ದಕ್ಷಿಣ ಕನ್ನಡ

ಹಾವು ಕಡಿದು ಯುವಕ ಮೃತ್ಯು

ಬಂಟ್ವಾಳ: ಹಾವು ಕಡಿದು ಯುವಕನೊಬ್ಬ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ದಿವಂಗತ ಇಸ್ಮಾಯಿಲ್ ಎಂಬುವವರ ಪುತ್ರ ಅಶ್ರಫ್ (28) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಇವರು  ಪಾಂಡವರಕಲ್ಲಿನ ಮನೆಯೊಂದರಲ್ಲಿ ಮಧ್ಯಾಹ್ನದ ಸಮಯ ಅಡಿಕೆ ಸುಲಿಯುತ್ತಿದ್ದ ಸಂದರ್ಭ ಕಾಲಿನ ಬೆರಳಿಗೆ ಹಾವು ಕಚ್ಚಿತ್ತು ಎನ್ನಲಾಗಿದೆ. ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.  ಇವರಿಗೆ […]

ಹಾವು ಕಡಿದು ಯುವಕ ಮೃತ್ಯು Read More »

ದಾರಿ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು

ಉಪ್ಪಿನಂಗಡಿ: ಬೈಕ್ ನಲ್ಲಿ ಬಂದ ಸವಾರರಿಬ್ಬರು  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯ ಕುತ್ತಿಗೆಯಲ್ಲಿ ಇದ್ದ ಚಿನ್ನದ ಸರವನ್ನು ಎರಗಿಸಿ ಪರಾರಿಯಾದ ಘಟನೆ  ನಿನ್ನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟುವಿನಲ್ಲಿ ನಡೆದಿದೆ.  ಪಡುಬೆಟ್ಟುವಿನ ಅಲೀಮಮ್ಮ (65) ಎಂಬವರ 10 ಪವನ್ ಚಿನ್ನವನ್ನು ಕಳ್ಳರು ಎಗರಿಸಿದ್ದಾರೆ. ತನ್ನ ಮನೆಗೆ ಕೆಲಸಕ್ಕೆ ಬರುವಾತ ಅನಾರೋಗ್ಯದ ಕಾರಣದಿಂದ ಕೆಲಸಕ್ಕೆ ಬಾರದಿದ್ದಾಗ ಅವರ ಆರೋಗ್ಯ ವಿಚಾರಿಸಲು ಅಲೀಮಮ್ಮ ಅವರು ಮುದರ ಅವರ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದರಲ್ಲಿ ಬಂದ ಇಬ್ಬರು ಬೈಕ್‌ ನಿಲ್ಲಿಸಿ ಅಲೀಮಮ್ಮ

ದಾರಿ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು Read More »

ಬಜರಂಗ ದಳ ಮುಖಂಡ ಭರತ್‌ ಕುಮ್ಡೇಲು ಮನೆ ಶೋಧ

ರಾತ್ರಿ ಸರ್ಚ್‌ ವಾರಂಟ್‌ನೊಂದಿಗೆ ಹೋಗಿ ಪರಿಶೀಲನೆ ಮಂಗಳೂರು: ಪದೇ ಪದೆ ಸಂಭವಿಸಿದ ಹತ್ಯೆಗಳಿಂದ ಪ್ರಕ್ಷುಬ್ದಗೊಂಡಿರುವ ದಕ್ಷಿಣ ಕನ್ನಡದಲ್ಲಿ ಪೊಲೀಸರ ಕಾರ್ಯಾಚರಣೆಗಳು ತೀವ್ರಗೊಂಡಿದೆ. ಹಿಂದೂ ಕಾರ್ಯಕರ್ತರನ್ನು ಮತ್ತು ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಆರೋಪದ ಬೆನ್ನಲ್ಲೇ ಪೊಲೀಸರು ಬುಧವಾರ ರಾತ್ರಿ ಬಜರಂಗದಳದ ಮುಖಂಡ ಭರತ್‌ ಕುಮ್ಡೇಲು ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಭರತ್ ಕುಮ್ಡೇಲು ಮನೆ ಶೋಧಿಸಿದ್ದಾರೆ ಎನ್ನಲಾಗಿದೆ. ಮನೆ ಬಾಗಿಲು ಒಡೆದು

