ಅಪರಾಧ

ಜೈಲಿನಲ್ಲಿ ದರ್ಶನ್‌ಗೆ ‌ಸೌಲಭ್ಯ ನೀಡದ ಬಗ್ಗೆ ಕಾನೂನು ಪ್ರಾಧಿಕಾರದಿಂದ ‌ಪರಿಶೀಲನೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೇಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಮಾಡಿಕೊಂಡ ಮನವಿಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಹಿ. ವರದರಾಜ್ ಅವರು ಮಂಗಳವಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾನೂನಿನನ್ವಯ ದರ್ಶನ್‌ಗೆ ನೀಡಲಾಗಿರುವ ಸೌಲಭ್ಯಗಳಿಗೆ ಸಂಬಂಧಿಸಿದ ಹಾಗೆ ಜೈಲಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಆರೋಪಿ ದರ್ಶನ್ ಇದ್ದ ಸೆಲ್‌ಗೂ ಭೇಟಿ ನೀಡಿದ್ದು, ಅವರ ಬಳಿಯೂ ಮಾಹಿತಿ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ. ಈ ವರದಿಯನ್ನು ನ್ಯಾಯಾಲಯಕ್ಕೆ […]

ಜೈಲಿನಲ್ಲಿ ದರ್ಶನ್‌ಗೆ ‌ಸೌಲಭ್ಯ ನೀಡದ ಬಗ್ಗೆ ಕಾನೂನು ಪ್ರಾಧಿಕಾರದಿಂದ ‌ಪರಿಶೀಲನೆ Read More »

ತಪ್ಪು ಮಾಹಿತಿ ಪ್ರಸಾರ: ಜಯಂತ್ ಟಿ. ವಿರುದ್ಧ ಸುಮೋಟೋ ಪ್ರಕರಣ ದಾಖಲು

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡೀಪಾರು ಮಾಡಿದ ಆದೇಶ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಮೂಲಕ ಜನರಿಗೆ ತಪ್ಪು ಮಾಹಿತಿ ರವಾನೆ ಮಾಡಿದ ಆರೋಪದಲ್ಲಿ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ಪೊಲೀಸರ ಮನವಿಯ ಮೇರೆಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಅವರು ಸೆ. 18 ರಿಂದ ಒಂದು ವರ್ಷಗಳ ಕಾಲ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಆದೇಶದ ಎಲ್ಲಾ ಅಂಶಗಳು

ತಪ್ಪು ಮಾಹಿತಿ ಪ್ರಸಾರ: ಜಯಂತ್ ಟಿ. ವಿರುದ್ಧ ಸುಮೋಟೋ ಪ್ರಕರಣ ದಾಖಲು Read More »

ಬೆಂಗಳೂರಲ್ಲೇ ಇತ್ತು ಸೈಬರ್‌ ಖದೀಮರ ಡಿಜಿಟಲ್‌ ಅರೆಸ್ಟ್‌ ಕಂಪನಿ

ಡಿಜಿಟಲ್‌ ಅರೆಸ್ಟ್‌ ಮಾಡಿ ಕೋಟಿಗಟ್ಟಲೆ ಹಣ ಸುಲಿಯುತ್ತಿದ್ದ ಆಫೀಸ್‌ ಮೇಲೆ ದಾಳಿ ಬೆಂಗಳೂರು : ದೇಶ ವಿದೇಶಗಳ ಅಮಾಯಕ ಜನರನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಕೋಟಿಗಟ್ಟಲೆ ಹಣ ದೋಚುತ್ತಿದ್ದ ಸೈಬರ್‌ ಖದೀಮರ ಕಚೇರಿ ಬೆಂಗಳೂರಿನಲ್ಲೇ ಇತ್ತು ಎಂಬುದು ಈಗ ಬಯಲಾಗಿದೆ. ಹಲವು ಐಟಿ ಕಂಪನಿಗಳಿರುವ ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದ ಸೈಬರ್ ಕಂಪನಿ ಕೂಡ ಪತ್ತೆಯಾಗಿದೆ. ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಜನರಲ್ಲಿ ಭಯ ಹುಟ್ಟಿಸಿ ಹಣ ವಸೂಲಿ ಮಾಡುತ್ತಿದ್ದ ಪ್ರಕರಣಗಳು ಈ ಕಚೇರಿಗೆ ಜೊತೆಗೆ ನಂಟು ಹೊಂದಿರುವ

ಬೆಂಗಳೂರಲ್ಲೇ ಇತ್ತು ಸೈಬರ್‌ ಖದೀಮರ ಡಿಜಿಟಲ್‌ ಅರೆಸ್ಟ್‌ ಕಂಪನಿ Read More »

ಒಂದೇ ಕಡೆ ಹತ್ತು ಶವ ಹೂತ ಹೊಸ ಕಥೆ : ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌

