ದಕ್ಷಿಣ ಕನ್ನಡ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ ಎನ್. ಪದ್ಮನಾಭ ಮಾಣಿಂಜ ನಿಧನ 

ಬೆಳ್ತಂಗಡಿ: ಕುಕ್ಕಿನಡ್ಡ ಕುಟುಂಬ ಮನೆತನದ ಹಿರಿಯ ತಲೆ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ನಿಧನರಾದರು. ಮಾಜಿ ಶಾಸಕ ಕೆ.ವಸಂತ ಬಂಗೇರರೊಂದಿಗೆ ಉತ್ತಮ ಸಂಬಂಧ ಹೊಂದಿದ ಅವರು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಿದ್ದರು.ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಗತಿಯ ಹಿಂದೆ ಪದ್ಮನಾಭ […]

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ ಎನ್. ಪದ್ಮನಾಭ ಮಾಣಿಂಜ ನಿಧನ  Read More »

ಲಾರಿ ಅಡ್ಡಗಟ್ಟಿ ಜೀವ ಬೆದರಿಕೆ: ಪ್ರಕರಣ ದಾಖಲು

ಕಡಬ,ಮಾ.5: ಕಡಬ ಠಾಣಾ ವ್ಯಾಪ್ತಿಯ ಅಡ್ಡಗದ್ದೆ ಎಂಬಲ್ಲಿಂದ ಲಾರಿಯಲ್ಲಿ  ಮಣ್ಣು ಸಾಗಿಸಿ ದೇವಸ್ಥಾನದ ಬಳಿ  ಹಾಕಿ ರಸ್ತೆಯಲ್ಲಿ  ಹೋಗುವಾಗ ನ್ಯೂಸ್ ರಿಪೋರ್ಟರ್ ಎಂದು ಹೇಳಿಕೊಂಡು  ಗಣೇಶ್ ಇಡಾಳ ಎಂಬಾತ ಲಾರಿ ಅಡ್ಡಗಟ್ಟಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ  ಕಡಬ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಕೂತ್ಕುಂಜ ಗ್ರಾಮದ   ಚಿದ್ಗಲ್ ನಿವಾಸಿ ಪ್ರವೀಣ್ ಕುಮಾರ್ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.  ಪ್ರವೀಣ್ ಕುಮಾರ್ ಲಾರಿ ಚಾಲಕನಾಗಿ ದುಡಿಯುತ್ತಿದ್ದು, ಮಂಗಳವಾರ ರಾತ್ರಿ ಕಡಬದ  ಅಡ್ಡಗದ್ದೆ

ಲಾರಿ ಅಡ್ಡಗಟ್ಟಿ ಜೀವ ಬೆದರಿಕೆ: ಪ್ರಕರಣ ದಾಖಲು Read More »

ಬಸ್‍ – ಕಾರು ನಡುವೆ ಅಪಘಾತ | ಕಾರು ಚಾಲಕ ಗಂಭೀರ ಗಾಯ

ಬಂಟ್ವಾಳ : ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡ್ ಬಳಿ ನಡೆದಿದೆ. ಬಿಸಿರೋಡ್ ಕಡೆಯಿಂದ ಮೆಲ್ಕಾರ್ ಕಡೆಗೆ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್ ಕಡೆಯಿಂದ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.  ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬಸ್‍ – ಕಾರು ನಡುವೆ ಅಪಘಾತ | ಕಾರು ಚಾಲಕ ಗಂಭೀರ ಗಾಯ Read More »

ವಿದ್ಯುತ್‍ ಸೋರಿಕೆಯಿಂದ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಗುಡ್ಡಕ್ಕೆ ತಗುಲಿದ ಬೆಂಕಿ

ನರಿಮೊಗರು: ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ನಿನ್ನೆ ಗುಡ್ಡಕ್ಕೆ ಬೆಂಕಿ ಬಿದ್ದಿದ ಘಟನೆ ನಡೆದಿದೆ. ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಹಿನ್ನಲೆ ಬೆಂಕಿ ಹೊತ್ತಿಕೊಂಡಿದೆ ಎಂದು ಎನ್ನಲಾಗಿದ್ದು, ಸುಮಾರು 3 ಎಕ್ರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿಕೊಂಡಿದೆ. ವಿಷಯ ತಿಳಿದ ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್‌ ಆಚಾರ್ಯ ಸ್ಥಳೀಯರ ಸಹಕಾರದೊಂದಿಗೆ ಅಗ್ನಿ ಶಾಮಕ ದಳದ ಸಿಬಂದಿ, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯುತ್‍ ಸೋರಿಕೆಯಿಂದ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಗುಡ್ಡಕ್ಕೆ ತಗುಲಿದ ಬೆಂಕಿ Read More »

