ದಕ್ಷಿಣ ಕನ್ನಡ

ನಾಳ ಕ್ಷೇತ್ರದಲ್ಲಿ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ನಾಳ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆಯ ಪ್ರಯುಕ್ತ ಪಕ್ಷ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಿತು. ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ ದೀಪ ಬೆಳಗಿಸಿ ಉದ್ಘಾಟಿಸಿ, ದೇವಳದ ಒಳ ಭಾಗದಲ್ಲಿ ನವರಾತ್ರಿ ಪೂಜೆಯು ವಿದ್ಯುಕ್ತವಾಗಿ ನಡೆದಂತೆ ದೇವಿಯ ಪ್ರೀತ್ಯರ್ಥವಾಗಿ ಸಂಗೀತ, ಭಜನೆ, ಯಕ್ಷಗಾನ, ಪಾರಾಯಣ ಕಾರ್ಯಕ್ರಮಗಳು ನಡೆಯಲಿರುವುದು ಸಂಪ್ರದಾಯವಾಗಿದೆ ಎಂದು ತಿಳಿಸಿದರು. ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಭುವನೇಶ. ಜಿ, ಭಜನಾ ಮಂಡಳಿಯ ಅಧ್ಯಕ್ಷ ಉಮೇಶ ಶೆಟ್ಟಿ ಸಂಬೊಳ್ಯ, ಕಲಾವಿದ […]

ನಾಳ ಕ್ಷೇತ್ರದಲ್ಲಿ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ Read More »

ಪಡಿತರ ಚೀಟಿ ತಿದ್ದುಪಡಿ ಅವಧಿ ವಿಸ್ತರಣೆ

ಮಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ನೀಡಿದ್ದ ಗಡುವನ್ನು ವಿಸ್ತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಅವಧಿಯನ್ನು ಅ. 19ರಿಂದ ಅ. 21ರವರೆಗೆ ನಿಗದಿ ಮಾಡಲಾಗಿದೆ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸರ್ವರ್ ಸಮಸ್ಯೆ ಉಂಟಾಗಿದ್ದ ಕೆಲವು ಜಿಲ್ಲೆಗಳಲ್ಲಿ ಈ ತಿದ್ದುಪಡಿ ವಿಸ್ತರಣೆಗೆ ಅವಕಾಶ ನೀಡಲಾಗಿದೆ. ತಿದ್ದುಪಡಿ ವೇಳೆ ಮೃತರ ಹೆಸರನ್ನು ತೆಗೆದು ಹಾಕುವುದು ಹಾಗೂ ವಿವಾಹವಾಗಿ ಬಂದವರ ಹೆಸರನ್ನು ಪಡಿತರ ಚೀಟಿಗೆ ಸೇರ್ಪಡೆಗೊಳಿಸಲು ಅವಕಾಶ ಇರುತ್ತದೆ. ಸೂಕ್ತ ದಾಖಲೆಗಳೊಂದಿಗೆ

ಪಡಿತರ ಚೀಟಿ ತಿದ್ದುಪಡಿ ಅವಧಿ ವಿಸ್ತರಣೆ Read More »

ಮಂಗಳೂರು : ಮನೆಗೆ ಸಿಡಿಲು ಬಡಿದು ತಾಯಿ ಮತ್ತು ಮಗುವಿಗೆ ಗಾಯ

ಮಂಗಳೂರು : ಮನೆಗೆ ಸಿಡಿಲು ಬಡಿದು ಮನೆಯಲ್ಲಿದ್ದ ತಾಯಿ ಮತ್ತು ಮಗು ಗಾಯಗೊಂಡ ಘಟನೆ ಮಂಗಳೂರು ನಗರದ ಹೊರವಲಯದ ವಾಮಾಂಜೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಶ್ವೇತಾ ಹಾಗೂ 5 ವರ್ಷದ ಮಗುವಿನ ಕಿವಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಸಂದರ್ಭ ಮನೆಯಲ್ಲಿದ್ದ ನಾಲ್ವರು ಸದಸ್ಯರಿದ್ದು ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು : ಮನೆಗೆ ಸಿಡಿಲು ಬಡಿದು ತಾಯಿ ಮತ್ತು ಮಗುವಿಗೆ ಗಾಯ Read More »

ದ.ಕ. ಜಿಲ್ಲೆ ಪೂರ್ಣ ಬರಪೀಡಿತ: ಘೋಷಣೆಗೆ ರೈತ ಸಂಘ, ಹಸಿರುಸೇನೆ ಆಗ್ರಹ

ಪುತ್ತೂರು: ಮೂಡಬಿದಿರೆ ಹಾಗೂ ಮಂಗಳೂರು ತಾಲೂಕನ್ನು ಮಾತ್ರ ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯನ್ನು ಕೈಬಿಟ್ಟಿರುವುದು ಜಿಲ್ಲೆಯ ರೈತರು ಹಾಗೂ ಸಮಸ್ತ ನಾಗರಿಕರಿಗೆ ಮಾಡಿದ ದ್ರೋಹ ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಆರೋಪಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಬಿ.ಶ್ರೀಧರ ಶೆಟ್ಟಿ, ದಕ್ಷಿಣ ಕನ್ನಡ, ಮಂಗಳೂರಿಗೆ ನೀರುಣಿಸುವ ನೇತ್ರಾವತಿಯನ್ನೇ ತಿರುಗಿಸಿ ಎತ್ತಿನಹೊಳೆ ಯೋಜನೆಯನ್ನು ಮಾಡಿ ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯನ್ನು ಬರಗಾಲ ಪ್ರದೇಶವನ್ನಾಗಿ ಮಾಡಲು ಸಂಚು