ಎಸ್‌ಐಟಿಗೆ ತಿಳಿಸದ ವಿಚಾರವನ್ನು ನ್ಯಾಯಾಲಯಕ್ಕೆ ಹೇಳಿದ ಆರೋಪಿ ಚಿನ್ನಯ್ಯ ಧರ್ಮಸ್ಥಳ : ಧರ್ಮಸ್ಥಳ ಪ್ರಕರಣದ ತನಿಖೆ ಒಂದು ಹಂತಕ್ಕೆ ಬಂತು ಎನ್ನುವಾಗಲೇ ಆರೋಪಿ ಚಿನ್ನಯ್ಯ ಮಂಗಳವಾರ ಹೊಸ ಕಥೆ ಹೇಳಿ ಇಡೀ ಪ್ರಕರಣಕ್ಕೆ ಟ್ವಿಸ್ಟ್‌ ನೀಡಿದ್ದಾನೆ. ಕೋರ್ಟ್‌ ಮುಂದೆ ಚಿನ್ನಯ್ಯ ತಾನು ಒಂದೇ ಜಾಗದಲ್ಲಿ ಹತ್ತು ಮೃತದೇಹ ಹೂತಿದ್ದಾಗಿ ಸ್ಫೋಟಕ ಹೇಳಿಕೆ ಕೊಟ್ಟಿದ್ದಾನೆ. ಆದರೆ, ಯಾವ ಜಾಗದಲ್ಲಿ, ಎಲ್ಲಿ, ಯಾವಾಗ ಎಂದು ಮಾತ್ರ ಹೇಳಿಲ್ಲ. ಎಸ್‌ಐಟಿ ಮುಂದೆ ಇಷ್ಟರ ತನಕ ಕೊಡದ ಈ ಮಾಹಿತಿಯನ್ನು ಕೋರ್ಟ್‌ ಮುಂದೆ

ಒಂದೇ ಕಡೆ ಹತ್ತು ಶವ ಹೂತ ಹೊಸ ಕಥೆ : ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ Read More »

ಸುಳ್ಯ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

ಸುಳ್ಯ : ಕಳೆದ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೇರಳದ ತ್ರಿಶ್ಶೂರ್‌ ಜಿಲ್ಲೆಯ ನಾಟಿ ಮನೆಯ ಬಾಲನ್(73) ಎಂದು ಗುರುತಿಸಲಾಗಿದೆ. 1990ರಲ್ಲಿ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ಎಂಬವರಿಗೆ ತಲ್ವಾರ್‌ನಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಕೃತ್ಯಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್‌ ರಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಈತನನ್ನು ಕೇರಳ ರಾಜ್ಯದ ತ್ರಿಶ್ಶೂರ್‌ನಿಂದ ಅ.13ರಂದು

ಸುಳ್ಯ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ Read More »

ಸೈಟ್‌ ಕೊಡಿಸುವ ಆಮಿಷವೊಡ್ಡಿ 139 ಕಿರುತೆರೆ ಕಲಾವಿದರಿಗೆ ವಂಚನೆ

ಸ್ವಂತ ಸೈಟ್‌ ಆಸೆಯಿಂದ ಕೋಟಿಗಟ್ಟಲೆ ಕಳೆದುಕೊಂಡ ಕಲಾವಿದರು ಬೆಂಗಳೂರು: ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಂದ ಲಕ್ಷ ಲಕ್ಷ ಹಣ ಪಡೆದು ಸೈಟ್‌ ಕೊಡಿಸುವುದಾಗಿ ಹೇಳಿ ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಲ್ಡರ್‌ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್‌ನ 139 ಸದಸ್ಯರಿಗೆ ಸೈಟು ಕೊಡಿಸುವುದಾಗಿ ಕಿಡಿಗೇಡಿಗಳು ವಂಚನೆ ಮಾಡಿದ್ದಾರೆ. ಈ ಕುರಿತು ಅಸೋಸಿಯೇಷನ್ ಸದಸ್ಯೆ ಭಾವನಾ ಬೆಳಗೆರೆ

ಸೈಟ್‌ ಕೊಡಿಸುವ ಆಮಿಷವೊಡ್ಡಿ 139 ಕಿರುತೆರೆ ಕಲಾವಿದರಿಗೆ ವಂಚನೆ Read More »

ಉಡುಪಿ ಸಹಿತ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮಂಗಳವಾರ ಬೆಳ್ಳಂಬೆಳಗ್ಗೆ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಹಲವು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಉಡುಪಿ ಸೇರಿದಂತೆ ಬೆಂಗಳೂರು, ದಾವಣಗೆರೆ, ಹಾವೇರಿ, ಹಲವು ಜಿಲ್ಲೆಗಳಲ್ಲಿ ಒಟ್ಟು 12 ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಅಧಿಕಾರಿಗಳಿಂದ ಶೋಧ ಕಾರ್ಯ ನಡೆಯುತ್ತಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ), ಉಡುಪಿ ಸಾರಿಗೆ

ಉಡುಪಿ ಸಹಿತ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ Read More »

