ದಕ್ಷಿಣ ಕನ್ನಡ

ಜು.16 ರ ವರಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ

ಬೆಂಗಳೂರು : ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ತುಮಕೂರು, ವಿಜಯಪುರದಲ್ಲಿ […]

ಜು.16 ರ ವರಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ Read More »

ಪಿಕಪ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ : ಓರ್ವ ಮೃತ್ಯು, ಮಹಿಳೆ ಗಂಭೀರ

ಬೆಳ್ತಂಗಡಿ : ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ. ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಪಿಕಪ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ : ಓರ್ವ ಮೃತ್ಯು, ಮಹಿಳೆ ಗಂಭೀರ Read More »

ಓಮ್ನಿ-ಸಿಫ್ಟ್ ಕಾರು ಡಿಕ್ಕಿ | ಪ್ರಯಾಣಿಕರಿಗೆ ಗಾಯ

ಬಂಟ್ವಾಳ : ಓಮ್ನಿಯೊಂದಕ್ಕೆ ಹಿಂದಿನಿಂದ ಬಂದ ಶಿಪ್ಟ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಪಲ್ಟಿಯಾಗಿ ಪ್ರಯಾಣಿಕರು ಕ ಗಂಭೀರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಬಿ.ಸಿ.ರೋಡು-ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿರುವ ಪರ್ಲ ಚರ್ಚ್ ಬಳಿ ಕಾರು ಚಾಲಕ ರಾಯಿಸನ್ ಹಾಗೂ ಮಕ್ಕಳು ಸಹಿತ ಮೂವರು ಜನ ಹಾಗೂ ಸಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೆ ಗಾಯಗಳಾಗಿವೆ. ಡಿಕ್ಕಿಯ ರಭಸಕ್ಕೆ ಓಮ್ನಿ ಕಾರನ್ನು ಸ್ವಲ್ಪ ದೂರದ ವರೆಗೆ ತಳ್ಳಿಕೊಂಡು ಹೋಗಿದೆ. ಅಪಘಾತದಿಂದ ಕಾರಿನೊಳಗೆ ಸಿಲುಕಿದ್ದವರನ್ನು ಗಾಜು ಒಡೆದು ಹೊರಕ್ಕೆ

ಓಮ್ನಿ-ಸಿಫ್ಟ್ ಕಾರು ಡಿಕ್ಕಿ | ಪ್ರಯಾಣಿಕರಿಗೆ ಗಾಯ Read More »

ಬೆಂಕಿಯಿಟ್ಟು ಯುವಕನ ಬರ್ಬರ ಹತ್ಯೆ | ಆರೋಪಿ ಬಂಧನ | ಶಾರ್ಟ್ ಸರ್ಕ್ಯೂಟ್ ನಿಂದ ಸಾವು ಎಂದು ಆರೋಪಿಯಿಂದ ನಾಟಕ

ಮಂಗಳೂರು : ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನಲ್ಲಿ ನಡೆದಿದೆ. ಜಗ್ಗು (35) ಹತ್ಯೆಯಾದ ಯುವಕ. ಹತ್ಯೆಗೈದ ಆರೋಪಿ ತೌಸಿಫ್ ಹುಸೈನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ಬೆಳಿಗ್ಗೆ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಜಗ್ಗು ನನ್ನು ಕ್ಷುಲ್ಲಕ ಕಾರಣಕ್ಕೆ ಬೆಂಕಿಯಿಟ್ಟು ಸುಟ್ಟುಹಾಕಿದ್ದು, ಸ್ಥಳೀಯರು ತಕ್ಷಣ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪ್ರಕರಣದಿಂದ ತಪ್ಪಿಸಿಕೊಳ್ಳಲು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೃತಪಟ್ಟಿದ್ದಾನೆ ಎಂದು ಸಾರ್ವಜನಿಕರಲ್ಲಿ

ಬೆಂಕಿಯಿಟ್ಟು ಯುವಕನ ಬರ್ಬರ ಹತ್ಯೆ | ಆರೋಪಿ ಬಂಧನ | ಶಾರ್ಟ್ ಸರ್ಕ್ಯೂಟ್ ನಿಂದ ಸಾವು ಎಂದು ಆರೋಪಿಯಿಂದ ನಾಟಕ Read More »

ಪುತ್ತಿಲ ಪರಿವಾರದೊಂದಿಗೆ ರಹಸ್ಯ ಸಭೆ ನಡೆಸಿದ ಬಿ.ಎಲ್.ಸಂತೋಷ್ | ಸಂಧಾನಕ್ಕೆ ಯತ್ನ

ಪುತ್ತೂರು : ದ.ಕ.ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಭದ್ರಕೋಟೆಯನ್ನು ಅಲುಗಾಡಿಸಿರುವ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅರುಣ್ ಕುಮಾರ್ ಪುತ್ತಿಲರ ಬಿಜೆಪಿ ಜತೆಗಿನ ಸಂಧಾನ ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದ್ದು ಇದೀಗ ಬಹಿರಂಗಗೊಂಡಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಪುತ್ತಿಲರನ್ನು ದೆಹಲಿಗೆ ಕರೆಸಿ ರಹಸ್ಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ  ಚುನಾವಣೆ ಪೂರ್ವ ಹಾಗೂ ನಂತರ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದ್ದು, ಈ ಸಭೆ ಜೂನ್‍ನಲ್ಲೇ ನಡೆದಿದೆ ಎಂಬುದು ಇದೀಗ ಬಹಿರಂಗವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆ

