ದಕ್ಷಿಣ ಕನ್ನಡ

ನ.14: ಕುಕ್ಕೆ ದೇವಳದಲ್ಲಿ ಗೋಪೂಜೆ

ಸುಬ್ರಹ್ಮಣ್ಯ: ನಾಗಾರಾಧನೆಯ ಪ್ರಸಿದ್ಧ ಪುಣ್ಯ ತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ರಾಜ್ಯ ಸರಕಾರದ ಆದೇಶದ ಮೇರೆಗೆ ಗೋಪೂಜೆಯನ್ನು ನ.14 ಮಂಗಳವಾರ ನೆರವೇರಲಿದೆ. ಶ್ರೀ ದೇವಳದ ಮುಂಭಾಗದಲ್ಲಿ ಸಂಜೆ 5.30ರಿಂದ 6.30ರ ನಡುವಿನ ಗೋಧೂಳಿ ಲಗ್ನದಲ್ಲಿ ಗೋಪೂಜೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸರ್ವ ಭಕ್ತರು ಆಗಮಿಸಿ ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

ನ.14: ಕುಕ್ಕೆ ದೇವಳದಲ್ಲಿ ಗೋಪೂಜೆ Read More »

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಪ್ರಾಂತೀಯ ಅಧ್ಯಕ್ಷರ ಅಧಿಕೃತ ಭೇಟಿ | ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನ ಅರಿತು ಸೇವೆ ಸಲ್ಲಿಸೋಣ : ರೇಣುಕಾ ಸದಾನಂದ ಜಾಕೆ

ಸುಬ್ರಹ್ಮಣ್ಯ: ದೀನ ದಲಿತರ ಮತ್ತು ಬಡವರ ಮುಖದಲ್ಲಿ ನಗು ತರುವ ನಮ್ಮ ಅಂತರಾಷ್ಟ್ರೀಯ ಲಯನ್ಸ್ ನ ಉದ್ದೇಶದೊಂದಿಗೆ ಬಡವರ ಸೇವೆಯನ್ನು ನಿರಂತರವಾಗಿ ಮುಂದುವರಿಸೋಣ. ಹಾಗೆಯೇ ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನು ಅರ್ಥೈಸಿಕೊಂಡು ಅವುಗಳಿಗೆ ಬೇಕಾದ ಆಹಾರವನ್ನು ಕಾಡಿನ ಅಂಚಿನಲ್ಲಿ ಸುಲಭವಾಗಿ ಸಿಗುವ ಹಾಗೆ ಬೀಜ ಬಿತ್ತನೆ ಹಾಗೂ ಹಣ್ಣಿನ ಗಿಡಗಳನ್ನು ಹೆಚ್ಚಾಗಿ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋಣ ಎಂದು ಅಂತರಾಷ್ಟ್ರೀಯ ಲಯನ್ಸ್  ಜಿಲ್ಲೆಯ 317 ಡಿ ಪ್ರಾಂತೀಯ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ ಹೇಳಿದರು. ಅವರು ಕುಕ್ಕೆ ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಪ್ರಾಂತೀಯ ಅಧ್ಯಕ್ಷರ ಅಧಿಕೃತ ಭೇಟಿ | ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನ ಅರಿತು ಸೇವೆ ಸಲ್ಲಿಸೋಣ : ರೇಣುಕಾ ಸದಾನಂದ ಜಾಕೆ Read More »

ಜಾಲ್ಸೂರು-ಕಾಸರಗೋಡು ರಸ್ತೆಯಲ್ಲಿ ಆನೆ ಪ್ರತ್ಯಕ್ಷ | ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡ ಬೈಕ್ ಸವಾರ

ಜಾಲ್ಸೂರು: ಜಾಲ್ಲೂರು- ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಸುಳ್ಯ ಸಮೀಪದ ಪಂಜಿಕಲ್ಲಿನಲ್ಲಿ ಶನಿವಾರ ನಡೆದಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಗ್ರಾಮ ಸುತ್ತ ಮುತ್ತ ಕಾಡಿನಿಂದ  ಆವರಿಸಿದ್ದು, ಈ ಪರಿಸರದಲ್ಲಿ ರಾತ್ರಿ, ಹಗಲೆನ್ನದೆ ಆನೆಗಳು ಓಡಾಡುತ್ತಿರುತ್ತವೆ. ಇಲ್ಲಿನ ಜನ ಪ್ರತಿ ದಿನ ಆತಂಕದಲ್ಲೇ ಬದುಕುವಂತಾಗಿದೆ. ಹಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿಕರ ತೋಟಗಳಿಗೆ ದಾಳಿ ಇಡುತ್ತಿದ್ದು, ಕೃಷಿಯನ್ನು ಹಾನಿ ಮಾಡುತ್ತಿವೆ. ಕಾಸರಗೋಡು

