ಅಪರಾಧ

ಬಳ್ಳಾರಿ ಬ್ಯಾನರ್‌ ಗಲಾಟೆ : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ

ಖಾಸಗಿ ಗನ್‌ಮ್ಯಾನ್‌ಗಳ ಗುಂಡಿನಿಂದಲೇ ಕಾಂಗ್ರೆಸ್‌ ಕಾರ್ಯಕರ್ತ ಸಾವು ಎಂಬ ಗುಮಾನಿ ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಾಡಿದ ಫೈರಿಂಗ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಬೆನ್ನಲ್ಲೇ ಶಾಸಕ ಭರತ್‌ ರೆಡ್ಡಿಯವರ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ. ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ಗಳು ಹಾರಿಸಿದ ಗುಂಡಿನಿಂದಲೇ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಈಗಾಗಲೇ ಜನಾರ್ದನ ರೆಡ್ಡಿ ಹಾಗೂ ಸತೀಶ್ ರೆಡ್ಡಿಗೆ ಸಂಬಂಧಿಸಿದ ಗನ್‌ಮ್ಯಾನ್‌ಗಳಿಂದ ಪೊಲೀಸರು […]

ಬಳ್ಳಾರಿ ಬ್ಯಾನರ್‌ ಗಲಾಟೆ : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ Read More »

ಯೆಮೆನ್‌ ಮೇಲೆ ಸೌದಿಯಿಂದ ವಾಯುದಾಳಿ : 20ಕ್ಕೂ ಹೆಚ್ಚು ನಾಗರಿಕರು ಸಾವು

ವಿಮಾನ ನಿಲ್ದಾಣ, ವಸತಿ ಕಟ್ಟಡಗಳನ್ನು ಗುರಿ ಮಾಡಿಕೊಂಡು ದಾಳಿ ಸನಾ: ಯೆಮೆನ್‌ನ ಆಗ್ನೇಯ ತೈಲ ಸಮೃದ್ಧ ಪ್ರಾಂತ್ಯವಾದ ಹದ್ರಾಮೌಟ್‌ನ ಅನೇಕ ಸ್ಥಳಗಳ ಮೇಲೆ ಸೌದಿ ಯುದ್ಧ ವಿಮಾನಗಳು ಶುಕ್ರವಾರ ನಡೆಸಿದ ವೈಮಾನಿಕ ದಾಳಿಯಲ್ಲಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಕಳೆದ ಕೆಲವು ಗಂಟೆಗಳಲ್ಲಿ ಆಸ್ಪತ್ರೆಯು 20ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ. ಇದಕ್ಕೂ ಮುನ್ನ, ಸೌದಿ ಅರೇಬಿಯಾದ ತೀವ್ರ ವಾಯುದಾಳಿಗಳು ಸೆಯುನ್ ವಿಮಾನ ನಿಲ್ದಾಣ ಮತ್ತು ಹತ್ತಿರದ ವಸತಿ ಕಟ್ಟಡಗಳನ್ನು ಹೊಡೆದವು ಮತ್ತು

ಯೆಮೆನ್‌ ಮೇಲೆ ಸೌದಿಯಿಂದ ವಾಯುದಾಳಿ : 20ಕ್ಕೂ ಹೆಚ್ಚು ನಾಗರಿಕರು ಸಾವು Read More »

ಮಗು ಕರುಣಿಸಿದ ಪ್ರಕರಣ : ಜ.24ರಂದು ಕಲ್ಲಡ್ಕದಲ್ಲಿ ನಾಮಕರಣ ಶಾಸ್ತ್ರ

ಕೃಷ್ಣ ರಾವ್‌ ಜಾಮೀನು ರದ್ದುಪಡಿಸಲು ಕೋರ್ಟಿಗೆ ಮನವಿ ಸಲ್ಲಿಸುತ್ತೇವೆ ಎಂದ ಪ್ರತಿಭಾ ಕುಳಾಯಿ ಮಂಗಳೂರು: ಪುತ್ತೂರಿನಲ್ಲಿ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್‌ಗೆ ಕೋರ್ಟ್‌ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು. ಸಂಧಾನದ ಬಾಗಿಲು ಮುಚ್ಚಿದ್ದು, ಜ.24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದ್ದಾರೆ. ಅನ್ಯಾಯಕ್ಕೊಳಗಾದ ಯುವತಿ, ಮಗು ಹಾಗೂ ಯುವತಿಯ ಪೋಷಕರ ಜತೆ ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,

