ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ನೂನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ !

ಮಂಗಳೂರು: ದ.ಕ.ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಅವರನ್ನು ನೇಮಕ ಮಾಡಲಾಗಿದೆ. ದ.ಕ.ಜಿಲ್ಲಾಧಿಕಾರಿಯಾಗಿದ್ದ ಎಂ.ಆರ್.ರವಿ ಕುಮಾರ್ ಹಾಗೂ ಜಿಪಂ ಸಿಇಒ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮುಲ್ಲೈ ಮುಹಿಲನ್ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಜಿಲ್ಲಾಧಿಕಾರಿ ರವಿ ಕುಮಾರ್ ಅವರ ನಿಯೋಜನೆ ಸ್ಥಳದ ಮಾಹಿತಿ ಲಭ್ಯವಾಗಿಲ್ಲ. ಸಿಇಒ ಕುಮಾರ್ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ನೂನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ ! Read More »

ಧರ್ಮಸ್ಥಳ ವಿದ್ಯಾರ್ಥಿನಿ ಸೌಜನ್ಯ ಕೊಲೆ ಆರೋಪಿ ಸಂತೋಷ್ ರಾವ್ ನಿರ್ದೋಷಿ | ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು

ಧರ್ಮಸ್ಥಳ: ಧರ್ಮಸ್ಥಳ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ವಿಚಾರಣೆಯಲ್ಲಿರುವ ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದಿಂದ ಖುಲಾಸೆ ಮಾಡಿದೆ. ಸಂತೋಷ್ ರಾವ್ ವಿರುದ್ಧ ಸಲ್ಲಿಕೆಯಾಗಿರುವ ಸಾಕ್ಷ್ಯಾಧ್ಯಾರಗಳ ಕೊರತೆ ಹಿನ್ನಲೆಯಲ್ಲಿ ಆರೋಪಿಯನ್ನು ದೋಷಮುಕ್ತಿಗೊಳಿಸಲಾಗಿದೆ. ಈ ಕುರಿತು ನ್ಯಾಯಮೂರ್ತಿ ಸಿ.ಬಿ.ಸಂತೋಷ್ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಉಜಿರೆ ಎಸ್‍ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು

ಧರ್ಮಸ್ಥಳ ವಿದ್ಯಾರ್ಥಿನಿ ಸೌಜನ್ಯ ಕೊಲೆ ಆರೋಪಿ ಸಂತೋಷ್ ರಾವ್ ನಿರ್ದೋಷಿ | ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು Read More »

ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ | ಇಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್‍ನಿಂದ ತೀರ್ಪು ಪ್ರಕಟ

ಧರ್ಮಸ್ಥಳ : 11 ವರ್ಷಗಳ ಹಿಂದೆ ನಡೆದ ದ.ಕ.ಜಿಲ್ಲೆಯ ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದ ತೀರ್ಪು ಇಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್‍ನಿಂದ ಪ್ರಕಟವಾಗಲಿದೆ. ಧರ್ಮಸ್ಥಳದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಉಜಿರೆ ಎಸ್‍ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು 2012 ಅಕ್ಟೋಬರ್ 9 ರಂದು ಕಾಲೇಜಿನಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದರು. ಮರುದಿನ ರಾತ್ರಿ ಧರ್ಮಸ್ಥಳ ಮಣ್ಣಸಂಕ ಬಳಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಈ

ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ | ಇಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್‍ನಿಂದ ತೀರ್ಪು ಪ್ರಕಟ Read More »

ಜೂ.19 ರ ವರೆಗೆ ಕರ್ನಾಟಕ ಕರಾವಳಿ ಭಾಗದಲ್ಲಿ “ಹೈ ವೇವ್ ಅಲರ್ಟ್” ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ಕರಾವಳಿ ಭಾಗದಲ್ಲಿ “ಹೈ ವೇವ್ ಅಲರ್ಟ್” ಘೋಷಣೆ ಮಾಡಿದೆ. ದ.ಕ.ಜಿಲ್ಲೆ 42 ಕಿ.ಮೀ. ಕರಾವಳಿ ತೀರವನ್ನು ಹೊಂದಿದ್ದು, ಇತ್ತೀಚೆಗೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ ಬಿಪರ್ ಜಾಯ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆಗಳಿವೆ. ಪರಿಣಾಮ ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ ನಷ್ಟು ಇರಲಿದ್ದು, ಕರಾವಳಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದಿಂದಾಗಿ ಮುಂದಿನ 5 ದಿನಗಳ ವರೆಗೆ ಅಂದರೆ ಜೂ.19 ರ ವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು,

