ದಕ್ಷಿಣ ಕನ್ನಡ

ಶಾರ್ಟ್ ಸರ್ಕ್ಯೂಟ್‍ನಿಂದ ಹೊತ್ತಿ ಉರಿದ ಹುಂಡೈ ಕಾರು

ಮಂಗಳೂರು: ವೈದ್ಯೆಯೊಬ್ಬರು ತಮ್ಮ ಕಾರನ್ನು ಚಲಾಯಿಸಿತ್ತಿರುವ ವೇಳೆ ಹುಂಡೈ ಕಾರು ಹೊತ್ತಿ ಉರಿದ ಘಟನೆ ಮಂಗಳೂರಿನ ಕೆ.ಎಸ್.ರಾವ್ ರಸ್ತೆಯ ಸಿಟಿ ಸೆಂಟರ್ ಬಳಿ ಸೋಮವಾರ ನಡೆದಿದೆ. ವೈದ್ಯೆಯೊಬ್ಬರು ತಮ್ಮ ಕಾರನ್ನು ಚಲಾಯಿಸಿಕೊಂಡು ಬಂದು ಅಪಾರ್ಟ್‌ಮೆಂಟ್ ಬಳಿ ತಂದು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅವರು ಕಾರಿನಿಂದ ಇಳಿದಿದ್ದಾರೆ. ಅಷ್ಟರಲ್ಲಾಗಲೇ ಕಾರಿನ ಮುಂಭಾಗ ಸುಟ್ಟು ಉರಿದು ಹೋಗಿದೆ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ತಗುಳಿ ಅವಘಡ ನಡೆದಿದ್ದು, ಸ್ಥಳಕ್ಕೆ ಧಾವಿಸಿದ […]

ಶಾರ್ಟ್ ಸರ್ಕ್ಯೂಟ್‍ನಿಂದ ಹೊತ್ತಿ ಉರಿದ ಹುಂಡೈ ಕಾರು Read More »

ಸುಳ್ಯದ ಯುವಕ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಮೊಬೈಲ್‍ ನಲ್ಲಿ ಸ್ಟೇಟಸ್ ಹಾಕಿಕೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ(30) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡಿ ಜೀವನ ಮಾಡಿಕೊಂಡಿದ್ದ ಪುರುಷೋತ್ತಮ್ ತನ್ನ ಮೊಬೈಲ್ ಸ್ಟೇಟಸ್ ನಲ್ಲಿ “ಓಂ ಶಾಂತಿ ಎನ್ನ ಜೋಕ್ಲೆನ್ ಸೋಕುಡು ತೂವೆನ್ಲೆ ಅಣ್ಣ” ಎಂದು ಬರೆದು ಹಾಕಿ ಮನೆಯ ಪಕ್ಕದ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಸುಳ್ಯದ ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರು ಪ್ರತಿಷ್ಠಿತ “ಚೈತನ್ಯ ಶ್ರೀ- 2024”   ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಆಯ್ಕೆ | ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ

ಸುಳ್ಯ: ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿ ತರಬೇತುದಾರರು,  ಸಂಘಟಕಿ  ಹಾಗೂ ಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರು ಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ “ಪ್ರತಿಷ್ಠಿತ “ಚೈತನ್ಯ ಶ್ರೀ- 2024”  ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್, ಸ್ಕೌಟ್- ಗೈಡ್, ಜೇಸೀಸ್, ರೆಡ್ ಕ್ರಾಸ್ ಮೊದಲಾದ ಸಂಸ್ಥೆಗಳಲ್ಲಿ ಹಲವು ಪ್ರಥಮಗಳೊಂದಿಗೆ ಕೆಲವು ಶಾಶ್ವತ ದಾಖಲೆಗಳನ್ನು ನಿರ್ಮಿಸಿರುವ ಡಾ. ಅನುರಾಧಾ ಕುರುಂಜಿಯವರು ಶಿಕ್ಷಣದ

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರು ಪ್ರತಿಷ್ಠಿತ “ಚೈತನ್ಯ ಶ್ರೀ- 2024”   ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಆಯ್ಕೆ | ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ Read More »

ತೆಂಕುತಿಟ್ಟು ವೃತ್ತಿಪರ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ ನಿಧನ

ಮಂಗಳೂರು: ತೆಂಕು ತಿಟ್ಟು ಯಕ್ಷಗಾನ ರಂಗದ ವೃತ್ತಿಪರ ಯಕ್ಷಗಾನ ಭಾಗವತೆ, ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಲೀಲಾವತಿ ಬೈಪಡಿತ್ತಾಯ (77) ಶನಿವಾರ ನಿಧನರಾಗಿದ್ದಾರೆ. ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ಕಾರಣಕ್ಕಾಗಿ ತಾಯಿ ತವರೂರು ಮಧೂರಿನ ಪಡುಕಕ್ಕೆಪ್ಪಾಡಿ ಎಂಬಲ್ಲಿ ಸೋದರಮಾವನ ಆಶ್ರಯದಲ್ಲಿ ಬೆಳೆದರು. ಸೋದರಮಾವ ರಾಮಕೃಷ್ಣ ಭಟ್ ಮಧೂರು ದೇವಾಲಯದಲ್ಲಿ ದೇವನೃತ್ಯ ಕಲಾವಿದರಾಗಿದ್ದರು.