ದ.ಕ. ಜಿಲ್ಲೆ ಪೂರ್ಣ ಬರಪೀಡಿತ: ಘೋಷಣೆಗೆ ರೈತ ಸಂಘ, ಹಸಿರುಸೇನೆ ಆಗ್ರಹ Read More »

ಮೂಡುಬಿದಿರೆ ಪ್ರೆಸ್ ಕ್ಲಬ್‌ನ ಮಾಜಿ ಅಧ್ಯಕ್ಷ, ಯುವ ನ್ಯಾಯವಾದಿ ನಿಧನ

ಮೂಡುಬಿದಿರೆ : ಮೂಡುಬಿದಿರೆ ಪ್ರೆಸ್ ಕ್ಲಬ್‌ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಚ್ಚೇರಿಪೇಟೆಯ ಆನಂದ ಪೂಜಾರಿ ಅವರ ಪುತ್ರರಾಗಿರುವ ವೇಣುಗೋಪಾಲ ಅವಿವಾಹಿತರಾಗಿದ್ದಾರೆ. ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರು ಮೂಡುಬಿದಿರೆಯಲ್ಲಿ ಯುವ ನ್ಯಾಯವಾದಿಯಾಗಿ ಕೆಲಸ ಮಾಡುತ್ತಿದ್ದರು. ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದ ವೇಣುಗೋಪಾಲ ಅವರು, ಭಾನುವಾರ ಸಂಜೆ ತನ್ನ ಸಹೋದರಿಯ ಮನೆಗೆ ಹೋಗಿದ್ದರು. ಇಂದು ಬೆಳಿಗ್ಗೆ ಅವರಿಗೆ ಹೃದಯಾಘಾತ

ಮೂಡುಬಿದಿರೆ ಪ್ರೆಸ್ ಕ್ಲಬ್‌ನ ಮಾಜಿ ಅಧ್ಯಕ್ಷ, ಯುವ ನ್ಯಾಯವಾದಿ ನಿಧನ Read More »

ಕೆನರಾ ಕಾಲೇಜಿಗೆ ಎನ್.ಎಸ್.ಎಸ್. ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ  ರಾಷ್ಟ್ರೀಯ ಸೇವಾ ಯೋಜನಾ ಕೋಶದಿಂದ ನೀಡಲ್ಪಡುವ ಎನ್ನೆಸ್ಸೆಸ್ಸ್ 2021-22ನೇ ಸಾಲಿನ ರಾಜ್ಯ ಪ್ರಶಸ್ತಿ ಮಂಗಳೂರಿನ ಕೆನರಾ ಕಾಲೇಜಿಗೆ ಲಭಿಸಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಸಲ್ಲಿಸಿರುವ ಅನುಪಮ ಸೇವೆಗಾಗಿ 2021-22ನೇ ಸಾಲಿನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ರಾಜ್ಯ ಪ್ರಶಸ್ತಿಯನ್ನು ಸಂಸ್ಥೆಯ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಸೀಮಾ ಪ್ರಭು ಎಸ್.  ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ

ಕೆನರಾ ಕಾಲೇಜಿಗೆ ಎನ್.ಎಸ್.ಎಸ್. ರಾಜ್ಯ ಪ್ರಶಸ್ತಿ ಪ್ರದಾನ Read More »

ಮಂಗಳಾದೇವಿ ಅಂಗಳಕ್ಕೆ ಜಿಲ್ಲಾಡಳಿತ: ವಿಹಿಂಪ ಎಚ್ಚರಿಕೆ!

ಮಂಗಳೂರು: ಇತಿಹಾಸ ಪ್ರಸಿದ್ಧ ಮಂಗಳೂರು ಮಂಗಳಾದೇವಿ ದೇವಸ್ಥಾನದ ನವರಾತ್ರಿ ಸಂದರ್ಭ ಮಳಿಗೆಗಳಿಗೆ ಬಹಿರಂಗ ಹರಾಜು ಹಾಕುವಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಜಿಲ್ಲಾಡಳಿತ ಸೂಚಿಸಿದೆ. ಇದು ಹೊಸ ವಿವಾದಕ್ಕೆ ದಾರಿ ಮಾಡಿಕೊಡಲಿದ್ದು, ಮುಂದೆ ಆಗುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆ ಎಂದು ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ. ನವರಾತ್ರಿ ಉತ್ಸವ ಸಂದರ್ಭ ಮಂಗಳಾದೇವಿ ದೇವಸ್ಥಾನದ ಎದುರು ರಸ್ತೆಯ ಎರಡೂ ಬದಿಯಲ್ಲಿ ಮಳಿಗೆಗಳನ್ನು ಹಾಕಲು ಅವಕಾಶ ಕಲ್ಪಿಸಲಾಗುತ್ತದೆ. ಇದೇ ಪ್ರಕಾರ ಈ ಬಾರಿ, ದೇವಸ್ಥಾನ ಆಡಳಿತ ಮಂಡಳಿ ಏಲಂ ಪ್ರಕ್ರಿಯೆ

