ದಕ್ಷಿಣ ಕನ್ನಡ

ಬೈಕ್ ಸಹಸವಾರನ ಮೇಲೆ ಲಾರಿ ಹರಿದು ಮೃತ್ಯು !

ಬಂಟ್ವಾಳ: ಬೈಕೊಂದು ಸ್ಕಿಡ್ ಆಗಿ ಅಡ್ಡಬಿದ್ದು ಬೈಕ್‍ ನಲ್ಲಿದ್ದ ಸಹಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಬಿ.ಸಿ.ರೋಡು ವೃತ್ತದ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. ಬೆಂಗ್ರೆ ನಿವಾಸಿ ರಮೀಜ್‍ (20) ಮೃತಪಟ್ಟ ಸಹಸವಾರ. ಬೈಕ್‍ ಸ್ಕಿಡ್ ಆಗಿ ಡಾಮಾರು ರಸ್ತೆಗೆ ಬಿದ್ದಿದ್ದು, ರಮೀಜ್‍ ಅವರ ಮೇಲೆಯೇ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭ ಲಾರಿ ಸಮೇತ ಚಾಲಕ ಪರಾರಿಯಾಗಿದ್ದು, ಬಳಿಕ ಪೊಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ. ಈ ವೇಳೆ ವೃತ್ತದ ಬಳಿ ಸಂಚಾರ […]

ಬೈಕ್ ಸಹಸವಾರನ ಮೇಲೆ ಲಾರಿ ಹರಿದು ಮೃತ್ಯು ! Read More »

ಜಾಂಡೀಸ್ ಕಾಯಿಲೆಗೆ ತುತ್ತಾಗಿ ಯುವಕ ಮೃತ್ಯು !

ಪಂಜ: ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಂಜದಿಂದ ವರದಿಯಾಗಿದೆ. ಪ್ರಶಾಂತ್ (39) ಮೃತಪಟ್ಟ ಯುವಕ. ಕೂತ್ಕುಂಜ ಗ್ರಾಮದ ಕಲ್ಕ ದಿ.ಪದ್ಮಯ್ಯ ಗೌಡ ಹಾಗೂ ಇಂದಿರಾ ದಂಪತಿ ಪುತ್ರರಾಗಿರುವ ಪ್ರಶಾಂತ್‍ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಕೆಲ ಸಮಯಗಳ ಹಿಂದೆ ಮನೆಗೆ ಬಂದಿದ್ದರು. ಜಾಂಡೀಸ್ ಕಾಯಿಲೆಗೆ ಒಳಗಾದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದರು. ಈ ನಡುವೆ ಹಠಾತ್ತನೇ ಅನಾರೋಗ್ಯಕ್ಕೀಡಾದ ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಜಾಂಡೀಸ್ ಕಾಯಿಲೆಗೆ ತುತ್ತಾಗಿ ಯುವಕ ಮೃತ್ಯು ! Read More »

ಬೀಚ್‍ನಲ್ಲಿ ಅಲೆಯ ಸೆಳೆತಕ್ಕೆ ಸಿಲುಕಿದ ಮೂವರು ಯುವಕರು | ಇಬ್ಬರು ಮೃತ್ಯು, ಓರ್ವನ ರಕ್ಷಣೆ

ಉಳ್ಳಾಲ: ಸಮುದ್ರಕ್ಕೆ ಈಜಲು ತೆರಳಿದ ಯುವಕರಿಬ್ಬರು ಅಲೆಯ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್‍ನಲ್ಲಿ ನಡೆದಿದೆ. ಬಶೀರ್ (23) ಹಾಗೂ ಸಲ್ಮಾನ್ (19) ಮೃತಪಟ್ಟ ಯುವಕರು. ಕುಟುಂಬ ಸಮೇತ ಉಳ್ಳಾಲ ದರ್ಗಾ ಸಂದರ್ಶನಕ್ಕೆ ಬಂದಿದ್ದ ಅವರು ಬಳಿಕ ಬೀಚ್‍ಗೆ ತೆರಳಿ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಬಶೀರ್, ಸಲ್ಮಾನ್ ಹಾಗೂ ಸೈಫ್ ಅಲಿ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದರು. ಈ ಸಂದರ್ಭ ಸ್ಥಳೀಯ ಈಜುಗಾರರು ಸಲ್ಮಾನ್‍ ಹಾಗೂ ಸೈಫುಲ್ಲಾ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಈ

