ಅಪರಾಧ

ಅಯ್ಯಪ್ಪ ವ್ರತಧಾರಿ ‌ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಣೆ: ಪ್ರಾಂಶುಪಾಲರ ‌ವಿರುದ್ಧ ಹಿಂದೂಗಳ ಆಕ್ರೋಶ

ಚಿಕ್ಕಮಗಳೂರು: ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಕ್ಕೆ ಹಾಕಿರುವ ಘಟನೆ MESP ಕಾಲೇಜಿನಲ್ಲಿ ನಡೆದಿದೆ. ಪ್ರಥಮ ಪಿಯುಸಿ ಮೂವರು ಅಯ್ಯಪ್ಪ ಮಾಲಾಧಾರಿ ‌ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು ಹೊರಕ್ಕೆ ಹಾಕಿದ್ದಾರೆ. ಮಾಲೆ ತೆಗೆದು ಕಾಲೇಜಿಗೆ ಪ್ರವೇಶಿಸುವಂತೆ ತಾಕೀತು ಮಾಡಿದ್ದಾರೆ. ಈ ವಿಷಯ ತಿಳಿಯುತ್ತಿದ್ದ ಹಾಗೆಯೇ ಆಕ್ರೋಶಗೊಂಡ ಹಿಂದೂಗಳು, ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಕಾಲೇಜಿನ ಬಳಿಗೆ ಬಂದು ಹಿಂದೂ ವಿರೋಧಿ ನೀತಿ ಪ್ರದರ್ಶಿಸಿದ ಪ್ರಾಂಶುಪಾಲರನ್ನು ‌ತರಾಟೆಗೆ ತೆಗೆದುಕೊಂಡಿದ್ದಾರೆ. ಅಯ್ಯಪ್ಪ ವ್ರತದಲ್ಲಿರುವ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಗೆ ಕಳುಹಿಸಿದಲ್ಲಿ ನೂರಾರು ವಿದ್ಯಾರ್ಥಿಗಳನ್ನು […]

ಅಯ್ಯಪ್ಪ ವ್ರತಧಾರಿ ‌ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಣೆ: ಪ್ರಾಂಶುಪಾಲರ ‌ವಿರುದ್ಧ ಹಿಂದೂಗಳ ಆಕ್ರೋಶ Read More »

ಪುತ್ತೂರು : ಚಿಕನ್‌ ಅಂಗಡಿಯ ನೌಕರ ನಾಪತ್ತೆ

ಪುತ್ತೂರು: ನಗರದ ಪಡೀಲ್‌ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿ.ಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಜಿಂದಗಿ ಚಿಕನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ಹೋಗಿದ್ದ ಎನ್ನಲಾಗಿದೆ. ಆ ಬಳಿಕ ಬದ್ರುದ್ದೀನ್ ಕೆಲಸದ ಸ್ಥಳಕ್ಕೂ ಹೋಗದೆ, ಮನೆಗೂ

ಪುತ್ತೂರು : ಚಿಕನ್‌ ಅಂಗಡಿಯ ನೌಕರ ನಾಪತ್ತೆ Read More »

ಇಬ್ಬರು ಆನ್‌ಲೈನ್‌ ವಂಚಕರ ಸೆರೆ : 6.15 ಲಕ್ಷ ರೂ. ವಶ

ಫ್ರಾಂಚೈಸಿ ಕೊಡುವ ನೆಪದಲ್ಲಿ ಉದ್ಯಮಿಗೆ ವಂಚಿದ್ದ ಚೋರರು ಉಡುಪಿ: ಆನ್‌ಲೈನ್‌ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 6,15,000 ರೂ. ಮೌಲ್ಯದ ನಗದು, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಹಾರದ ಪಾಟ್ನಾ ಜಿಲ್ಲೆಯ ದೇವ್ ಹರ್ಷ(20) ಹಾಗೂ ಬಿಹಾರ ನಳಂದಾ ಜಿಲ್ಲೆಯ ಚಂದನ ಕುಮಾರ್(29) ಬಂಧಿತ ಆರೋಪಿಗಳು. ಇವರಿಂದ 97 ಸಾವಿರ ರೂ. ಮೌಲ್ಯದ 10 ಮೊಬೈಲ್ ಫೋನ್, 68,000 ರೂ. ಮೌಲ್ಯದ

ಇಬ್ಬರು ಆನ್‌ಲೈನ್‌ ವಂಚಕರ ಸೆರೆ : 6.15 ಲಕ್ಷ ರೂ. ವಶ Read More »

