ಅಪರಾಧ

ಪುತ್ತೂರು : ಮನೆಯಿಂದ ಚಿನ್ನ ಕದ್ದವ ಸೆರೆ

ಪುತ್ತೂರು: ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ಕದ್ದ ಸರಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ನೆಟ್ಟಣಿಗೆ ಮುಡೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ ಎಂ (29) ಎಂದು ಗುರುತಿಸಲಾಗಿದೆ. ಪುತ್ತೂರಿನ ಈಶ್ವರಮಂಗಲದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ 30.120 ಗ್ರಾಂ ಬಂಗಾರ ಹಾಗೂ ರೂ.5000 ನಗದು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಕಳ್ಳತನಕ್ಕೆ ಬಳಸಿದ ಡಿಸ್ಕವರಿ ಬೈಕ್ ಕೂಡಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಪ್ರಕರಣದ ಪತ್ತೆ ಹಚ್ಚುವಲ್ಲಿ […]

ಪುತ್ತೂರು : ಮನೆಯಿಂದ ಚಿನ್ನ ಕದ್ದವ ಸೆರೆ Read More »

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ವೃದ್ಧನ ಬಂಧನ

ವಿಡಿಯೋ ವೈರಲ್‌ ಆಗಿ ಬೆಳಕಿಗೆ ಬಂದ ಕೃತ್ಯ ಮಂಗಳೂರು: ಮೂಡುಬಿದಿರೆ ಸಮೀಪ ಖಾಸಗಿ ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ್ದ ಅನ್ಯಕೋಮಿನ ವೃದ್ಧನನ್ನು ಶನಿವಾರ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬೆಳುವಾಯಿಯ ನಿವಾಸಿ ರೆಹ್ಮಾನ್‌ ಸೆರೆಯಾಗಿರುವ ಆರೋಪಿ. ಕೆಲ ದಿನಗಳ ಹಿಂದೆ ಮಂಗಳೂರು-ಮೂಡುಬಿದಿರೆ-ಕಾರ್ಕಳ ಮಧ್ಯೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ತನ್ನ ಪಕ್ಕ ಕುಳಿತಿದ್ದ ಯುವತಿಗೆ ಆರೋಪಿ ಮೈಮುಟ್ಟಿ ಕಿರುಕುಳ ನೀಡಿದ್ದ. ಇದನ್ನು ಪ್ರತಿಭಟಿಸಿ ಯುವತಿ ಬಸ್‌ನಲ್ಲೇ ವೃದ್ಧನನ್ನು ದಬಾಯಿಸಿದ್ದು, ಉಳಿದ ಪ್ರಯಾಣಿಕರೂ ಯುವತಿಯ ಬೆಂಬಲಕ್ಕೆ ನಿಂತಿದ್ದರು.ಯಾರೋ ಇದನ್ನು ವಿಡಿಯೋ ಮಾಡಿ

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ವೃದ್ಧನ ಬಂಧನ Read More »

ಧರ್ಮಸ್ಥಳಕ್ಕೆ ಇಂದು ಬಿಜೆಪಿ ಶಾಸಕರ ತಂಡ ಭೇಟಿ

ಬಿಜೆಪಿ-ಕಾಂಗ್ರೆಸ್‌ ಕಿತ್ತಾಟ ; ರಾಜಕೀಯ ವಿವಾದವಾಗಿ ಬದಲಾದ ಪ್ರಕರಣ ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಆರೋಪದ ತನಿಖೆಗೆ ಅವರಸದಲ್ಲಿ ಎಸ್‌ಐಟಿ ರಚನೆ ಮಾಡಿದ ವಿಚಾರ ಈಗ ರಾಜಕೀಯ ವಿವಾದವಾಗಿ ಬದಲಾಗಿದೆ. ಸರ್ಕಾರದ ವಿರುದ್ಧ ಬಿಜೆಪಿ ಮುಗಿಬಿದ್ದಿದ್ದು, ನಿನ್ನೆ ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌ ನೇತೃತ್ವದಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ತನಕ ಬೃಹತ್‌ ವಾಹನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಇದರ ಬೆನ್ನಿಗೆ ಭಾನುವಾರ (ಆ.17) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಪೊಲೀಸರ ವಿಚಾರಣೆ,

ಧರ್ಮಸ್ಥಳಕ್ಕೆ ಇಂದು ಬಿಜೆಪಿ ಶಾಸಕರ ತಂಡ ಭೇಟಿ Read More »

ಧರ್ಮಸ್ಥಳ ಪ್ರಕರಣ : ಸೋಮವಾರ ಬಯಲಾಗುತ್ತಾ ರಹಸ್ಯ?

