ಅಪರಾಧ

ಅನುಮಾನಗಳನ್ನು ಹುಟ್ಟು ಹಾಕಿದ ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ

ದೂರು ದಾಖಲಾದ ಮರುಕ್ಷಣವೇ ಬಂಧಿಸಿ, ಮನೆಗೆ ದಾಳಿ ಮಾಡಿರುವ ಪೊಲೀಸರು ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಸೈಟ್‌ ಕಬಳಿಕೆ ಪ್ರಕರಣದ ಮುಖ್ಯ ದೂರುದಾರರಾಗಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ದೂರು ನೀಡಿದ ಮರುಕ್ಷಣವೇ ಬಂಧಿಸಿದ್ದಲ್ಲದೆ ಅವರ ಮನೆಗೆ ದಾಳಿ ಮಾಡಿ ಶೋಧ ಕಾರ್ಯ ಮಾಡಿದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಬೆಂಗಳೂರು ಸಿಸಿಬಿ ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆ ಹಿಂದೆ ಯಾರ ಕೈವಾಡ ಇದೆ ಎಂದು ಅನುಮಾನ ಈಗ ಉಂಟಾಗಿದೆ. […]

ಅನುಮಾನಗಳನ್ನು ಹುಟ್ಟು ಹಾಕಿದ ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ Read More »

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ

ನಾಲ್ಕು ವರ್ಷದ ಹಿಂದೆ ಶಿಬಾಜೆಯ ತೋಟದಲ್ಲಿ ಕೊಲೆಯಾಗಿದ್ದ ಶ್ರೀಧರ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ‌ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ನೇತೃತ್ವದಲ್ಲಿ ರಚನೆಯಾಗಿರುವ ಎಸ್‌ಐಟಿ ತಂಡದಲ್ಲಿ ಉಡುಪಿ ಜಿಲ್ಲಾ ಎಸ್‌ಪಿ ಹರಿರಾವ್ ಶಂಕರ್, ಡಿವೈಎಸ್‌ಪಿ ಎಂ.ಆರ್ ಹರೀಶ್ ಅವರಿದ್ದಾರೆ. 2022ರ ಡಿ‌.18ರಂದು ಶಿಬಾಜೆಯ ತೋಟದ ಒಳಗೆ ಶ್ರೀಧರನ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ Read More »

ಸಿಎಂ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್‌

ದೂರು ಕೊಟ್ಟ ಮರುಕ್ಷಣದಲ್ಲೇ ಬಂಧಿಸಿ ಮನೆ ಮೇಲೆ ದಾಳಿ ಮಾಡಿದ ಪೊಲೀಸರು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ನೀಡಿದ ದೂರಿನನ್ವಯ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಮುಂಬಡ್ತಿಗಾಗಿ ನಟೇಶ್ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಒಂದೂವರೆ ಕೋಟಿ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು.ಇದರ ಬೆನ್ನಲ್ಲೇ ನಿನ್ನೆ

ಸಿಎಂ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್‌ Read More »

ಬಾಗಲಕೋಟೆ ಕಲ್ಲು ತೂರಾಟ : ಮುಂದುವರಿದ ಉದ್ವಿಗ್ನ ಸ್ಥಿತಿ

ಶಾಂತಿ ಸಭೆ ವಿಫಲ; ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ ಬಾಗಲಕೋಟೆ : ಬಾಗಲಕೋಟೆಯಲ್ಲಿ ಗುರುವಾರ ರಾತ್ರಿ ಶಿವಾಜಿ ಮೆರವಣಿಗೆ ಮೇಲೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟದ ಬಳಿಕ ಉಂಟಾಗಿದ್ದ ಬಿಗುವಿನ ವಾತಾವರಣ ಮುಂದುವರಿದಿದೆ. ಘಟನೆ ಖಂಡಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬೀದಿಗಿಳಿದಿದ್ದಾರೆ. ಶುಕ್ರವಾರ ಆಗಿದ್ದರಿಂದ ಪಂಕಾ ಮಸೀದಿ ಹಾಗೂ ಕೊತ್ತಲೇಶ್ವರ ದೇವಸ್ಥಾನದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಗುರುವಾರ ರಾತ್ರಿ ಕಲ್ಲು ತೂರಾಟ ಸಂಬಂಧ 8 ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಜಯಪುರ ಜೈಲಿಗೆ ಅಟ್ಟಿದ್ದಾರೆ.

