ಅಪರಾಧ

ಮೀನು ಮಾರಾಟಗಾರರ ನಡುವೆ ಹೊಡೆದಾಟ : ಕೇಸ್‌ ದಾಖಲು

ಕಡಬ: ಮೀನು ಮಾರಾಟದ ವಿಚಾರವಾಗಿ ಎರಡು ಅಂಗಡಿಯವರ ನಡುವೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಡಿಕೊಂಡ ಘಟನೆ ಕಡಬ ಗ್ರಾಮದ ಸಂತೆಕಟ್ಟೆ ಬಳಿ ಮೀನು ಮಾರುಕಟ್ಟೆಯಲ್ಲಿ ಶನಿವಾರ ನಡೆದಿದೆ. ಇದರ ವಿಡಿಯೋ ವೈರಲ್ ಆದ ಬಳಿಕ ಪೊಲೀಸರ ಗಮನಕ್ಕೆ ಬಂದಿದ್ದು, ಇದನ್ನು ಆಧರಿಸಿ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತೆಕಟ್ಟೆ ಬಳಿಯ ಮೀನು ಮಾರುಕಟ್ಟೆಯಲ್ಲಿ ಶನಿವಾರ ಮೀನು ಮಾರಾಟದ ವಿಚಾರವಾಗಿ ರಾಜು ಮ್ಯಾಥ್ಯೂ ಹಾಗೂ ಆದಂ ಎಂಬ ಎರಡು ಅಂಗಡಿಯವರ ನಡುವೆ ಮಾತಿನ ಚಕಮಕಿ ನಡೆದಿದ್ದು, […]

ಮೀನು ಮಾರಾಟಗಾರರ ನಡುವೆ ಹೊಡೆದಾಟ : ಕೇಸ್‌ ದಾಖಲು Read More »

ನಾಲೆಯಲ್ಲಿ ನೀರುಪಾಲಾದ ನಾಲ್ವರು ಮಕ್ಕಳು : ಇಬ್ಬರ ಮೃತದೇಹ ಪತ್ತೆ

ಒಬ್ಬಳನ್ನು ರಕ್ಷಿಸಲು ಹೋಗಿ ಇತರ ಮೂವರು ನೀರುಪಾಲು ಬೆಂಗಳೂರು : ಬಟ್ಟೆ ತೊಳೆಯುವಾಗ ಕಾಲು ಜಾರಿ ನಾಲೆಗೆ ಬಿದ್ದ ಬಾಲಕಿಯನ್ನು ರಕ್ಷಿಸಲು ನೀರಿಗೆ ಧುಮುಕಿದ ನಾಲ್ವರು ಮಕ್ಕಳು ನೀರುಪಾಲಾದ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಓರ್ವ ಬಾಲಕಿಯನ್ನು ನಿನ್ನೆಯೇ ರಕ್ಷಣೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಆಯಿಷಾ (14) ಮೃತಪಟ್ಟಿದ್ದಾಳೆ. ಇಂದು ಆಫ್ರಿನ್ (13) ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾಗಿರುವ ಹನಿ (14),

ನಾಲೆಯಲ್ಲಿ ನೀರುಪಾಲಾದ ನಾಲ್ವರು ಮಕ್ಕಳು : ಇಬ್ಬರ ಮೃತದೇಹ ಪತ್ತೆ Read More »

ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಎಎಸ್‌ಐ ಸಾವು

ಸಹೋದ್ಯೋಗಿಯ ವಿದಾಯಕೂಟದಲ್ಲಿ ಹಾಡುತ್ತಿರುವಾಗಲೇ ಹೃದಯಾಘಾತ ಉಡುಪಿ : ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ಎಎಸ್ಸೈ) ವಿಶ್ವನಾಥ್ (56) ಭಾನುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಹಾಡುತ್ತಿರುವಾಗ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಇವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ವಿಶ್ವನಾಥ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ಇವರು ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಬಂದಿದ್ದರು.

ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಎಎಸ್‌ಐ ಸಾವು Read More »

ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ : ಇಬ್ಬರ ಸ್ಥಿತಿ ಗಂಭೀರ

ಮೆರವಣಿಗೆಯಲ್ಲಿ ಸಾಗುತ್ತಿದ್ದವರಿಗೆ ಯದ್ವಾತದ್ವಾ ಇರಿದು ಪಲಾಯನ ಮಾಡಿದ ದುಷ್ಕರ್ಮಿಗಳು ಬೆಂಗಳೂರು : ಕನ್ನಡ ರಾಜ್ಯೋತ್ಸವ ರೂಪಕಗಳ ಮೆರವಣಿಗೆ ವೇಳೆ ಬೆಳಗಾವಿ ನಗರದಲ್ಲಿ ಹಿಂಸಾಚಾರ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐವರಿಗೆ ಚಾಕು ಇರಿದು ಪಲಾಯನ ಮಾಡಿದ್ದಾರೆ. ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಸೋಇಚ್ಛೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗುರುನಾಥ ವಕ್ಕೂಂದ, ಸಚೀನ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್,

ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ : ಇಬ್ಬರ ಸ್ಥಿತಿ ಗಂಭೀರ Read More »

ಭಯೋತ್ಪಾದನೆಗೆ ನೆರವು : ಮೌಲ್ವಿ ಸಹಿತ ಐವರ ಸೆರೆ

ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಶಂಕೆಯಲ್ಲಿ ದಾಳಿ ನವದೆಹಲಿ : ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಐವರು ಶಂಕಿತರನ್ನು ರಾಜಸ್ಥಾನ ರಾಜಸ್ಥಾನ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಬಂಧಿತ ಮೌಲ್ವಿ ಅಯೂಬ್, ಮಸೂದ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಕರೌಲ್‌ನಲ್ಲಿ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಬಂಧಿತರಲ್ಲಿ ಒಬ್ಬನಾದ ಜೋಧ್‌ಪುರದ ಚೋಖಾದ ಅರೇಬಿಯಾ ಮದರಸಾದ ಧರ್ಮಗುರು ಆಯೂಬ್‌ನಿಂದ ಕೆಲವು ದಾಖಲೆಗಳನ್ನು ಎಟಿಎಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆತ 13 ವರ್ಷಗಳಿಂದ ಮದರಸಾದಲ್ಲಿ ಕೆಲಸ

ಭಯೋತ್ಪಾದನೆಗೆ ನೆರವು : ಮೌಲ್ವಿ ಸಹಿತ ಐವರ ಸೆರೆ Read More »

ಸೌದಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಭಾರತೀಯ ಯುವಕ ಆಕಸ್ಮಿಕ ಸಾವು

ಲಿಕ್ಕರ್‌ ಗ್ಯಾಂಗ್‌ ಜೊತೆ ಎನ್‌ಕೌಂಟರ್‌ ನಡೆದಾಗ ಸ್ಥಳದಲ್ಲಿದ್ದ ಯುವಕನಿಗೆ ಬಡಿದ ಗುಂಡು ನವದೆಹಲಿ: ಸೌದಿ ಅರೇಬಿಯಾದ ಜೆದ್ದಾದಲ್ಲಿ ಕಳೆದ ಅ.16ರಂದು ಪೊಲೀಸರು ಹಾಗೂ ಮದ್ಯ ಸ್ಮಗ್ಲಿಂಗ್‌ ಗ್ಯಾಂಗ್ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ ಜಾರ್ಖಂಡ್ ಮೂಲದ ಯುವಕ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ವಿಜಯ್ ಕುಮಾರ್ ಮಹತೊ (26) ಎಂದು ಗುರುತಿಸಲಾಗಿದ್ದು, ಜಾರ್ಖಂಡ್‌ನ ಈತ ಗಿರಿಧ್ ಜಿಲ್ಲೆಯ ದುಮ್ರಿ ತಾಲೂಕಿನ ಮಧ್ ಗೋಪಾಲಿ ಪಂಚಾಯ್ತಿ ವ್ಯಾಪ್ರಿಯ ಧೂದ್‌ಪಾನಿಯಾ ಗ್ರಾಮದವರು. ಟವರ್ಲೈನ್ ಫಿಟ್ಟರ್ ಆಗಿ ಕಳೆದ ಒಂಬತ್ತು

ಸೌದಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಭಾರತೀಯ ಯುವಕ ಆಕಸ್ಮಿಕ ಸಾವು Read More »

ರೇವ್‌ ಪಾರ್ಟಿಗೆ ಪೊಲೀಸ್‌ ದಾಳಿ : 35 ಯುವತಿಯರ ಸಹಿತ 115 ಮಂದಿ ವಶ

ಖಾಸಗಿ ರೆಸಾರ್ಟ್‌ನಲ್ಲಿ ತಡರಾತ್ರಿ ತನಕ ನಡೆದ ಪಾರ್ಟಿ ಬೆಂಗಳೂರು : ರಾಮನಗರ ನಗರದ ಹೊರವಲಯದ ಅಯಾನಾ ಎಂಬ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಬೆಂಗಳೂರಿನ ದಕ್ಷಿಣ ಎಸ್‌ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ಅಯಾನಾ ಖಾಸಗಿ ರೆಸಾರ್ಟ್‌ನಲ್ಲಿ ರಾತ್ರಿ ವೇಳೆ ರೇವ್ ಪಾರ್ಟಿ ನಡೆಯುತ್ತಿದೆ ಎನ್ನುವ ಮಾಹಿತಿ ಮೇರೆಗೆ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ, 35 ಯುವತಿಯರು ಸೇರಿದಂತೆ ಒಟ್ಟು 115 ಮಂದಿಯನ್ನು

