ಅಪರಾಧ

ಮನೆಯಂಗಳದಿಂದ ಗೋವನ್ನು ಕದ್ದ ಆರೋಪಿಗಳು ಪೊಲೀಸ್ ಬಲೆಗೆ

ಮಂಗಳೂರು: ಗೋ ಕಳ್ಳತನ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಅಡ್ಯಾರು ನಿವಾಸಿಗಳಾದ ಶಾಬಾಜ್ ಅಹ್ಮದ್, ವಳಚ್ಚಿಲ್ ಖಾದರ್ ಮೊಹಮ್ಮದ್, ಅರ್ಕುಳ ವಳಚ್ಚಿಲ್ ನಿವಾಸಿ ಮೊಹಮ್ಮದ್ ಸುಹಾನ್ ಎಂದು ಗುರುತಿಸಲಾಗಿದೆ. ಅಡ್ಯಾರ್‌ನ ತಜಿಪೋಡಿ ನಿವಾಸಿ ಉಮೇಶ್ ಆಳ್ವ ಅವರ ಮನೆಯಿಂದ ಗೋವು ಕಳ್ಳತನವಾದ ಬಗ್ಗೆ ಸೆ. 13 ರಂದು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಗೋವನ್ನು ‌ಜೀವಂತವಾಗಿ ಪತ್ತೆ ಮಾಡಿ, ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. […]

ಮನೆಯಂಗಳದಿಂದ ಗೋವನ್ನು ಕದ್ದ ಆರೋಪಿಗಳು ಪೊಲೀಸ್ ಬಲೆಗೆ Read More »

ಧರ್ಮಸ್ಥಳ ಪ್ರಕರಣ : ಬಂಗ್ಲೆಗುಡ್ಡೆ ಸ್ಥಳ ಮಹಜರಿಗೆ ಅನುಮತಿ

ವಿಠಲ ಗೌಡ ತಲೆಬುರುಡೆ ಅಡಗಿಸಿಟ್ಟ ಸ್ಥಳದ ಮಹಜರು ಮಾಡಲಿರುವ ಎಸ್‌ಐಟಿ ಧರ್ಮಸ್ಥಳ : ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಸಂಬಂಧ ಸ್ಥಳ ಮಹಜರು ನಡೆಸಲು ಎಸ್​​ಐಟಿಗೆ ಅರಣ್ಯ ಇಲಾಖೆ ಹಸಿರು ನಿಶಾನೆ ತೋರಿದೆ. ಬಂಗ್ಲೆಗುಡ್ಡೆಯಲ್ಲಿ ವಿಠಲ್ ಗೌಡ ಬುರುಡೆ ತಂದ ಹಾಗೂ ಅಡಗಿಸಿಟ್ಟಿದ್ದ ಸ್ಥಳದ ಸುತ್ತ ಎಸ್​ಐಟಿ ಮಹಜರು ನಡೆಸಲಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದಲ್ಲಿ ಮಹಜರು ಪ್ರಕ್ರಿಯೆ ನಡೆಯಲಿದ್ದು ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, SOCO ಟೀಮ್ , ಕಂದಾಯ ಸೇರಿದಂತೆ

ಧರ್ಮಸ್ಥಳ ಪ್ರಕರಣ : ಬಂಗ್ಲೆಗುಡ್ಡೆ ಸ್ಥಳ ಮಹಜರಿಗೆ ಅನುಮತಿ Read More »

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಅಪರಾಧಿಗೆ ಜೈಲು, ದಂಡ

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಪರಾಧಿಗೆ ನಗರದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯ ನಾಲ್ಕು ತಿಂಗಳುಗಳ ಜೈಲು ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ದಂಡ ಪಾವತಿಸಲು ತಪ್ಪಿದಲ್ಲಿ ಒಂದು ತಿಂಗಳ ಕಾಲ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ. 2022ರ ಏ.25ರಂದು ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆರೋಪಿ ಮಾಡ್ನೂರು ಗ್ರಾಮದ ನಿವಾಸಿ ಸತ್ತಾರ್ ಎಂಬಾತ ತನ್ನ ಪಕ್ಕದ

