ದಕ್ಷಿಣ ಕನ್ನಡ

ಕಡೇಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರಾತಿ ಪತ್ರ ಹಸ್ತಾಂತರ

ಉಪ್ಪಿನಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯದ ಕಡೇಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಶ್ರೀ ಕ್ಷೇತ್ರದಿಂದ ಮಂಜೂರಾಗಿರುವ ರೂ.1,00,000/- ಅನುದಾನದ ಮಂಜೂರಾತಿ ಪತ್ರವನ್ನು ನೀಡಲಾಯಿತು. ವಿಟ್ಲ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾದ ರಮೇಶ್  ರೂ.1,00,000/- ಅನುದಾನದ ಮಂಜೂರಾತಿ ಪತ್ರವನ್ನು ಶಾಲಾ ಶಿಕ್ಷಕರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ರಾವ್, ಸದಸ್ಯೆ ನಳಿನಾಕ್ಷಿ, […]

ಕಡೇಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರಾತಿ ಪತ್ರ ಹಸ್ತಾಂತರ Read More »

ಮೂಡುಬಿದಿರೆ ನಗರ ಬಜರಂಗದಳ ಸಂಯೋಜಕ ವಿಜೇಶ್‍ ಕುಮಾರ್ ನಿಧನ

ಮೂಡುಬಿದಿರೆ : ಮೂಡುಬಿದಿರೆ ನಗರ ಬಜರಂಗದಳದ ಸಂಯೋಜಕ ವಿಜೇಶ್ ಕುಮಾರ್ (30 ) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳವಾರ ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಜೇಶ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಅವರು ಕೊನೆಯುಸಿರೆಳೆದರು.

ಮೂಡುಬಿದಿರೆ ನಗರ ಬಜರಂಗದಳ ಸಂಯೋಜಕ ವಿಜೇಶ್‍ ಕುಮಾರ್ ನಿಧನ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆಯಿಂದ  ನಿರ್ಗತಿಕ  ಕುಟುಂಬಕ್ಕೆ  ಮಾಸಾಸನ ಕೈಪಿಡಿ  ಹಸ್ತಾಂತರ

ವಿಟ್ಲ : ಶ್ರೀ  ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)  ವಿಟ್ಲ  ಬಂಟ್ವಾಳ ತಾಲೂಕು  ಕೆದಿಲ ಗ್ರಾಮದ ಅಂಗರಾಜೆ  ಜಾಕುರವರಿಗೆ  ಮಸಾಸನ  ಕೈಪಿಡಿ  ವಿತರಣೆ ಮಾಡಲಾಯಿತು. ಮನೆಗೆ ಆಧಾರ ಸ್ತಂಭವಾಗಿದ್ದ  ಮಗ  ವೆಲ್ಡಿಂಗ್  ಕೆಲಸ ಮಾಡುತ್ತಿದ್ದಾಗ  ಬಿದ್ದು  ಮೃತಪಟ್ಟಿರುತ್ತಾರೆ. ದೊಡ್ಡ ಮಗಳು  ಹೃದ್ರೋಗ ಸಮಸ್ಯೆಯಿಂದ  ಬಳಲುತಿದ್ದು, ಸಣ್ಣ ಮಗಳು ಬುದ್ಧಿಮಾಂದ್ಯಯಾಗಿದ್ದು. ಶ್ರೀ ಕ್ಷೇತ್ರದಿಂದ  ಮಂಜೂರಾದ  ಮಾಸಾಸನ ಕೈಪಿಡಿಯನ್ನು ಶೌರ್ಯ ವಿಪತ್ತು ನಿರ್ವಹಣಾ  ಕೆದಿಲದ ಸದಸ್ಯರು  ವಿತರಿಸಿದರು. ಈ ಸಂದರ್ಭದಲ್ಲಿ ಜ್ಞಾನವಿಕಾಸ ಸಮನ್ವಯಧಿಕಾರಿ ದೀಪಾ, ಕೆದಿಲ B

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆಯಿಂದ  ನಿರ್ಗತಿಕ  ಕುಟುಂಬಕ್ಕೆ  ಮಾಸಾಸನ ಕೈಪಿಡಿ  ಹಸ್ತಾಂತರ Read More »

ಅಪ್ರಾಪ್ತ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ | ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಮೂಡುಬಿದಿರೆ : ಅಪ್ರಾಪ್ತ ವಯಸ್ಸಿನ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕ  ಮತ್ತು ಮಧ್ಯ ವಯಸ್ಸಿನ ವ್ಯಕ್ತಿ ಸಹಿತ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ಬಂಧಿಸಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಪೊಕ್ಸೋ ಪ್ರಕರಣ ದಾಖಲಿಸಿದ್ದಾರೆ. ಪ್ರಾಂತ್ಯ ಗ್ರಾಮದ ಅಜಂಕಲ್ಲುವಿನ ನಿವಾಸಿ ಪ್ರಕಾಶ್ (57) ಹಾಗೂ ಆಲಂಗಾರು ಉಮಿಯದ ಪವನ್ (19) ಎಂಬವರು ಬಂಧಿತ ಆರೋಪಿಗಳು. ಪ್ರಾಂತ್ಯ ಅಜಂಕಲ್ಲುವಿನ ಪ್ರಕಾಶ್ ಎಂಬಾತ ತನ್ನ ಮನೆಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಾಲಕಿಯ ಮನೆಗೆ ಯಾರೂ ಇಲ್ಲದಾಗ ಕಳೆದ ಒಂದು

ಅಪ್ರಾಪ್ತ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ | ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಉಪ್ಪಿನಂಗಡಿ ನದಿಯಲ್ಲಿ  ವ್ಯಕ್ತಿಯೋರ್ವನ ಶವ ಪತ್ತೆ

