ದಕ್ಷಿಣ ಕನ್ನಡ

ಕುಕ್ಕೆಯಲ್ಲಿ ಮಳೆಯ ನಡುವೆ ಲಕ್ಷದೀಪೋತ್ಸವ ಸಡಗರ

ಸುಬ್ರಹ್ಮಣ್ಯ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ಲಕ್ಷದೀಪೋತ್ಸವ ವೈಭವದಿಂದ ಜರಗಿತು. ಇದರ ನಡುವೆ ವರುಣ ಸಿಂಚನ ಶುರುವಾಗಿತ್ತು. ಲಕ್ಷದೀಪೋತ್ಸವದ ಸಡಗರ ಹೆಚ್ಚುತ್ತಿದ್ದಂತೆ, ಮಳೆಯ ಅಬ್ಬರವೂ ಇಮ್ಮಡಿಸಿತು. ದೀಪೋತ್ಸವದ ಸಡಗರಕ್ಕೆ ಸ್ವಲ್ಪ ತಡೆಯಾದರೂ, ಭಕ್ತರ ಉತ್ಸಾಹಕ್ಕೆ ತಡೆಯಾಗಲಿಲ್ಲ. ಲಕ್ಷದೀಪೋತ್ಸವದ ಪ್ರಯುಕ್ತ ಕುಣಿತ ಭಜನೆ ಭಕ್ತರ ಗಮನ ಸೆಳೆಯಿತು. ಕುಕ್ಕೆ ಆಸುಪಾಸಿನ ಪ್ರದೇಶದಲ್ಲಿ ಭಾರೀ ಮಳೆ ಸುರಿದಿದೆ.

ಕುಕ್ಕೆಯಲ್ಲಿ ಮಳೆಯ ನಡುವೆ ಲಕ್ಷದೀಪೋತ್ಸವ ಸಡಗರ Read More »

ದಂಪತಿ ಆತ್ಮಹತ್ಯೆ!! | ನೇಣಿಗೆ ಕೊರಳೊಡ್ಡಿದ ರಂಗಿತರಂಗ ನಾಟಕ ಸಂಸ್ಥೆಯ ಸ್ಥಾಪಕ, ಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿ!

ಹೆಸರಾಂತ ಸಮಾಜ ಸೇವಕ, ಕಾಪು ರಂಗಿತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ದಂಪತಿ ಜೊತೆಯಾಗಿ ಮನೆಯಲ್ಲೇ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಒಂದೇ ಸೀರೆಯನ್ನು ನೇಣಾಗಿ ಬಳಸಿಕೊಂಡು, ಅದಕ್ಕೆ ದಂಪತಿ ಕೊರಳೊಡ್ಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ ಅವರು ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದರು. ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಕಾಪು “ರಂಗಿತರಂಗ” ತಂಡದ

ದಂಪತಿ ಆತ್ಮಹತ್ಯೆ!! | ನೇಣಿಗೆ ಕೊರಳೊಡ್ಡಿದ ರಂಗಿತರಂಗ ನಾಟಕ ಸಂಸ್ಥೆಯ ಸ್ಥಾಪಕ, ಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿ! Read More »

ಮಾಂಗಲ್ಯ ಸರ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಲಾಡ್ಜ್ ಮಾಲಕ!

ಸುಬ್ರಹ್ಮಣ್ಯ: ಕಳೆದು ಹೋಗಿದ್ದ ಮಾಂಗಲ್ಯ ಸರವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಡಿ. 9ರಂದು ವಸತಿ ಗೃಹಕ್ಕೆ ಬಂದಿದ್ದ ಮೈಸೂರಿನ ಯಾತ್ರಾರ್ಥಿಗಳು ಡಿ. 10ರಂದು ತೆರಳಿದ್ದರು. ಬಳಿಕ ರೂಮ್ ಶುಚಿ ಮಾಡುವ ಸಂದರ್ಭದಲ್ಲಿ 5 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ದೊರಕಿದ್ದು, ಅದನ್ನು ಸುಬ್ರಹ್ಮಣ್ಯ ಠಾಣೆಗೆ ಒಪ್ಪಿಸಲಾಯಿತು. ಮಾಂಗಲ್ಯ ಸರ ಮಂಜುನಾಥ್ ಅವರ ಪತ್ನಿಯದ್ದಾಗಿತ್ತು. ಸರದ ವಾರೀಸುದಾರರನ್ನು ಸುಬ್ರಹ್ಮಣ್ಯ ಠಾಣೆಗೆ ಬರಲು ಹೇಳಿ, ಎಸ್.ಐ. ಕಾರ್ತಿಕ್, ನಿವೃತ್ತ ಪ್ರಾಧ್ಯಾಪಕ ತಿಲಕ್ ಎ.ಎ., ಮಹೇಶ್