ಸಂಚಲನ ಹುಟ್ಟಿಸಿದ ಷಡ್ಯಂತ್ರ ನಡೆದಿದೆ ಎಂಬ ಡಿಕೆಶಿ ಹೇಳಿಕೆ ಬೆಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣ ಖಾಲಿ ಡಬ್ಬ ಅದರಲ್ಲಿ ಏನೂ ಇಲ್ಲ. ಅಲ್ಲಿ ಕೇವಲ ಸದ್ದು ಜಾಸ್ತಿ ಆಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿರುವುದು ಸಂಚಲನ ಉಂಟುಮಾಡಿದೆ. ನಿನ್ನೆ ಸದನದಲ್ಲಿ ಧರ್ಮಸ್ಥಳ ವಿಚಾರವಾಗಿ ತೀವ್ರ ಚರ್ಚೆ ನಡೆದಿದ್ದು, ಈ ಸಂದರ್ಭದಲ್ಲಿ ಡಿಕೆಶಿ, ಸೋಮವಾರ ಗೃಹ ಮಂತ್ರಿಗಳು ಎಲ್ಲ ವಿವರಗಳನ್ನು ತರಿಸಿಕೊಂಡು ಏನು ಹೇಳಬೇಕೋ ಅದನ್ನು ಹೇಳುತ್ತಾರೆ. ಹಿಂದೂ ಧರ್ಮ ಮಾತ್ರವಲ್ಲ ಯಾವುದೇ ಧರ್ಮದ ಭಾವನಗೆ

ಧರ್ಮಸ್ಥಳ ಪ್ರಕರಣ : ಸೋಮವಾರ ಬಯಲಾಗುತ್ತಾ ರಹಸ್ಯ? Read More »

ದರ್ಶನ್‌, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌

ಆರೋಪಿ ಎಷ್ಟೇ ದೊಡ್ಡವನಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ ಎಂದ ಕೋರ್ಟ್‌ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಮಾಡಿ ತೀರ್ಪತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್​ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಈ ಕೊಲೆ

ದರ್ಶನ್‌, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌ Read More »

13ನೇ ಸ್ಥಳದಲ್ಲಿ ಗುಂಡಿ ಅಗೆಯುವ ಕಾರ್ಯಾಚರಣೆಯೂ ಮುಗಿಯಿತು, ಮುಂದೇನು?

ಎಷ್ಟು ಅಗೆದರೂ ಶವದ ಕುರುಹು ಸಿಗದಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ನಡೆ ಬಗ್ಗೆ ಕುತೂಹಲ ಧರ್ಮಸ್ಥಳ : ಮುಸುಕುಧಾರಿ ಅನಾಮಿಕನ ಹೇಳಿಕೆ ನಂಬಿ ಮಾಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸತತ 14 ದಿನ ಭೂಮಿ ಅಗೆದರೂ ಶವ ಹೂತಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ. ಹೀಗಾಗಿ ಎಸ್‌ಐಟಿಯ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಮೂಡಿದೆ. ಮುಸುಕುಧಾರಿ ಇನ್ನೂ ಅನೇಕ ಜಾಗಗಳನ್ನು ತೋರಿಸಲು ಮುಂದಾಗಿದ್ದಾನೆ. ಆದರೆ ಇಷ್ಟರ ತನಕ ಅವನು ತೋರಿಸಿದ ಯಾವ ಜಾಗದಲ್ಲೂ ಯಾವುದೇ ಕುರುಹು ಸಿಗದಿರುವಾಗ

13ನೇ ಸ್ಥಳದಲ್ಲಿ ಗುಂಡಿ ಅಗೆಯುವ ಕಾರ್ಯಾಚರಣೆಯೂ ಮುಗಿಯಿತು, ಮುಂದೇನು? Read More »

ನಟಿ ಶಿಲ್ಪಾ ಶೆಟ್ಟಿ-ರಾಜ್‌ ಕುಂದ್ರಾ ವಿರುದ್ಧ 60 ಕೋ. ರೂ. ವಂಚನೆ ದೂರು

ಸಾಲ ಪಡೆದು ಹಿಂದಿರುಗಿಸದ ಕುರಿತು ಕೇಸ್‌ ದಾಖಲಿಸಿದ ಉದ್ಯಮಿ ಮುಂಬೈ : ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ 60 ಕೋ. ರೂ. ವಂಚಿಸಿದ ಕುರಿತು ಎಫ್‌ಐಆರ್‌ ದಾಖಲಾಗಿದೆ. ಮುಂಬೈ ಮೂಲದ ಉದ್ಯಮಿಯೊಬ್ಬರು ದಂಪತಿ ವಿರುದ್ಧ ದೂರು ನೀಡಿದ್ದಾರೆ. ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ ಜುಹು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಂಚನೆ ಮೊತ್ತ 10 ಕೋಟಿ ರೂ.ಗಳಿಗಿಂತ ಹೆಚ್ಚಿರುವುದರಿಂದ ಪೊಲೀಸರು ಪ್ರಕರಣವನ್ನು ಆರ್ಥಿಕ ಅಪರಾಧಗಳ ವಿಭಾಗಕ್ಕೆ

ನಟಿ ಶಿಲ್ಪಾ ಶೆಟ್ಟಿ-ರಾಜ್‌ ಕುಂದ್ರಾ ವಿರುದ್ಧ 60 ಕೋ. ರೂ. ವಂಚನೆ ದೂರು Read More »