ತೆಂಕುತಿಟ್ಟು ವೃತ್ತಿಪರ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ ನಿಧನ Read More »

ಕಬಡ್ಡಿ ಆಟಗಾರ ಹೃದಯಾಘಾತದಿಂದ ನಿಧನ

ಕಾರ್ಕಳ : ಎಸ್ ಡಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿ, ಕಬ್ಬಡಿ ಆಟಗಾರ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮುನಿಯಲು ನಿವಾಸಿಯಾದ ಪ್ರೀತಮ್ ಶೆಟ್ಟಿ (26) ಎಂದು ಗುರುತಿಸಲಾಗಿದೆ. ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ತಂಡದ ಸಕ್ರಿಯ ಆಹ್ವಾನಿತ ಆಟಗಾರ. ಎಸ್‍. ಡಿ. ಎಮ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ಪ್ರತಿಭಾನ್ವಿತ ಆಟಗಾರ ಕಬಡ್ಡಿ ಆಟದ ಕಾರಣ ಮಂಡ್ಯಕ್ಕೆ ತೆರಳಿದ್ದ ಪ್ರೀತಮ್ ಶೆಟ್ಟಿ ಅವರಿಗೆ ಆಟದ ನಡುವೆ ಎದೆ ನೋವು ಕಾಣಿಸಿಕೊಂಡು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಬಡ್ಡಿ ಆಟಗಾರ ಹೃದಯಾಘಾತದಿಂದ ನಿಧನ Read More »

ವಿರಾಸತ್: ರಾಸಲೀಲೆ ನೃತ್ಯದ ವೈಭವ, ಡೊಳ್ಳಿನ ಅಬ್ಬರದ ಅಲೆ

ಕರಾವಳಿಯಲ್ಲಿ ಅವತರಿಸಿದ ಯದುಕುಲ ಲೋಕ ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ವಿರಾಸತ್‌ನ ನಾಲ್ಕನೇ ದಿನವಾದ ಶುಕ್ರವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶೈಕ್ಷಣಿಕ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಸಂಚಲನ ಸೃಷ್ಟಿಸಿದರು. ಬಡಗುತಿಟ್ಟಿನ ಯಕ್ಷ ವೇಷಧಾರಿಗಳು ಕೃಷ್ಣನ ರಾಸಲೀಲೆಯನ್ನು ವೇದಿಕೆ ಮೇಲೆ ಪ್ರದರ್ಶಿಸಿದರು.ಮಂಟಪ ಪ್ರಭಾಕರ ಮತ್ತು ವಿದ್ವಾನ್ ಚಂದ್ರಶೇಖರ ನಾವುಡ ನಿರ್ದೇಶನದಲ್ಲಿ ಮೋಡಿಬಂದ ‘ಬಡಗುತಿಟ್ಟು ಯಕ್ಷಗಾನ ರಾಸಲೀಲೆ’ ಯಕ್ಷ ರೂಪಕ ಕೃಷ್ಣನ ಯದುಕುಲ ಲೋಕ ಕರಾವಳಿಯಲ್ಲಿ ಅವತರಿಸಿದಂತೆ ಭಾಸವಾಯಿತು.’ರಂಗನೇತಕೆ ಬಾರನೇ..’ ‘ಕೊಳಲನೂದುತ ಬಂದ ಕೃಷ್ಣ’ ಸಾಲಿಗೆ ಮಕ್ಕಳ ನೃತ್ಯ ಗೋಕುಲವನ್ನೇ

ವಿರಾಸತ್: ರಾಸಲೀಲೆ ನೃತ್ಯದ ವೈಭವ, ಡೊಳ್ಳಿನ ಅಬ್ಬರದ ಅಲೆ Read More »

6.7 ಕೆಜಿ ಗಾಂಜಾ ವಶ: ಆರೋಪಿ ಬಂಧನ

ಮುಂಬಯಿಯಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪಿ ಮಂಗಳೂರು: ಡ್ರಗ್ಸ್ ಮುಕ್ತ ಮಂಗಳೂ ಮಾಡಲು ದಿಟ್ಟ ಕಾರ್ಯಾಚರಣೆ ನಡೆಸುತ್ತುರುವ ಪೊಲೀಸರು ಮಾದಕ ವಸ್ತು ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, 6.7 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಬಳಿಯ ಮೂಲ್ಕಿ ಬಪ್ಪನಾಡುವಿನಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಅಖಿಲೇಶ್ (30) ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳು ಸೇರಿದಂತೆ ಜನರಿಗೆ ಮಾರಾಟ ಮಾಡುವ ಉದ್ದೇಶದಿಂದ ಅಖಿಲೇಶ್ ಮುಂಬಯಿಯಿಂದ ಮಂಗಳೂರಿಗೆ ಗಾಂಜಾ ತರಿಸಿಕೊಂಡಿದ್ದ ಎಂದು ಪೊಲೀಸರು