ಜಾಲ್ಸೂರು-ಕಾಸರಗೋಡು ರಸ್ತೆಯಲ್ಲಿ ಆನೆ ಪ್ರತ್ಯಕ್ಷ | ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡ ಬೈಕ್ ಸವಾರ Read More »

ಡಿ.21 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 4ನೇ ಜಿಲ್ಲಾ ಸಮ್ಮೇಳನ | ಲಾಂಛನ ಬಿಡುಗಡೆ

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯಲಿರುವ 4ನೇ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ ನ.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಲಾಯಿತು. ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಜಿಲ್ಲಾ ಸಮ್ಮೇಳನ ನಡೆಯಲಿದ್ದು, ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ

ಡಿ.21 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 4ನೇ ಜಿಲ್ಲಾ ಸಮ್ಮೇಳನ | ಲಾಂಛನ ಬಿಡುಗಡೆ Read More »

ತಲವಾರು ಝಳಪಿಸಿದ 9 ಮಂದಿ ಪೊಲೀಸ್ ವಶಕ್ಕೆ!!!

ಪುತ್ತೂರು: ಪುತ್ತಿಲ ಪರಿವಾರದ ಕಚೇರಿ ಮುಂಭಾಗ ತಲವಾರು ಝಳಪಿಸಿದ ಪ್ರಕರಣದಲ್ಲಿ 9 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ‌‌ ನಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ

ತಲವಾರು ಝಳಪಿಸಿದ 9 ಮಂದಿ ಪೊಲೀಸ್ ವಶಕ್ಕೆ!!! Read More »

ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಗಮಿಸಿದ ಅಪರೂಪದ ಪ್ರಾಣಿ ಪಕ್ಷಿಗಳು ಕ್ಯಾಮರಾ ಕಣ್ಣಲ್ಲಿ ಸೆರೆ!!

ಮಂಗಳೂರು: ದೇಶದ ಪ್ರಮುಖ ಮೃಗಾಲಯಗಳಲ್ಲಿ ಒಂದಾಗಿರುವ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಅಳಿವಿನಂಚಿನಲ್ಲಿರುವ ತೋಳಗಳ ಸೇರ್ಪಡೆಯಾಗಿವೆ. ಪ್ರಾಣಿ ವಿನಿಮಯ ಯೋಜನೆಯಲ್ಲಿ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಮೃಗಾಲಯದಿಂದ ಒಂದು ಜತೆ ತೋಳ ಪಿಲಿಕುಳ ಮೃಗಾಲಯಕ್ಕೆ ತರಿಸಲಾಗಿದೆ. ಹೊಸ ಜಗತ್ತಿನ ಮಂಗಗಳೆಂದು ಕರೆಯಲ್ಪಡುವ 4 ಜತೆ ಅಳಿಲು ಮಂಗ ಮಾರ್ಮಸೆಟ್, ಟಾಮರಿಂನ್ ಗಳು ಕೂಡ ಸೇರ್ಪಡೆಯಾಗಿದ್ದು, ಇವು ಮಧ್ಯ ಮತ್ತು ದಕ್ಷಿಣ ಅಮೆರಿಕದಲ್ಲಿ ಕಂಡು ಬರುವ ಚಿಕ್ಕ ಜಾತಿಯ ಮಂಗಗಳಾಗಿವೆ. ಮೆಕ್ಸಿಕೋ ದೇಶದಲ್ಲಿ ಕಂಡು ಬರುವ ಬ್ಲೂ ಗೋಲ್ಡ್ ಮಕಾವ್, ಆಸ್ಟ್ರೇಲಿಯಾದಲ್ಲಿ

ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಗಮಿಸಿದ ಅಪರೂಪದ ಪ್ರಾಣಿ ಪಕ್ಷಿಗಳು ಕ್ಯಾಮರಾ ಕಣ್ಣಲ್ಲಿ ಸೆರೆ!! Read More »

ಕಾರಿಗೆ ಡಿಕ್ಕಿ ಹೊಡೆದ ಜಲ್ಲಿ ಸಾಗಾಟದ ಲಾರಿ; ಸ್ಥಳೀಯರಿಂದ ಪ್ರತಿಭಟನೆ! | ಈಯರ್ ಫೋನ್ ಹಾಕಿ ಹಾಡು ಕೇಳುತ್ತಾ ಸಾಗುವ ಲಾರಿ ಚಾಲಕರು: ಸ್ಥಳೀಯರ ಆರೋಪ!