ಜೂ.19 ರ ವರೆಗೆ ಕರ್ನಾಟಕ ಕರಾವಳಿ ಭಾಗದಲ್ಲಿ “ಹೈ ವೇವ್ ಅಲರ್ಟ್” ಘೋಷಣೆ Read More »

ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆಗಮನವಾಗಿದ್ದು, ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಳದಿ ಅಲರ್ಟ್

ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಯಲ್ಲೋ ಅಲರ್ಟ್ ಘೋಷಣೆ Read More »

ಎ ಪ್ಲಾಸ್ಟಿಕ್ ಅನೆಮಿಯ ಖಾಯಿಲೆಗೆ ತುತ್ತಾದ ಲಲಿತಾ ಪೂಜಾರಿ | ಚಿಕಿತ್ಸೆ ವೆಚ್ಚಕ್ಕೆ ಧನ ಸಹಾಯಕ್ಕಾಗಿ ವಿನಂತಿ

ಬೆಳ್ತಂಗಡಿ: ಲಲಿತಾ ಪೂಜಾರಿ ತೋಟತ್ತಾಡಿ ಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಧನಸಹಾಯ ಕೋರಿದ್ದಾರೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ನಿವಾಸಿಯಾಗಿರುವ ಲಲಿತಾ ಪೂಜಾರಿ  ಎ ಪ್ಲಾಸ್ಟಿಕ್ ಅನೆಮಿಯ ಖಾಯಿಲೆಗೆ ತುತ್ತಾಗಿದ್ದು, ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗಾಗಲೇ ಅವರ ಚಿಕಿತ್ಸೆಗೆ ಲಕ್ಷಗಟ್ಟಲೆ ವೆಚ್ಚವಾಗಿದ್ದು, ಇನ್ನೂ 10 ಲಕ್ಷಕ್ಕಿಂತಲೂ ಅಧಿಕ ಖರ್ಚು ತಗಲಬಹುದು ಎಂದು ಅಂದಾಜಿಸಲಾಗಿದೆ. ಬಡ ಕುಟುಂಬದವರಾಗಿದ್ದ ಅವರು ಈಗಾಗಲೇ ಸಾಲದಿಂದ ನೊಂದಿದ್ದು, ಚಿಕಿತ್ಸೆ ಖರ್ಚು ಭರಿಸಲು ದಾನಿಗಳಿಂದ ಸಹಾಯ ನಿರೀಕ್ಷಿಸುತ್ತಿದ್ದಾರೆ. ತಮ್ಮಿಂದಾದ ಸಹಾಯ ನೀಡುವಂತೆ ದುರ್ಗಾವಾಹಿನಿ

ಎ ಪ್ಲಾಸ್ಟಿಕ್ ಅನೆಮಿಯ ಖಾಯಿಲೆಗೆ ತುತ್ತಾದ ಲಲಿತಾ ಪೂಜಾರಿ | ಚಿಕಿತ್ಸೆ ವೆಚ್ಚಕ್ಕೆ ಧನ ಸಹಾಯಕ್ಕಾಗಿ ವಿನಂತಿ Read More »

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಜಿಲ್ಲೆಗೆ ಭೇಟಿ | ಪುತ್ತೂರು ಶಾಸಕರಿಂದ ಸ್ವಾಗತ

