ಅಪರಾಧ

ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಅವಹೇಳನ: ಯೂಟ್ಯೂಬ್ ಚಾನೆಲ್ ವಿರುದ್ಧ ದೂರು ದಾಖಲು

ಬೆಂಗಳೂರು: ರಾಜ್ಯ ಸರ್ಕಾರ, ಸಿ. ಎಂ. ಸಿದ್ದರಾಮಯ್ಯ, ಡಿ.ಸಿ.ಎಂ. ಡಿ. ಕೆ. ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಚಿತ್ರಗಳನ್ನು ಅವಹೇಳನಕಾರಿ ಎಂಬಂತೆ ಬಳಸಿದ ನ್ಯೂಸ್ ಫ್ಯಾಕ್ಟರಿ-09 ಎಂಬ ಯೂಟ್ಯೂಬ್ ಚಾನೆಲ್ ವಿರುದ್ಧ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಎಎಸ್‌ಐ ಅಸ್ಮಾ ಬೇಗಂ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ […]

ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಅವಹೇಳನ: ಯೂಟ್ಯೂಬ್ ಚಾನೆಲ್ ವಿರುದ್ಧ ದೂರು ದಾಖಲು Read More »

ಗೋ ಅಕ್ರಮ ಸಾಗಾಟ ಆರೋಪಿಯ ಮನೆ ಮುಟ್ಟುಗೋಲು

ಉಳ್ಳಾಲದಲ್ಲಿರುವ ಮನೆಯನ್ನು ಜಪ್ತಿ ಮಾಡಿದ ಬೆಳ್ತಂಗಡಿ ಪೊಲೀಸರು ಬೆಳ್ತಂಗಡಿ : ಕಾರಿನಲ್ಲಿ ಅಕ್ರಮವಾಗಿ ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ. ‌ನ.2ರಂದು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು KA-19-MC-5862 ನಂಬರಿನ ರಿಟ್ಜ್ ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್ ಅಲಿಯಾಸ್‌ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.

ಗೋ ಅಕ್ರಮ ಸಾಗಾಟ ಆರೋಪಿಯ ಮನೆ ಮುಟ್ಟುಗೋಲು Read More »

ಮಂಗಳೂರು : ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ಸಮುದ್ರಕ್ಕೆ ಜಿಗಿಯಲು ಬಂದು ಜನರನ್ನು ನೋಡಿ ವಾಪಸು ಮನೆಗೆ ಹೋಗಿ ನೇಣಿಗೆ ಶರಣಾಗಲು ಯತ್ನ ಪೊಲೀಸರ ಸಕಾಲಿಕ ಕ್ರಮದಿಂದ ಉಳಿದ ತಂದೆ-ಮಗಳ ಜೀವ ಮಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದು ತನ್ನ ಮಗುವಿನೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ ಘಟನೆ ಸೋಮವಾರ ಮುಸ್ಸಂಜೆ ವೇಳೆಗೆ ಸಂಭವಿಸಿದೆ. ಕೂಳೂರು ಪಂಜಿಮೊಗರು ಅಂಬಿಕಾ ನಗರ ನಿವಾಸಿ ರಾಜೇಶ್(35) ಮತ್ತವರ ನಾಲ್ಕು ವರ್ಷದ ಪುತ್ರಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ರಾಜೇಶ್

ಮಂಗಳೂರು : ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು Read More »