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಅಪರಾಧಿಗೆ ಜೈಲು, ದಂಡ Read More »

ವಿಟ್ಲ : ಗಾಂಜಾ ಮಾರುತ್ತಿದ್ದ ನಾಲ್ಕು ಯುವಕರ ಬಂಧನ

ವಿಟ್ಲ: ವಿಟ್ಲ ಪರಿಸರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಮೊದಲು ಮೂವರನ್ನು ಬಂಧೀಸಿ ನಂತರ ಇನ್ನೊಬ್ಬನನ್ನು ಬಂಧಿಸಲಾಯಿತು. ಬಂಧಿತರನ್ನು ವಿಟ್ಲ ಕಸಬಾ ಗ್ರಾಮದ ಮಂಗಳಪದವು ನಿವಾಸಿ ಸನತ್ ಕುಮಾರ್ (23), ಮಹಮ್ಮದ್ ರಾಝಿಕ್ (23), ಚೇತನ್ (23) ಎರ್ಮೆ ಮಜಲು ನಿವಾಸಿ ಧ್ಯಾನ್ ಕರ್ಕೆರ (23) ಎಂದು ಗುರುತಿಸಲಾಗಿದೆ. ಸೆ.15ರಂದು ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕ ರಾಮಕೃಷ್ಣ ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ ದ್ವಿಚಕ್ರ ವಾಹನದೊಂದಿಗೆ

ವಿಟ್ಲ : ಗಾಂಜಾ ಮಾರುತ್ತಿದ್ದ ನಾಲ್ಕು ಯುವಕರ ಬಂಧನ Read More »

ಸ್ಟೇಟ್‌ ಬ್ಯಾಂಕ್‌ನಿಂದ 50 ಕೆಜಿ ಚಿನ್ನ, 8 ಕೋ. ರೂ. ನಗದು ದರೋಡೆ

ಮ್ಯಾನೇಜರ್‌, ಕ್ಯಾಶಿಯರ್‌ ಕೈಕಾಲು ಕಟ್ಟಿ ಹಾಕಿ ದರೋಡೆ ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ ದರೋಡೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ ಬ್ಯಾಂಕ್​ನ ಮ್ಯಾನೇಜರ್‌, ಕ್ಯಾಶಿಯರ್‌, ಸಿಬ್ಬಂದಿಯ ಕೈಕಾಲುಗಳನ್ನು ಕಟ್ಟಿಹಾಕಿ, ಅವರನ್ನು ರೂಂನಲ್ಲಿ ಕೂಡಿ ಹಾಕಿ ದರೋಡೆ

ಸ್ಟೇಟ್‌ ಬ್ಯಾಂಕ್‌ನಿಂದ 50 ಕೆಜಿ ಚಿನ್ನ, 8 ಕೋ. ರೂ. ನಗದು ದರೋಡೆ Read More »