ಮಾಂಗಲ್ಯ ಸರ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಲಾಡ್ಜ್ ಮಾಲಕ! Read More »

ಶುಚಿತ್ವ ಕಾಪಾಡುವಂತೆ ಆರೋಗ್ಯ ಇಲಾಖೆಯಿಂದ ವ್ಯಾಪಾರಿಗಳಿಗೆ ನೋಟೀಸ್!

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಟಿ ಜಾತ್ರೋತ್ಸವ ನಡೆಯುವ ಸಂದರ್ಭ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸುವ ಹಿನ್ನಲೆಯಲ್ಲಿ ಶುಚಿತ್ವ ವಹಿಸುವಂತೆ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿದೆ. ಆರೋಗ್ಯ  ಹಾಗೂ ಶುಚಿತ್ವ ಕಾಪಾಡುವ ದೃಷ್ಟಿಯಿಂದ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾl ತ್ರಿಮೂರ್ತಿ ಅವರ ಸೂಚನೆಯಂತೆ ಹಿರಿಯ ಆರೋಗ್ಯ ನಿರೀಕ್ಷಕ ಬಸವರಾಜ್ ಹಾಗೂ ಆರೋಗ್ಯ ನಿರೀಕ್ಷಕ ಉಮ್ಮರ್ ಖಾನ್ ನೋಟೀಸ್ ನೀಡುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಜಾತ್ರೋತ್ಸವ ಸಂದರ್ಭದಲ್ಲಿ ಬೇಕರಿ, ಸಣ್ಣ ಚಹಾದ ಅಂಗಡಿ, ಸಣ್ಣ ಪುಟ್ಟ

ಶುಚಿತ್ವ ಕಾಪಾಡುವಂತೆ ಆರೋಗ್ಯ ಇಲಾಖೆಯಿಂದ ವ್ಯಾಪಾರಿಗಳಿಗೆ ನೋಟೀಸ್! Read More »

ನರ್ಸಿಂಗ್ ಕೋರ್ಸಿಗೆ ಸೇರಿ ಒಂದೇ ವಾರದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ!

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ವಳಚ್ಚಿಲಿನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ಕೇರಳದ ಅಲೆಪ್ಪಿ ನಿವಾಸಿ ಸಚಿನ್ ಸಾಜು (19) ಎಂದು ಗುರುತಿಸಲಾಗಿದೆ. ಡಿ. 8ರಂದು ಕಾಲೇಜಿನ ಹಾಸ್ಟೆಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥೀಯಾಗಿದ್ದ ಈತ, ನ. 30ರಂದು ಕಾಲೇಜು ಪ್ರವೇಶ ಪಡೆದಿದ್ದ. ಡಿ. 8ರಂದು ಬೆಳಿಗ್ಗಿನ ಹೊತ್ತು ಹಾಸ್ಟೆಲ್ ಕೊಠಡಿಯಲ್ಲಿ ಬೆಡ್ ಶೀಟನ್ನೇ ನೇಣಾಗಿ ಬಳಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ

ನರ್ಸಿಂಗ್ ಕೋರ್ಸಿಗೆ ಸೇರಿ ಒಂದೇ ವಾರದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ! Read More »

ಎನ್‌ಐಟಿಕೆ ಅಕ್ರಮ ಟೋಲ್‌ಗೇಟ್: ಪ್ರತಿಭಟಿಸಿದ್ದ 101 ಮಂದಿ ವಿರುದ್ಧ ಚಾರ್ಜ್ ಶೀಟ್!!