ಪುತ್ತೂರು: ದ.ಕ.ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಅವರನ್ನು ಪುತ್ತೂರು  ಶಾಸಕ ಅಶೋಕ್ ಕುಮಾರ್ ರೈ ಹೂಗುಚ಼್ಛ ನೀಡಿ ಸ್ವಾಗತಿಸಿದರು. ಶಾಸಕರ ಜತೆ ಮಾಜಿ ಶಾಸಕ ಶಕುಂತಳಾ ಟಿ. ಶೆಟ್ಟಿ ಉಪಸ್ಥಿತರಿದ್ದರು. ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಪ್ರಯಾಣ ಜಾರಿಗೆ ತರಲಾಗಿದ್ದು, ಈ ಕುರಿತು ಮಧ್ಯಾಹ್ನ 3 ಗಂಟೆಗೆ ಸಚಿವರು ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಯಲಿದ್ದಾರೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಜಿಲ್ಲೆಗೆ ಭೇಟಿ | ಪುತ್ತೂರು ಶಾಸಕರಿಂದ ಸ್ವಾಗತ Read More »

ಅಡಿಕೆ ಕೀಳುವಾಗ ವಿದ್ಯುತ್ ಶಾಕ್: ಯುವಕ ಮೃತ್ಯು | ಬಂಟ್ವಾಳದ ಮಲಾಯಿಬೆಟ್ಟುವಿನಲ್ಲಿ ಘಟನೆ

ಬಂಟ್ವಾಳ: ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಮಲಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬೋಳಿಯಾರು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ ಮೃತ ಯುವಕ. ಸಜೀಪ ಮುನ್ನೂರು ಗ್ರಾಮದ ಮೂಸಬ್ಬ ಅವರ ತೋಟದಲ್ಲಿ ಅಡಿಕೆ ತೆಗೆಯುತ್ತಿದ್ದಾಗ ಘಟನೆ ನಡೆದಿದೆ. ರಸ್ತೆಯ ಬದಿಯಲ್ಲಿ ಹಾದು ಹೋಗಿದ್ದ ಎಲ್.ಟಿ. ವಯರಿಗೆ ಫೈಬರ್ ದೋಟಿ ತಾಗಿ, ವಿದ್ಯುತ್ ಶಾಕ್ ಹೊಡೆದಿದೆ ಎಂದು ಹೇಳಲಾಗಿದೆ. ಅಡಿಕೆ ವ್ಯಾಪಾರಿಯಾಗಿರುವ ಶಾಫಿ, ಗಿಡದಿಂದಲೇ ಅಡಿಕೆಯನ್ನು ಕ್ರಯಕ್ಕೆ ಪಡೆದುಕೊಳ್ಳುತ್ತಿದ್ದರು. ನಂತರ ಅಡಿಕೆಯನ್ನು

ಅಡಿಕೆ ಕೀಳುವಾಗ ವಿದ್ಯುತ್ ಶಾಕ್: ಯುವಕ ಮೃತ್ಯು | ಬಂಟ್ವಾಳದ ಮಲಾಯಿಬೆಟ್ಟುವಿನಲ್ಲಿ ಘಟನೆ Read More »

ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ದ.ಕ.ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿ ನಿವಾಸಿ ಬಾಲಕೃಷ್ಣ (58) ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಕರುಳು ಹಾಗೂ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕರ್ತವ್ಯ ಮಾಡುತ್ತಿದ್ದರು. ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೃತರ ಪುತ್ರ ಚೇತನ್ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ | ಕರಾವಳಿಯಲ್ಲಿ ನಾಲ್ಕು ದಿನ ಭಾರೀ ಮಳೆಯಾಗುವ ಸಂಭವ | ಹವಾಮಾನ ಇಲಾಖೆ ವರದಿ

ಪುತ್ತೂರು: ವಾಯುಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಗಾಳಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ  ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು, ಸ್ಥಳೀಯರು, ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ಜಿಲ್ಲಾಧಿಕಾರಿಯವರು ಪ್ರಕಟಣೆ ನೀಡಿದ್ದಾರೆ. ಮಕ್ಕಳು, ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ  ವಿದ್ಯುತ್ ಕಂಬ, ಕಟ್ಟಡದ ಕೆಳಗೆ, ಬಳಿ ನಿಲ್ಲಬಾರದು. ಅಲ್ಲದೆ ನೆರೆ ಪೀಡಿತ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ಸೇರಬೇಕು

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ | ಕರಾವಳಿಯಲ್ಲಿ ನಾಲ್ಕು ದಿನ ಭಾರೀ ಮಳೆಯಾಗುವ ಸಂಭವ | ಹವಾಮಾನ ಇಲಾಖೆ ವರದಿ Read More »

error: Content is protected !!
Scroll to Top