ಉಪ್ಪಿನಂಗಡಿ : ಉಪ್ಪಿನಂಗಡಿ ನದಿಯಲ್ಲಿ ಶವವೊಂದು ಪತ್ತೆಯಾದ ಘಟನೆ ಇಂದು ನಡೆದಿದೆ. ಸ್ಥಳೀಯರು ನೀಡಿದ ಮಾಹಿತಿ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ. ಶವದ ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಉಪ್ಪಿನಂಗಡಿ ನದಿಯಲ್ಲಿ  ವ್ಯಕ್ತಿಯೋರ್ವನ ಶವ ಪತ್ತೆ Read More »

ನೇಣುಬಿಗಿದು ಯುವತಿ ಆತ್ಮಹತ್ಯೆ

ಬ್ರಹ್ಮಾವರ : ಯುವತಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಕುಟುಂಬದ ಆರ್ಥಿಕ ಪರಿಸ್ಥಿತಿಯಿಂದ ಮನನೊಂದು ಅತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸೆಲಿನ್ ಡಿಸೋಜ(46) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮಾ.9ರಂದು ಸಂಜೆ ಮನೆಯ ಹಾಲ್‌ನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣುಬಿಗಿದು ಯುವತಿ ಆತ್ಮಹತ್ಯೆ Read More »

ಶರವೂರು ಕ್ಷೇತ್ರದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ತಾಳಮದ್ದಳೆ ಸೇವೆ

ಅಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾಂಬ ಕಲಾಸಂಗಮ   ಶರವೂರು ಇದರ ವತಿಯಿಂದ ಇಷ್ಟಾರ್ಥ ಸಿದ್ಧಿಗಾಗಿ  ಯಕ್ಷಗಾನ ತಾಳಮದ್ದಳೆ ಸೇವೆಯು ಶ್ರೀ ದೇವಿ ಸನ್ನಿದಿಯಲ್ಲಿ ಅರ್ಚಕರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ಹರೀಶ ಉಪಾಧ್ಯಾಯ ಮತ್ತು ರಾಘವೇಂದ್ರ ಪ್ರಸಾದರು  ದೀಪೋಜ್ವಲನ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀ ಕ್ಷೇತ್ರದಲ್ಲಿ ದೇವಿಗೆ ಪ್ರಿಯವಾದ  ಯಕ್ಷಗಾನ ಸೇವೆ   ಹಿಂದಿನಿಂದಲೂ ನಡೆಯುತ್ತಿದ್ದು ಇಷ್ಟಾರ್ಥ ಸಿದ್ಧಿಗಾಗಿ  ಈಗ ಆರಂಭಿಸಲ್ಪಡುತ್ತಿರುವ ತಾಳಮದ್ದಳೆಯು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ 

ಶರವೂರು ಕ್ಷೇತ್ರದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ತಾಳಮದ್ದಳೆ ಸೇವೆ Read More »

ಬಸ್‍-ದ್ವಿಚಕ್ರ ವಾಹನ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು

ಕಡಬ: ಸ್ಕೂಟಿ ಹಾಗೂ ಸರಕಾರಿ ಬಸ್‍ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (24) ಮೃತಪಟ್ಟ ಸ್ಕೂಟಿ ಸವಾರ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ಸ್ಕೂಟರ್ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ವಿನ್ಯಾಸ್ ಆಸ್ಪತ್ರೆಗೆ ಸಾಗಿಸುವ ದಾರಿ

ಬಸ್‍-ದ್ವಿಚಕ್ರ ವಾಹನ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು Read More »

ನೇಣುಬಿಗಿದು ಯುವಕನೋರ್ವ ಆತ್ಮಹತ್ಯೆಗೆ ಶರಣು

ವಿಟ್ಲ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರು ತಂದೆ, ತಾಯಿ ಹಾಗು ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನೇಣುಬಿಗಿದು ಯುವಕನೋರ್ವ ಆತ್ಮಹತ್ಯೆಗೆ ಶರಣು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಅಳಿಕೆ ವಲಯದ ಮುಳಿಯ ಜ್ಞಾನವಿಕಾಸದ ವಾರ್ಷಿಕೋತ್ಸವ

ಅಳಿಕೆ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ  ಅಳಿಕೆ ವಲಯದ ಮುಳಿಯ ಕಾರ್ಯಕ್ಷೇತ್ರದ  ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ   ವಾರ್ಷಿಕೋತ್ಸವ  ಕಾರ್ಯಕ್ರಮ ನಡೆಯಿತು. ಕೇಂದ್ರದ  ಸದಸ್ಯೆ ವರದಲಕ್ಷ್ಮಿ ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದರು.  ಕೇಂದ್ರದ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ತಾಲೂಕಿನ ನಿಕಟಪೂರ್ವ ಯೋಜನಾಧಿಕಾರಿಯವರು  ಜ್ಞಾನವಿಕಾಸ ಹಗೂ   ವಾತ್ಸಲ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರಿಗೆ ಆಟೋಟ ನಡೆಸಿ ಬಹುಮಾನ ವಿತರಣೆ  ಮಾಡಲಾಯಿತು. ಈ ಸಂದರ್ಭ ಕೇಂದ್ರ ದ ಸಂಯೋಜಕಿ ಶಾಲಿನಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಅಳಿಕೆ ವಲಯದ ಮುಳಿಯ ಜ್ಞಾನವಿಕಾಸದ ವಾರ್ಷಿಕೋತ್ಸವ Read More »

error: Content is protected !!
Scroll to Top