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಎನ್‌ಐಟಿಕೆಯಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಟೋಲ್‌ಗೇಟ್ ವಿರುದ್ಧ ಪ್ರತಿಭಟಿಸಿದ್ದ ಸುಮಾರು 101 ಮಂದಿ ಹೋರಾಟಗಾರರ ಮೇಲೆ ಸುರತ್ಕಲ್ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸೋಮವಾರ ಹಲವು ಹೋರಾಟಗಾರರ ಮೊಬೈಲ್‌ಗಳಿಗೆ ಮೆಸೇಜ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. 2022ರ ನವೆಂಬರ್‌ನಲ್ಲಿ ಟೋಲ್‌ಗೇಟ್ ತೆರವು ಹೋರಾಟ ಸಮಿತಿ ಟೋಲ್ ಗೇಟ್‌ನ್ನು ತೆರವುಗೊಳಿಸುವ ಕುರಿತು ನೇರ ಕಾರ್ಯಾಚರಣೆಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಾವಿರಾರು ಹೋರಾಟಗಾರರು ಪೊಲೀಸರ ಸರ್ಪಗಾವಲನ್ನು ಹಿಮ್ಮೆಟ್ಟಿಸಿ ಟೋಲ್

ಎನ್‌ಐಟಿಕೆ ಅಕ್ರಮ ಟೋಲ್‌ಗೇಟ್: ಪ್ರತಿಭಟಿಸಿದ್ದ 101 ಮಂದಿ ವಿರುದ್ಧ ಚಾರ್ಜ್ ಶೀಟ್!! Read More »

ಕುಕ್ಕೆ ಜಾತ್ರೆ: ಭಕ್ತರಿಗೆ ಮೂಲಮೃತ್ತಿಕೆ ವಿತರಣೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾ ಷಷ್ಠಿ ಜಾತ್ರೋತ್ಸವದ ಅಂಗವಾಗಿ ಭಾನುವಾರ ಮೂಲಮೃತಿಕ ಪ್ರಸಾದ ತೆಗೆದು ಭಕ್ತರಿಗೆ ವಿತರಿಸಲಾಯಿತು. ಈ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತಾಯ ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿ ಮೃತ್ತಿಕೆಯನ್ನು ತಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರುಗಳು, ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ ವರ್ಗ, ಮಾಜಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರುಗಳು ಸದಸ್ಯರುಗಳು ಅಲ್ಲದೆ ನೆರೆದ ಸಾವಿರಾರು ಭಕ್ತಾದಿಗಳಿಗೆ ಮೃತ್ವಿಕೆಯನ್ನು ವಿತರಣೆ ಮಾಡಿದರು.

ಕುಕ್ಕೆ ಜಾತ್ರೆ: ಭಕ್ತರಿಗೆ ಮೂಲಮೃತ್ತಿಕೆ ವಿತರಣೆ Read More »

ಉಳ್ಳಾಲ ಸಮುದ್ರ ಪಾಲಾದ ವಿದ್ಯಾರ್ಥಿಗಳ ಮೃತದೇಹ ಪತ್ತೆ

ಉಳ್ಳಾಲ: ಸಮುದ್ರತೀರಕ್ಕೆ ವಿಹಾರಕ್ಕೆ ತೆರಳಿದ್ದ ಸಂದರ್ಭ ಸಮುದ್ರಪಾಲಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿದೆ. ಸೊಮೇಶ್ವರ ಪರಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಓದುತ್ತಿದ್ದ  ವಿದ್ಯಾರ್ಥಿಗಳಾದ ಯಶ್ವಿತ್‌, ಯುವರಾಜ ಸೇರಿದಂತೆ ಒಟ್ಟು ಆರು ಮಂದಿ ವಿದ್ಯಾರ್ಥಿಗಳು ಶನಿವಾರ ಮದ್ಯಾಹ್ನ 12.40ಕ್ಕೆ ಕಾಲೇಜು ಮುಗಿಸಿ ಸೋಮೇಶ್ವರ ಶ್ರೀ ಸೊಮನಾಥ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆಯ ಬಳಿಕ ದೇವಸ್ಥಾನದಲ್ಲಿ ಮುಗಿಸಿ ಅಲ್ಲೇ ಪಕ್ಕದ ಮರದಡಿಯಲ್ಲಿ ಕುಳಿತಿದ್ದರು. ಸುಮಾರು ಮೂರು ಗಂಟೆಯ ಬಳಿಕ ಸ್ಥಳೀಯ ಗೂಡಂಗಡಿಯಿಂದ ತಿಂಡಿ ತೆಗೆದುಕೊಂಡು ಸೋಮೇಶ್ವರ ದೇವಸ್ಥಾನದಿಂದ ಉಚ್ಚಿಲದ ಕಡೆಗೆ