ಮಂಗಳೂರು: ನೈತಿಕ ಪೊಲೀಸ್‌ಗಿರಿ ಮಾಡಿದ 6 ಮಂದಿ ಬಂಧನ

ಅನ್ಯಕೋಮಿನ ಯುವಕನ ಜೊತೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಪ್ರಶ್ನಿಸಿದ್ದಕ್ಕೆ ಕೇಸ್‌ ಮಂಗಳೂರು: ನಗರದಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಗಣೇಶ್, ಶ್ರೇಯಸ್, ಚಿಂಚು, ಚಂದನ್, ನಾಗರಾಜ್ ಹಾಗು ರಾಮಚಂದ್ರ ಎಂದು ಗುರುತಿಸಲಾಗಿದೆ. ಆ.11ರಂದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಅನ್ಯಕೋಮಿನ ಯುವಕ ಜೊತೆ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ಸರ್ವಿಸ್ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿಗಳು ತಡೆದು ಅಡ್ಡಿಪಡಿಸಿ ಜೀವಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಪ.ಪೂ. ಕಾಲೇಜೊಂದರ

ಮಂಗಳೂರು: ನೈತಿಕ ಪೊಲೀಸ್‌ಗಿರಿ ಮಾಡಿದ 6 ಮಂದಿ ಬಂಧನ Read More »

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಂಟ್ವಾಳ ಉಪತಹಶೀಲ್ದಾರ್‌, ಮತ್ತಿಬ್ಬರು

ಪೌತಿ ಖಾತೆ ಮಾಡಿಕೊಡಲು 20 ಸಾವಿರ ರೂ. ಲಂಚ ಸ್ವೀಕರಿಸುವಾಗ ರೆಡ್‌ಹ್ಯಾಂಡ್‌ ಆಗಿ ಹಿಡಿದ ಪೊಲೀಸರು ಬಂಟ್ವಾಳ : ಜಮೀನಿಗೆ ಪೌತಿ ಖಾತೆ ಮಾಡಿಕೊಡಲು 20 ರೂ. ಸಾವಿರ ರೂ. ಲಂಚ ಸ್ವೀಕರಿಸುತ್ತಿರುವಾಗಲೇ ಬಂಟ್ವಾಳ ಉಪತಹಶೀಲ್ದಾರ್‌ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡ್‌ ಅಗಿ ಹಿಡಿದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮಧ್ಯಾಹ್ನ ತಾಲೂಕು ಕಚೇರಿಯ ಮೇಲೆ ದಾಳಿ ನಡೆಸಿದ್ದು, ಲಂಚ ಪಡೆಯುತ್ತಿರುವಾಗಲೇ ಉಪತಹಶೀಲ್ದಾರ್ ಸೇರಿದಂತೆ ಮೂವರು ವ್ಯಕ್ತಿಗಳನ್ನು ಹಿಡಿದು ಪ್ರಕರಣ ದಾಖಲಸಿಕೊಂಡಿದ್ದಾರೆ. ಆರೋಪಿಗಳನ್ನು ಉಪತಹಶೀಲ್ದಾರ್ ರಾಜೇಶ್ ನಾಯಕ್,

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಂಟ್ವಾಳ ಉಪತಹಶೀಲ್ದಾರ್‌, ಮತ್ತಿಬ್ಬರು Read More »

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯ ಮಂಪರು ಪರೀಕ್ಷೆ ಆಗಲಿದೆಯಾ?

ಗುಂಡಿಗಳಲ್ಲಿ ಹೆಣಗಳ ಕುರುಹು ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಹೆಚ್ಚುತ್ತಿದೆ ಅನುಮಾನ ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟೆದ್ದೇನೆ ಎಂದು ಆರೋಪಿಸಿದ ಮುಸುಕುಧಾರಿ ವ್ಯಕ್ತಿ ತೋರಿಸಿದ 16ಕಿಇಂತಲೂ ಹೆಚ್ಚು ಸ್ಥಳಗಳಲ್ಲಿ ಅಗೆದರೂ ಶವದ ಯಾವುದೇ ಕುರುಹುಗಳು ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಈ ವ್ಯಕ್ತಿಯನ್ನೇ ವಶಕ್ಕೆ ತೆಗೆದುಕೊಂಡು ತನಿಖೆಗೆ ಒಳಪಡಿಸಬೇಕೆಂಬ ಆಗ್ರಹ ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅವನನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಮುಸುಕುಧಾರಿ ತೋರಿಸಿದ ಬಹುಮುಖ್ಯ ಸ್ಥಳ ಎನ್ನಲಾಗುತ್ತಿದ್ದ 13ನೇ ಪಾಯಿಂಟ್‌ನಲ್ಲಿ ಮಂಗಳವಾರ ಜಿಪಿಆರ್‌

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯ ಮಂಪರು ಪರೀಕ್ಷೆ ಆಗಲಿದೆಯಾ? Read More »

error: Content is protected !!
Scroll to Top