ಸುಳ್ಯ : ಬೆನಿಫಿಟ್‌ ಸ್ಕೀಂ ಹೆಸರಿನಲ್ಲಿ ವಂಚಿಸಿದವರಿಗೆ ಜೈಲು ಶಿಕ್ಷೆ

ಶ್ರೀ ತತ್ವಮಸಿ ಹೆಸರಿನಲ್ಲಿ ಸಂಸ್ಥೆ ತೆರೆದು ಕೋಟಿಗಟ್ಟಲೆ ರೂ. ಗುಳುಂ ಮಾಡಿದ ಪ್ರಕರಣ ಸುಳ್ಯ : ಸುಳ್ಯದಲ್ಲಿ ಶ್ರೀ ತತ್ವಮಸಿ ಚಾರಿಟೇಬಲ್ ಟ್ರಸ್ಟ್ (ಆರ್) ಮತ್ತು ಶ್ರೀ ತತ್ವಮಸಿ ಎಂಟರ್‌ಪ್ರೈಸಸ್ (ಆರ್) ಹೆಸರಿನಲ್ಲಿ ‘ಬೆನಿಫಿಟ್ ಸ್ಕೀಮ್’ ಮೂಲಕ ಸಾರ್ವಜನಿಕರನ್ನು ವಂಚಿಸಿದ ಆರೋಪದ ಮೇಲೆ ಮೂವರು ವ್ಯಕ್ತಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಅಪರಾಧಿಗಳನ್ನು ಕೆ.ಪಿ. ಗಣೇಶ್, ಗೀತಾ ಕೆ.ಎಸ್. ಮತ್ತು ಭಾರತಿ ಎಂದು ಗುರುತಿಸಲಾಗಿದೆ. ಕೆ.ಪಿ. ಕೃಷ್ಣಪ್ಪ ಗೌಡ, ಗೀತಾ ಗಣೇಶ್, ಎನ್.ಇ.ವೈ. ಕಮಲಾಕ್ಷ ಮತ್ತು ಕೆ.

ಸುಳ್ಯ : ಬೆನಿಫಿಟ್‌ ಸ್ಕೀಂ ಹೆಸರಿನಲ್ಲಿ ವಂಚಿಸಿದವರಿಗೆ ಜೈಲು ಶಿಕ್ಷೆ Read More »

ಹಿಂದೂ ದೇವರುಗಳ ಅವಹೇಳನ: ಬಾಲಕಿ ಮತ್ತಾಕೆಯ ಪೋಷಕರು ಅರೆಸ್ಟ್

ಲಕ್ನೋ: ಉತ್ತರ ಪ್ರದೇಶದಲ್ಲಿ ಹಿಂದೂ ದೇವತೆಗಳನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ‌ಮಾಡಿದ ಬಾಲಕಿಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದ್ದು, ಆಕೆಯ ಪೋಷಕರನ್ನು ಬಂಧಿಸಲಾಗಿದೆ. ತನ್ನ ಇನ್ಸ್ಟಾಗ್ರಾಮ್ ಫಾಲೇವರ್ಸ್ ಸಂಖ್ಯೆ ಹೆಚ್ಚಬೇಕು ಎನ್ನುವ ಉದ್ದೇಶದಿಂದ ಬಾಲಕಿ ಈ ಕೃತ್ಯ ಎಸಗಿದ್ದಳು. ಒಂದು ನಿಮಿಷದ ವಿಡಿಯೋದಲ್ಲಿ ಆಕೆ ಹಿಂದೂ ದೇವರನ್ನು ಟೀಕೆ ಮಾಡಿದ್ದಳು. ಅವಳ ಈ ಕೃತ್ಯಕ್ಕೆ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ, ಆಕೆಯ ಮತ್ತು ಅವಳ ಕುಟುಂಬದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ದೂರು

ಹಿಂದೂ ದೇವರುಗಳ ಅವಹೇಳನ: ಬಾಲಕಿ ಮತ್ತಾಕೆಯ ಪೋಷಕರು ಅರೆಸ್ಟ್ Read More »