ಮಗು ಕರುಣಿಸಿದ ಪ್ರಕರಣ : ಜ.24ರಂದು ಕಲ್ಲಡ್ಕದಲ್ಲಿ ನಾಮಕರಣ ಶಾಸ್ತ್ರ Read More »

ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ

ಎಟಿಎಂಗೆ ಕಡಿಮೆ ಹಣ ತುಂಬಿ, ಲಾಕರ್‌ನಲ್ಲಿದ್ದ ಚಿನ್ನ ಕದ್ದು ಪಲಾಯನ ಮಾಡಿದ ಮ್ಯಾನೇಜರ್‌ ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಉಪಶಾಖಾ ಪ್ರಬಂಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ನಾಪತ್ತೆ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ.ನಾಪತ್ತೆಯಾಗಿರುವ ಬ್ಯಾಂಕ್ ಉದ್ಯೋಗಿ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿಗೆ 71.41 ಲಕ್ಷ ರೂ. ವಂಚನೆ ನಡೆಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ

ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ Read More »

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌

ಬ್ಯಾನರ್‌ ಕಟ್ಟುವ ಗಲಾಟೆಯಲ್ಲಿ ಗುಂಡೇಟಿಗೆ ಯುವಕ ಬಲಿಯಾದ ಪ್ರಕರಣ ಬಳ್ಳಾರಿ : ಬಳ್ಳಾರಿ ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್​​ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌ Read More »

ಮೂಲ್ಕಿ : ಹಲ್ಲೆ ಕೃತ್ಯದಿಂದ ಪ್ರಕ್ಷುಬ್ಧ ಪರಿಸ್ಥಿತಿ

ಹಣ ಸುಲಿಯಲು ಯತ್ನಿಸಿ ಕಂಬಳ ಕೋಣಗಳ ಮಾಲೀಕನ ಮೇಲೆ ಹಲ್ಲೆ ಮಂಗಳೂರು : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ನಡೆದ ಹಲ್ಲೆ ಕೃತ್ಯ ಪರಿಸ್ಥಿತಿ ಸೂಕ್ಷ್ಮವಾಗುವಂತೆ ಮಾಡಿದೆ. ಹೈನುಗಾರಿಕೆ ಮತ್ತು ಕಂಬಳದ ಕೋಣಗಳನ್ನು ಸಾಕಿರುವ ಅಂಗಾರಗುಡ್ಡೆಯ ನಿವಾಸಿ ಅಬೂಬಕ್ಕರ್ ಎಂಬವರಿಂದ ಹಣ ಸುಲಿಗೆಗೆ ಯತ್ನಿಸಿಮೂವರು ಪುಡಿ ರೌಡಿಗಳು ಈ ಕೃತ್ಯ ಎಸಗಿದ್ದಸರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಅಂಗಾರಗುಡ್ಡೆಯ ಅಬೂಬಕ್ಕರ್ ಅವರ

ಮೂಲ್ಕಿ : ಹಲ್ಲೆ ಕೃತ್ಯದಿಂದ ಪ್ರಕ್ಷುಬ್ಧ ಪರಿಸ್ಥಿತಿ Read More »

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ

ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದಾರೆ ಎಂದು ಶ್ರೀರಾಮುಲು ಬಳ್ಳಾರಿ: ಬ್ಯಾನರ್ ಗಲಾಟೆ ವೇಳೆ ಶಾಸಕ ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿ ಪೆಟ್ರೋಲು ಬಾಂಬ್‌ ಎಸೆದಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಗಂಭೀರ ಆರೋಪಿಸಿದ್ದಾರೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಶ್ರೀರಾಮುಲು, ನಿನ್ನೆ ಆದ ಘಟನೆ ನಮ್ಮೆಲ್ಲರಿಗೂ ನೋವು ತರಿಸಿದೆ. ಏನು ನಡೆಯಬಾರದಾಗಿತ್ತೋ ಅದೆಲ್ಲಾ ನಡೆದು ಹೋಗಿದೆ. ಅಮಾಯಕ ರಾಜಶೇಖರ್ ಅನ್ನೋ ಯುವಕನ ಸಾವಾಗಿದೆ. ಆ ಯುವಕ ಯಾವುದೇ ಪಾರ್ಟಿಗೆ

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ Read More »

