ದಕ್ಷಿಣ ಕನ್ನಡ

ಖಾಸಗಿ ಬಸ್- ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು

ಮೂಡಬಿದಿರೆ: ಮಂಗಳೂರು -ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಮೂಡುಬಿದಿರೆ ಸಮೀಪದ ತೋಡಾರಿನ ಹಂಡೇಲು ಎಂಬಲ್ಲಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಎಡಪದವು ರಾಜೇಶ್ವರಿ ಜ್ಯುವೆಲರ್ಸ್‌ ಚಂದ್ರಹಾಸ ಆಚಾರ್ಯ ಅವರ ಪುತ್ರ ,ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ (19) ಗುರುತಿಸಲಾಗಿದೆ. ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಎಂಬವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಕಾರ್ತಿಕ್ ಅವರು ಕಾಲೇಜು ಮುಗಿಸಿ ತನ್ನ ಬೈಕ್‌ನಲ್ಲಿ […]

ಖಾಸಗಿ ಬಸ್- ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು Read More »

ದೇಶದ ಸಂಸ್ಕೃತಿ, ಸಂಸ್ಕಾರ ಉಳಿವು ಬಿಜೆಪಿಯಿಂದ ಮಾತ್ರ ಸಾಧ್ಯ | ರಾಮಕುಂಜದಲ್ಲಿ ಸುಳ್ಯ ಶಾಸಕರಿಗೆ, ಮತದಾರರಿಗೆ, ಕಾರ್ಯಕರ್ತರಿಗೆ ಅಭಿನಂದನಾ ಸಭೆಯಲ್ಲಿ ಭಾಗೀರಥಿ ಮುರುಳ್ಯ

ಕಡಬ: ಭಾರತ ದೇಶ ವಿಶ್ವಮಾನ್ಯ ರಾಷ್ಟ್ರವಾಗಿ ಹೊರಹೊಮ್ಮಿ ಜಗತ್ತಿನಲ್ಲಿ ಮಾನ್ಯತೆ ಪಡೆಯುತ್ತಿರುವ ಈ ಸಂದರ್ಭದಲ್ಲಿ ನಮ್ಮ ದೇಶದ ಸಂಸ್ಕೃತಿ ಸಂಪ್ರದಾಯ ವೈಶಿಷ್ಟ್ಯತೆ ಇಡೀ ಪ್ರಪಂಚದಲ್ಲಿ ಜನಜನಿತವಾಗಿದೆ. ನಮ್ಮ ದೇಶದ ಮೌಲ್ಯಗಳು ಉಳಿಯಬೇಕಾದರೆ, ಸರ್ವತೋಮುಖ ಅಭಿವೃದ್ಧಿಯಾಗಬೇಕಾದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.  ಅವರು ಮಂಗಳವಾರ ಸಂಜೆ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಕೊಯಿಲ ಮಹಾಶಕ್ತಿಕೇಂದ್ರ ಹಾಗೂ ರಾಮಕುಂಜ,

ದೇಶದ ಸಂಸ್ಕೃತಿ, ಸಂಸ್ಕಾರ ಉಳಿವು ಬಿಜೆಪಿಯಿಂದ ಮಾತ್ರ ಸಾಧ್ಯ | ರಾಮಕುಂಜದಲ್ಲಿ ಸುಳ್ಯ ಶಾಸಕರಿಗೆ, ಮತದಾರರಿಗೆ, ಕಾರ್ಯಕರ್ತರಿಗೆ ಅಭಿನಂದನಾ ಸಭೆಯಲ್ಲಿ ಭಾಗೀರಥಿ ಮುರುಳ್ಯ Read More »

ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ (23) ಹೃದಯಾಘಾತದಿಂದ ಮೇ 31ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಮೂಲತಃ ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿಯಾಗಿರುವ ಇವರನ್ನು ಚಿಕ್ಕಮಗಳೂರಿಗೆ ವಿವಾಹ ಮಾಡಿಕೊಡಲಾಗಿತ್ತು. ಕೆಲ ದಿನಗಳಿಂದ ಹೃದಯ ನೋವಿನಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ. ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆದುಕೊಂಡಿದ್ದು, ಆ ಸಂದರ್ಭ ಸಾಲಿಯಾತ್ ಅವರು ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿಯಾಗಿ ಗಮನ ಸೆಳೆದಿದ್ದರು.

ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ Read More »

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ದಾಳಿ| ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮತ್ತೊಮ್ಮೆ ಚುರುಕು ಪಡೆದ ಎನ್.ಐ.ಎ. ದಾಳಿ

ಮಂಗಳೂರು: ಪ್ರವೀಣ್ ನೆಟ್ಟಾರು‌ ಪ್ರಕರಣದ ಬಳಿಕ ಉಗ್ರ ಕೃತ್ಯಗಳ ಜಾಡು‌ ಹಿಡಿದಿರುವ ಎನ್.ಐ.ಎ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಮಿಂಚಿನ ದಾಳಿ ನಡೆಸಿದೆ.  ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆ ಮೇಲೆ ರೇಡ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, 16 ಕಡೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ದಾಳಿ| ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮತ್ತೊಮ್ಮೆ ಚುರುಕು ಪಡೆದ ಎನ್.ಐ.ಎ. ದಾಳಿ Read More »

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ

ಕಾಸರಗೋಡು: ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ದಾಸ್ತಾನು ಇಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿ ಮಹಮ್ಮದ್ ಮುಸ್ತಫಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, 7 ಸಾವಿರ ಡಿಟೋನೇಟರ್‌ಗಳು, 2,800 ಜಿಲೆಟಿನ್ ಕಡ್ಡಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳು ದಿನನಿತ್ಯದಂತೆ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಮ್ಮದ್ ಮುಸ್ತಫಾ ಎಂಬವನ ವಾಹನದಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿವೆ. ನಂತರ ಅವನ ಮನೆಗೆ ತೆರಳಿದಾಗ ಅಲ್ಲಿ

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ Read More »

ನೆಟ್ಟಣ: ಗಾಳಿ ಮಳೆಗೆ ಎರಡು ಕಾರುಗಳ ಮೇಲೆ ಬಿದ್ದ ಮರ, ಸಂಚಾರ ಅಸ್ತವ್ಯಸ್ತ

ನೆಟ್ಟಣ: ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಗಾಳಿ ಮಳೆಗೆ ಕಡಬ ತಾಲೂಕಿನ ನೆಟ್ಟಣದಲ್ಲಿ ಹೆದ್ದಾರಿ ಬದಿಯಲ್ಲಿದ್ದ ಮರಗಳು ಎರಡು ಕಾರುಗಳ ಮೇಲೆ ಬಿದ್ದ ಪರಿಣಾಮ ಕಾರುಗಳು ಜಖಂಗೊಂಡಿದ್ದು,ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಬಗ್ಗೆ ವರದಿಯಾಗಿದೆ. ಕಡಬದ ನೆಟ್ಟಣದ ಕೇಂದ್ರೀಯ ನಾಟಾ ಸಂಗ್ರಹ ಘಟಕದ ಬಳಿ ಈ ಘಟನೆ ಸಂಭವಿಸಿದೆ. ಭಾರೀ ಗಾಳಿಗೆ ಹೆದ್ದಾರಿ ಬದಿಯ ದೂಪದ ಹಲವು ಮರಗಳು ರಸ್ತೆಗೆ ಬಿದ್ದಿವೆ. ಈ ವೇಳೆ ಸಂಚರಿಸುತ್ತಿದ್ದ ನ್ಯಾನೋ ಹಾಗೂ ಆಮ್ನಿ ಕಾರುಗಳ ಮೇಲೆ ಮರ ಬಿದ್ದಿದೆ.

ನೆಟ್ಟಣ: ಗಾಳಿ ಮಳೆಗೆ ಎರಡು ಕಾರುಗಳ ಮೇಲೆ ಬಿದ್ದ ಮರ, ಸಂಚಾರ ಅಸ್ತವ್ಯಸ್ತ Read More »

ಅಭಿಮಾನಿಗಳಿಗೆ ಅಶೋಕ್ ರೈ ಬುದ್ಧಿವಾದ ಹೇಳಲಿ | ಸುಳ್ಯದ ಪ್ರಮಿತ್ ರಾವ್ ಮನೆಗೆ ಭೇಟಿ ನೀಡಿ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ಫೇಸ್ ಬುಕ್ ಬರವಣಿಗೆಯನ್ನು ಆಕ್ಷೇಪಿಸಿ ಅಶೋಕ್ ಕುಮಾರ್ ರೈ ಅವರ ಅಭಿಮಾನಿಗಳು ಹೆಂಗಸು – ಮಕ್ಕಳಿರುವ ಮನೆಗೆ ಭೇಟಿ ನೀಡಿ ಜಗಳ ಮಾಡಿದ್ದು, ಇದು ಸರಿಯಾದ ಕ್ರಮವಲ್ಲ. ಆ ಅಭಿಮಾನಿಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಬುದ್ಧಿವಾದ ಹೇಳಲಿ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಸುಳ್ಯದ ಜಯನಗರ ನಿವಾಸಿ ಪ್ರಮೀತ್ ರಾವ್ ಅವರು ಫೇಸ್ ಬುಕಿನಲ್ಲಿ ಬರಹ ಬರೆದಿದ್ದು, ಇದನ್ನು ಆಕ್ಷೇಪಿಸಿ ಅಶೋಕ್ ಕುಮಾರ್ ರೈ ಅಭಿಮಾನಿಗಳು ಮೇ 24ರಂದು ತಡರಾತ್ರಿ

