ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿಯ ಮೃತ್ಯು
ಉಡುಪಿ: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಾಗ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಪರ್ಕಳದ ಗ್ಯಾಡ್ರನ್ ಎಂಬಲ್ಲಿ ನಡೆದಿದೆ. ಗುರುಪ್ರಸಾದ್ (49) ಮೃತ ದುರ್ದೈವಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಲು ಕೋಣೆಗೆ ಹೋಗಿದ್ದರು. ಈ ವೇಳೆ ಬೆಡ್ ಮೇಲೆ ಕುಳಿತು ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಂತೆ ಕುಳಿತಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿಯ ಮೃತ್ಯು Read More »