ಪುತ್ತಿಲ ಪರಿವಾರದೊಂದಿಗೆ ರಹಸ್ಯ ಸಭೆ ನಡೆಸಿದ ಬಿ.ಎಲ್.ಸಂತೋಷ್ | ಸಂಧಾನಕ್ಕೆ ಯತ್ನ Read More »

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ : ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ರಾತ್ರಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ Read More »

ತೋಡಿಗೆ ಬಿದ್ದು ಮಹಿಳೆ ಸಾವು

ಕಾರ್ಕಳ:  ಮಹಿಳೆಯೊಬ್ಬರು ಆಕಸ್ಮಿಕವಾಗಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನದಾಯಿಪಾಲ್ಕೆಯಲ್ಲಿ ನಡೆದಿದೆ. ಬೇಬಿ ಶೆಟ್ಟಿ (57) ಮೃತಪಟ್ಟ ಮಹಿಳೆ ಶುಕ್ರವಾರ ಮಧ್ಯಾಹ್ನ ದನವನ್ನು ಹುಡುಕಿಕೊಂಡು ಹೋದ ಸಂದರ್ಭದಲ್ಲಿ ಆಕಸ್ಮಿಕವಾಗಿ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ. ಭಾರಿ ಮಳೆ ಯಾಗುತಿದ್ದರಿಂದ ತೋಡಿನಲ್ಲಿ ಭಾರಿ ಪ್ರಮಾಣದಲ್ಲಿ ಹರಿಯುತಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ತೋಡಿಗೆ ಬಿದ್ದು ಮಹಿಳೆ ಸಾವು Read More »

ಕಾಂಗ್ರೆಸ್ ಸರಕಾರ ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೇ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದೆ : ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು  ವಂಚಿಸಿದ ಕಾಂಗ್ರೆಸ್ ಸರಕಾರ ಇದೀಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್  ತಿಳಿಸಿದ್ದಾರೆ. ಗ್ಯಾರಂಟಿಗಳ ಜಾರಿಗೆ 57,910 ಕೋಟಿ ರೂ. ವೆಚ್ಚ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ ಆದಾಯ ಸಂಗ್ರಹದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ ನೀಡುವುದಾಗಿ ಘೋಷಿಸಿದ್ದರೂ, ಬಜೆಟ್ ನಲ್ಲಿ ಇದರ ವೆಚ್ಚದ ಉಲ್ಲೇಖವಿಲ್ಲ

ಕಾಂಗ್ರೆಸ್ ಸರಕಾರ ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೇ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದೆ : ಸಂಸದ ನಳಿನ್ ಕುಮಾರ್ ಕಟೀಲ್ Read More »

ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷಾ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ | ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಂಸದರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ತೀವ್ರ ಮಳೆ ಬೀಳುತ್ತಿದ್ದು,  ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರು ಇಂದು ತಮ್ಮ ಕಛೇರಿಯಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾನ್ಯ ಸಂಸದರು ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡೆ ತಡೆಯನ್ನು ನಿವಾರಣೆ ಸೇರಿದಂತೆ ಅಗತ್ಯ ಸುರಕ್ಷ ಕ್ರಮಗಳನ್ನು ಕೈಗೊಳ್ಳವ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಇಂಜಿನಿಯರೊಂದಿಗೆ ಚರ್ಚಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು.

ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷಾ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ | ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಂಸದರು Read More »

ಮನೆಗೆ ಗುಡ್ಡ ಜರಿದು ಮಹಿಳೆ ಮೃತ್ಯು | ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಬಂಟ್ವಾಳ : ಮನೆಗೆ ಗುಡ್ಡ ಜರಿದು ಮಹಿಳೆಯೋರ್ವಳು ಮೃತಪಟ್ಟ ಸಜಿಪ ಮುನ್ನೂರು ಗ್ರಾಮದ ನಂದಾವರದ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭೇಟಿ ನೀಡಿದ್ದಾರೆ . ಅವಘಡ ಸಂಭವಿಸಿದ ಕುಟುಂಬಕ್ಕೆ ರೂ. ಐದು ಲಕ್ಷ ಪರಿಹಾರ ಮತ್ತು ಮನೆ ರಿಪೇರಿಗೆ 1.20 ಲಕ್ಷಪರಿಹಾರವನ್ನು ಸರಕಾರದಿಂದ ನೀಡುವ ಭರವಸೆ ನೀಡಿದರು. ಜೊತೆಗೆ ತಾಲೂಕಿನಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ತಾಲುಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಹಶಿಲ್ದಾರ್ ಎಸ್.ವಿ.ಕೂಡಲಗಿ, ತಾ.ಪಂ. ಕಾರ್ಯ ನಿರ್ವಹಣಾ ಧಿಕಾರಿ

ಮನೆಗೆ ಗುಡ್ಡ ಜರಿದು ಮಹಿಳೆ ಮೃತ್ಯು | ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read More »

error: Content is protected !!
Scroll to Top