ಅಭಿಮಾನಿಗಳಿಗೆ ಅಶೋಕ್ ರೈ ಬುದ್ಧಿವಾದ ಹೇಳಲಿ | ಸುಳ್ಯದ ಪ್ರಮಿತ್ ರಾವ್ ಮನೆಗೆ ಭೇಟಿ ನೀಡಿ ಶಾಸಕಿ ಭಾಗೀರಥಿ ಮುರುಳ್ಯ Read More »

ಮುರುಳ್ಯ: ಯಶಸ್ವಿಯಾಗಿ ನಡೆದ ಬೇಸಗೆ ಶಿಬಿರ, ಶಾಸಕಿಗೆ ಅಭಿನಂದನೆ

ಕಾಣಿಯೂರು: ಮುರುಳ್ಯ ಗ್ರಾಮ ಪಂಚಾಯಿತಿಯ ಬೇಸಗೆ ಶಿಬಿರವು ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಯಿತು. ಶಿಬಿರವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಾನಕಿ ಮುರುಳ್ಯ ಉದ್ಘಾಟಿಸಿದ್ದು, ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಕ್ರೀಯಾಶೀಲ ಮಕ್ಕಳಿಗೆ ಬಹುಮಾನ ನೀಡಿ ಪುರಸ್ಕರಿಸಲಾಯಿತು. ಗ್ರಾಮ ಪಂಚಾಯಿತಿಯ ಅಮೃತ ಸರೋವರ ಪೂದೆಕೆರೆ, ಸಂಜೀವಿನಿ ಸದಸ್ಯೆಯರ ಹೈನುಗಾರಿಕೆ, ಮಲ್ಲಿಗೆ ಕೃಷಿ ಹಾಗೂ ವಿಶೇಷ ಚೇತನ ನವೀನ ಕಳತ್ತಜೆ ಅವರ ಜೇನುಕೃಷಿ ಮತ್ತಿತರ ಸ್ಥಳೀಯ ಕೃಷಿ ಉದ್ಯಮಗಳ ವೀಕ್ಷಣೆಗೆ ಹೊರಸಂಚಾರ ಚಟುವಟಿಕೆಯನ್ನು ನಡೆಸಲಾಯಿತು. ಶಿಬಿರಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದ್ದು, ಅವರನ್ನು

ಮುರುಳ್ಯ: ಯಶಸ್ವಿಯಾಗಿ ನಡೆದ ಬೇಸಗೆ ಶಿಬಿರ, ಶಾಸಕಿಗೆ ಅಭಿನಂದನೆ Read More »

ಜೂ.4 : ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 27ನೇ ವರ್ಷದ ವಾರ್ಷಿಕೋತ್ಸವ : ಪೂರ್ವಭಾವಿಯಾಗಿ ನಡೆದ ಆಟೋಟ ಸ್ಪರ್ಧೆ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ ವತಿಯಿಂದ ಜೂ.4 ರಂದು ನಡೆಯುವ 27ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಅಂಗವಾಗಿ ಆಟೋಟ ಸ್ಪರ್ಧೆ ಮೇ 28 ರಂದು ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಶಿವಶಂಕರ್, ಕಾರ್ಯದರ್ಶಿ ಮೋನಪ್ಪ, ಕೋಶಾಧಿಕಾರಿ ಸತೀಶ್ ಕುತ್ಯಾರ್, ಸಂಘದ ಹಿರಿಯರಾದ ಸೀತಾರಾಮ, ಗೋಪಾಲ ಅಲ್ಲಾಟಬೈಲು, ನವನೀತ್ ಮಾಳವ ಮಂಗಳೂರು, ರವೀಂದ್ರ ಕಲ್ಲಾರೆ, ಕುಶಲ ಕಾವಟೆ, ಪ್ರೇಮ ಕಾಪಿನಡ್ಕ ಹಾಗೂ ಸಮಾಜ

ಜೂ.4 : ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 27ನೇ ವರ್ಷದ ವಾರ್ಷಿಕೋತ್ಸವ : ಪೂರ್ವಭಾವಿಯಾಗಿ ನಡೆದ ಆಟೋಟ ಸ್ಪರ್ಧೆ Read More »

ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಭಿನಂದನೆ

ಮಂಗಳೂರು: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಗೊಂಡ ಬಿಜೆಪಿಯ ಶಾಸಕರಿಗೆ ಅಭಿನಂದನಾ ಸಮಾರಂಭ ಮಂಗಳೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಜನರಿಂದ ಆಯ್ಕೆಯಾದ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಹರೀಶ್ ಪೂಂಜಾ, ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕೋಟಾ ಶ್ರೀನಿವಾಸ್ ಪೂಜಾರಿ, ಗೋಪಾಲಕೃಷ್ಣ ಹೇರಳೆ, ಸಂತೋಷ್ ಕುಮಾರ್ ರೈ ಮೊದಲಾದವರು

ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಭಿನಂದನೆ Read More »

error: Content is protected !!
Scroll to Top