ಅಪರಾಧ

ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌

ಉಪ್ಪಳಿಗೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎಫ್‌ಐಆರ್‌ ಪುತ್ತೂರು : ಕೋಮು ದ್ವೇಷದ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಆರ್​​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ 118/2025ಕ್ಕೆ ಸಂಬಂಧಿಸಿದಂತೆ ಅ.30ರಂದು ಕಲಂ 35 (3 )ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ಪ್ರಭಾಕರ ಭಟ್ ಮನೆಗೆ ನೋಟಿಸ್ ಜಾರಿ ಮಾಡಲಾಗಿದೆ. ಈಶ್ವರಿ ಪದ್ಮುಂಜ ಎಂಬವರು ನೀಡಿದ ದೂರಿನ ಮೇರೆಗೆ […]

ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ Read More »

ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದೂರು

ಉಪ್ಪಳಿಗೆ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪ್ರಭಾಕರ ಭಟ್‌ ಪುತ್ತೂರು: ಇತ್ತೀಚೆಗೆ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಈಶ್ವರಿ ಪದ್ಮುಂಜ ಎಂಬವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅ.20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅವಮಾನಿಸಿ, ಗರ್ಭಿಣಿ ಮಹಿಳೆಯರನ್ನು ನಿಂದನೆ ಮಾಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಈಶ್ವರಿ

ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದೂರು Read More »

ಚೂರಿ ಇರಿತ ಪ್ರಕರಣ : ಪ್ರಮುಖ ಆರೋಪಿ ಸೆರೆ

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ ಎದುರು ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ರೌಡಿ ಶೀಟರ್ ಗುರುರಾಜ್ ಆಚಾರಿ ಎಂಬಾತನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೊಬ್ಬ ಆರೋಪಿ ಅಶೋಕ್ ಎಂಬಾತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಾರ್‌ನೊಳಗೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯು ತೀವ್ರಗೊಂಡು ಹೊರಗೆ ಚಾಕು ಇರಿತದಲ್ಲಿ ಅಂತ್ಯಗೊಂಡಿತ್ತು. ಈ ಘಟನೆಯಲ್ಲಿ ಗಾಯಗೊಂಡಿರುವ ನಿಝಾಮ್ ಮತ್ತು ಹಸನ್ ಮುಕ್ಷಿತ್ ಸ್ಥಳೀಯ ಆಸ್ಪತ್ರೆಯಲ್ಲಿ

ಚೂರಿ ಇರಿತ ಪ್ರಕರಣ : ಪ್ರಮುಖ ಆರೋಪಿ ಸೆರೆ Read More »

ಅಂತಿಮ ಹಂತಕ್ಕೆ ತಲುಪಿದ ಬುರುಡೆ ಷಡ್ಯಂತ್ರದ ತನಿಖೆ; ಸೋಮವಾರ ನಿರ್ಣಾಯಕ ವಿಚಾರಣೆ

ತಿಮರೋಡಿ ಸಹಿತ ನಾಲ್ವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ ಮಂಗಳೂರು: ಧರ್ಮಸ್ಥಳ ಬುರುಡೆ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಿಚಾರಣೆಗಾಗಿ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಜಯಂತ್‌ ಟಿ. ಮತ್ತು ವಿಠಲ ಗೌಡ ಅವರಿಗೆ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಿದ್ದು, ಈ ನೋಟಿಸ್‌ ಸುತ್ತ ನಾನಾ ರೀತಿಯ ಊಹಾಪೋಹಗಳು ಹುಟ್ಟಿಕೊಂಡಿವೆ. ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ನೋಟಿಸ್ ನೀಡಲಾಗಿದೆ.

ಅಂತಿಮ ಹಂತಕ್ಕೆ ತಲುಪಿದ ಬುರುಡೆ ಷಡ್ಯಂತ್ರದ ತನಿಖೆ; ಸೋಮವಾರ ನಿರ್ಣಾಯಕ ವಿಚಾರಣೆ Read More »

ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಅಕ್ಕ-ತಂಗಿ ಸಾವು

ಸ್ನಾನ ಮಾಡುತ್ತಿದ್ದಾಗ ಸಂಭವಿಸಿದ ದಾರುಣ ಘಟನೆ ಮೈಸೂರು : ಸ್ನಾನಕ್ಕೆ ತೆರಳಿದಾಗ ಗ್ಯಾಸ್ ಗೀಸರ್ ಲೀಕ್ ಆಗಿ ಅಕ್ಕ ಮತ್ತು ತಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ಗುರುತಿಸಲಾಗಿದೆ. ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಂದೆ ಅಲ್ತಾಫ್‌

ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಅಕ್ಕ-ತಂಗಿ ಸಾವು Read More »

ಸುಳ್ಯ : ಕ್ರಿಪ್ಟೋ ಕರೆನ್ಸಿ ಹೂಡಿಕೆ ನೆಪದಲ್ಲಿ 2.90 ಲ.ರೂ. ವಂಚನೆ

ಸುಳ್ಯ: ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಂಗಳೂರು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ್ಯಪೊಂದರ ಮೂಲಕ ಪರಿಚಯವಾದ ಮಹಿಳೆಯ ಮಾತು ನಂಬಿ ಅವರು ಹಣ ಕಳೆದುಉಕೊಂಡಿದ್ದಾರೆ. ಸುಳ್ಯದ ಕೆರೆಮೂಲೆಯ 50 ವರ್ಷದ ವ್ಯಕ್ತಿ ವಂಚನೆಗೊಳಗಾದವರು. ಇವರು ಮೊಬೈಲ್‌ನಲ್ಲಿ ಚಾಟ್‌ಜಿಪಿಟಿ ಮೂಲಕ ಆ್ಯಪ್‌ವೊಂದನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದು, ಅದರ ಮೂಲಕ ಇಶಾ ಸಿಂಗ್‌ ಎಂಬವರ ಪರಿಚಯವಾಗಿ ಬಳಿಕ ಟೆಲಿಗ್ರಾಂ ಚಾಟ್‌ ಮಾಡಿಕೊಂಡಿದ್ದರು. ಈ ವೇಳೆ ಇಶಾ ಸಿಂಗ್‌ ಕ್ರಿಪ್ಟೋ

ಸುಳ್ಯ : ಕ್ರಿಪ್ಟೋ ಕರೆನ್ಸಿ ಹೂಡಿಕೆ ನೆಪದಲ್ಲಿ 2.90 ಲ.ರೂ. ವಂಚನೆ Read More »

ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್‌ : ಕ್ರಿಮಿನಲ್‌ಗಳಿಗೆ ಕಮಿಷನರ್‌ ಸುಧೀರ್ ರೆಡ್ಡಿ ವಾರ್ನಿಂಗ್

ಪಟಾಕಿ ಅಂಗಡಿ ಮಾಲಕರಿಂದ ಸುಲಿಗೆ ಮಾಡಿದ ಹಿನ್ನೆಲೆಯಲ್ಲಿ ಎಚ್ಚರಿಕೆ ಮಂಗಳೂರು: ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ಜೊತೆಗೆ ತಿರುಗಾಡದಂತೆ ಈ ಮೊದಲೇ ಹೇಳಿದ್ದೆ. ರೌಡಿಗಳ ಜೊತೆಗಿದ್ದು ಅಪರಾಧದಲ್ಲಿ ಸಿಲುಕಬೇಡಿ ಎಂದೂ ಹೇಳಿದ್ದೆ. ನೀವು ನಮ್ಮ ಮಾತು ಕೇಳ್ತಾ ಇಲ್ಲ ಎನಿಸುತ್ತೆ. ನಮ್ಮ ಮಾತು ಕೇಳಲ್ಲಾಂದ್ರೆ ನಾವು ಏನು ಮಾಡಬೇಕೆಂದು ಗೊತ್ತಿದೆ. ನಾವು ನಮ್ಮ ಕೆಲಸ ಮಾಡ್ತೀವಿ. ನಿಮ್ಮ ಇಷ್ಟದಂತೆ ಮಾಡ್ಕೊಂಡ್ರೆ ನಮಗೆ ತೊಂದರೆ ಇಲ್ಲ. ಏನು ಬೇಕಾದರೂ ಮಾಡ್ಕೊಂಡು ಹೋಗಿ‌. ಪೊಲೀಸರು ತಮ್ಮ ಕೆಲಸ ಮಾಡುತ್ತಾರೆ ಎಂದು ಮಂಗಳೂರು

ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್‌ : ಕ್ರಿಮಿನಲ್‌ಗಳಿಗೆ ಕಮಿಷನರ್‌ ಸುಧೀರ್ ರೆಡ್ಡಿ ವಾರ್ನಿಂಗ್ Read More »

ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರ ಮಾಡಿದರೆ ಕಠಿಣ ಕ್ರಮ : ಎಸ್‌ಪಿ ವಾರ್ನಿಂಗ್‌