ಮಂಗಳಾದೇವಿ ಅಂಗಳಕ್ಕೆ ಜಿಲ್ಲಾಡಳಿತ: ವಿಹಿಂಪ ಎಚ್ಚರಿಕೆ! Read More »

ಜನನ ಮರಣ ನೊಂದಣಿಗೆ ಆಧಾರ್ ಕಡ್ಡಾಯವಲ್ಲ: ಡಾ. ಆನಂದ್ ಕೆ.

ಮಂಗಳೂರು: ಜನನ ಮರಣ ನೋಂದಣಿಗೆ ಆಧಾರ್ ಕಡ್ಡಾಯವಲ್ಲ. ಬೇರೆ ದಾಖಲೆಗಳಾದ ಲೈಸನ್ಸ್ ಮುಂತಾದ ದಾಖಲೆಗಳನ್ನು ಬಳಸಬಹುದು ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನನ ಮರಣ ನೋಂದಣಿಯಲ್ಲಿ ಯಾವುದೇ ವಿಳಂಬ ಹಾಗೂ ಸಾಮಾನ್ಯ ಜನರು ತೊಂದರೆಗಳಿಗೆ ಒಳಗಾಗಬಾರದು. ಇ-ಜನ್ಮ ತಂತ್ರಾಂಶದಲ್ಲಿ ನೋಂದಣಿಯಾಗುವ ಮರಣ ಘಟನೆಗಳಿಗೆ ಮರಣ ಕಾರಣಗಳನ್ನು ಸರಿಯಾಗಿ ನಮೂದಿಸಬೇಕು ಎಂಬ ಕಾರಣಕ್ಕಾಗಿ

ಜನನ ಮರಣ ನೊಂದಣಿಗೆ ಆಧಾರ್ ಕಡ್ಡಾಯವಲ್ಲ: ಡಾ. ಆನಂದ್ ಕೆ. Read More »

ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ : ಸ್ಥಳದಲ್ಲೇ ಮೃತ್ಯು

ಬಂಟ್ವಾಳ : ರಸ್ತೆ ದಾಟುತ್ತಿದ್ದ ಯುವತಿಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ದಾಸಕೋಡಿ ಎಂಬಲ್ಲಿ ನಡೆದಿದೆ.ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಎಂಬವರ ಪುತ್ರಿ ಪಾವನ (23) ಮೃತಪಟ್ಟವರು. ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ಒಂದರಲ್ಲಿ ಕೆಲಸ ಮಾಡುತ್ತಿರುವ ಪಾವನಿ ಸಂಜೆ ಕೆಲಸ ಬಿಟ್ಟು ಬಸ್‍ ನಲ್ಲಿ ತೆರಳಿ ದಾಸಕೋಡಿಯಲ್ಲಿ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಯುವತಿ

ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ : ಸ್ಥಳದಲ್ಲೇ ಮೃತ್ಯು Read More »

ರೈಲ್ವೆ ಪ್ಲಾಟ್ ಪಾರ್ಮ್‍ಗೆ ಬಿದ್ದ ಕಾಂಕ್ರೀಟ್ ಮಿಕ್ಸರ್!

ಬಂಟ್ವಾಳ: ಕಾಮಗಾರಿ ನಿರತ ಕಾಂಕ್ರೀಟ್ ಮಿಕ್ಸರ್ ವಾಹನ ರೈಲ್ವೇ ಹಳಿಗೆ ಬಿದ್ದ ಘಟನೆ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಅಭಿವೃದ್ಧಿ ಕಾಮಗಾರಿ ವೇಳೆ ಘಟನೆ ನಡೆದಿದೆ. ಹಳಿಯಲ್ಲಿ ರೈಲು ಆಗಮಿಸದೇ ಇದ್ದುದರಿಂದ, ಯಾವುದೇ ಅನಾಹುತ ಸಂಭವಿಸಿಲ್ಲ. ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆಯಾದರೂ, ಬೇಜವಾಬ್ದಾರಿ ಬಗ್ಗೆ ಆಕ್ರೋಶವೂ ಕೇಳಿಬಂದಿದೆ. ರೈಲು ಆಗಮಿಸುವ ಮೊದಲು ಯಂತ್ರದ ತೆರವು ಆಗಬೇಕಾಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ.

ರೈಲ್ವೆ ಪ್ಲಾಟ್ ಪಾರ್ಮ್‍ಗೆ ಬಿದ್ದ ಕಾಂಕ್ರೀಟ್ ಮಿಕ್ಸರ್! Read More »

error: Content is protected !!
Scroll to Top