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕಂಪೆನಿಯ ಜಲ್ಲಿ ಸಾಗಾಟದ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಘಟನೆ ಬಂಟ್ವಾಳದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಲಾರಿಗಳ ಅಟ್ಟಹಾಸದಿಂದ ಬೇಸತ್ತಿದ್ದ ಸ್ಥಳೀಯರು, ಇದೇ ಸಂದರ್ಭ ಪ್ರತಿಭಟನೆ ನಡೆಸಿದರು. ಮೂಡುಬಿದರೆ ಆಳ್ವಾಸ್ ಕಾಲೇಜಿಗೆ ತೆರಳುತ್ತಿದ್ದ ಮೈಸೂರು ಮೂಲದ ಕೃಷ್ಣ ಅರಸ ಅಪಾಯದಿಂದ ಪಾರಾಗಿದ್ದಾರೆ. ಕಾರಿಗೆ ಲಾರಿ ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಿಸಿರೋಡಿನಿಂದ ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ಗುತ್ತಿಗೆಯನ್ನು ಕೆ.ಎನ್.ಆರ್.ಸಿ. ಕಂಪೆನಿ

ಕಾರಿಗೆ ಡಿಕ್ಕಿ ಹೊಡೆದ ಜಲ್ಲಿ ಸಾಗಾಟದ ಲಾರಿ; ಸ್ಥಳೀಯರಿಂದ ಪ್ರತಿಭಟನೆ! | ಈಯರ್ ಫೋನ್ ಹಾಕಿ ಹಾಡು ಕೇಳುತ್ತಾ ಸಾಗುವ ಲಾರಿ ಚಾಲಕರು: ಸ್ಥಳೀಯರ ಆರೋಪ! Read More »

ಉದ್ಯಮಿ ಸೊಸೆ ಆತ್ಮಹತ್ಯೆ | ಆರೋಪಿಗಳಿಗೆ ಜಾಮೀನು !

ಸುಳ್ಯ; ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳಿಗೆ ಬೆಂಗಳೂರಿನ ಸಿಟಿ ಏಳನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಐಶ್ವರ್ಯಾ ಮಾವ ಗಿರಿಯಪ್ಪ ಗೌಡ ಕಾಪಿಲ, ಅತ್ತೆ ಸೀತಮ್ಮ, ಗಂಡ ರಾಜೇಶ್, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಯ್ ಅವರನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದರು. ಇನ್ನುಳಿದ ಆರೋಪಿಗಳಾದ ಐಶ್ವರ್ಯಾ ಅವರ ತಂದೆಯ ಅಕ್ಕ ಗೀತಾ, ಅವರ ಪತಿ ರವೀಂದ್ರನಾಥ ಕೇವಳ ಹಾಗೂ

ಉದ್ಯಮಿ ಸೊಸೆ ಆತ್ಮಹತ್ಯೆ | ಆರೋಪಿಗಳಿಗೆ ಜಾಮೀನು ! Read More »

ಅನ್ಯ ಮತೀಯ ಯುವಕನಿಂದ ಯುವತಿಗೆ ಕಿರುಕುಳ | ಆರೋಪಿ ಬಂಧನ

ಸುಳ್ಯ: ಅನ್ಯಮತೀಯ ಯುವಕನೊಬ್ಬ ಯುವತಿಗೆ ಕಿರುಕುಳ ನೀಡಿದ ಘಟನೆ ನಿಂತಿಕಲ್ಲಿನಲ್ಲಿ ಇಂದು ರಾತ್ರಿ ನಡೆದಿದೆ. ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಕೈ ಹಾಕಿರುವುದಾಗಿ ಯುವತಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಠಾಣೆ ಎದುರು ಜಮಾಯಿಸಿರುವುದಾಗಿ ತಿಳಿದು ಬಂದಿದೆ.

ಅನ್ಯ ಮತೀಯ ಯುವಕನಿಂದ ಯುವತಿಗೆ ಕಿರುಕುಳ | ಆರೋಪಿ ಬಂಧನ Read More »

ಧರ್ಮಸ್ಥಳದ ಧರ್ಮಾಧಿಕಾರಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರತಿಷ್ಠಿತ ‘ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ 2023’ ಪ್ರಶಸ್ತಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರತಿಷ್ಠಿತ ‘ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ 2023’ ಪ್ರಶಸ್ತಿ ಲಭಿಸಿದೆ.  ಕೇಂದ್ರ ಸರಕಾರದಿಂದ ಪರಿಗಣಿಸಲ್ಪಟ್ಟ ಇಂಟರಾಕ್ಟಿವ್ ಫೋರಮ್ ಆನ್ ಇಂಡಿಯನ್ ಎಕಾನಮಿ (IFIE) ಸಂಸ್ಥೆಯು ಹೆಗ್ಗಡೆ ಅವರ ಸಮಾಜ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿದೆ. ಬೆಂಗಳೂರಿನ ಮಾರತಹಳ್ಳಿಯ ರಾಡಿಸನ್ ಬ್ಲೂ ಹೋಟೆಲ್’ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪ್ರಶಸ್ತಿ ಪ್ರದಾನ ಮಾಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರತಿಷ್ಠಿತ ‘ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ 2023’ ಪ್ರಶಸ್ತಿ Read More »

error: Content is protected !!
Scroll to Top