6.7 ಕೆಜಿ ಗಾಂಜಾ ವಶ: ಆರೋಪಿ ಬಂಧನ Read More »

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಂಟ್ವಾಳ ಪೊಲೀಸರು ಮುಂಬೈಯಲ್ಲಿ ಬಂಧಿಸಿದ ಘಟನೆ ನಡೆದಿದೆ. ಆರ್ಯಪು ಗ್ರಾಮದ ಸಂಪ್ಯ ನಿವಾಸಿ ಅಬ್ದುಲ್ ಅಜೀಜ್ ಬಂಧಿತ ಆರೋಪಿ ಬಂಟ್ವಾಳ ಉಪವಿಭಾಗದ ಪೋಲಿಸ್ ಉಪಾಧಿಕ್ಷಕ ವಿಜಯಪ್ರಸಾದ ಅವರ ಮಾರ್ಗದರ್ಶನಲ್ಲಿ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಪೊಲೀಸ್ ಉಪ ನಿರೀಕ್ಷಕರಾದ ರಾಮಕೃಷ್ಣ ಕಲೈ ಮಾರ್, ದುರ್ಗಪ್ಪ, ಗೋಪಾಲ ನೇತೃತ್ವದಲ್ಲಿ ಸಿಬ್ಬಂದಿಗಳಾದ ASI ಸುಜು ಹಾಗೂ HC ಜಗದೀಶ್ ರವರು ಮಾಹಿತಿ ಸಂಗ್ರಹಿಸಿ ಮಹಾರಾಷ್ಟ್ರ ರಾಜ್ಯದ ಮುಂಬಯಿ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿ ಅಬ್ದುಲ್

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಬಸ್‍ ಬ್ರೇಕ್‍ ಫೈಲ್‍| ಕ್ಷಣಾರ್ಧದಲ್ಲೇ  ತಪ್ಪಿದ ದುರಂತ

ಮಂಗಳೂರು: ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ವಿಶಾಲ್ ಟ್ರಾವೆಲ್ಸ್ ಬಸ್ ಬ್ರೇಕ್‍ ಫೈಲ್‍ ಆಗಿರುವ ಘಟನೆ ಗುರುವಾರ ಬೆಳಗ್ಗೆ ನಗರದ ಬಲ್ಲಾಳ್‌ಬಾಗ್ ಬಳಿ ನಡೆದಿದೆ. ಈ ದುರಂತದಲ್ಲಿ ಯಾವುದೆ ಅಪಾಯ ಸಂಭವಿಸದೆ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ 8 ಗಂಟೆ ವೇಳೆಗೆ ಘಟನೆ ನಡೆದಿದ್ದು, ಲಾಲ್‌ಬಾಗ್ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸಿ ಮುಂದುವರಿದ ಬಸ್ ಬಲ್ಲಾಳ್‌ಬಾಗ್ ತಂಗುದಾಣದತ್ತ ಬಂದಿದೆ. ಈ ವೇಳೆ ಚಾಲಕ ಸಿದ್ದಿಕ್ ಎರ್ಮಾಳ್ ಅವರಿಗೆ ಬಸ್ಸಿನ ಬ್ರೇಕ್ ಫೈಲ್‍ ಆಗಿದೆ ಎಂದು  ತಿಳಿದ

ಬಸ್‍ ಬ್ರೇಕ್‍ ಫೈಲ್‍| ಕ್ಷಣಾರ್ಧದಲ್ಲೇ  ತಪ್ಪಿದ ದುರಂತ Read More »

ದತ್ತಜಯಂತಿ ಅಂಗವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ದತ್ತಹೋಮ

ಪುತ್ತೂರು : ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ಶ್ರೀಗುರುದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತಜಯಂತಿ 2024ರ ಅಂಗವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ  ಇಂದು ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲು ಇಲ್ಲಿ ದತ್ತಹೋಮ ನಡೆಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ.ಕೃಷ್ಣ ಪ್ರಸನ್ನ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ, ನಗರ ಪ್ರಖಂಡ ಕಾರ್ಯದರ್ಶಿ ಜಿತೇಶ್ ಬಲ್ನಾಡ್, ನಗರ ಪ್ರಖಂಡ

ದತ್ತಜಯಂತಿ ಅಂಗವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ದತ್ತಹೋಮ Read More »

error: Content is protected !!
Scroll to Top