ರೌಡಿ ತುಕ್ಕ ನೌಫಾಲ್‌ ಆತ್ಮಹತ್ಯೆ ಮಾಡಿಕೊಂಡನೇ? : ಕೇರಳ ಪೊಲೀಸರ ಅನುಮಾನ

ಹತ್ಯೆಯಲ್ಲ ಎಂದು ದೃಢಪಡಿಸಿದ ಪೋಸ್ಟ್‌ಮಾರ್ಟಂ ವರದಿ; ರೈಲು ಡಿಕ್ಕಿಯಾಗಿರುವ ಸಾಧ್ಯತೆ ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯ ನಟೋರಿಯಸ್ ರೌಡಿಶೀಟರ್ ಬಜಾಲ್‌ ಟೋಪಿ ನೌಫಾಲ್ ಅಲಿಯಾಸ್‌ ತುಕ್ಕ ನೌಫಾಲ್‌ (42) ಕೊಲೆಯಾಗಿದ್ದಲ್ಲ. ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಮೃತದೇಹದ ಪೋಸ್ಟ್‌ಮಾರ್ಟಂ ನಡೆಸಿದ ಕಾಸರಗೋಡಿನ ವೈದ್ಯರು ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೆ ಗೇಟ್ ಬಳಿಯಲ್ಲಿ ನೌಫಾಲ್ ಮೃತದೇಹ ಬಿದ್ದುಕೊಂಡಿತ್ತು. ನೌಫಾಲ್ ಮಂಗಳೂರಿನ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದುದರಿಂದ ಯಾರೋ ಮಾತುಕತೆಗೆ ಕರೆದು

ರೌಡಿ ತುಕ್ಕ ನೌಫಾಲ್‌ ಆತ್ಮಹತ್ಯೆ ಮಾಡಿಕೊಂಡನೇ? : ಕೇರಳ ಪೊಲೀಸರ ಅನುಮಾನ Read More »

ಖ್ಯಾತ ಸೀರಿಯಲ್‌ ನಟಿಗೆ ಕಿರುಕುಳ : ಆರೋಪಿ ಅರೆಸ್ಟ್‌

ಸೋಷಿಯಲ್‌ ಮೀಡಿಯಾದಲ್ಲಿ ಅಸಭ್ಯ ವಿಡಿಯೋ ಕಳುಹಿಸಿ ವಿಕೃತಿ ಬೆಂಗಳೂರು : ಖ್ಯಾತ ಸೀರಿಯಲ್‌ ನಟಿಯೊಬ್ಬರಿಗೆ ಕಾಮುಕನೊಬ್ಬ ಕೊಲೆಯಾದ ರೇಣುಕಾಸ್ವಾಮಿ ರೀತಿ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ತೆಲುಗು ಹಾಗೂ ಕನ್ನಡ ಧಾರವಾಹಿಗಳಲ್ಲಿ ಸಂತ್ರಸ್ತೆ ನಟಿಸಿ ಪ್ರಸಿದ್ಧರಾಗಿರುವ ನಟಿಗೆ ಫೇಸ್‌ಬುಕ್‌ನಲ್ಲಿ ಗುಪ್ತಾಂಗದ ವಿಡಿಯೋ ಕಳಿಸಿ ಕಿರುಕುಳ ನೀಡಿದ್ದಾನೆ. ಆರೋಪಿ ಕಳೆದ 3 ತಿಂಗಳಿನಿಂದ ನಟಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಆರೋಪಿ ಮೊದಲು ಫೇಸ್‌ಬುಕ್‌ನಲ್ಲಿ ʻNAVEENZʼ ಎಂಬ ಖಾತೆಯಿಂದ ಫ್ರೆಂಡ್

ಖ್ಯಾತ ಸೀರಿಯಲ್‌ ನಟಿಗೆ ಕಿರುಕುಳ : ಆರೋಪಿ ಅರೆಸ್ಟ್‌ Read More »

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 32 ಲ. ರೂ. ವಂಚನೆ

ಮಂಗಳೂರು : ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭ ದೊರೆಯುವುದಾಗಿ ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಸೆ.9ರಂದು ಫೇಸ್‌ಬುಕ್ ನೋಡುತ್ತಿರುವಾಗ ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ಸ್ ರಿಕ್ವೆಸ್ಟ್ ಬಂದಿದೆ. ಅದನ್ನು ಅಕ್ಸೆಪ್ಟ್ ಮಾಡಿ ಅವರೊಂದಿಗೆ ಚಾಟ್ ಮಾಡಿದ್ದಾರೆ. ಆಕೆ ತಾನು ಮುಂಬಯಿನಲ್ಲಿ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದು, ಅದರಿಂದ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿದ್ದಾಳೆ. ಇದರಿಂದ ಆಸಕ್ತಿಗೊಂಡು ಟ್ರೇಡಿಂಗ್‌ನಲ್ಲಿ ಕೆಲಸ ಮಾಡಲು ಒಪ್ಪಿದ ದೂರುದಾರಿಗೆ

