ದಕ್ಷಿಣ ಕನ್ನಡ

ಆತ್ಮಹತ್ಯೆಗೆ ಶರಣಾದ ಅರ್ಚಕ

ಬೆಳ್ತಂಗಡಿ : ಬೆಳ್ತಂಗಡಿ ದೇವಸ್ಥಾನದ ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸವಣಾಲು ಗ್ರಾಮದಲ್ಲಿ ಮೇ 4 ರಂದು ನಡೆದಿದೆ. ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರಸಿ ಮೂಲದ ವಿಜಯ್‌ ಹೆಗಡೆ (33) ಆತ್ಮಹತ್ಯೆಗೆ ಶರಣಾದವರು. ವಿಜಯ್‌ ಹೆಗಡೆ ಅವರು ದೇವಸ್ಥಾನದ ಹಿಂಭಾಗದಲ್ಲಿ ತಾನು ವಾಸವಿಗಿದ್ದ ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸುಮಾರು 10 ವರ್ಷಗಳಿಂದ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ಮುಂಜಾನೆ ಭಕ್ತರು […]

ಆತ್ಮಹತ್ಯೆಗೆ ಶರಣಾದ ಅರ್ಚಕ Read More »

ಕುಸಿದು ಬಿದ್ದು ವ್ಯಕ್ತಿ ಮೃತ್ಯು !

ಧರ್ಮಸ್ಥಳ: ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ.04ರಂದು ಧರ್ಮಸ್ಥಳದಲ್ಲಿ ಸಂಭವಿಸಿದೆ. ಸುಮಾರು 38 ವರ್ಷದ ವ್ಯಕ್ತಿ ಮಧ್ಯಾಹ್ನ ಧರ್ಮಸ್ಥಳ ಸಮೀಪ, ನೀರಿನ ಬಾಟಲ್ ಹಿಡಿದು ಕುಳಿತ್ತಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ವೇಣೂರು ಹಾಗೂ ಧರ್ಮಸ್ಥಳ ಶೌರ್ಯ ತಂಡದ ಸಹಕಾರದಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕುಸಿದು ಬಿದ್ದು ವ್ಯಕ್ತಿ ಮೃತ್ಯು ! Read More »

ಹೃದಯಾಘಾತದಿಂತ ಆಟೋ ಚಾಲಕ ಅಶ್ರಫ್ ನಿಧನ

ವಿಟ್ಲ: ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38) ಮೇ 3ರಂದು ಹೃದಯಾಘಾತದಿಂದ ನಿಧನರಾದರು. ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಶುಕ್ರವಾರ ಮಧ್ಯಾಹ್ನ ನಮಾಜ್ ಮುಗಿಸಿ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಾಗಿಲು ಹಾಕಿ ಮಲಗಿದ್ದರು. ಸಂಜೆ ವೇಳೆಗೆ ಅಶ್ರಫ್‌ ಅವರ ಪತ್ನಿ ಮನೆಗೆ ಬ೦ದಾಗ, ಬಾಗಿಲು ಹಾಕಿರುವುದು ಕ೦ಡುಬ೦ದಿದೆ. ಬಳಿಕ ಘಟನೆ ಬೆಳಕಿಗೆ ಬಂದಿದೆ ಮೃತರು ಪತ್ನಿ, ಮಗ, ಮಗಳನ್ನು ಅಗಲಿದ್ದಾರೆ.

ಹೃದಯಾಘಾತದಿಂತ ಆಟೋ ಚಾಲಕ ಅಶ್ರಫ್ ನಿಧನ Read More »

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ I ಇ ಮೇಲ್ ರವಾನಿಸಿದ ಉಗ್ರರು    

ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಚೇರಿಗೆ ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಹಾಗೂ ಕೃತ್ಯದ ಹಿಂದೆ “ಟೆರರೈಸರ್ಸ್ 111″ ಇರುವುದಾಗಿ, ಏರ್ ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ ಎಂದು ಬರೆಯಲಾಗಿದೆ ಎಂದು ತಿಳಿದು ಬಂದಿದೆ. ಎಪ್ರಿಲ್ 29ರಂದು ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ರವಾನೆಯಾಗಿದ್ದು, ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆನ್ನಲಾಗಿದೆ. ಬಾಂಬ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ I ಇ ಮೇಲ್ ರವಾನಿಸಿದ ಉಗ್ರರು     Read More »

