ಅಪರಾಧ

ಸರಗಳ್ಳತನ ಆರೋಪಿ ಬಂಧನ | ಸೊತ್ತುಗಳನ್ನು ವಶಪಡಿಸಿಕೊಂಡ ುಪ್ಪಿನಂಗಡಿ ಪೊಲೀಸರು

ಉಪ್ಪಿನಂಗಡಿ: ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ, ಆರೋಪಿಯಿಂದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಬಂಧಿತ ಆರೋಪಿ. ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.4ರಂದು  ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಪ್ಪಿನಂಗಡಿ ಠಾಣಾ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದು, ಆರೋಪಿಯನ್ನು […]

ಸರಗಳ್ಳತನ ಆರೋಪಿ ಬಂಧನ | ಸೊತ್ತುಗಳನ್ನು ವಶಪಡಿಸಿಕೊಂಡ ುಪ್ಪಿನಂಗಡಿ ಪೊಲೀಸರು Read More »

ತಮಿಳುನಾಡಿನಲ್ಲಿ ತನ್ನನ್ನು ಕೆಲವು ವ್ಯಕ್ತಿಗಳು ಭೇಟಿ ಮಾಡಿದ್ದಾರೆಂದು ಮುಸುಕುಧಾರಿ ಹೇಳಿಲ್ಲ : ಎಸ್‌ಐಟಿ ಸ್ಪಷ್ಟನೆ

ಸುಳ್ಳು ಸುದ್ದಿ, ಭಾವನೆಗಳನ್ನು ಕೆರಳಿಸುವ ವೀಡಿಯೊ ಮಾಡದಂತೆ ಯೂಟ್ಯೂಬರ್‌ಗಳಿಗೆ ಖಡಕ್‌ ಎಚ್ಚರಿಕೆ ಮಂಗಳೂರು: ತಮಿಳುನಾಡಿನಲ್ಲಿದ್ದ ವೇಳೆ ಗುಂಪೊಂದು ತನ್ನನ್ನು ಸಂಪರ್ಕಿಸಿತ್ತು ಎಂದು ದೂರುದಾರ ಮುಸುಕುಧಾರಿ ವ್ಯಕ್ತಿ ಹೇಳಿಲ್ಲ ಎಂದು ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 2014ರ ನಂತರ ತಮಿಳುನಾಡಿನಲ್ಲಿದ್ದೆ. 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿತ್ತು. ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ನನ್ನನ್ನು ಕೇಳಿತ್ತು. ನಾನು ಕಾನೂನು ಪ್ರಕಾರವೇ ಶವಗಳನ್ನು ಹೂತಿರುವುದಾಗಿ ಹೇಳಿದ್ದೆ. ಆದರೆ ಈ ಗುಂಪು ತಪ್ಪು ಹೇಳಿಕೆ ನೀಡುವಂತೆ ಒತ್ತಡ

ತಮಿಳುನಾಡಿನಲ್ಲಿ ತನ್ನನ್ನು ಕೆಲವು ವ್ಯಕ್ತಿಗಳು ಭೇಟಿ ಮಾಡಿದ್ದಾರೆಂದು ಮುಸುಕುಧಾರಿ ಹೇಳಿಲ್ಲ : ಎಸ್‌ಐಟಿ ಸ್ಪಷ್ಟನೆ Read More »

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‍.ಸಂತೋಷ್‍ ರವರಿಗೆ ಏಕವಚನದಲ್ಲಿ ಅವಮಾನ | ಮಹೇಶ್‍ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ನಗರ ಠಾಣೆಗೆ ದೂರು

ಪುತ್ತೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ ರವರಿಗೆ ಏಕವಚನದಲ್ಲಿ ಮಾತನಾಡಿರುವುದಲ್ಲದೆ ಹೆಣ್ಣು ಮಕ್ಕಳ ಬಗ್ಗೆ ಅವಮಾನ  ರೀತಿಯಲ್ಲಿ ಮಾತನಾಡಿ ಗುಂಪು ಘರ್ಷಣೆಗೆ ಪ್ರಚೋದನೆ ನೀಡಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಮಹೇಶ್ ತಿಮರೋಡಿಯವರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವ ಸಮಯದಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಅವರನ್ನು ಅವಿವೇಕಿ, ಪಾಪಿ ಎಂದು ನಿಂಧಿಸಿದಲ್ಲದೆ ಶಿವಮೊಗ್ಗ, ಪುತ್ತೂರು, ಬೆಂಗಳೂರು, ದೆಹಲಿಯಲ್ಲಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‍.ಸಂತೋಷ್‍ ರವರಿಗೆ ಏಕವಚನದಲ್ಲಿ ಅವಮಾನ | ಮಹೇಶ್‍ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ನಗರ ಠಾಣೆಗೆ ದೂರು Read More »

ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳ

ಎರಡು ವರ್ಷದಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಶೇ.26 ಏರಿಕೆ ಬೆಂಗಳೂರು: ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಾಗಿದೆ ಸರ್ಕಾರವೇ ತಿಳಿಸಿದೆ. ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಶೇ.26ರಷ್ಟು ಹೆಚ್ಚಾಗಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ವಿಧಾನ ಪರಿಷತ್ತಿಗೆ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, 2022ರಲ್ಲಿ 3,209 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಅದು 2024ರ ವೇಳೆಗೆ 4,064ಕ್ಕೆ ಏರಿಕೆಯಾಗಿದೆ. 2025ರಲ್ಲಿ ಈವರೆಗೆ 2,544 ಪ್ರಕರಣಗಳು ದಾಖಲಾಗಿವೆ. ಪೋಕ್ಸೊ ಪ್ರಕರಣಗಳು ಹೆಚ್ಚುತ್ತಿದ್ದರೂ,

ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳ Read More »

ಧರ್ಮಸ್ಥಳ ಪ್ರಕರಣ : ಎಸ್‌ಐಟಿಗೆ ಕಗ್ಗಂಟಾದ ಮುಸುಕುಧಾರಿ ಅನಾಮಿಕ

ತೀವ್ರ ವಿಚಾರಣೆ ನಡೆಸಿದರೂ ಬಾಯಿ ಬಿಡದ ಮುಸುಕುಧಾರಿ ನಡೆಯ ಬಗ್ಗೆ ಅನುಮಾನ ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಶೋಧವನ್ನು ಸ್ಥಗಿತಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಅನಾಮಿಕ ಮುಸುಕುಧಾರಿಯ ವಿಚಾರಣೆ ಪ್ರಾರಂಭಿಸಿದ್ದಾರೆ. ಸೋಮವಾರವೂ ಸುಮಾರು ಆರು ತಾಸುಗಳ ಕಾಲ ಮುಸುಕುಧಾರಿಯನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್‌ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮುಸುಕುಧಾರಿ ಹೇಳಿದ ಕಡೆಯಲೆಲ್ಲ ಅಗೆದರೂ ಶವಗಳ ಯಾವುದೇ ಕುರುಹು ಸಿಗದಿರುವ

ಧರ್ಮಸ್ಥಳ ಪ್ರಕರಣ : ಎಸ್‌ಐಟಿಗೆ ಕಗ್ಗಂಟಾದ ಮುಸುಕುಧಾರಿ ಅನಾಮಿಕ Read More »

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ವರ್ತನೆ | ರವಿ ರಾಮಕುಂಜ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಎಚ್‍ ಪಿಯಿಂದ ನಗರ ಠಾಣೆಗೆ ದೂರು

ಪುತ್ತೂರು: ಕೃಷ್ಣನ ವೇಷ ಧರಿಸಿ ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆ ಬರುವ ರೀತಿ ವರ್ತನೆ ಮಾಡಿದ ರವಿ ರಾಮಕುಂಜ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್‍ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ. ರವಿ ರಾಮ ಕುಂಜ ಎಂಬ ಕಲಾವಿದ ಶ್ರೀ ಕೃಷ್ಣನ ವೇಷ ದರಿಸಿ ನಾಟಕ ಪಾತ್ರ ಮಾಡುವ ಸಂರ್ಭದಲ್ಲಿ ಹೆಣ್ಣ (ಮಾತೆಯ) ನ್ನು ಅಪ್ಪಿ ಕೊಳ್ಳಲು ಹೇಳಿದ್ದು ಅಲ್ಲದೆ ಪೂಜೆಯಲ್ಲಿ ನಿರತವಾಗಿದ್ದ

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ವರ್ತನೆ | ರವಿ ರಾಮಕುಂಜ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಎಚ್‍ ಪಿಯಿಂದ ನಗರ ಠಾಣೆಗೆ ದೂರು Read More »

ಧರ್ಮಸ್ಥಳ ಪ್ರಕರಣ : ಊಹಾಪೋಹದ ವಿಡಿಯೋಗಳನ್ನು ಹರಿಯಬಿಟ್ಟವರಿಗೆ ಎಸ್​ಐಟಿ ನೋಟಿಸ್

ಸೋಷಿಯಲ್‌ ಮೀಡಿಯಾ ವಿಡಿಯೋಗಳ ತೀವ್ರ ಪರಿಶೀಲನೆ ಧರ್ಮಸ್ಥಳ : ಧರ್ಮಸ್ಥಳ ಪ್ರಕರಣ ಸಂಬಂಧ ಕಳೆದ ಒಂದೂವರೆ ತಿಂಗಳಿನಿಂದ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿದ ಸಾವಿರಾರು ಎಲ್ಲ ವಿಡಿಯೋಗಳನ್ನು ಎಸ್​ಐಟಿ ಸಂಗ್ರಹಿಸಿ ಪರಿಶೀಲಿಸುತ್ತಿದೆ. ಸೋಶಿಯಲ್ ಮೀಡಿಯಾವನ್ನು ಸಂಪೂರ್ಣವಾಗಿ ಮಾನಿಟರ್ ಮಾಡಲಾಗುತ್ತಿದ್ದು ಎಲ್ಲರ ಮೇಲೂ ಎಸ್‌ಐಟಿ ಕಣ್ಣಿಟ್ಟಿದೆ. ಧರ್ಮಸ್ಥಳ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹದ ವಿಡಿಯೋಗಳನ್ನು ಹರಿಯಬಿಟ್ಟವರಿಗೆ ಎಸ್​ಐಟಿ ನೋಟಿಸ್ ನೀಡಲು ಆರಂಭಿಸಿದೆ. ಈ ಸಂಬಂಧ ವಿಶೇಷ ತಂಡ ರಚಿಸಿರುವ ಎಸ್​​ಐಟಿ, ತನಿಖೆ ಕುರಿತು ಬಾಯಿಗೆ ಬಂದಂತೆ ಮಾತನಾಡಿದವರ ಪಟ್ಟಿ