ಬಜರಂಗ ದಳ ಮುಖಂಡ ಭರತ್‌ ಕುಮ್ಡೇಲು ಮನೆ ಶೋಧ Read More »

ಮಂಗಳೂರು ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಫೋಟಿಸುವುದಾಗಿ ಹುಸಿ ಬಾಂಬ್‍ ಕರೆ | ಸ್ಥಳಕ್ಕೆ ತೆರಳಿದ ಪೊಲೀಸರು, ನಿಷ್ಕ್ರೀಯದಳ

ಮಂಗಳೂರು: ನಾಟೆಕಲ್ ಕಣಚೂರು  ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯನ್ನು ಬಾಂಬ್‍ ಇಟ್ಟು ಸ್ಪೋಟಿಸುವುದಾಗಿ ಅನಾಮಧೇಯ ಕರೆಯೊಂದು ಬಂದಿದ್ದು, ಆಸ್ಪತ್ರೆಯ ಆಡಳಿತಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಬಾಂಬ್‍ ನಿಷ್ಕ್ರೀಯದಳ ಹಾಗೂ ಪೊಲೀಸರು ತೆರಳಿ ಪರಿಶೀಲಿಸಿದಾಗ ಹುಸಿ ಬಾಂಬ್‍ ಕರೆ ಎಂದು ತಿಳಿಸಿ ಘಟನೆ ಬುಧವಾರ ನಡೆದಿದೆ. ಬುಧವಾರ ಬೆಳಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಹೆರಿಗೆ ವಿಭಾಗದ ಸ್ಥಿರ ದೂರವಾಣಿಗೆ ಕರೆಯೊಂದು ಬಂದಿದೆ. ಪಿಜಿ ವಿದ್ಯಾರ್ಥಿನಿ ಕರೆ ಸ್ವೀಕರಿಸಿದ್ದು ಇಂಗ್ಲೀಷಲ್ಲಿ ಮಾತನಾಡಿದ ವ್ಯಕ್ತಿ  ಬೆಳಗ್ಗೆ 11

ಮಂಗಳೂರು ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಫೋಟಿಸುವುದಾಗಿ ಹುಸಿ ಬಾಂಬ್‍ ಕರೆ | ಸ್ಥಳಕ್ಕೆ ತೆರಳಿದ ಪೊಲೀಸರು, ನಿಷ್ಕ್ರೀಯದಳ Read More »

ಪ್ರಚೋದನಕಾರಿ ಪೋಸ್ಟ್‌ ವಿರುದ್ಧ ಪೊಲೀಸರ ತೀವ್ರ ಕಾರ್ಯಾಚರಣೆ : 5 ಯುವಕರ ಬಂಧನ

ಸಮಾಜದ ಸ್ವಾಸ್ಥ್ಯ ಕೆಡಿಸುವ ಪೋಸ್ಟ್‌ಗಳ ಮೇಲೆ ನಿಗಾ ಇಡಲು ವಿಶೇಷ ತಂಡ ಮಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಕಾರ್ಯಾಚರಣೆ ಕೈಗೊಂಡಿರುವ ಪೊಲೀಸರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ಪೋಸ್ಟ್‌ಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ಐವರನ್ನು ಬಂಧಿಸಿದ್ದಾರೆ. ಪ್ರಚೋದನಾಕಾರಿ ಪೋಸ್ಟ್‌ಗಳಿಗೆ ಕಾರಣರಾದವರನ್ನು ಗುರುತಿಸಲು ಮತ್ತು ಬಂಧಿಸಲು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ಮೊದಲ ಪ್ರಕರಣದಲ್ಲಿ ಉಡುಪಿ ಜಿಲ್ಲೆಯ ಹೆಜಮಾಡಿ ನಿವಾಸಿ