ಕಾರ್ಕಳ : ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಆತ್ಮಹತ್ಯೆ

ಬ್ರಹ್ಮಾವರದಲ್ಲಿ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆಗೆ ಶರಣು ಕಾರ್ಕಳ: ಕಾರ್ಕಳ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕ ದಿ.ಎಚ್.ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸುದೀಪ್ ಭಂಡಾರಿ ಎಂದು ಗುರುತಿಸಲಾಗಿದೆ. ನಿನ್ನೆ ಸಾಯಂಕಾಲ ಅವರು ಹೆಬ್ರಿಯಲ್ಲಿದ್ದು ಬಳಿಕ ಬ್ರಹ್ಮಾವರಕ್ಕೆ ಹೋಗಿದ್ದರು ಎನ್ನಲಾಗಿದೆ. ಸುದೀಪ್‌ ಭಂಡಾರಿ ಬಾರಕೂರಿನಲ್ಲಿ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತಾಯಿ ಪ್ರಕಾಶಿನಿ, ಸಹೋದರ ಪ್ರದೀಪ, ಸಹೋದರಿ ದೀಪಾ, ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕಾರ್ಕಳ : ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಆತ್ಮಹತ್ಯೆ Read More »

ವಿಟ್ಲ: ಮದುವೆಗೆ ಹೆಣ್ಣು ತೋರಿಸುವ ನೆಪದಲ್ಲಿ 44.80 ಲಕ್ಷ ರೂ. ಸುಲಿಗೆ

ವಿದೇಶದಲ್ಲಿದ್ದ ವ್ಯಕ್ತಿಯನ್ನು ಕರೆಸಿಕೊಂಡು ವಂಚಿಸಿದ ಪ್ರಕರಣ ವಿಟ್ಲ : ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಕರೆಸಿಕೊಂಡು ಹನಿಟ್ರ್ಯಾಪ್‌ಗೆ ಕೆಡವಿ 44.80 ಲಕ್ಷ ರೂ.ಸುಲಿಗೆ ಮಾಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಬ್ಲ್ಯಾಕ್‌ಮೇಲ್ ಮತ್ತು ಹಣಕಾಸು ವಂಚನೆಯ ಪ್ರಕರಣ ದಾಖಲಾಗಿದೆ. 53 ವರ್ಷದ ಮೊಹಮ್ಮದ್ ಅಶ್ರಫ್ ತಾವರಕಡನ್ ಎಂಬವರು 2024ರ ಸೆಪ್ಟೆಂಬರ್‌ನಲ್ಲಿ ಮಂಗಳೂರಿಗೆ ಬಂದಿದ್ದಾಗ ಹೆಣ್ಣು ತೋರಿಸುವ ನೆಪದಲ್ಲಿ ಆರೋಪಿಗಳು ಅವರನ್ನು ಭೇಟಿ ಮಾಡಿ ಸುಲಿಗೆ ಮಾಡಿದ್ದಾರೆ. ಬಶೀರ್

ವಿಟ್ಲ: ಮದುವೆಗೆ ಹೆಣ್ಣು ತೋರಿಸುವ ನೆಪದಲ್ಲಿ 44.80 ಲಕ್ಷ ರೂ. ಸುಲಿಗೆ Read More »

ಮಾಸ್ಕ್‌ಮ್ಯಾನ್ ಚಿನ್ನಯ್ಯನ ಪತ್ನಿ SIT ಕಚೇರಿಗೆ ಹಾಜರ್

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಮಾಸ್ಕ್‌ಮ್ಯಾನ್ ಚಿನ್ನಯ್ಯ‌ನ ಎರಡನೇ ಪತ್ನಿ SIT ಕಚೇರಿಗೆ ಇಂದು ಹಾಜರಾಗಿದ್ದಾರೆ. ಅವರನ್ನು ಆರೋಪಿ ಚಿನ್ನಯ್ಯನಿಗೆ ಸಂಬಂಧಿಸಿದಂತೆ ಇರುವ ಮಾಹಿತಿಗಳನ್ನು ಸಂಗ್ರಹ ಮಾಡುವ ದೃಷ್ಟಿಯಿಂದ SIT ಅಧಿಕಾರಿಗಳು ಕಚೇರಿಗೆ ಕರೆಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಬಂಗ್ಲಗುಡ್ಡದಲ್ಲಿ ಶವಗಳನ್ನು ಹೂಳಲಾಗಿದೆ ಎಂದು ಚಿನ್ನಯ್ಯ ತೋರಿಸಿದ್ದ ಜಾಗದಲ್ಲಿ ಇತ್ತೀಚೆಗೆ ಮತ್ತೆ SIT ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಹಾಗೆಯೇ ಅರಣ್ಯಾಧಿಕಾರಿಗಳ ಜೊತೆಗೂ ಸ್ಥಳಕ್ಕೆ ಭೇಟಿ ನೀಡಿ ಸರ್ವೇ ಕಾರ್ಯ ನಡೆಸಿದ್ದರು.

ಮಾಸ್ಕ್‌ಮ್ಯಾನ್ ಚಿನ್ನಯ್ಯನ ಪತ್ನಿ SIT ಕಚೇರಿಗೆ ಹಾಜರ್ Read More »

error: Content is protected !!
Scroll to Top