ಧರ್ಮಸ್ಥಳ ಪ್ರಕರಣ : ಊಹಾಪೋಹದ ವಿಡಿಯೋಗಳನ್ನು ಹರಿಯಬಿಟ್ಟವರಿಗೆ ಎಸ್​ಐಟಿ ನೋಟಿಸ್ Read More »

ರಥಕ್ಕೆ ವಿದ್ಯುತ್‌ ತಂತಿ ಸ್ಪರ್ಶಿಸಿ ಐವರ ದುರ್ಮರಣ

ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಡೆದ ರಥಯಾತ್ರೆಯಲ್ಲಿ ಸಂಭವಿಸಿದ ದುರಂತ ಹೈದರಾಬಾದ್: ಕೃಷ್ಣ ಜನ್ಮಾಷ್ಟಮಿ ಆಚರಣೆಯ ಭಾಗವಾಗಿ ನಡೆದ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್‌ ತಂತಿ ತಗುಲಿ ಕನಿಷ್ಠ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮೃತರನ್ನು ಕೃಷ್ಣಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್ ರೆಡ್ಡಿ (35), ರುದ್ರ ವಿಕಾಸ್ (39), ಮತ್ತು ರಾಜೇಂದ್ರ ರೆಡ್ಡಿ (45) ಎಂದು ಗುರುತಿಸಲಾಗಿದೆ. ರಾಮಂತಪುರದ ಗೋಕುಲನಗರದಲ್ಲಿ ಭಾನುವಾರ ತಡರಾತ್ರಿ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಹಲವರು

ರಥಕ್ಕೆ ವಿದ್ಯುತ್‌ ತಂತಿ ಸ್ಪರ್ಶಿಸಿ ಐವರ ದುರ್ಮರಣ Read More »

ಮೊಸರು ಕುಡಿಕೆ ಮೆರವಣಿಗೆಯಲ್ಲಿ ಮಹಿಳಾ ಪೊಲೀಸರ ಜೊತೆ ಅಸಭ್ಯ ವರ್ತನೆ : ಇಬ್ಬರ ಬಂಧನ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಉಳ್ಳಾಲ: ತೊಕ್ಕೊಟ್ಟಿನಲ್ಲಿ ಶನಿವಾರ ರಾತ್ರಿ ನಡೆದಿದ್ದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅಶ್ಲೀಲ ಕೈ ಸನ್ನೆ ಮಾಡಿ, ಕಿರುಕುಳ ನೀಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತ ಆರೋಪಿಗಳು. ತೊಕ್ಕೊಟ್ಟುವಿನ ಜೈ ವೀರ ಮಾರುತಿ ವ್ಯಾಯಾಮ ಶಾಲೆಯ ವತಿಯಿಂದ ನಡೆದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯ ಸಂದರ್ಭದಲ್ಲಿ ಈ ಘಟನೆ

ಮೊಸರು ಕುಡಿಕೆ ಮೆರವಣಿಗೆಯಲ್ಲಿ ಮಹಿಳಾ ಪೊಲೀಸರ ಜೊತೆ ಅಸಭ್ಯ ವರ್ತನೆ : ಇಬ್ಬರ ಬಂಧನ Read More »

ಪುತ್ತೂರು : ಯುವತಿ ಆತ್ಮಹತ್ಯೆ

ಪುತ್ತೂರು: ಅವಿವಾಹಿತ ಯುವತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರು ಗ್ರಾಮದ ಕನಡ್ಕ ಎಂಬಲ್ಲಿ ಭಾನುವಾರ ಸಂಭವಿಸಿದೆ. ಕಾನಡ್ಕ ನಿವಾಸಿ ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ (22) ಆತ್ಮಹತ್ಯೆ ಮಾಡಿಕೊಂಡವರು. ಅವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ತೇಜಸ್ವಿನಿ ಅವರು ಜಿಡೆಕಲ್ಲು ಕಾಲೇಜಿನಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮೃತರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

ಪುತ್ತೂರು : ಯುವತಿ ಆತ್ಮಹತ್ಯೆ Read More »

error: Content is protected !!
Scroll to Top