ದಕ್ಷಿಣ ಕನ್ನಡ

ಸೌಜನ್ಯ ಕೊಲೆ ಪ್ರಕರಣ | ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗ ಯುವ ಗೌಡ ಸಂಘದ ವತಿಯಿಂದ ಆ.1 ರಂದು ಸುಳ್ಯದಲ್ಲಿ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಕೆಗೆ ನಿರ್ಧಾರ

ಸುಳ್ಯ: ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರು ತನಿಖೆಗೆ ಒಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸಲು ಸುಳ್ಯದ ಗೌಡರ ಯುವ ಸೇವಾ ಸಂಘ ಒತ್ತಾಯಿಸಿದ್ದು, ಆ.1ರಂದು ಸುಳ್ಯದಲ್ಲಿ ವಾಹನ ಜಾಥಾ ನಡೆಸಿ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರರ ಮೂಲಕ ಸರಕಾರವನ್ನು ಒತ್ತಾಯಿಸಲು ನಿರ್ಧರಿಸಿದೆ. ಶನಿವಾರ ಸುಳ್ಯ ಪ್ರೆಸ್ರ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಟಾರ್ ಮಾತನಾಡಿ, ಬೆಳ್ತಂಗಡಿ ಸೌಜನ್ಯ ಹತ್ಯೆ ಪ್ರಕರಣ 2011 […]

ಸೌಜನ್ಯ ಕೊಲೆ ಪ್ರಕರಣ | ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗ ಯುವ ಗೌಡ ಸಂಘದ ವತಿಯಿಂದ ಆ.1 ರಂದು ಸುಳ್ಯದಲ್ಲಿ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಕೆಗೆ ನಿರ್ಧಾರ Read More »

ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ಧ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಪುತ್ತೂರು: ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ. ಅವರು ಶುಕ್ರವಾರ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮಳೆಗಾಲದಲ್ಲಿ ಜನರ ಜೀವ ರಕ್ಷಿಸಲು ಜಿಲ್ಲೆಯಲ್ಲಿ ನಿರ್ಬಂಧ ಹೇರಲಾದ ಪ್ರದೇಶಗಳಿಗೆ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ತೆರಳಬಾರದು, ಈಗಾಗಲೇ ಜಿಲ್ಲೆಯ ಸಮುದ್ರ ಕಿನಾರೆಗಳು, ದೇವಸ್ಥಾನದ ಹತ್ತಿರದ ನದಿಗಳು, ಸ್ನಾನ ಘಟ್ಟಗಳು, ಚಾರಣ ತಾಣಗಳಿಗೆ

ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ಧ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read More »

ಭಾರೀ ಮಳೆ ಹಿನ್ನಲೆ | ನಾಳೆ (ಜು.27) ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.27 ಗುರುವಾರ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ರಜೆನೀಡಲಾಗಿದೆ ಎಂದು ಜಿಲ್ಲಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.

ಭಾರೀ ಮಳೆ ಹಿನ್ನಲೆ | ನಾಳೆ (ಜು.27) ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ Read More »

ಪುತ್ತೂರು ತಾಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಕರ್ವೇಲಿನಲ್ಲಿ 110/11 ಕೆ.ವಿ. ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ 3.26 ಎಕ್ರೆ ಜಮೀನು ಮಂಜೂರು | ಜಿಲ್ಲಾಧಿಕಾರಿಯಿಂದ ಆದೇಶ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಕರ್ವೇಲಿನಲ್ಲಿ 110/11 ಕೆ.ವಿ. ವಿದ್ಯುತ್ ಉಪಕೇಂದ್ರವನ್ನು ಸ್ಥಾಪಿಸುವ ನಿಟ್ಟಿನಲ್ಲಿ 3.26 ಎಕರೆ ಸರಕಾರಿ ಜಮೀನು ಮಂಜೂರಾಗಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಅವರ ಶಾಸಕತ್ವದ ಅವಧಿಯಲ್ಲೇ ಮಂಜೂರುಗೊಂಡಿತ್ತು. ಉಪ್ಪಿನಂಗಡಿ ಭಾಗದ ಪ್ರಮುಖ ಬೇಡಿಕೆಗಳಲ್ಲಿ ಇದು ಒಂದಾಗಿದ್ದು, 34ನೇ ನೆಕ್ಕಿಲಾಡಿ ಗ್ರಾಮದ ಕರ್ವೇಲಿನಲ್ಲಿ 110 ಕೆ.ವಿ. ಉಪಕೇಂದ್ರ ಸ್ಥಾಪನೆಗೆ ಯೋಜನೆ ರೂಪಿಸಲಾಗಿತ್ತು. ಇದೀಗ 40 ವರ್ಷದ ಬಳಿಕ ಪುತ್ತೂರು ತಾಲೂಕಿಗೆ 2ನೇ 110 ಕೆ.ವಿ. ಉಪಕೇಂದ್ರ

