯ

ವೈಟ್‌ ಕಾಲರ್‌ ಟೆರರ್‌ ಕೇಂದ್ರ ಸ್ಥಾನ ಅಲ್​-ಫಲಾಹ್ ವಿವಿಗೆ ಇ.ಡಿ. ದಾಳಿ Read More »

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ

ಇಷ್ಟಕ್ಕೂ ಬೆದರಿಕೆ ಹಾಕಿದ ವ್ಯಕ್ತಿಯ ಬೇಡಿಕೆ ಏನು ಗೊತ್ತೆ? ಬೆಂಗಳೂರು : ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇ-ಮೇಲ್‌ ಒಂದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್‌ಸಿಎಲ್ ಅಧಿಕೃತ ಇ-ಮೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ ಸಂದೇಶ ಕಳುಹಿಸಿದ್ದ. ವ್ಯಕ್ತಿ ತಾನು ಕಳಿಸಿದ ಇ-ಮೇಲ್​ನಲ್ಲಿ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡುತ್ತೇನೆಂದು ಬರೆದಿದ್ದಾನೆ. ಇ-ಮೇಲ್‌ನಲ್ಲಿ ಮೆಟ್ರೋ ಸಿಬ್ಬಂದಿಯಾದ ತನ್ನ ವಿಚ್ಛೇದಿತ

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ Read More »

ಭಾರತವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ ಶೇಖ್‌ ಹಸೀನಾ ಮರಣದಂಡನೆ ತೀರ್ಪು

ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದ ಮಾಜಿ ಪ್ರಧಾನಿಯನ್ನು ಗಡಿಪಾರು ಮಾಡಲಾಗುತ್ತದೆಯೇ? ನವದೆಹಲಿ : ಬಾಂಗ್ಲಾದೇಶದ ದೇಶಭ್ರಷ್ಟ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾ ಅವರಿಗೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪ ಹೊರಿಸಿ ಬಾಂಗ್ಲಾದ ನ್ಯಾಯಾಲಯ ಮರಣದಂಡನೆ ವಿಧಿಸಿದ ತೀರ್ಪು ಭಾರತವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಕಳೆದ ವರ್ಷ ಜುಲೈ-ಆಗಸ್ಟ್ ತಿಂಗಳಲ್ಲಿ ನಡೆದ ವಿದ್ಯಾರ್ಥಿ ಹೋರಾಟದ ಸಂದರ್ಭದಲ್ಲಿ ನಡೆದ ಹಿಂಸಾಚಾರ ಮತ್ತು ನರಮೇಧಕ್ಕೆ ಸಂಬಂಧಿಸಿದಂತೆ ಢಾಕಾದ ಅಂತಾರಾಷ್ಟ್ರೀಯ ಅಪರಾಧಗಳ ಟ್ರಿಬ್ಯೂನಲ್‌ ಈ ಐತಿಹಾಸಿಕ ತೀರ್ಪನ್ನು ನೀಡಿದೆ. ಪ್ರಸ್ತುತ ಶೇಖ್‌ ಹಸೀನಾ ಭಾರತದಲ್ಲಿ

ಭಾರತವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ ಶೇಖ್‌ ಹಸೀನಾ ಮರಣದಂಡನೆ ತೀರ್ಪು Read More »

ನ.28ರಂದು ಕಡಬದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ

ಕಡಬ: ಲೋಕಾಯುಕ್ತ ಜನಸಂಪರ್ಕ ಸಭೆ ನವೆಂಬರ್ 28ರಂದು ಬೆಳಿಗ್ಗೆ 11 ಗಂಟೆಯಿಂದ ಕಡಬ ತಾಲೂಕು ಕಚೇರಿಯಲ್ಲಿ ನಡೆಯಲಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನವೆಂಬರ್ 28ರಂದು ರಂದು ಕಡಬ ತಾಲೂಕು ಕಚೇರಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ

ನ.28ರಂದು ಕಡಬದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ Read More »

ಜಾನುವಾರು ಅಕ್ರಮ ಸಾಗಾಟ : ಮೂವರು ಆರೋಪಿಗಳು ಸೆರೆ

ಮಂಗಳೂರು: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮೂಡಬಿದಿರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅದ್ಯಪಾಡಿ ಅಲಿಯಾಸ್‌ ಮೊಹಮ್ಮದ್ ಮನ್ಸೂರ್ ವಿರುದ್ಧ ಮಾತ್ರ ಈಗಾಗಲೇ 29ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಇದು 30ನೇ ಪ್ರಕರಣವಾಗಿದೆ. ಮೂಡಬಿದಿರೆ ತಾಲೂಕು ಹೊಸ್ಮಾರು – ನೆಲ್ಲಿಕಾರು ರಸ್ತೆಯಲ್ಲಿ ಟಾಟಾ ಎಸಿ ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತುತು. ತಕ್ಷಣ ದಾಳಿ ನಡೆಸಿ ಆರೋಪಿಗಳಾದ ಮನ್ಸೂರ್ ಅದ್ಯಪಾಡಿ @

ಜಾನುವಾರು ಅಕ್ರಮ ಸಾಗಾಟ : ಮೂವರು ಆರೋಪಿಗಳು ಸೆರೆ Read More »

ಟೆಕ್ಕಿ ಮಹಿಳೆಯನ್ನೇ ಡಿಜಿಟಲ್‌ ಅರೆಸ್ಟ್‌ ಖೆಡ್ಡಾಕ್ಕೆ ಕೆಡವಿ 31.83 ಕೋ.ರೂ. ದೋಚಿದ ಸೈಬರ್‌ ಖದೀಮರು

ರಾಜ್ಯದ ಅತಿದೊಡ್ಡ ಸೈಬರ್‌ ವಂಚನೆಗೆ ಬಲಿಪಶುವಾದ ವಿದ್ಯಾವಂತ ಮಹಿಳೆ ಬೆಂಗಳೂರು : ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಇದು ಕರ್ನಾಟಕದಲ್ಲೇ ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬರು ಕಳೆದುಕೊಂಡ ಗರಿಷ್ಠ ಮೊತ್ತ ಎಂಬುದಾಗಿ ಪೊಲೀಸ್ ಮೂಲಗಳು ಹೇಳಿವೆ. ಇಂದಿರಾನಗರದ ನಿವಾಸಿ 57 ವರ್ಷ ವಯಸ್ಸಿನ ಮಹಿಳಾ ಟೆಕ್ಕಿಯನ್ನು ಸೈಬರ್ ಪಾತಕಿಗಳು ಆರು ತಿಂಗಳಿಗೂ ಹೆಚ್ಚು ಕಾಲ ನಿರಂತರ ಡಿಜಿಟಲ್‌ ಅರೆಟ್ಸ್‌ನಲ್ಲಿರಿಸಿ ಹಣ ದೋಚಿ

ಟೆಕ್ಕಿ ಮಹಿಳೆಯನ್ನೇ ಡಿಜಿಟಲ್‌ ಅರೆಸ್ಟ್‌ ಖೆಡ್ಡಾಕ್ಕೆ ಕೆಡವಿ 31.83 ಕೋ.ರೂ. ದೋಚಿದ ಸೈಬರ್‌ ಖದೀಮರು Read More »

error: Content is protected !!
Scroll to Top