ಕೋಳಿ ಅಂಕಕ್ಕೆ ದಾಳಿ : ಮೂವರು ಪೊಲೀಸ್‌ ವಶ

ಬಂಟ್ವಾಳ : ವೀರಕಂಭ ಗ್ರಾಮದ ಪಾತ್ರತೋಟ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ಮೂವರನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ. ಇಡ್ಕಿದು ನಿವಾಸಿ ಉಮೇಶ (38), ಅನಂತಾಡಿ ನಿವಾಸಿ ಅಣ್ಣು (38), ವೀರಕಂಭ ನಿವಾಸಿ ಉಮೇಶ್ (30) ಎಂಬವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿಗಳು ಅಕ್ರಮವಾಗಿ ಕೋಳಿಅಂಕದಲ್ಲಿ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಬಿ.ಎಸ್ ನಾಯಕ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ.

ಕೋಳಿ ಅಂಕಕ್ಕೆ ದಾಳಿ : ಮೂವರು ಪೊಲೀಸ್‌ ವಶ Read More »

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲು

ನ್ಯಾಷನಲ್‌ ಹೆರಾಲ್ಡ್‌ನ 2 ಸಾವಿರ ಕೋ. ರೂ. ಆಸ್ತಿ ಕಬಳಿಸಿದ ಪ್ರಕರಣ ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಲಾಗಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಹೊಸ ಎಫ್‌ಐಆರ್ ದಾಖಲಿಸಿದೆ. ಸೋನಿಯಾ, ರಾಹುಲ್‌ ಜೊತೆಗೆ ಇತರ

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲು Read More »

ಟೆರರ್‌ ಡಾಕ್ಟರ್‌ ಶಾಹಿನಾ ಕೊಠಡಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆ

ಅಲ್‌-ಫಲಾಹ್‌ ವಿವಿಯ ಕೊಠಡಿಯಲ್ಲೇ ಕಂತೆ ಕಂತೆ ಹಣ ಸಂಗ್ರಹಿಸಿಟ್ಟಿದ್ದ ಶಾಹಿನಾ ನವದೆಹಲಿ: ದೆಹಲಿ ಸ್ಫೋಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಅಲ್-ಫಲಾಹ್ ವಿಶ್ವವಿದ್ಯಾಲಯದ ಟೆರರ್‌ ಡಾಕ್ಟರ್‌ ಶಾಹಿನಾ ಸಯೀದ್‌ ಕೊಠಡಿಯಲ್ಲಿ 18 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ. ವಿಶ್ವವಿದ್ಯಾಲಯದ ರೂಮ್‌ ನಂಬರ್‌ 22ರಲ್ಲಿ ಶೋಧ ನಡೆಸಿದಾಗ ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ ಇಟ್ಟಿದ್ದ ಹಣ ಪತ್ತೆಯಾಗಿದೆ. ಶಾಹಿನಾಗೆ ಈ ಪ್ರಮಾಣದ ಹಣ ಎಲ್ಲಿಂದ ಸಿಕ್ಕಿದೆ ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನವೆಂಬರ್ 10ರಂದು

ಟೆರರ್‌ ಡಾಕ್ಟರ್‌ ಶಾಹಿನಾ ಕೊಠಡಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆ Read More »

ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿದ ಆರೋಪಿ ಬಂಧನ

ಟೋಕನ್‌ ವಿಚಾರದಲ್ಲಿ ಜಗಳವಾಡಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಪುತ್ತೂರು : ನಗರದ ದರ್ಬೆಯ ಇಎನ್‌ಟಿ ಕ್ಲಿನಿಕ್‌ನಲ್ಲಿ ಶನಿವಾರ ದಾಂಧಲೆ ಎಸಗಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಅಋೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಬೆಳ್ಳಂಬೆಳಗ್ಗೆ ದರ್ಬೆಯಲ್ಲಿರುವ ಕ್ಲಿನಿಕ್‌ನಲ್ಲಿ ಈ ಘಟನೆ ನಡೆದಿತ್ತು. ಘಟನೆಗೆ ಸಂಬಂಧಿಸಿ ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ ಇಬ್ರಾಹಿಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕ್ಲಿನಿಕ್ ಸಿಬ್ಬಂದಿ ಶ್ರೀಕಾಂತ್ ಹಲ್ಲೆಗೊಳಗಾದವರು ಶನಿವಾರ ಬೆಳಗ್ಗೆ 6.30ರ ವೇಳೆ ಬಂದ ಇಬ್ರಾಹೀಂ ತಮ್ಮ ಪರಿಚಯಸ್ಥರಿಗೆ ಆದ್ಯತೆ ನೀಡುವಂತೆ

ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿದ ಆರೋಪಿ ಬಂಧನ Read More »