ಪ್ರಚೋದನಕಾರಿ ಪೋಸ್ಟ್‌ ವಿರುದ್ಧ ಪೊಲೀಸರ ತೀವ್ರ ಕಾರ್ಯಾಚರಣೆ : 5 ಯುವಕರ ಬಂಧನ Read More »

ಸರ್ಕಾರದ ಬೇಜವಾಬ್ದಾರಿಗೆ ಅಮಾಯಕರು ಬಲಿ : ನಳಿನ್‌ಕುಮಾರ್ ಕಟೀಲ್

ಮಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಬಲಿಯಾಗಿರುವುದು ಘೋರ ದುರಂತವಾಗಿದ್ದು, ರಾಜ್ಯ ಸರ್ಕಾರದ ಬೇಜವಾಬ್ದಾರಿ ಇದಕ್ಕೆ ಕಾರಣವಾಗಿದೆ ಎಂದು ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಸರ್ಕಾರದ ಭದ್ರತಾ ನಿರ್ಲಕ್ಷೃಕ್ಕೆ ಅಮಾಯಕ ಜೀವಗಳು ಬಲಿಯಾಗಿವೆ. ಯಾವುದೇ ಪೂರ್ವ ಸಿದ್ದತೆ ಇಲ್ಲದೆ ಕೇವಲ ಪ್ರಚಾರದ ಉದ್ದೇಶದಿಂದ ಕಾರ್ಯಕ್ರಮ ಏರ್ಪಡಿಸಿದ್ದು, ಈ ದುರಂತಕ್ಕೆ ಸರ್ಕಾರವೇ ನೇರ ಹೊಣೆ. ರಾಜ್ಯದ ಗೃಹ ಸಚಿವರು ಸಹಿತ ಪೂರ್ತಿ ಇಲಾಖೆ ವಿಫಲವಾಗಿದೆ

ಸರ್ಕಾರದ ಬೇಜವಾಬ್ದಾರಿಗೆ ಅಮಾಯಕರು ಬಲಿ : ನಳಿನ್‌ಕುಮಾರ್ ಕಟೀಲ್ Read More »

ಬಹುನಿರೀಕ್ಷಿತ ಕಲ್ಲಡ್ಕ ಫ್ಲೈ ಓವರ್ ಸಂಚಾರಕ್ಕೆ ಮುಕ್ತ

ಬಂಟ್ವಾಳ: ಬಹುನಿರೀಕ್ಷೆಯ ಕಲ್ಲಡ್ಕ ಪ್ರೈ ಓವರ್ ಇಂದಿನಿಂದ ವಾಹನ ಸಂಚಾರಕ್ಕೆ ತೆರೆದುಕೊಂಡಿದ್ದು, ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಆಗಮಿಸುವ ವಾಹನಗಳು ಫೈ ಓವರ್ ಮೂಲಕ ಸಂಚರಿಸುತ್ತಿದೆ. ಇಂದು ಬೆಳಿಗ್ಗೆ 10.30 ಗಂಟೆಗೆ ಪ್ರೈ ಓವರ್ ಆರಂಭಿಕ ಭಾಗವಾದ ಪೂರ್ಲಿ ಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು ಹಿರಿಯ ಮುದಾಳು, ಕಲ್ಲಡ, ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ, ಡಾ.ಪ್ರಭಾಕರ್ ಭಟ್ ಅವರ ನೇತೃತ್ವದಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು ಫೈಓವರ್ ಸಂಚಾರವನ್ನು ಸ್ವಾಗತಿಸಿದ್ದಾರೆ. ಈ ಸಂದರ್ಭ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ,

ಬಹುನಿರೀಕ್ಷಿತ ಕಲ್ಲಡ್ಕ ಫ್ಲೈ ಓವರ್ ಸಂಚಾರಕ್ಕೆ ಮುಕ್ತ Read More »

