ದಕ್ಷಿಣ ಕನ್ನಡ

ಕಡಬ: ಮಹಿಳೆ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ

ಕಡಬ: ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಹಿಳೆ ಕಳೆದ ಸುಮಾರು 3 ವರ್ಷಗಳಿಂದ ಗಂಡನಿಂದ ಪ್ರತ್ಯೇಕವಾಗಿ ಮಗಳೊಂದಿಗೆ ವಾಸವಾಗಿದ್ದರು. ಈ ನಡುವೆ ಆರೋಪಿ ಪ್ರಭಾಕರ ಪಿ. ಅವರೊಂದಿಗೆ ಪರಿಚಯವಾಗಿ ಆತ್ಮೀಯತೆ ಬೆಳೆದಿತ್ತು ಎನ್ನಲಾಗಿದೆ. ಏ.3ರಂದು ರಂದು ಮಹಿಳೆ ಆರೋಪಿಯೊಂದಿಗೆ ಮಾತನಾಡಲು ಅವರ ಮನೆಗೆ ತೆರಳಿದ ವೇಳೆ ಆರೋಪಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ […]

ಕಡಬ: ಮಹಿಳೆ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ Read More »

ಬಂಟ್ವಾಳ : ಸ್ಕೂಟರ್‌ ಕಳ್ಳರ ಬಂಧನ

ಬಂಟ್ವಾಳ : ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 21ರಂದು ಪರ್ಲಿಯಾದಲ್ಲಿರುವ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರನ್ನು ಕಳವು ಮಾಡಲಾಗಿತ್ತು. ಬಂಟ್ವಾಳದ ಸಜೀಪ್ ಮುನ್ನೂರು ನಿವಾಸಿ ಹಸನ್ ಬಾವ (55) ಮತ್ತು ಬಂಟ್ವಾಳದ ಬಿಮೂಡ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಕದ್ದ ಸ್ಕೂಟರ್ ಸುಮಾರು 50,000 ರೂ. ಮೌಲ್ಯದ್ದಾಗಿದ್ದು, ಆರೋಪಿಗಳಿಂದ ಅದನ್ನು ವಶಪಡಿಸಿಕೊಳ್ಳಲಾಗಿದೆ.

ಬಂಟ್ವಾಳ : ಸ್ಕೂಟರ್‌ ಕಳ್ಳರ ಬಂಧನ Read More »

ಧರ್ಮಸ್ಥಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ನೇತ್ರಾವತಿ ಬಂಗ್ಲೆಗುಡ್ಡೆಯಲ್ಲಿ ಕಂಡು ಬಂದ ಪುರುಷನ ಮೃತದೇಹ ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ

ಧರ್ಮಸ್ಥಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ Read More »

ಕರಾವಳಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ತಲುಪಿದ ಉಷ್ಣಾಂಶ : ಶಾಖಾಘಾತದ ಎಚ್ಚರಿಕೆ

ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಮಂಗಳೂರು : ಕರಾವಳಿ ಜಿಲ್ಲೆಯಾದ್ಯಂತ ರಣ ಬಿಸಿಲಿನಿಂದಾಗಿ ದಿನದಿಂದ ದಿನಕ್ಕೆ ತಾಪಮಾನ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಉರಿ ಸೆಕೆಗೆ ಬೆವೆತು ಹೋಗಿದ್ದಾರೆ. ಈ ನಡುವೆ ಉಷ್ಣಾಂಶ ಹೆಚ್ಚಳದಿಂದಾಗಿ ‘ಶಾಖಾಘಾತ’ ಸಂಭವಿಸುವ ಸಾಧ್ಯತೆ ಇರುವ ಬಗ್ಗೆ ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ ನೀಡಿದೆ. ಒಂದು ಪ್ರದೇಶದ ಸಾಮಾನ್ಯ ಉಷ್ಣತೆಗಿಂತ 4.5 ಡಿಗ್ರಿ ಸೆಲ್ಶಿಯಸ್​ನಿಂದ 6.4 ಡಿಗ್ರಿ ಸೆಲ್ಶಿಯಸ್​​ನಷ್ಟು ತಾಪಮಾನ ಹೆಚ್ಚಾದಲ್ಲಿ ಶಾಖಾಘಾತ ಸಂಭವಿಸುತ್ತದೆ. ದಕ್ಷಿಣ ಕನ್ನಡದಲ್ಲಿ ಈಗಾಗಲೇ ಉಷ್ಣಾಂಶವು 40

ಕರಾವಳಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ತಲುಪಿದ ಉಷ್ಣಾಂಶ : ಶಾಖಾಘಾತದ ಎಚ್ಚರಿಕೆ Read More »

ಅಕ್ರಮವಾಗಿ ಸಾಗಿಸುತ್ತಿದ್ದ 18 ಜಾನುವಾರು ರಕ್ಷಣೆ : ಓರ್ವ ಸೆರೆ

ಹಾಸನದಿಂದ ಕೇರಳಕ್ಕೆ ಕಂಟೇನರ್‌ನಲ್ಲಿ ಅಕ್ರಮವಾಗಿ ಸಾಗಾಟ ಕಡಬ : ಕಂಟೇನರ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಓರ್ವವನ್ನು ಕಡಬ ಠಾಣಾ ಸಬ್ ಇನ್‌ಸ್ಪೆಕ್ಟ‌ರ್ ಜಂಬೂರಾಜ್ ಮಹಾಜನ್ ನೇತೃತ್ವದ ಪೊಲೀಸರ ತಂಡ ಬಂಧಿಸಿ, 18 ಜಾನುವಾರುಗಳನ್ನು ರಕ್ಷಿಸಿದೆ. ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ವಾಹನವನ್ನು ತಡೆದು ನಿಲ್ಲಿಸಿ ಪೊಲೀಸರ

ಅಕ್ರಮವಾಗಿ ಸಾಗಿಸುತ್ತಿದ್ದ 18 ಜಾನುವಾರು ರಕ್ಷಣೆ : ಓರ್ವ ಸೆರೆ Read More »

ವಿಟ್ಲ: ಕಾಡಿನಲ್ಲಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ : ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ 38 ವರ್ಷದ ವ್ಯಕ್ತಿಯೊಬ್ಬರು ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್ (38) ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ರಮೇಶ್ ಮಾದಕ ವಸ್ತುಗಳ ಸೇವನೆಗೆ ವ್ಯಸನಿಯಾಗಿದ್ದ ಎನ್ನಲಾಗಿದೆ. ಮದುವೆಯಾಗಿಲ್ಲ ಎಂಬ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್ನಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಈ

ವಿಟ್ಲ: ಕಾಡಿನಲ್ಲಿ ವ್ಯಕ್ತಿ ಆತ್ಮಹತ್ಯೆ Read More »

ಬಾರ್‌ನಲ್ಲಿ ಜಗಳ : ಕೇಸ್‌ ದಾಖಲು

ಬೆಳ್ತಂಗಡಿ : ಕೊಕ್ಕಡ ಬಾರ್‌ನಲ್ಲಿ ಮದ್ಯ ಸೇವಿಸುವ ಸಮಯದಲ್ಲಿ ಹಣಕಾಸಿನ ವಿಚಾರದಲ್ಲಿ ನಾಲ್ಕು ಮಂದಿ ಹಲ್ಲೆ ಮಾಡಿದ್ದು, ಈ ವೇಳೆ ರಕ್ಷಣೆ ಮಾಡಲು ಬಂದ ಮತ್ತೊಬ್ಬನ ಮೇಲೂ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೊಕ್ಕಡ ಸಾಲಿಯಾನ್ ಬಾರ್ & ರೆಸ್ಟೋರೆಂಟ್‌ನಲ್ಲಿ ಮಾ.29ರಂದು ರಾತ್ರಿ 9 ಗಂಟೆಗೆ ಕೊಕ್ಕಡ ಗ್ರಾಮದ ಹೊಸ ಮನೆ ನಿವಾಸಿ ಅಕ್ಷಯ್(31) ಎಂಬವರು ಮದ್ಯ ಸೇವಿಸಲು ಕುಳಿತಿರುವ ಸಮಯದಲ್ಲಿ ಯತೀಶ್ ಎಂಬಾತ

ಬಾರ್‌ನಲ್ಲಿ ಜಗಳ : ಕೇಸ್‌ ದಾಖಲು Read More »