ಹೃದಯಾಘಾತದಿಂದ ಯುವಕ ಜನಾರ್ದನ ಮೃತ್ಯು

ಉಪ್ಪಿನಂಗಡಿ : ಯುವಕನೋರ್ವ ಮಲಗಿದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ನಿನ್ನಿಕಲ್ಲಿನಲ್ಲಿ ನಡೆದಿದೆ. ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ ಜನಾರ್ದನ ನಿನ್ನಿಕಲ್ಲು (27) ಮೃತಪಟ್ಟವರು. ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಜನಾರ್ದನ ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಅವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಅವರು ಮಲಗಿದ್ದಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ. ಹೃದಯಾಘಾತವಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಜನಾರ್ದನ ಅವರು ದುರ್ಗಾಗಿರಿ ಶ್ರೀ ದುರ್ಗಾ ಭಜನ ಮಂಡಳಿ ಹಾಗೂ ಶ್ರೀ ದುರ್ಗಾ ಯುವಕ

ಹೃದಯಾಘಾತದಿಂದ ಯುವಕ ಜನಾರ್ದನ ಮೃತ್ಯು Read More »

ಸಿಡಿಲು ಬಡಿದು ವ್ಯಕ್ತಿ ಮೃತ್ಯು

ಸುಬ್ರಹ್ಮಣ್ಯ: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ  ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಸಿಡಿಲು ಬಡಿದು ಮೃತಪಟ್ಟವರು. ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಸಂಜೆ ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸೋಮ ಸುಂದರ್ ಅವರು ಸುಬ್ರಹ್ಮಣ್ಯ ಸಮೀಪ

ಸಿಡಿಲು ಬಡಿದು ವ್ಯಕ್ತಿ ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿದ ಕಾರು | ಹೋಟೆಲ್‌ ಗೆ  ಡಿಕ್ಕಿ

ಸಂಪಾಜೆ : ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ವೊಂದಕ್ಕೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯಗೊಂಡು, ಸುಳ್ಯದ ಆಸ್ಪತ್ರೆಗೆ ದಾಖಲಾದ ಘಟನೆ ದ.ಕ. ಸಂಪಾಜೆ ಎಂಬಲ್ಲಿ ಮೇ.3ರ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ವಿಟ್ಲದ ಅಡ್ಯನಡ್ಕದ ದಂಪತಿಗಳು ಕಾರಿನಲ್ಲಿ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕ ಹಾಗೂ ಮುಂಭಾಗದಲ್ಲಿ ಕುಳಿತಿದ್ದ

ಚಾಲಕನ ನಿಯಂತ್ರಣ ತಪ್ಪಿದ ಕಾರು | ಹೋಟೆಲ್‌ ಗೆ  ಡಿಕ್ಕಿ Read More »

ಬೈಕ್ ಡಿಕ್ಕಿ : ವೃದ್ಧ ಗಂಭೀರ ಗಾಯ

ಬಂಟ್ವಾಳ : ಬಸ್ಸಿಗಾಗಿ ಕಾಯುತ್ತಿದ್ದ ವೃದ್ಧರೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ಸಂಭವಿಸಿದೆ. ಫರಂಗಿಪೇಟೆ ನಿವಾಸಿ ಶೇಖಬ್ಬ (71) ಗಾಯಗೊಂಡವರು. ಫರಂಗಿಪೇಟೆ ಜಂಕ್ಷನ್ನಿನಲ್ಲಿ ಬುಧವಾರ ಮಧ್ಯಾಹ್ನ ಬಸ್ಸಿಗಾಗಿ ಕಾಯುತ್ತಿರುವ ಸಂದರ್ಭ ಹೆದ್ದಾರಿಯಲ್ಲಿ ಅಕ್ಷಯ್ ನಾಯ್ಕ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಶೇಖಬ್ಬ ಅವರನ್ನು ತಕ್ಷಣ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಡಿಕ್ಕಿ : ವೃದ್ಧ ಗಂಭೀರ ಗಾಯ Read More »