ಮಾಡತ್ತಡ್ಕದಲ್ಲಿರುವ  ಕಲ್ಲಿನ ಕೋರೆಯಲ್ಲಿ ಸ್ಪೋಟ | ಮನೆಗಳಿಗೆ ಹಾನಿ

ವಿಟ್ಲ: ಕಲ್ಲಿನ ಕೋರೆಯಲ್ಲಿ ಬಾರಿ ಪ್ರಮಾಣದ ಸ್ಫೋಟ ಸಂಭವಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸ್ಫೋಟಗೊಂಡ ಶಬ್ದಕ್ಕೆ ವಿಟ್ಲದ ಜನತೆ ಬೆಚ್ಚಿ ಬಿದ್ದಿದ್ದಾರೆ. ವಿಟ್ಲ, ಕಂಬಳಬೆಟ್ಟು, ಮೇಗಿನಪೇಟೆ, ಚಂದಳಿಕೆಯ ಸುತ್ತಮುತ್ತಲಿನಲ್ಲಿ ಜೋರಾಗಿ  ಶಬ್ದ ಕೇಳಿದೆ. ಈ ಶಬ್ದಕ್ಕೆ  ಹಲವು ಮಂದಿ ಭೂಕಂಪನ ಸಂಭವಿಸಿರಬಹುದೆಂದು ಊಹಿಸಿದ್ದರು. ಬಳಿಕ ವಿಚಾರಿಸಿದಾಗ ಮಾಡತ್ತಡ್ಕದಲ್ಲಿರುವ ಕಲ್ಲಿನ ಕೋರೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಪರಿಣಾಮ ಹಲವು ಮನೆಗಳಿಗೆ ಹಾನಿಯುಂಟಾಗಿದ್ದು ಸ್ಥಳಕ್ಕೆ ವಿಟ್ಲ ಪೊಲೀಸರು, ಎಸ್ಪಿ ಹಾಗೂ ಇತರ ಹಲವು ಅಧಿಕಾರಿಗಳು

ಮಾಡತ್ತಡ್ಕದಲ್ಲಿರುವ  ಕಲ್ಲಿನ ಕೋರೆಯಲ್ಲಿ ಸ್ಪೋಟ | ಮನೆಗಳಿಗೆ ಹಾನಿ Read More »

ಮಹಿಳಾ ಅಧಿಕಾರಿಯೊಬ್ಬರ ಲೈಂಗಿಕ ಕಿರುಕಳ | ನೊಂದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು

ಮಂಗಳೂರು: ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ರಾವ್ ಸರ್ಕಲ್ ಬಳಿಯ ಲಾಡ್ಜ್‌ ನಲ್ಲಿ ನೇಣಿಗೆ ಶರಣಾದ ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್(40) ಎಂದು ಪತ್ತೆಹಚ್ಚಲಾಗಿದೆ. ಅಭಿಷೇಕ್ ಸಿಂಗ್ ಆತ್ಮಹತ್ಯೆ ಮಾಡಿಕಳ್ಳುವ  ಮುಂಚಿತವಾಗಿ ವಿಡಿಯೋ ರೆಕಾರ್ಡ್ ನಲ್ಲಿ ಸಿಐಎಸ್‌ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ

ಮಹಿಳಾ ಅಧಿಕಾರಿಯೊಬ್ಬರ ಲೈಂಗಿಕ ಕಿರುಕಳ | ನೊಂದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು Read More »