ನೇಣಿಗೆ ‌ಶರಣಾದ ರಿಕ್ಷಾ ಚಾಲಕ

ಪುತ್ತೂರು: ಬನ್ನೂರು ನಿವಾಸಿ ರಿಕ್ಷಾ ಚಾಲಕರೊಬ್ಬರು ‌ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ‌ಮೋಹನ್ (57) ಎಂದು ಗುರುತಿಸಲಾಗಿದೆ. ಮನೆಯ ಮುಂದೆ ಅಳವಡಿಸಲಾಗಿದ್ದ ಶೀಟ್‌ನ ಅಡ್ಡಪಟ್ಟಿಗೆ ‌ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದಾಗಿದೆ.

ನೇಣಿಗೆ ‌ಶರಣಾದ ರಿಕ್ಷಾ ಚಾಲಕ Read More »

ಗಡಪಿಲದಲ್ಲಿ ಅಕ್ರಮ ಗೋಸಾಗಾಟ: ರಸ್ತೆ ಬದಿಯಲ್ಲೇ ಗೋವುಗಳನ್ನು ಬಿಟ್ಟು ಪರಾರಿ

ಪುತ್ತೂರು: ಸರ್ವೆಯ ಗಡಪಿಲ ಎಂಬಲ್ಲಿ ಇಂದು ಮುಂಜಾನೆ ಅಕ್ರಮ ಗೋ ಸಾಗಾಟದ ವಾಸನೆ ಮೂಗಿಗೆ ಬಡಿದಿದ್ದು, ರಸ್ತೆ ಬದಿಯಲ್ಲಿ ಗೋಕಳ್ಳರು ಗೋವುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ‌ ಎನ್ನಲಾಗಿದೆ. ರಸ್ತೆ ಬದಿ 5 ಗೋವುಗಳು ಕಂಡು ಬಂದಿವೆ. ತಕ್ಷಣವೇ ಹಿಂದೂ ಸಂಘಟನೆಗಳು ಎಚ್ಚೆತ್ತುಕೊಂಡು, ರಸ್ತೆ ಬದಿಯಲ್ಲಿ ಬಿಡಲಾಗಿದ್ದ ಗೋವುಗಳನ್ನು ಪುತ್ತೂರು ನಗರ ಪೊಲೀಸು ಠಾಣೆಗೆ ಸಾಗಿಸಿ ರಕ್ಷಿಸಿದ್ದಾರೆ. ಈ ಗೋವುಗಳಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗೋಶಾಲೆಯಿಂದ ಬೈಹುಲ್ಲಿನ ‌ವ್ಯವಸ್ಥೆ ಮಾಡಲಾಗಿದೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ಕೆಟ್ಟು ನಿಂತ ಪರಿಣಾಮ

ಗಡಪಿಲದಲ್ಲಿ ಅಕ್ರಮ ಗೋಸಾಗಾಟ: ರಸ್ತೆ ಬದಿಯಲ್ಲೇ ಗೋವುಗಳನ್ನು ಬಿಟ್ಟು ಪರಾರಿ Read More »

ಅಪ್ರಾಪ್ತ ಹುಡುಗನಿಗೆ ಕೋಲಿನಿಂದ ಹೊಡೆದ ವ್ಯಕ್ತಿಯ ವಿರುದ್ಧ ದೂರು

ಸುಬ್ರಹ್ಮಣ್ಯ: ವ್ಯಕ್ತಿಯೋರ್ವ ಅಪ್ರಾಪ್ತ ಹುಡುಗನಿಗೆ ಗದರಿಸಿ, ಕೋಲಿನಿಂದ ಹೊಡೆದಿದ್ದು, ಈ ಘಟನೆ ಬಾಲಕನ ತಾಯಿಯ ಗಮನಕ್ಕೆ ಬಂದ ಕೂಡಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ‌ದೂರು ದಾಖಲಿಸಿದ್ದಾರೆ. ಸಂತ್ರಸ್ತ ಬಾಲಕ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು, ಆರೋಪಿ ಚೇತನ್ ಎಂಬಾತ ಹುಡುಗನಿಗೆ ಕೋಲು ಹಿಡಿದು ಹೊಡೆಯುತ್ತಿರುವ ವಿಡಿಯೋ ಮೊಬೈಲಿನಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿರುವುದಾಗಿದೆ.

ಅಪ್ರಾಪ್ತ ಹುಡುಗನಿಗೆ ಕೋಲಿನಿಂದ ಹೊಡೆದ ವ್ಯಕ್ತಿಯ ವಿರುದ್ಧ ದೂರು Read More »

error: Content is protected !!
Scroll to Top