ಪುತ್ತೂರು ತಾಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಕರ್ವೇಲಿನಲ್ಲಿ 110/11 ಕೆ.ವಿ. ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ 3.26 ಎಕ್ರೆ ಜಮೀನು ಮಂಜೂರು | ಜಿಲ್ಲಾಧಿಕಾರಿಯಿಂದ ಆದೇಶ Read More »

ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆ ಮೃತ್ಯು | ವೈದ್ಯರ ನಿರ್ಲ್ಯಕ್ಷ ಎಂದು ಮಹಿಳೆಯ ಸಂಬಂಧಿಕರಿಂದ ಆಕ್ರೋಶ

ಮಂಗಳೂರು: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಆಸ್ಪತ್ರೆಯಲ್ಲೇ ಮೃತಪಟ್ಟ ಘಟನೆಯು ವರದಿಯಾಗಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಎನ್ನುವ ಗಂಭೀರ ಆರೋಪ ವ್ಯಕ್ತವಾದ ಬೆನ್ನಲ್ಲೇ ಮಹಿಳೆಯ ಸಂಬಂಧಿಕರು ಪ್ರತಿಭಟಿಸಿದಾಗ ಪೊಲೀಸ್ ಬಲ ಪ್ರಯೋಗ ನಡೆದಿದ್ದು, ಸಾವಿಗೆ ಕಾರಣವಾದ ವೈದ್ಯರ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ನಿವಾಸಿ ಪ್ರದೀಪ್ ಆಚಾರ್ಯ ಎಂಬವರ ಪತ್ನಿ ಶಿಲ್ಪಾ ಆಚಾರ್ಯ ಮೃತ ದುರ್ದೈವಿಯಾಗಿದ್ದು, ಆಸ್ಪತ್ರೆಯ ವೈದ್ಯರಾದ ವೀಣಾ ಭಗವಾನ್, ಡೀನ್ ಅಶೋಕ್ ಹೆಗ್ಡೆ,

ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆ ಮೃತ್ಯು | ವೈದ್ಯರ ನಿರ್ಲ್ಯಕ್ಷ ಎಂದು ಮಹಿಳೆಯ ಸಂಬಂಧಿಕರಿಂದ ಆಕ್ರೋಶ Read More »

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಸ್ಮೃತಿ ದಿನ | ರಕ್ತದಾನ ಶಿಬಿರ

ಬೆಳ್ಳಾರೆ : ಒಂದು ವರ್ಷದ ಹಿಂದೆ ಪಿಎಫ್ಐನ ಮತಾಂಧ ಜಿಹಾದಿಗಳಿಂದ ಹತ್ಯೆಗೀಡಾಗಿರುವ ಬಿಜೆಪಿಯ ಯುವ ಮುಖಂಡ, ದಿ ಪ್ರವೀಣ್ ನೆಟ್ಟಾರು ಅವರ ಸ್ಮ್ರತಿದಿನ ದಂದು ಅವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಪ್ರವೀಣ್ ನೆಟ್ಟಾರು ಅವರ ಮನೆಯ ಪರಿಸರದಲ್ಲಿರುವ ಅವರ ಪುತ್ಥಳಿಗೆ ಮಾಲಾರ್ಪಾಣೆಗೈದರು. ನಂತರ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಬೆಳ್ಳಾರೆ ಪೆರುವಾಜೆ ಜೆ.ಡಿ. ಆಡಿಟೋರಿಯಂ ಜರುಗಿದ ರಕ್ತದಾನ ಶಿಬಿರವನ್ನು

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಸ್ಮೃತಿ ದಿನ | ರಕ್ತದಾನ ಶಿಬಿರ Read More »

ಭಾರೀ ಮಳೆ ಹಿನ್ನಲೆ | ನಾಳೆ (ಜು.26) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.