ಬೀಚ್‍ನಲ್ಲಿ ಅಲೆಯ ಸೆಳೆತಕ್ಕೆ ಸಿಲುಕಿದ ಮೂವರು ಯುವಕರು | ಇಬ್ಬರು ಮೃತ್ಯು, ಓರ್ವನ ರಕ್ಷಣೆ Read More »

ಪಾದಚಾರಿ ಯುವತಿಗೆ ಕಾರು ಡಿಕ್ಕಿ | ಗಾಯಾಳು ಮೃತ್ಯು

ಬಂಟ್ವಾಳ : ಪಾದಚಾರಿ ಯುವತಿಗೆ ಕಾರು ಡಿಕ್ಕಿಯಾದ ಪರಿಣಾಮ ಯುವತಿ ಗಂಭೀರ ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ಬಿ.ಸಿ.ರೋಡು ಸಮೀಪದ ಪಚ್ಚಿನಡ್ಕದಲ್ಲಿ ನಡೆದಿದ್ದು, ಮಂಗಳೂರಿನ ಖಾಸಗಿ  ಆಸ್ಪತ್ರೆಯಲ್ಲಿ ತೀವ್ರನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಇದೀಗ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳೀಯ ‌ನಿವಾಸಿ ಚೈತ್ರ (22 ) ಮೃತಪಟ್ಟ ಯುವತಿ. ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಅವರಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿದೆ ಎಂದು ತಿಳಿದುಬಂದಿದೆ. ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು

ಪಾದಚಾರಿ ಯುವತಿಗೆ ಕಾರು ಡಿಕ್ಕಿ | ಗಾಯಾಳು ಮೃತ್ಯು Read More »

ಕೋವಿಡ್ ಪಾಸಿಟಿವ್ ಸಂಖ್ಯೆಯಲ್ಲಿ ಹೆಚ್ಚಳ | ದ.ಕ.ಜಿಲ್ಲೆಯಲ್ಲಿ 8 ಮಂದಿಗೆ ಕೋವಿಡ್ ದೃಢ

ಮಂಗಳೂರು: ಒಂದೆಡೆ ಕೋವಿಡ್ ತಪಾಸಣೆ ಹೆಚ್ಚುತ್ತಿದ್ದಂತೆ ಇನ್ನೊಂದೆಡೆ ಪಾಸಿಟಿವ್ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಒಟ್ಟು 341 ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದು, 8 ಮಂದಿಗೆ ಕೋವಿಡ್ ದೃಢ ಪಟ್ಟಿದೆ. ಇದರಲ್ಲಿ ಮಂಗಳೂರಿನ ನಾಲ್ವರು, ಬಂಟ್ವಾಳದ ಮೂವರು ಮತ್ತು ಬೆಳ್ತಂಗಡಿ ಮೂಲದ ಒಬ್ಬರಿದ್ದಾರೆ. ಒಬ್ಬರು ಐಸಿಯುನಲ್ಲಿ, 6 ಮಂದಿ ಗೃಹ ನಿಗಾವಣೆಯಲ್ಲಿ ಮತ್ತು ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವು ದಿನಗಳಿಂದ ಜಿಲ್ಲೆಯಲ್ಲಿ ರಾಜ್ಯ ಸರಕಾರ ನೀಡಿದ ಗುರಿಯಂತೆ ಪರೀಕ್ಷೆಗಳು ನಡೆಯುತ್ತಿವೆ. ಡಿ. 26 ರಂದು 392, ಡಿ.27ರಂದು

ಕೋವಿಡ್ ಪಾಸಿಟಿವ್ ಸಂಖ್ಯೆಯಲ್ಲಿ ಹೆಚ್ಚಳ | ದ.ಕ.ಜಿಲ್ಲೆಯಲ್ಲಿ 8 ಮಂದಿಗೆ ಕೋವಿಡ್ ದೃಢ Read More »