ಜಾನುವಾರು ಸಾಗಿಸುತ್ತಿದ್ದವನ ಕಾಲಿಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಖಡಕ್‌ ಎಚ್ಚರಿಕೆ ನೀಡಿದ ಎಸ್‌ಪಿ ಪುತ್ತೂರು: ಘಟನೆಯನ್ನು ಎಲ್ಲರೂ ವಿಮರ್ಶೆ ಮಾಡಬಹುದು, ಆದರೆ ಸತ್ಯವನ್ನು ತಿರುಚಿ ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರಕ್ಕೆ ಬಳಸಿಕೊಳ್ಳುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಎಸ್‌ಪಿ ಅರುಣ್‌ ಕುಮಾರ್‌ ಪುತ್ತೂರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚರಿಸಿದ್ದಾರೆ. ಈಶ್ವರಮಂಗಲದಲ್ಲಿ ಲಾರಿಯೊಂದರಲ್ಲಿ ಅನಧಿಕೃತ ಗೋ ಸಾಗಾಟ ಪ್ರಕರಣದಲ್ಲಿ 12 ಗೋವುಗಳನ್ನು

ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರ ಮಾಡಿದರೆ ಕಠಿಣ ಕ್ರಮ : ಎಸ್‌ಪಿ ವಾರ್ನಿಂಗ್‌ Read More »

ಸುರತ್ಕಲ್ ಬಾರ್‌ನಲ್ಲಿ ಗಲಾಟೆ: ಓರ್ವನಿಗೆ ಇರಿತ

ಸುರತ್ಕಲ್: ನಗರದ ಬಾರೊಂದರ ಸಮೀಪ ನಿನ್ನೆ ರಾತ್ರಿ ಸುಮಾರು 11 ಗಂಟೆ ವೇಳೆಗೆ ವ್ಯಕ್ತಿಯೊಬ್ಬರಿಗೆ ಇರಿದ ಘಟನೆ ನಡೆದಿದೆ. ಇರಿತಕ್ಕೆ ಒಳಗಾದ ವ್ಯಕ್ತಿಯನ್ನು ಮುಖೀದ್ ಎಂದು ಗುರುತಿಸಲಾಗಿದೆ. ಮುಖೀದ್ ಮತ್ತು ಇನ್ನಿಬ್ಬರು ಬಾರ್‌ನಲ್ಲಿದ್ದ ವೇಳೆ, ಅಪರಿಚಿತ ನಾಲ್ವರ ಜೊತೆ ವಾಗ್ವಾದ ಹತ್ತಿಕೊಂಡಿದೆ. ಈ ಗಲಾಟೆ ಬಾರ್ ಹೊರಗೆಯೂ ಮುಂದುವರಿದಿದ್ದು, ಒಬ್ಬ ಆರೋಪಿ ಮುಖೀದ್‌ನಿಗೆ ಇರಿದಿದ್ದಾನೆ. ಮುಖೀದ್ ಜೊತೆಗಿದ್ದ ‌ನಿಜಾಮ್ ಎಂಬವನಿಗೂ ಈ ವೇಳೆ ಗಾಯವಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರತ್ಕಲ್ ಬಾರ್‌ನಲ್ಲಿ ಗಲಾಟೆ: ಓರ್ವನಿಗೆ ಇರಿತ Read More »

ಜಾನುವಾರು ಸಾಗಿಸಿದವನ ಕಾಲಿಗೆ ಗುಂಡಿಕ್ಕಿದ ಪ್ರಕರಣ : ಅಪಪ್ರಚಾರ ಮಾಡಿದರೆ ಕಠಿಣ ಕ್ರಮ

ಕೃತ್ಯಕ್ಕೆ ಧರ್ಮ, ಜಾತಿ, ರಾಜಕೀಯವನ್ನು ಎಳೆದು ತರಬಾರದೆಂದು ಎಚ್ಚರಿಕೆ ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಸಮೀಪ ಬೆಳಗ್ಗೆ ಬುಧವಾರ ಜಾನುವಾರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ತಪ್ಪು ಪ್ರಚಾರಕ್ಕೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಟೆಂಪೊದಲ್ಲಿ ಹತ್ತು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿತ್ತು. ಪೊಲೀಸರು ಸುಮಾರು 10 ಕಿ.ಮೀ. ತನಕ ಬೆನ್ನಟ್ಟಿ ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆದಿದ್ದು, ಈ ಸಂದರ್ಭ ಟೆಂಪೊ ಚಾಲಕ ಅಬ್ದುಲ್ಲ

ಜಾನುವಾರು ಸಾಗಿಸಿದವನ ಕಾಲಿಗೆ ಗುಂಡಿಕ್ಕಿದ ಪ್ರಕರಣ : ಅಪಪ್ರಚಾರ ಮಾಡಿದರೆ ಕಠಿಣ ಕ್ರಮ Read More »

error: Content is protected !!
Scroll to Top