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 32 ಲ. ರೂ. ವಂಚನೆ Read More »

ಬೀಡಿ ಕಂಪನಿ ಮಾಲಕನನ್ನು ಗುಂಡಿಕ್ಕಿ ಸಾಯಿಸಿ ಆತ್ಮಹತ್ಯೆ ಮಾಡಿಕೊಂಡ ಮಗ

ಕುಡಿತದ ವಿಚಾರವಾಗಿ ನಡೆದ ತಂದೆ-ಮಗನ ಜಗಳ ಇಬ್ಬರ ಸಾವಿನಲ್ಲಿ ಅಂತ್ಯ ನವದೆಹಲಿ : ಭಾರತದ ಪ್ರಮುಖ ಬೀಡಿ ಬ್ರ್ಯಾಂಡ್ ದಿನೇಶ್ ಬೀಡಿಯ ಮಾಲೀಕರಾಗಿದ್ದಸುರೇಶ್ ಚಂದ್ ಎಂಬವರನ್ನು ಅವರ ಮಗನೇ ಗುಂಡು ಕೊಲೆ ಮಾಡಿ ಬಳಿಕ ತಾನೂ ಅದೇ ರಿಲಾಲ್ವರ್‌ನಿಂದ ಗುಂಡಿಕ್ಕಿಕೊಂಡು ಅತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಮಥುರಾದ ವೃಂದಾವನದಲ್ಲಿ ನಡೆದಿದೆ. ಕುಡಿತದ ವಿಚಾರವಾಗಿ ತಂದೆ ಮತ್ತು ಮಗನ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸುರೇಶ್ ಚಂದ್ ಅಗರ್ವಾಲ್ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅವರ ಮಗ ನರೇಶ್ ಅಗರ್ವಾಲ್​ಗೆ

ಬೀಡಿ ಕಂಪನಿ ಮಾಲಕನನ್ನು ಗುಂಡಿಕ್ಕಿ ಸಾಯಿಸಿ ಆತ್ಮಹತ್ಯೆ ಮಾಡಿಕೊಂಡ ಮಗ Read More »

ಕೆ-ಸೆಟ್‌ ಪರೀಕ್ಷೆ ಬರೆಯಲು ಬಂದ ಮಹಿಳೆಯರ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ

ರಾಜ್ಯಾದ್ಯಂತ ಆಕ್ರೋಶ ವ್ಯಕ್ತ; ಧಾರ್ಮಿಕ ಭಾವನೆಗೆ ಘಾಸಿ ಮಾಡಿದ ಆರೋಪ ಬೆಂಗಳೂರು: ನಿನ್ನೆ ರಾಜ್ಯಾದ್ಯಂತ ನಡೆದ ಕೆ-ಸೆಟ್ ಪರೀಕ್ಷೆ ಬರೆಯಲು ಬಂದ ಮಹಿಳೆಯರ ಕಿವಿಯೋಲೆ, ಮೂಗುತಿಯನ್ನು ಬಿಚ್ಚಿಸಿರುವ ಕ್ರಮ ವಿವಾದದ ಸ್ವರೋಪ ಪಡೆದುಕೊಂಡಿದೆ. ಕೆಇಎ ಮಾಡಿಕೊಂಡ ಈ ಯಡವಟ್ಟಿಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇದಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕೆಲವು ತಿಂಗಳ ಹಿಂದೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ರಾಜ್ಯವ್ಯಾಪಿ ಸುದ್ದಿಯಾಗಿತ್ತು. ಪ್ರಕರಣಕ್ಕೆ

ಕೆ-ಸೆಟ್‌ ಪರೀಕ್ಷೆ ಬರೆಯಲು ಬಂದ ಮಹಿಳೆಯರ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ Read More »

error: Content is protected !!
Scroll to Top