ಬೈಕ್‌ಗೆ ಲಾರಿ ಡಿಕ್ಕಿ: ಯುವಕನಿಗೆ ಗಂಭೀರ ಗಾಯ

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಗುರುವಾರ ಸಂಜೆ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 23 ವರ್ಷದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ಯುವಕನನ್ನು ನಡುಪದವು ನಿವಾಸಿ ಬೇಬಿ ಎಂಬವರ ಮಗ ಸುಶಾಂತ್ (23) ಎಂದು ಗುರುತಿಸಲಾಗಿದೆ. ಡಿಕ್ಕಿಯಾದ ರಭಸಕ್ಕೆ ಸುಶಾಂತ್ ರಸ್ತೆಗೆ ಎಸೆಯಲ್ಪಟ್ಟದ್ದು, ಈ ವೇಳೆ ತಲೆಗೆ ತೀವ್ರ ಗಾಯಗಳಾಗಿದೆ. ತಕ್ಷಣ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಹಿಟ್‌ ಅಂಡ್‌ ರನ್‌ ಪ್ರಕರಣವೆಂದು

ಬೈಕ್‌ಗೆ ಲಾರಿ ಡಿಕ್ಕಿ: ಯುವಕನಿಗೆ ಗಂಭೀರ ಗಾಯ Read More »

ಸುದೀಪ್‌ ರೈ ಸಾವಿಗೆ ಮನೆಯವರ ಕಿರುಕುಳ ಕಾರಣ : ಪತ್ನಿ ಆರೋಪ

ಹನಿಟ್ರ್ಯಾಪ್ ಆರೋಪ ಸುಳ್ಳು ಎಂದ ಸೌಮ್ಯಾ ಶೆಟ್ಟಿ ಉಡುಪಿ: ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುದೀಪ್ ರೈ ಅವರ ಪತ್ನಿ ಸೌಮ್ಯ ಶೆಟ್ಟಿ ಮಾಧ್ಯಮಗಳ ಮುಂದೆ ಬಂದು ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಸೌಮ್ಯ ಶೆಟ್ಟಿ, ನನ್ನ ವಿರುದ್ಧ ಕೇಳಿಬರುತ್ತಿರುವ ಹನಿಟ್ರ್ಯಾಪ್ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ನಿರಾಧಾರ. ನನ್ನ ವ್ಯಕ್ತಿತ್ವ ತೇಜೋವಧೆ ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗುತ್ತಿದೆ. ಸುದೀಪ್ ತಮ್ಮ ತಂದೆಯ ಮನೆಗೆ ತೆರಳಿದ್ದ

ಸುದೀಪ್‌ ರೈ ಸಾವಿಗೆ ಮನೆಯವರ ಕಿರುಕುಳ ಕಾರಣ : ಪತ್ನಿ ಆರೋಪ Read More »

ಧರ್ಮಸ್ಥಳ ಪ್ರಕರಣ : ಸಮೀರ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ

ಎಐ ವಿಡಿಯೋ ಮೂಲಕ ಧರ್ಮಸ್ಥಳದ ತೇಜೋವಧೆ ಮಾಡಿದ್ದ ಸಮೀರ್‌ ಬೆಂಗಳೂರು: ಧರ್ಮಸ್ಥಳದ ಅಸಹಜ ಸಾವಿನ ತನಿಖೆಗೆ ಸಂಬಂಧಿಸಿದಂತೆ ಕಾಲ್ಪನಿಕ ವಿಚಾರಗಳನ್ನು ಆಧರಿಸಿ, ಕೃತಕ ಬುದ್ಧಿಮತ್ತೆ ನೆರವಿನಿಂದ ವಿಡಿಯೋ ಮಾಡಿ ಹರಿಯಬಿಟ್ಟಿರುವ ಸಂಬಂಧ ಯೂಟ್ಯೂಬರ್‌ ಮೊಹಮ್ಮದ್‌ ಸಮೀರ್‌ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ತಡೆ ನೀಡಿದೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಸಮೀರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಧರ್ಮಸ್ಥಳ

ಧರ್ಮಸ್ಥಳ ಪ್ರಕರಣ : ಸಮೀರ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ Read More »

error: Content is protected !!
Scroll to Top