ಬೈಕ್‌ನಲ್ಲಿ ಬಂದು ಮಹಿಳೆಯ ಕತ್ತಿನಿಂದ ಚಿನ್ನ ಎಗರಿಸಿದ ಆರೋಪಿ ಗ್ರಾಮಸ್ಥರ ಬಲೆಗೆ

ಚಿಕ್ಕಮಗಳೂರು: ಬೈಕ್‌‌ನಲ್ಲಿ ಬಂದ ಯುವಕನೊಬ್ಬ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಸರ ಕದಿಯಲು ಪ್ರಯತ್ನ ನಡೆಸಿದ್ದು, ಈ ಸಂಬಂಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಹೇಮಂತ್ ಎಂದು ಗುರುತಿಸಲಾಗಿದೆ. ಬೈಕ್ ರೈಡಿಂಗ್‌ನಲ್ಲೇ ಸ್ಕೂಟಿಯಲ್ಲಿ ಹೋಗುತ್ತಿದ್ದ ಶಿಲ್ಪಾ ಎಂಬವರ ‌ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರವನ್ನು ಎಗರಿಸಲು ಪ್ರಯತ್ನ ನಡೆಸಿದ್ದಾನೆ. ಗಾಬರಿಯಾದ ಮಹಿಳೆ ಸ್ಥಳೀಯರಿಗೆ ಮಾಹಿತಿ ನೀಡಿದ್ದು, ಗ್ರಾಮಸ್ಥರು ಪಕ್ಕದೂರಿಗೆ ಆತನ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರಂತೆ ಕುರುಕುಬಳ್ಳಿ ಗ್ರಾಮದಲ್ಲಿ ಆರೋಪಿ ಬಲೆಗೆ ಬಿದ್ದಿದ್ದಾನೆ.

ಬೈಕ್‌ನಲ್ಲಿ ಬಂದು ಮಹಿಳೆಯ ಕತ್ತಿನಿಂದ ಚಿನ್ನ ಎಗರಿಸಿದ ಆರೋಪಿ ಗ್ರಾಮಸ್ಥರ ಬಲೆಗೆ Read More »

ಮೂವರು ಗೋಕಳ್ಳರ ಬಂಧನ

ಮಡಿಕೇರಿ: ಈದ್ ಹಬ್ಬದ ಸಂದರ್ಭದಲ್ಲಿ ಗೋವನ್ನು ಕಳ್ಳತನ ಮಾಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೊಂಡೃಗೇರಿ ಗ್ರಾಮದ ಆಶಿಕ್, ಶಾಹಿದ್ ಮತ್ತು ಹಾರಿಸ್ ಎಂದು ಗುರುತಿಸಲಾಗಿದೆ. ಮೈತಾಡಿ ಗ್ರಾಮದ ಬೊಳ್ಳಪ್ಪಂಡ ಎಂ. ಭೀಮಯ್ಯ ಎಂಬವರಿಗೆ ‌ಸೇರಿದ ಹಸುವನ್ನು ಆರೋಪಿಗಳು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ನೀಡಲಾದ ದೂರಿನನ್ವಯ ಪೊಲೀಸರು ಆರೋಪಿಗಳನ್ನು ಬಂಧಿಸಿರುವುದಾಗಿದೆ. ಹಾಗೆಯೇ ಆರೋಪಿಗಳಿಂದ 2600 ರೂ. ಗಳನ್ನು ವಶಕ್ಕೆ ಪಡೆದಿದ್ದಾರೆ.

ಮೂವರು ಗೋಕಳ್ಳರ ಬಂಧನ Read More »

ಧರ್ಮಸ್ಥಳ : ಮತ್ತೆ ಉತ್ಖನನ ಆಗ್ರಹಿಸಿ ಹೈಕೋರ್ಟ್‌ಗೆ ರಿಟ್‌ ಅರ್ಜಿ

ಶವ ಹೂಳುವಾಗ ನೋಡಿದ್ದೇವೆ ಎಂದ ಇಬ್ಬರಿಂದ ಅರ್ಜಿ ಧರ್ಮಸ್ಥಳ: ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಹೂತ ಜಾಗ ಗುರುತಿಸಲು ಹಾಗೂ ಉತ್ಖನನ ನಡೆಸುವಂತೆ ಇಬ್ಬರು ಸ್ಥಳೀಯರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ನ್ಯಾ‌‌ಯಮೂರ್ತಿ ನಾಗಪ್ರಸನ್ನ ಪೀಠ ರಿಟ್ ಅರ್ಜಿಯನ್ನು ಕೈಗೆತ್ತಿಕೊಂಡು ಎಸ್ಐಟಿಗೆ ನೊಟೀಸ್ ಜಾರಿ ಮಾಡಿದೆ. ಸ್ಥಳೀಯರಾದ ಪುರಂದರ ಗೌಡ ಹಾಗೂ ತುಕಾರಾಮ್ ಗೌಡ ಎಂಬ ಇಬ್ಬರು ಸಾಕ್ಷಿದಾರರು ನೇತ್ರಾವತಿ ಕಾಡಿನಲ್ಲಿ ಚಿನ್ನಯ್ಯ ಶವವನ್ನು ಹೂಳುವಾಗ ನೋಡಿದ್ದೇವೆ ಎಂದು