ಉಪ್ಪಿನಂಗಡಿ : ಬ್ಯಾಂಕ್‌ ಮ್ಯಾನೇಜರ್‌ ನಾಪತ್ತೆ

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಎಂಬಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರು ಡಿ. 17ರಿಂದ ನಾಪತ್ತೆಯಾಗಿರುವ ಕುರಿತು ಅವರ ಸಹೋದರ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ ಹೊಂದಿದ್ದ ಸುಬ್ರಹ್ಮಣ್ಯಂ ಡಿ.17ರಂದು ತಮ್ಮನಿಗೆ ಹುಷಾರಿಲ್ಲ ಎಂದು ರೂಮಿಗೆ ಹೋಗುತ್ತೇನೆಂದು ಹೇಳಿ ಹೋದವರು ಬಳಿಕ ಕಾಣೆಯಾಗಿದ್ದಾರೆ. ರೂಮ್‌ಮೇಟ್‌ ವಿಷ್ಣುವಿನಲ್ಲಿ ತಾನು ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದಾನೆನ್ನಲಾಗಿದೆ. ಆದರೆ ಊರಿಗೂ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆಯಾಗಿರುವುದಾಗಿ ದೂರಲಾಗಿದೆ.

ಉಪ್ಪಿನಂಗಡಿ : ಬ್ಯಾಂಕ್‌ ಮ್ಯಾನೇಜರ್‌ ನಾಪತ್ತೆ Read More »

ಬ್ಯಾನರ್‌ ಗಲಾಟೆಯಲ್ಲಿ ಸಿಡಿದ ಗುಂಡಿಗೆ ಕಾಂಗ್ರೆಸ್‌ ಕಾರ್ಯಕರ್ತ ಬಲಿ : ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕೇಸ್‌

ಬ್ಯಾನರ್‌ ಕಟ್ಟುವ ವಿಚಾರದಲ್ಲಿ ರಣರಂಗವಾದ ಬಳ್ಳಾರಿ, ನಿಷೇಧಾಜ್ಞೆ ಜಾರಿ ಬಳ್ಳಾರಿ : ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ

ಬ್ಯಾನರ್‌ ಗಲಾಟೆಯಲ್ಲಿ ಸಿಡಿದ ಗುಂಡಿಗೆ ಕಾಂಗ್ರೆಸ್‌ ಕಾರ್ಯಕರ್ತ ಬಲಿ : ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕೇಸ್‌ Read More »

ನಿಶ್ಚಿತಾರ್ಥವಾಗಿದ್ದ ಯುವತಿಗೆ ಇನ್ಸ್ಟಾಗ್ರಾಮ್‌ನಲ್ಲಿ ಮೆಸೇಜ್: ಯುವಕನ ಹತ್ಯೆ

ಚಿಕ್ಕಮಗಳೂರು: ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಗೆ ಇನ್ಸ್ಟಾ‌ಗ್ರಾಮ್‌ನಲ್ಲಿ ಯುವಕನೊಬ್ಬ ಮೆಸೇಜ್ ಮಾಡುವ ಮೂಲಕ ಕಾಟ ಕೊಟ್ಟಿದ್ದು, ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತರೀಕೆರೆಯ ಅತ್ತಿಗನಾಳು ಗ್ರಾಮದ ಬಳಿ ನಡೆದಿದೆ. ಮಂಜುನಾಥ್ (21) ಎಂಬವನೇ ಕೊಲೆಯಾದ ಯುವಕ. ಹತ್ಯೆ ಮಾಡಿದ ಆರೋಪಿಯನ್ನು ವೇಣು ಎಂದು ಗುರುತಿಸಲಾಗಿದೆ. ಮಂಜುನಾಥ್‌ಗೆ ಯುವತಿಯೊಬ್ಬಳ ಪರಿಚಯವಾಗಿತ್ತು. ಆಕೆಗೆ ವೇಣು ಎಂಬಾತನ ಜೊತೆ ವಿವಾಹ ನಿಶ್ಚಯವಾಗಿತ್ತು. ಹಾಗಿದ್ದರೂ ಮಂಜುನಾಥ್ ಪದೇ ಪದೇ ಆಕೆಗೆ ಮೆಸೇಜ್ ಮಾಡಿ ಕಿರಿಕಿರಿ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಮೆಸೇಜ್

ನಿಶ್ಚಿತಾರ್ಥವಾಗಿದ್ದ ಯುವತಿಗೆ ಇನ್ಸ್ಟಾಗ್ರಾಮ್‌ನಲ್ಲಿ ಮೆಸೇಜ್: ಯುವಕನ ಹತ್ಯೆ Read More »

error: Content is protected !!
Scroll to Top