ಪಂಜಳದಲ್ಲಿ ಅತೀ ಶೀಘ್ರ ಅಂತರಾಷ್ಟ್ರೀಯ ಗುಣಮಟ್ಟದ ಜೇನು ಸಂಸ್ಕರಣಾ ಘಟಕ ಉದ್ಘಾಟನೆ | ಪುತ್ತೂರಿನಲ್ಲಿ ಗ್ರಾಮಜನ್ಯ ರೈತ ಉತ್ಪಾದಕ ಕಂಪೆನಿಯಿಂದ ಲೋಗೋ ಅನಾವರಣ.
ಪುತ್ತೂರು: 2020ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಲ್ಲಿ ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಸ್ಥಾಪಿತಗೊಂಡ ಗ್ರಾಮಜನ್ಯ ರೈತ ಉತ್ಪಾದಕರ ಸಂಸ್ಥೆಯ ನೂತನ ಲೋಗೋ ನ.28ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸತ್ಯಧರ್ಮ ನಡೆಯಲ್ಲಿ ಅನಾವರಣಗೊಳಿಸಲಾಯಿತು. ಲೋಗೋ ಅನಾವರಣಕ್ಕೂ ಮುಂಚಿತವಾಗಿ ಸಂಸ್ಥೆಯ ಸಂಸ್ಥೆಯ ನಿರ್ದೇಶಕ ನಿರಂಜನ್ ಪೋಳ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೃಹತ್ ಕಲ್ಪನೆ ಇಟ್ಟುಕೊಂಡಿದ್ದೇವೆ. ಸಣ್ಣ ಹೆಜ್ಜೆ ಈಗಷ್ಟೆ ಇಟ್ಟಿದ್ದೇವೆ. ಈ ನಿಟ್ಟಿನಲ್ಲಿ ಸಂಸ್ಥೆಯಿಂದ ಅಂತರಾಷ್ಟ್ರೀಯ ಮಟ್ಟದ ಜೇನು ಸಂಸ್ಕರಣಾ ಘಟಕ ಅತಿ ಶೀಘ್ರದಲ್ಲಿ ಉದ್ಘಾಟನೆಗೊಳ್ಳಲಿದೆ. […]