ಧರ್ಮಸ್ಥಳ ದಲ್ಲಿ 52ನೇ ವರ್ಷದ ಸಾಮೂಹಿಕ ವಿವಾಹ |  ದಾಂಪತ್ಯ ಜೀವನ ಪ್ರವೇಶಿಸಿದ 117 ಜೋಡಿಗಳು

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಜರಗಿದ 52ನೇ ವರ್ಷದ ಸಾಮೂಹಿಕ ವಿವಾಹ ದಲ್ಲಿ ಒಟ್ಟು 117 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದವು. 12,900ನೇ ಜೋಡಿಯಾದ ಗದಗದ ಪ್ರವೀಣ್ ಬನ್ನೂರು ಹಾಗೂ ಕವಿತಾ ಗಿಡ ಕೆಂಚಣ್ಣನವರ್ ವಧು- ವರ ಜೋಡಿಯನ್ನು ವಿಶಿಷ್ಟ ಜೋಡಿಯನ್ನಾಗಿ ಗುರುತಿಸಲಾಯಿತು. ಅಪಘಾತವೊಂದರಲ್ಲಿ ಕಾಲು ಕಳೆದುಕೊಂಡಿರುವ ವರ ಪ್ರವೀಣ್ ಟ್ರಾವೆಲ್ ಏಜೆನ್ಸಿ ನಡೆಸುತ್ತಿದ್ದು, ತನ್ನ ಮಾವನ ಮಗಳನ್ನು ವರಿಸಿದರು. ಮದುವೆ ದಿಬ್ಬಣದ ಮೆರವಣಿಗೆ ದೇವಸ್ಥಾನದ ಮುಂಭಾಗದಿಂದ ಅಮೃತ ವರ್ಷಿಣಿ ಸಭಾಭವನದವರೆಗೆ ಜರಗಿತು. ಮೆರವಣಿಗೆಯು

ಧರ್ಮಸ್ಥಳ ದಲ್ಲಿ 52ನೇ ವರ್ಷದ ಸಾಮೂಹಿಕ ವಿವಾಹ |  ದಾಂಪತ್ಯ ಜೀವನ ಪ್ರವೇಶಿಸಿದ 117 ಜೋಡಿಗಳು Read More »

    ಕಲ್ಲು ಕೋರೆಯಿಂದ ಜಲ್ಲಿ ಸಾಗಾಟ : ಸ್ಥಳೀಯರಿಂದ ತಡೆ

ಮರ್ಕಂಜ :  ಮರ್ಕಂಜದ ಅಳವುಪಾರೆ ಕಲ್ಲುಕೋರೆಯಿಂದ ಜಲ್ಲಿ ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯರು ಸೇರಿ ಜಲ್ಲಿ ಸಾಗಾಟ ಮಾಡುತ್ತಿದ್ದ ಲಾರಿಗೆ ತಡೆಯೊಡ್ಡಿದ ಘಟನೆ ವರದಿಯಾಗಿದೆ. ಅಳವುಪಾರೆ ಗಣಿಗಾರಿಕೆಯಿಂದ ಸ್ಥಳೀಯ ನಿವಾಸಿಗಳು ತೊಂದರೆಗೆ ಈಡಾಗುತ್ತಿದ್ದಾರೆಂದು ಕೆಲ ದಿನಗಳ ಹಿಂದೆ ಸುಳ್ಯ ತಹಶೀಲ್ದಾರ್ ರವರಿಗೆ ಮನವಿ ನೀಡಿದ್ದರು. ಇದಕ್ಕೆ ಸ್ಪಂದಿಸಿದ ಅವರು ಸ್ಥಳಕ್ಕೆ ಭೇಟಿ ನೀಡಿ ತಾತ್ಕಾಲಿಕ ತಡೆ ನೀಡಿದ್ದರು. ಇದೀಗ ಅಳವುಪಾರೆ ಗಣಿಗಾರಿಕೆಯಲ್ಲಿ ಸ್ಟಾಕ್ ಆಗಿದ್ದ ಜಲ್ಲಿಗಳನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಸ್ಥಳೀಯರು ಆಕ್ಷೇಪಿಸಿ ಲಾರಿಗೆ ತಡೆ ಮಾಡಿದ್ದಾರೆ. ಸ್ಥಳಕ್ಕೆ

    ಕಲ್ಲು ಕೋರೆಯಿಂದ ಜಲ್ಲಿ ಸಾಗಾಟ : ಸ್ಥಳೀಯರಿಂದ ತಡೆ Read More »

error: Content is protected !!
Scroll to Top