ಪಾದಚಾರಿ ಯುವತಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯ

ಬಂಟ್ವಾಳ : ಪಾದಚಾರಿ ಯುವತಿಗೆ ಕಾರು ಡಿಕ್ಕಿಯಾದ ಪರಿಣಾಮ ಯುವತಿ ಗಂಭೀರ ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ಬಿ.ಸಿ.ರೋಡು ಸಮೀಪದ ಪಚ್ಚಿನಡ್ಕದಲ್ಲಿ ನಡೆದಿದೆ. ಸ್ಥಳೀಯ ‌ನಿವಾಸಿ ಚೈತ್ರ (22 ) ಗಾಯಗೊಂಡ ಯುವತಿ ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಅವರಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿದೆ ಎಂದು ತಿಳಿದುಬಂದಿದೆ. ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು ತಾಯಿ ಜೊತೆಗೆ ಮನೆಯ ಕಡೆಯ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ. ಅತೀ ವೇಗ ಮತ್ತು

ಪಾದಚಾರಿ ಯುವತಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯ Read More »

ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಕೇಸು | ಸಂಸದ ನಳಿನ್‌ಕುಮಾರ್ ಕಟೀಲ್ ಖಂಡನೆ

ಮಂಗಳೂರು: ಹಿಂದೂ ಸಮಾಜದ ಮಾರ್ಗದರ್ಶಕರಾಗಿರುವ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ದುರುದ್ದೇಶ ಪೂರ್ವಕವಾಗಿ ಕೇಸು ದಾಖಲಿಸಿರುವುದಕ್ಕೆ ಸಂಸದ ನಳಿನ್‌ಕುಮಾರ್ ಕಟೀಲ್ ಖಂಡನೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಮುಂದುವರಿದಿದ್ದು ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. ದ.ಕ. ಮುಸ್ಲಿಂ ಸಮಾಜದ ಮಹಿಳೆಯರಿಗೆ ಆದ ಅನ್ಯಾಯ ಹಾಗೂ ಮೋದಿ ಸರ್ಕಾರ ತ್ರಿವಳಿ ತಲಾಕ್ ನಿಷೇಧ ಮಾಡಿದ ಬಗ್ಗೆ ಡಾ,ಭಟ್ ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ಇದೇ ಹೇಳಿಕೆಯನ್ನು ತಿರುಚಿ ಅಲ್ಪಸಂಖ್ಯಾತರನ್ನು ಓಲೈಸುವ ಉದ್ದೇಶದಿಂದ ಕೇಸು ದಾಖಲಿಸಲಾಗಿದೆ. ಸಿದ್ದರಾಮಯ್ಯ

ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಕೇಸು | ಸಂಸದ ನಳಿನ್‌ಕುಮಾರ್ ಕಟೀಲ್ ಖಂಡನೆ Read More »

ದ.ಕ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ | 957.39 ಕೋಟಿ ರೂ. ವೆಚ್ಚದ 2 ಯೋಜನೆಗಳಿಗೆ ಅನುಮೋದನೆ

ಮಂಗಳೂರು : ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ.ದ್ವಿಪಥ ಅಭಿವೃದ್ಧಿ  613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ  ಚಾರ್ಮಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು ಸೆಕ್ಷನ್‌ನಲ್ಲಿ 11.20 ಕಿ.ಮೀ. ಅಭಿವೃದ್ದಿ 343.73  ಕೋಟಿ

ದ.ಕ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ | 957.39 ಕೋಟಿ ರೂ. ವೆಚ್ಚದ 2 ಯೋಜನೆಗಳಿಗೆ ಅನುಮೋದನೆ Read More »

ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಮೃತ್ಯು !

ಸುಳ್ಯ: ಬೈಕೊಂದು  ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪಾದಚಾರಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಜಾಲ್ಸೂರಿನಲ್ಲಿ ನಡೆದಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ (72) ಮೃತಪಟ್ಟ ಪಾದಚಾರಿ ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ರಸ್ತೆದಾಟುತ್ತಿದ್ದ ಸಂದರ್ಭದಲ್ಲಿ ಪುತ್ತೂರು ಕಡೆಯಿಂದ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ

ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಮೃತ್ಯು ! Read More »

ಪಣಂಬೂರಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ !

ಪಣಂಬೂರು: ಉಡುಪಿಯಿಂದ ಮಂಗಳೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆಯಾಗಿದೆ. ಒಡಿಶಾದ ರಶ್ಮಿ ರಂಜನ್ (44) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಎಪಿಎಂಸಿ ಯಾರ್ಡ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ತಡರಾತ್ರಿ ರಸ್ತೆ ದಾಟುವ ಸಂದರ್ಭ ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.

ಪಣಂಬೂರಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ ! Read More »

error: Content is protected !!
Scroll to Top