ಬಾಗಲಕೋಟೆ ಕಲ್ಲು ತೂರಾಟ : ಮುಂದುವರಿದ ಉದ್ವಿಗ್ನ ಸ್ಥಿತಿ Read More »

ಗೋವುಗಳನ್ನು ಕದ್ದು ಕಸಾಯಿಖಾನೆಗೆ ಮಾರಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರ ಬಂಧನ

ಉಡುಪಿ: ದನ ಕರುಗಳನ್ನು ಕಳವು ಮಾಡಿ ಅವುಗಳನ್ನು ಕಸಾಯಿಖಾನೆಗೆ ಮಾರಲು ಪ್ರಯತ್ನಿಸುತ್ತಿದ್ದ ಇಬ್ಬರು ಖದೀಮ ಗೋಕಳ್ಳರನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೆರ್ಡೂರಿನ ರಾಘವೇಂದ್ರ ಮತ್ತು ಕುಂಜದಕಟ್ಟೆ ನಿವಾಸಿ ಸುಧೀಂದ್ರ ಶೆಟ್ಟಿ ಎಂದು ಗುರುತಿಸಲಾಗಿದೆ. ಪೆರ್ಡೂರು ದೇಗುಲದ ಸಮೀಪದ ಹೊಲದಿಂದ ಗೋವುಗಳನ್ನು ಕಳ್ಳತನ ಮಾಡಿ, ರಿಕ್ಷಾ ಮೂಲಕ ಅವುಗಳನ್ನು ಸಾಗಿಸಲು ಈ ಇಬ್ಬರು ಕಳ್ಳರು ಪ್ರಯತ್ನ ಮಾಡಿದ್ದಾರೆ. ಹಿರಿಯಡ್ಕ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿ ರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಗೋವುಗಳನ್ನು ಕದ್ದು ಕಸಾಯಿಖಾನೆಗೆ ಮಾರಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರ ಬಂಧನ Read More »

ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಅನಾಥ ಶವವೊಂದು ಪತ್ತೆಯಾಗಿದೆ. ನೆಕ್ಕಿಲಾಡಿ ಮಸೀದಿಯ ಹಿಂಬದಿಯ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಸಿಕ್ಕಿರುವುದಾಗಿದೆ. ನದಿಯಲ್ಲಿನ ಗಿಡ ಗಂಟಿಗಳ ನಡುವೆ ಶವ ಕಂಡು ಬಂದಿದ್ದು, ನದಿಯಲ್ಲಿ ತೇಲಿಕೊಂಡು ಬಂದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ Read More »

ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು

ವಿಜಯಪುರ: ವೈದ್ಯರು ಮತ್ತು ಆಸ್ಪತ್ರೆಯ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ಮಗು ಮೃತಪಟ್ಟ ಘಟನೆ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಢಳವಾರ ಗ್ರಾಮದ ಮೈತ್ರಾ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಸಿಂದಗಿಯ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೇ ಇದ್ದ ಕಾರಣ ನರ್ಸ್ ಮತ್ತು ಇನ್ನಿಬ್ಬರು ಸಿಬ್ಬಂದಿ ಸೇರಿ ಹೆರಿಗೆ ಮಾಡಿಸಿದ್ದಾರೆ. ಈ ವೇಳೆ ಮಗು ಮೃತಪಟ್ಟಿದ್ದು, ಮೈತ್ರಾಗೆ ತೀವ್ರ ಪ್ರಮಾಣದಲ್ಲಿ ರಕ್ತಸ್ರಾವ ಆಗಿದೆ. ಭಯಗೊಂಡ ಸಿಬ್ಬಂದಿ ತಕ್ಷಣವೇ ಆಕೆಯನ್ನು

ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು Read More »

ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ : 8 ಮಂದಿ ಬಂಧನ

ಮಸೀದಿಯಿಂದಲೇ ಕಲ್ಲು, ಚಪ್ಪಲಿ ತೂರಿದ್ದಾರೆ ಎಂದು ದೃಢಪಡಿಸಿದ ಎಸ್‌ಪಿ ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.ತನ್ವೀರ್ (28) , ಮುಜ್ಜು (23), ಸದ್ದಾಂ(22), ಫಯಾಜ್(24), ಸರ್ಫರಾಜ್(33), ರಿಯಾನ್(21), ಅಯಾನ್(19), ವಸೀಮ್(22) ಬಂಧನಕ್ಕೆ ಒಳಗಾದ ಆರೋಪಿಗಳು. ವಿಡಿಯೋ ದೃಶ್ಯಗಳನ್ನು ಆಧಾರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ನಾವು ಆರೋಪಿಗಳನ್ನು ಬಂಧಿಸಿದ್ದೇವೆ. ರಾತ್ರಿ 10.06ಕ್ಕೆ ಕಲ್ಲು ಎಸೆಯಲಾಗಿದೆ. ನಮ್ಮ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಕ್ಕೆ 7 ಮಂದಿ ಮೇಲೆ ಕೇಸ್‌

ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ : 8 ಮಂದಿ ಬಂಧನ Read More »

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಪ್ರಯಾಣಿಸುತ್ತಿದ್ದ ವಂದೇ ಭಾರತ್‌ ರೈಲಿಗೆ ಕಲ್ಲು ತೂರಾಟ

ಲಖನೌ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ಮಾಡಿರುವ ಘಟನೆ ಉತ್ತರ ಪ್ರದೇಶದ ಹಾರ್ದೋಯ್‌ ಸಮೀಪ ನಡೆದಿದೆ. ಲಖನೌ-ದೆಹಲಿ ವಂದೇ ಭಾರತ್‌ನಲ್ಲಿ ಭಾಗವತ್‌ ಮೀರತ್‌ಗೆ ಹಿಂತಿರುಗುತ್ತಿದ್ದರು. ಈ ವೇಳೆ ಹಾರ್ದೋಯ್ ಗ್ರಾಮದಲ್ಲಿ ಕಲ್ಲು ತೂರಾಟವಾಗಿದೆ. ಗುರುವಾರ ಮಧ್ಯಾಹ್ನ 3:30ರ ವೇಳೆಗೆ ಘಟನೆಯಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಮೀರತ್ ರೈಲು ನಿಲ್ದಾಣದಲ್ಲಿ ಬಿಗಿ ಭದ್ರತೆಯಲ್ಲಿ ಮೋಹನ್‌ ಭಾಗವತ್‌ ಅವರು ಇಳಿದಿದ್ದಾರೆ. ಇಂದು ಮತ್ತು ನಾಳೆ 2 ದಿನಗಳ ಸಂವಾದ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಪ್ರಯಾಣಿಸುತ್ತಿದ್ದ ವಂದೇ ಭಾರತ್‌ ರೈಲಿಗೆ ಕಲ್ಲು ತೂರಾಟ Read More »

ತಲೆಮರೆಸಿಕೊಂಡಿರುವ ಉಗ್ರನ ಸುಳಿವಿಗೆ 5 ಲ.ರೂ. ಬಹುಮಾನ ಘೋಷಿಸಿದ ಎನ್‌ಐಎ

ಮೂರು ವರ್ಷಗಳಿಂದ ತಪ್ಪಿಸಿಕೊಂಡಿರುವ ಲಷ್ಕರ್‌ನ ಉಗ್ರ ಬೆಂಗಳೂರು: ಮೋಸ್ಟ್‌ ವಾಂಟೆಡ್‌ ಉಗ್ರ ಜುನೈದ್‌ ಅಹಮ್ಮದ್‌ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿದೆ. ಮೋಸ್ಟ್ ವಾಂಟೆಡ್ ಲಷ್ಕರ್ ಎ ತೊಯ್ಬಾ ಉಗ್ರನಿಗಾಗಿ ಕಳೆದ ಮೂರು ವರ್ಷದಿಂದ ಎನ್‌ಐಎ ಅಧಿಕಾರಿಗಳು ದೇಶ, ಹೊರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಶಂಕಿತ ಉಗ್ರ ಜುನೈದ್ ಬಗ್ಗೆ ಸುಳಿವು ಸಿಕ್ಕಿಲ್ಲ. ಹಾಗಾಗಿ, ಉಗ್ರನ ಸುಳಿವು ಕೊಟ್ಟರೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ನಗರದ ಜನನಿಬಿಡ

ತಲೆಮರೆಸಿಕೊಂಡಿರುವ ಉಗ್ರನ ಸುಳಿವಿಗೆ 5 ಲ.ರೂ. ಬಹುಮಾನ ಘೋಷಿಸಿದ ಎನ್‌ಐಎ Read More »

error: Content is protected !!
Scroll to Top