ಭಾರೀ ಮಳೆ ಹಿನ್ನಲೆ | ನಾಳೆ (ಜು.26) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಸೌಜನ್ಯ ಕೊಲೆ ಮರು ತನಿಖೆಗೆ ಆಗ್ರಹ | ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘದ ವತಿಯಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಧರ್ಮಸ್ಥಳ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ನಡೆದು 11 ವರ್ಷಗಳಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ರಾವ್ ಬಿಡುಗಡೆಯಾಗಿದೆ. ಇಂತಹಾ ಹೀನ ಬರ್ಬರ ಕೃತ್ಯವನ್ನು ಸರಿಯಾಗಿ ತನಿಖೆ ಮಾಡಿ ನಿಜವಾದ ಆರೋಪಿಗೆ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗಿದ್ದು, ಇದು ಇಡೀ ಸಮಾಜಕ್ಕೆ ಆಘಾತ ಉಂಟು ಮಾಡಿದೆ ಎಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಎಚ್. ಪದ್ಮಗೌಡ, ಅಧ್ಯಕ್ಷ ಕುಶಾಲಪ್ಪ ಗೌಡ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅವರು ಮಂಗಳವಾರ ಗೌಡರ ಯಾನೆ ಒಕ್ಕಲಿಗರ

ಸೌಜನ್ಯ ಕೊಲೆ ಮರು ತನಿಖೆಗೆ ಆಗ್ರಹ | ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘದ ವತಿಯಿಂದ ಪತ್ರಿಕಾಗೋಷ್ಠಿ Read More »

ಮಳೆಯ ಅವಾಂತರ | ರಸ್ತೆಗೆ ಬಿದ್ದ ಮರ ತೆರವು ಮಾಡಿ ಜವಾಬ್ದಾರಿ ಮೆರೆದ ಪತ್ರಕರ್ತರು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಡಬ, ಸುಬ್ರಹ್ಮಣ್ಯ ಭಾಗದಲ್ಲಿ ಅತೀ ಹೆಚ್ಚಿನ ಅನಾಹುತಗಳು ನಡೆದಿದೆ. ಮಂಜೇಶ್ವರ ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಹಲವೆಡೆ ನದಿ ನೀರು ರಸ್ತೆಗೆ ಬಂದು ಸಂಚಾರ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯಿಂದ ಯಾವುದೇ ವಾಹನಗಳು ಮುಂದಕ್ಕೆ ಸಾಗುವಂತಿಲ್ಲ. ಕಳೆದ ಎರಡು ದಿನಗಳಿಂದ ಇದೇ ಪರಿಸ್ಥಿತಿ ಇದ್ದು ಈ ರಸ್ತೆಯಲ್ಲಿ ಸಾಗುವವರು ಬಳ್ಪ ಗ್ರಾಮದಿಂದ ಗುತ್ತಿಗಾರು ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಬೇಕಾಗಿದೆ. ಮಳೆಯ ಈ ಅವಾಂತರದ ವರದಿ ಮಾಡಲು ತೆರಳಿದ್ದ ಟಿವಿ ಮಾದ್ಯಮದವರೂ

ಮಳೆಯ ಅವಾಂತರ | ರಸ್ತೆಗೆ ಬಿದ್ದ ಮರ ತೆರವು ಮಾಡಿ ಜವಾಬ್ದಾರಿ ಮೆರೆದ ಪತ್ರಕರ್ತರು Read More »

ಮುಡಿಪಿನಲ್ಲಿ ಬಸ್-ಕಾರು ಅಪಘಾತ

ಮುಡಿಪು : ಮುಡಿಪು ಜಂಕ್ಷನ್ ನಲ್ಲಿ ಸೋಮವಾರ ರಾತ್ರಿ  ಬಸ್‌ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಯಾವುದೇ ಗಂಭೀರ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಎನ್‌ ಎಸ್‌ ಟ್ರಾವೆಲ್ಸ್‌ ಎಂಬ ಬಸ್ಸು ಮಂಗಳೂರಿನಿಂದ ಬಿ ಸಿ ರೋಡಿನತ್ತ ಸಂಚರಿಸುತ್ತಿದ್ದಾಗ, ಮುಡಿಪು ಜಂಕ್ಷನ್ನಿನಲ್ಲಿ ತಿರುಗುವ ಸಂದರ್ಭದಲ್ಲಿ ಭಾರತಿ ಶಾಲೆ ಕಡೆಯಿಂದ ಬಂದ ಝೆನ್‌ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಸೀದಾ ಬಸ್ಸಿನ ಮುಂಭಾಗಕ್ಕೆ ನುಗ್ಗಿದ್ದು, ಕಾರು ಚಾಲಕ ಪಾರಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ

ಮುಡಿಪಿನಲ್ಲಿ ಬಸ್-ಕಾರು ಅಪಘಾತ Read More »

error: Content is protected !!
Scroll to Top