ರೇವ್‌ ಪಾರ್ಟಿಗೆ ಪೊಲೀಸ್‌ ದಾಳಿ : 35 ಯುವತಿಯರ ಸಹಿತ 115 ಮಂದಿ ವಶ Read More »

ಕಳವಾಗಿದ್ದ 233 ಮೊಬೈಲ್ ಫೋನ್‌ಗಳು ಮರಳಿ ಮಾಲೀಕರಿಗೆ

ಒಂದೂವರೆ ತಿಂಗಳಲ್ಲಿ ಕಳವಾಗಿದ್ದ ಫೋನ್‌ಗಳು ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15ರಿಂದ ಅಕ್ಟೋಬರ್ 30ರವರೆಗೆ ಕಳವಾಗಿದ್ದ 233 ಮೊಬೈಲ್ ಫೋನ್‌ಗಳನ್ನು ನಗರ ಪೊಲೀಸರು ವಶಪಡಿಸಿಕೊಂಡು ಅ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ ಎಂದು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಮಿಥುನ್ ಎಚ್‌.ಎನ್ ತಿಳಿಸಿದ್ದಾರೆ. ಡಿಸಿಪಿ, ಕದ್ದ ಫೋನ್‌ಗಳನ್ನು ಪತ್ತೆಹಚ್ಚಲು ಸಿಇಎನ್ ಪೊಲೀಸ್ ಠಾಣೆಯ ಎಸಿಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ. ಕಳ್ಳತನ ಅಥವಾ ಅನುಮಾನಾಸ್ಪದ ಕರೆಗಳ ಸಂದರ್ಭದಲ್ಲಿ ತಮ್ಮ ಮೊಬೈಲ್ ಸಂಖ್ಯೆಗಳನ್ನು ನಿರ್ಬಂಧಿಸಲು ‘ಸಂಚಾರ್ ಸಾಥಿ’

ಕಳವಾಗಿದ್ದ 233 ಮೊಬೈಲ್ ಫೋನ್‌ಗಳು ಮರಳಿ ಮಾಲೀಕರಿಗೆ Read More »

ರೇಣುಕಾಸ್ವಾಮಿ ಮರ್ಡರ್ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ ನ. 3 ಕ್ಕೆ ಮುಂದೂಡಿದ ಕೋರ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್ ತೂಗುದೀಪ್ ಸೇರಿದಂತೆ ಇನ್ನಿತರರ ವಿರುದ್ಧದ ದೋಷಾರೋಪ ನಿಗದಿಯನ್ನು ನ. 3 ಕ್ಕೆ ನ್ಯಾಯಾಲಯ ಮುಂದೂಡಿದೆ. ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಇಂದೇ ಎಲ್ಲಾ ಆರೋಪಿಗಳ ದೋಷರೋಪ ನಿಗದಿ ಮಾಡುವುದಾಗಿ ನ್ಯಾಯಾಧೀಶರು ಹೇಳಿದ್ದರು. ಆದರೆ ದರ್ಶನ್ ಪರ ವಕೀಲರು ಕಾಲಾವಕಾಶ ಕೋರಿದ್ದು, ದರ್ಶನ್ ಜೊತೆ ಚರ್ಚೆ ನಡೆಸಿ ನೇರವಾಗಿ ಕೋರ್ಟ್‌ಗೆ ಹಾಜರುಪಡಿಸಲು ‌ಮತ್ತೊಂದು ಅವಕಾಶ ಕೇಳಿದ ಕಾರಣ ನ. 3

ರೇಣುಕಾಸ್ವಾಮಿ ಮರ್ಡರ್ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ ನ. 3 ಕ್ಕೆ ಮುಂದೂಡಿದ ಕೋರ್ಟ್ Read More »

ಸುಹಾಸ್‌ ಶೆಟ್ಟಿ ಹತ್ಯೆ ಮಾಡಿರುವುದು ಪಿಎಫ್‌ಐ : ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ನಿಷೇಧಿಸಲ್ಪಟ್ಟಿದ್ದರೂ ಕರಾವಳಿಯಲ್ಲಿ ಈಗಲೂ ಪಿಎಫ್‌ಐ ಗುಪ್ತವಾಗಿ ಸಕ್ರಿಯ ಎಂದು ಮಾಹಿತಿ ಮಂಗಳೂರು: ಮಂಗಳೂರಿನ ಬಜ್ಬೆ ಬಳಿ ಕಳೆದ ಮೇ 1ರಂದು ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಈ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಅಂಶಗಳನ್ನು ಎನ್ಐಎ ಉಲ್ಲೇಖಿಸಿದ್ದು, ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಿ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಸದಸ್ಯರ ಕೈವಾಡ

ಸುಹಾಸ್‌ ಶೆಟ್ಟಿ ಹತ್ಯೆ ಮಾಡಿರುವುದು ಪಿಎಫ್‌ಐ : ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ Read More »

error: Content is protected !!
Scroll to Top