ಉಳ್ಳಾಲ ಸಮುದ್ರ ಪಾಲಾದ ವಿದ್ಯಾರ್ಥಿಗಳ ಮೃತದೇಹ ಪತ್ತೆ Read More »

ಡಿ.12 : ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟದಿಂದ ಪ್ರತಿಭಟನೆ | ಸೇವೆಯಲ್ಲಿ ಉಂಟಾಗಲಿದೆ ವ್ಯತ್ಯಯ

ಮಂಗಳೂರು: ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ  ಹಾಗೂ ಗ್ರಾಮೀಣ ಅಂಚೆ ಸೇವಕರ ರಾಷ್ಟ್ರೀಯ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಸಹಯೋಗದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 12ರಿಂದ ಮುಷ್ಕರ ಹಮ್ಮಿಕೊಂಡಿದ್ದು, ಗ್ರಾಮೀಣ ಭಾಗಗಳಲ್ಲಿ ಅಂಚೆ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮುಷ್ಕರ ಹಿನ್ನೆಲೆಯಲ್ಲಿ ಸೇವೆಯನ್ನು ಸ್ಥಗಿತಗೊಳಿಸಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಐಜಿಡಿಎಸ್‌ಯು ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಮಹದೇವಯ್ಯ ಸಭೆಯೊಂದರಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ 16.5 ಸಾವಿರ ಗ್ರಾಮೀಣ ಅಂಚೆ ಸೇವಕರು ಕಾರ್ಯನಿರ್ವಹಿಸುತ್ತಿದ್ದು, ಅಂಚೆ ಸೇವೆಗಳನ್ನು

ಡಿ.12 : ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟದಿಂದ ಪ್ರತಿಭಟನೆ | ಸೇವೆಯಲ್ಲಿ ಉಂಟಾಗಲಿದೆ ವ್ಯತ್ಯಯ Read More »

ಮಾಸ್ಟರ್ ಶೆಫ್ ಇಂಡಿಯಾ ಪ್ರಶಸ್ತಿ ಪಡೆದ ಮಂಗಳೂರಿನ ಮುಹಮ್ಮದ್ ಆಶಿಕ್

ಸೋನಿ ಲೈವ್ ಒಟಿಟಿ ವೇದಿಕೆ ಮುಂಬಯಿಯಲ್ಲಿ ಆಯೋಜಿಸಿದ ಮಾಸ್ಟರ್ ಶೆಫ್ ಇಂಡಿಯಾ ಸ್ಪರ್ಧೆಯ ಫೈನಲ್ ನಲ್ಲಿ ಮಂಗಳೂರಿನ ಯುವಕ ಮುಹಮ್ಮದ್ ಆಶಿಕ್ ಅವರು ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಅಂತಿಮ ಸುತ್ತು ತಲುಪಿದ ರುಖ್ಸಾರ್ ಸಯೀದ್, ಸೂರಜ್ ಥಾಪಾ, ನಂಬಿ ಜೆಸ್ಸಿಕಾ ಮರಕ್ ಸೇರಿದಂತೆ ನಾಲ್ವರಲ್ಲಿ ಮುಹಮ್ಮದ್ ಆಶಿಕ್ ಒಬ್ಬರಾಗಿದ್ದರು. ಶುಕ್ರವಾರ ಸ್ಪರ್ಧೆಯ ಫೈನಲ್ ಸಂಚಿಕೆ ವಿಜೇತರಾಗಿ ಹೊರ ಹೊಮ್ಮಿದ್ದಾರೆ. ಅಲ್ಲದೆ ಈ ಸ್ಪರ್ಧೆಯನ್ನು ಗೆದ್ದ ದಕ್ಷಿಣ ಭಾರತದ ಪ್ರಥಮ ಸ್ಪರ್ಧಿ ಎಂಬ ಹೆಗ್ಗಳಿಯನ್ನು ಅವರು ಪಡೆದಿದ್ದಾರೆ.

ಮಾಸ್ಟರ್ ಶೆಫ್ ಇಂಡಿಯಾ ಪ್ರಶಸ್ತಿ ಪಡೆದ ಮಂಗಳೂರಿನ ಮುಹಮ್ಮದ್ ಆಶಿಕ್ Read More »

error: Content is protected !!
Scroll to Top