ಮಾದಕ ವಸ್ತು ಸೇವನೆಯ ಜೊತೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಮಂಗಳೂರು: ಮಾದಕ ವಸ್ತು ಸೇವನೆ ಹಾಗೂ  ಮಾರಾಟ ಮಾಡಿದ್ದಾರೆ ಎಂಬ  ಎರಡು ಪ್ರತ್ಯೇಕ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವೈಶಾಖ್, ಅರವಿಂದ್, ಇಸ್ಮಾಯಿಲ್ ಸೊಹೈಲ್ ಎಂದು ಪತ್ತೆಹಚ್ಚಲಾಗಿದೆ. ಉಳ್ಳಾಲ ಗ್ರಾಮದ ಮೊಗವೀರಪಟ್ಟ ಬೀಚ್ ಪರಿಸರದ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕವಸ್ತುಗಳನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವೈಶಾಖ್ ಎಂಬುವವನನ್ನು ಮಂಗಳೂರಿನ ಸೆನ್ ಪೊಲೀಸರು ಬಂಧಿಸಿದ್ದಾರೆ.  ಜಪ್ಪಿನಮೊಗರು ಸಮೀಪದ ಕುಡ್ಡಾಡಿ ರೈಲ್ವೆ ಅಂಡರ್‌ಪಾಸ್ ರಸ್ತೆಯಿಂದ ಸೂಟರ್‌ಪೇಟೆ ಹಾದು ಹೋಗುವ ರಸ್ತೆಯಲ್ಲಿ ನಿಷೇಧಿತ ಮಾದಕ

ಮಾದಕ ವಸ್ತು ಸೇವನೆಯ ಜೊತೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ Read More »

ವಿಶ್ವ ವಿಖ್ಯಾತ  ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ

ಸುಳ್ಯ : ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುತ್ತಿದ್ದು, ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಮಹಿಳಾ ವಿಚಾರ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಪ್ರಬಂಧ ಮಂಡನೆ ಮಾಡಿದರು. ಮಹಿಳಾ ಚಿಂತಕಿ  ಶೈಲಜ ಹಿರೇಮಠ್ ಉದ್ಘಾಟಿಸಿದ , ಸಾಹಿತಿಗಳಾದ ಎಸ್ ವಿ ಪಾಟೀಲ್ ಅಧ್ಯಕ್ಷತೆ ವಪಿಸಿದ್ದ  ವಿಚಾರ ಗೋಷ್ಠಿಯಲ್ಲಿ 

ವಿಶ್ವ ವಿಖ್ಯಾತ  ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ Read More »

ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ | ಬಂಡಾಯ ಅಭ್ಯರ್ಥಿಗಳಿಗೇ ಗೆಲುವು | 440 ಅನರ್ಹ ಮತದಾರರಿಗೆ ಮತದಾನ ಅವಕಾಶ ನೀಡುವಂತೆ ನ್ಯಾಯಾಲಯದ ಮೊರೆಹೋದ ಸಹಕಾರ ಭಾರತಿ ಅಭ್ಯರ್ಥಿಗಳು | ಅವಕಾಶ ನೀಡಿದಲ್ಲಿ ಸಹಕಾರಿ ಭಾರತಿಗೆ 12 ರಲ್ಲಿ 8 ಸ್ಥಾನಗಳಲ್ಲಿ ಗೆಲುವು

ಕಡಬ: ಆಲಂಕಾರು ಕೃಷಿಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕೊನೆಗೂ ಸಹಕಾರ ಭಾರತಿ ವಿರುದ್ಧದ ಬಂಡಾಯ ಎದ್ದ ಇನ್ನೊಂದು ತಂಡ ಜಯಗಳಿಸಿದೆ. ಆದರೂ ಅನರ್ಹ 440 ಮತದಾರರಿಗೆ ಅವಕಾಶಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಅವಕಾಶ ನೀಡಿದಲ್ಲಿ 12 ಸ್ಥಾನದಲ್ಲಿ 8 ಸ್ಥಾನ ಸಹಕಾರ ಭಾರತಿ ಪಾಲಾಗಲಿದೆ. ಚುನಾವಣೆಗಾಗಿ ಬಂಡಾಯ ಎದ್ದ ರಮೇಶ್ ಉಪ್ಪಂಗಳ ಅವರ ತಂಡ 10 ಸ್ಥಾನಗಳನ್ನು ಗೆದ್ದರೂ, ಒಂದು ವೇಳೆ ಅನರ್ಹ 440 ಮತದಾರರಿಗೆ ಮತದಾನ ಮಾಡಲು ಅವಕಾಶ

ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ | ಬಂಡಾಯ ಅಭ್ಯರ್ಥಿಗಳಿಗೇ ಗೆಲುವು | 440 ಅನರ್ಹ ಮತದಾರರಿಗೆ ಮತದಾನ ಅವಕಾಶ ನೀಡುವಂತೆ ನ್ಯಾಯಾಲಯದ ಮೊರೆಹೋದ ಸಹಕಾರ ಭಾರತಿ ಅಭ್ಯರ್ಥಿಗಳು | ಅವಕಾಶ ನೀಡಿದಲ್ಲಿ ಸಹಕಾರಿ ಭಾರತಿಗೆ 12 ರಲ್ಲಿ 8 ಸ್ಥಾನಗಳಲ್ಲಿ ಗೆಲುವು Read More »

ಆಲಂಕಾರು ರಥಬೀದಿ ಕ್ರಿಕೆಟರ್ಸ್‍ ನಿಂದ ಆಲಂಕಾರು ವಲಯದ ಹಿಂದೂ ಬಾಂಧವರಿಗೆ ರಥಬೀದಿ ಪ್ರಿಮಿಯರ್ ಲೀಗೇಜ್‍  ಕ್ರಿಕೇಟ್‍ ಪಂದ್ಯಾಟ | ಪಂದ್ಯಾಟದಲ್ಲಿ ಉಳಿಕೆಯಾದ ಮೊತ್ತ ಅನಾರೋಗ್ಯಕ್ಕೊಳಗಾದ ಎರಡು ಬಡ ಕುಟುಂಬಕ್ಕೆ ಹಸ್ತಾಂತರ

ಕಡಬ: ತಾಲೂಕಿನ ಆಲಂಕಾರು ರಥಬೀದಿ ಕ್ರಿಕೆಟರ್ಸ್ ವತಿಯಿಂದ ಆಲಂಕಾರು ವಲಯದ ಹಿಂದೂ ಬಾಂಧವರಿಗೆ ರಥಬೀದಿ ಪ್ರಿಮಿಯರ್ ಲೀಗೇಜ್‍ ಕ್ರಿಕೇಟ್‍ ಪಂದ್ಯಾಟ ನಡೆಸಿದ್ದು, ಪಂದ್ಯಾಟದಲ್ಲಿ ಉಳಿಕೆಯಾದ ಮೊತ್ತವನ್ನು ಅನಾರೋಗ್ಯದಿಂದ ಬಳಲುತ್ತಿರುವ ಎರಡು ಕುಟುಂಬಗಳಿಗೆ ಸಹಾಯಧನ ರೂಪದಲ್ಲಿ ವಿತರಿಸಲಾಯಿತು. ಸಾಧನೆಗೆ ಸಹಕಾರ, ಆಶಕ್ತರಿಗೆ ಶಕ್ತಿ (ಬಡ ಮಕ್ಕಳ ವಿದ್ಯೆಗೆ ಪ್ರೋತ್ಸಾಹಧನ, ಅಸಮರ್ಥರಿಗೆ ನೆರವು ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಆಲಂಕಾರು ವಲಯದ ಹಿಂದೂ ಬಾಂಧವರ 10 ತಂಡಗಳ ಲೀಗ್‍ ಮಾದರಿಯ ಪಂದ್ಯಾಟದ ಸಮಾರಂಭದಲ್ಲಿ ಸ್ಟ್ರೋಕ್‍ ಗೆ ಒಳಗಾದ ಶ್ರೀಧರ ನೂಜೋಡು

ಆಲಂಕಾರು ರಥಬೀದಿ ಕ್ರಿಕೆಟರ್ಸ್‍ ನಿಂದ ಆಲಂಕಾರು ವಲಯದ ಹಿಂದೂ ಬಾಂಧವರಿಗೆ ರಥಬೀದಿ ಪ್ರಿಮಿಯರ್ ಲೀಗೇಜ್‍  ಕ್ರಿಕೇಟ್‍ ಪಂದ್ಯಾಟ | ಪಂದ್ಯಾಟದಲ್ಲಿ ಉಳಿಕೆಯಾದ ಮೊತ್ತ ಅನಾರೋಗ್ಯಕ್ಕೊಳಗಾದ ಎರಡು ಬಡ ಕುಟುಂಬಕ್ಕೆ ಹಸ್ತಾಂತರ Read More »

error: Content is protected !!
Scroll to Top