ಮಳೆಯ ಜತೆಗೆ ಬಿಸಿಲಿನ ವಾತಾವರಣ | ದಕ್ಷಿಣ ಕನ್ನಡದ ಗ್ರಾಮೀಣ ಭಾಗದಲ್ಲಿ ಶಂಕಿತ ಡೆಂಗ್ಯೂ ಪ್ರಕರಣದಲ್ಲಿ ಏರಿಕೆ

ಮಂಗಳೂರು: ಮಳೆಯ ಅಬ್ಬರ ನಿಲ್ಲುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣ ಏರಿಕೆಯಾಗಿದೆ. ಕೆಲ ದಿನಗಳಿಂದ ಮಳೆಯ ಜತೆಗೆ ಬಿಸಿಲಿನ ವಾತಾವರಣ ಕಂಡು ಬರುತ್ತಿರುವುದೇ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣ ಏರಿಕೆಗೆ ಕಾರಣವಾಗಿದೆ. ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಪ್ರಾಣಾಪಾಯಕ್ಕೂ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗೃತಾ ಕ್ರಮ ಗಳನ್ನು ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಹೇಳಿದ್ದಾರೆ.ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿಯಲ್ಲಿ ಮಂಗಳವಾರ

ಮಳೆಯ ಜತೆಗೆ ಬಿಸಿಲಿನ ವಾತಾವರಣ | ದಕ್ಷಿಣ ಕನ್ನಡದ ಗ್ರಾಮೀಣ ಭಾಗದಲ್ಲಿ ಶಂಕಿತ ಡೆಂಗ್ಯೂ ಪ್ರಕರಣದಲ್ಲಿ ಏರಿಕೆ Read More »

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಬಂಧನ

ಕೊಲೆಗೆ ಸಂಚು ರೂಪಿಸಿ, ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪ ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೇ 1ರಂದು ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಲಾಗಿತ್ತು. ಬಂಧಿತ ವ್ಯಕ್ತಿಯ ಮೇಲೆ ಪ್ರಮುಖ ಆರೋಪಿಗಳೊಂದಿಗೆ ಸೇರಿ ಕೊಲೆಗೆ ಸಂಚು ರೂಪಿಸಿದ ಮತ್ತು ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪವಿದೆ. ಬಂಧಿತನನ್ನು ಮಂಗಳೂರು ಬಜ್ಪೆ ಶಾಂತಿಗುಡ್ಡೆಯ ಬದ್ರಿಯಾ ಜುಮಾ ಮಸೀದಿ ಬಳಿಯ

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಬಂಧನ Read More »

ಚಲಿಸುತ್ತಿದ್ದ ಆಟೋದಲ್ಲಿ ಹೃದಯಾಘಾತ : ಚಾಲಕ ಶರತ್ ಕುಮಾರ್ ನಿಧನ

ಕೊಕ್ಕಡ: ಆಟೋ ರಿಕ್ಷಾ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಸಮೀಪದ ಕೆಂಪಕೋಡಿನ ನಿವಾಸಿ ರಘುರಾಮ ಮಡಿವಾಳ ಅವರ ಪುತ್ರ  ಶರತ್ ಕುಮಾರ್ ಕೆ. (36) ಮೃತಪಟ್ಟವರು. ಶರತ್ ಕುಮಾರ್ ಇಂದು ಬೆಳಿಗ್ಗೆ ಸ್ವಂತ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮನೆಗೆ ಮರಳುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳೀಯರು ಕೂಡಲೇ ಶರತ್‌ ರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದಾಗಲೇ ಅವರು ನಿಧನ ಹೊಂದಿದ್ದರು. ಮೃತರು

ಚಲಿಸುತ್ತಿದ್ದ ಆಟೋದಲ್ಲಿ ಹೃದಯಾಘಾತ : ಚಾಲಕ ಶರತ್ ಕುಮಾರ್ ನಿಧನ Read More »

error: Content is protected !!
Scroll to Top