ಧರ್ಮಸ್ಥಳ : ಮತ್ತೆ ಉತ್ಖನನ ಆಗ್ರಹಿಸಿ ಹೈಕೋರ್ಟ್‌ಗೆ ರಿಟ್‌ ಅರ್ಜಿ Read More »

ಧರ್ಮಸ್ಥಳ ಪ್ರಕರಣ : ಇಂದು ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ದಫನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದು ಇದೀಗ ಶಿವಮೊಗ್ಗ ಜೈಲಿನಲ್ಲಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ಚಿನ್ನಯ್ಯನ ಜಾಮೀನು ಅರ್ಜಿಯ ತೀರ್ಪು ಸೆ.16‌ರಂದು ಬೆಳ್ತಂಗಡಿ ನ್ಯಾಯಾಲಯ‌ ಪ್ರಕಟಿಸಲಿದೆ. ಸೆ.12ರಂದು ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯವು ತೀರ್ಪನ್ನು ಸೆ.16ಕ್ಕೆ ಕಾಯ್ದಿರಿಸಿದೆ. ಪ್ರಕರಣದ ವಿಚಾರಣೆ ವೇಳೆ ಎಸ್‌ಐಟಿಯಿಂದ ಜಾಮೀನು ನೀಡದಂತೆ ಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದ್ದರು. ಚಿನ್ನಯ್ಯ ಪರ ಉಚಿತ ಕಾನೂನು ಸೇವಗಳ ಪ್ರಾಧಿಕಾರದ ವಕೀಲರು ವಾದ ಮಂಡಿಸಿದ್ದರು. ಚಿನ್ನಯ್ಯನ ಬಂಧನದ

ಧರ್ಮಸ್ಥಳ ಪ್ರಕರಣ : ಇಂದು ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ Read More »

ದೋಟಿ ವಿದ್ಯುತ್‌ ತಂತಿಗೆ ತಗುಲಿ ತೆಂಗಿನಕಾಯಿ ಕೀಳುತ್ತಿದ್ದ ವ್ಯಕ್ತಿ ಮೃತ್ಯು

ಹೈಟೆನ್ಶನ್‌ ತಂತಿಗೆ ತಗುಲಿದ ಅಲ್ಯುಮಿನಿಯಂ ದೋಟಿ ಸುಳ್ಯ: ತೆಂಗಿನಕಾಯಿ ಕೀಳುತ್ತಿದ್ದಾಗ ಅಲ್ಯೂಮಿನಿಯಂ ದೋಟಿ ವಿದ್ಯುತ್ ಲೈನ್‌ಗೆ ತಾಗಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸುಳ್ಯ ಸಮೀಪ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಲ್ಲಿ ಸಂಭವಿಸಿದೆ. ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ (47) ಎಂದು ತಿಳಿದು ಬಂದಿದೆ. ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಮ ಅವರು ತೆಂಗಿನಕಾಯಿ ಕೊಯ್ಯುತ್ತಿದ್ದಾಗ ಅವರ ಕೈತಪ್ಪಿ

ದೋಟಿ ವಿದ್ಯುತ್‌ ತಂತಿಗೆ ತಗುಲಿ ತೆಂಗಿನಕಾಯಿ ಕೀಳುತ್ತಿದ್ದ ವ್ಯಕ್ತಿ ಮೃತ್ಯು Read More »

error: Content is protected !!
Scroll to Top