ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸುಳ್ಯದ ಯುವಕ ಆತ್ಮಹತ್ಯೆ
ಸುಳ್ಯ : ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಶುಕ್ರವಾರ ನಡೆದಿದೆ. ಸುಳ್ಯ ಗುತ್ತಿಗಾರಿನ ಆಚಳ್ಳಿಯ ಸಿರಿಯಾಕ್ ಮ್ಯಾಥ್ಯೂ ಎಂಬವರ ಮಗ ಸೈಬಿನ್ ಈ ಕೃತ್ಯ ಎಸಗಿದವರು. ನಿನ್ನೆ ಗುತ್ತಿಗಾರು ಪೇಟೆಗೆ ಸೈಬಿನ್ ಆಗಮಿಸಿದ್ದು, ಎಲ್ಲರ ಜೊತೆ ಸಂತೋಷದಿಂದ ಮಾತನಾಡಿದ್ದ ಎನ್ನಲಾಗಿದೆ. ಸೈಬಿನ್ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಅವರ ಹಳೆ ಮನೆಯ ಪಕ್ಕ ಜಮಾಯಿಸಿದ್ದರು. ಈ ಸಂದರ್ಭ ಪೊಲೀಸರು ಆಗಮಿಸಿ ಜನರನ್ನು ಚದುರಿಸಿದರು ಎಂದು ತಿಳಿದು ಬಂದಿದೆ. […]
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸುಳ್ಯದ ಯುವಕ ಆತ್ಮಹತ್ಯೆ Read More »