ದಕ್ಷಿಣ ಕನ್ನಡ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ | ದ.ಕ. ಜಿಲ್ಲೆಯಿಂದ 34,340 ವಿದ್ಯಾರ್ಥಿಗಳು 52 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ

ಪುತ್ತೂರು : ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ.ಈ ಹಿನ್ನಲೆಯಲ್ಲಿ ಜಿಲ್ಲೆ ಸೇರಿದಂತೆ ತಾಲೂಕಿನಲ್ಲಿ ಪ್ರತೀ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆಗಳು ನಡೆದಿದೆ. ಮಾ.9 ರಿಂದ 29 ರ ತನಕ ಪರೀಕ್ಷೆ ನಡೆಯಲಿದ್ದು, ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನದಂತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ದ.ಕ.ಜಿಲ್ಲೆಯಲ್ಲಿ ಹೊಸ ವಿದ್ಯಾರ್ಥಿಗಳು, ಖಾಸಗಿ ಹಾಗೂ ಪುನರಾವರ್ತಿ ಅಭ್ಯರ್ಥಿಗಳು ಸೇರಿದಂತೆ 34,340 ಮಂದಿ ಪರೀಕ್ಷೆಗೆ  ನೋಂದಾವಣೆ ಮಾಡಿಕೊಂಡಿದ್ದು, ಪರೀಕ್ಷೆ ಬರೆಯಲಿದ್ದಾರೆ. ದ.ಕ.ಜಿಲ್ಲೆಯಲ್ಲಿ ಒಟ್ಟು 52 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಅಗತ್ಯ ಭದ್ರತೆ ಒದಗಿಸಲಾಗಿದೆ. […]

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ | ದ.ಕ. ಜಿಲ್ಲೆಯಿಂದ 34,340 ವಿದ್ಯಾರ್ಥಿಗಳು 52 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ Read More »

ಅನಂತಾಡಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆಗೆ ಭಂಡಾರ ಆಗಮನ | ಮಂಗಳವಾರ ಮಧ್ಯಾಹ್ನ ಇತಿಹಾಸ ಪ್ರಸಿದ್ಧ ಮೆಚ್ಚಿಜಾತ್ರೆ

ಪುತ್ತೂರು: ಇತಿಹಾಸ ಪ್ರಸಿದ್ಧ ಅನಂತಾಡಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆಯ‌ ಹಿಂದಿನ‌ ದಿನವಾದ ಸೋಮವಾರ ರಾತ್ರಿ ದೈವಗಳ ಭಂಡಾರ ಆಗಮನವಾಯಿತು. ದೊಡ್ಡಮನೆಯಿಂದ ಸಂಪ್ರದಾಯದಂತೆ ಭಂಡಾರ ಹೊರಟು, ಚಿತ್ತರಿಗೆ ಬೂಡಿಗೆ ದೈವಗಳ ಭಂಡಾರ ಆಗಮನವಾಯಿತು. ಚಿತ್ತರಿಗೆ ಬೂಡಿನಲ್ಲಿ ಪೂರ್ವಶಿಷ್ಟ ಸಂಪ್ರದಾಯದಂತೆ ಪೂಜೆ ನೆರವೇರಿತು. ನಂತರ ದೈವಗಳ ಭಂಡಾರ ಬಂಟ್ರಿಂಜ ಮಾಡಕ್ಕೆ ತೆರಳಿತು. ಮಂಗಳವಾರ ಮಧ್ಯಾಹ್ನ ಶ್ರೀ ಉಳ್ಳಾಲ್ತಿ ದೈವದ ಮೆಚ್ಚಿ ಜಾತ್ರೆ ನಡೆಯಲಿದೆ.

ಅನಂತಾಡಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆಗೆ ಭಂಡಾರ ಆಗಮನ | ಮಂಗಳವಾರ ಮಧ್ಯಾಹ್ನ ಇತಿಹಾಸ ಪ್ರಸಿದ್ಧ ಮೆಚ್ಚಿಜಾತ್ರೆ Read More »

ಮುಕ್ಕೂರು ಅಂಚೆ ಕಚೇರಿ ಉಳಿಸಿಕೊಳ್ಳಲು ಪೂರ್ವಭಾವಿ ಸಭೆ

ಮುಕ್ಕೂರು: ಊರಿನ ಅಂಚೆ ಕಚೇರಿಯು ವ್ಯವಹಾರ ಕುಸಿತದಿಂದ ಬೇರೆಡೆಗೆ ಸ್ಥಳಾಂತರ ಅಥವಾ ಮುಚ್ಚುವುದನ್ನು ಯಾರಿಂದಲೂ ಒತ್ತಡ ಹೇರಿ ತಡೆಯುವುದು ಸಾಧನೆ ಅಲ್ಲ. ಅದರ ಬದಲಾಗಿ ಅಂಚೆ ಕಚೇರಿಯಲ್ಲಿ ಪ್ರತಿಯೊಬ್ಬರು ಖಾತೆ ತೆರೆದು ವ್ಯವಹಾರ ಹೆಚ್ಚಳಗೊಳಿಸಿ ಸ್ವಂತ ಶಕ್ತಿಯಿಂದ ಅಂಚೆ ಕಚೇರಿ ಶಾಶ್ವತವಾಗಿ ಉಳಿಯುವಂತೆ ಮಾಡುವುದೇ ಸಾಧನೆ ಎಂದು ಪೆರುವಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಹೇಳಿದರು. ಬೆಳ್ಳಾರೆ ವ್ಯಾಪ್ತಿಯ ಪೆರುವಾಜೆ ಗ್ರಾಮದ ಮುಕ್ಕೂರು ಶಾಖಾ ಅಂಚೆ ಕಚೇರಿ ವ್ಯವಹಾರ ಕುಸಿದಿದ್ದು ಇದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ

ಮುಕ್ಕೂರು ಅಂಚೆ ಕಚೇರಿ ಉಳಿಸಿಕೊಳ್ಳಲು ಪೂರ್ವಭಾವಿ ಸಭೆ Read More »

ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾ ಸಮಾವೇಶ  

ಪುತ್ತೂರು : ಬಿಜೆಪಿ ಎಸ್ ಟಿ ಮೋರ್ಚಾದ ಜಿಲ್ಲಾ ಸಮಾವೇಶ ಭಾನುವಾರ ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.   ಸಮಾವೇಶವನ್ನು ಉದ್ಘಾಟಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ ಮಾತನಾಡಿ, ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು. ಸಾಮಾಜಿಕ ನ್ಯಾಯ

ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾ ಸಮಾವೇಶ   Read More »

ಉಪ್ಪಿನಂಗಡಿ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಮುರಳಿ ಮೋಹನ್ ಚೂಂತಾರು ಭೇಟಿ

ಉಪ್ಪಿನಂಗಡಿ : ಉಪ್ಪಿನಂಗಡಿ ಗೃಹರಕ್ಷಕ ದಳದ ವಾರದ ಕವಾಯತಿಗೆ ಜಿಲ್ಲಾ ಸಮಾದೇಷ್ಟರಾದ ಡಾ. ಮುರಳಿ ಮೋಹನ್ ಚೂಂತಾರುರವರು ಭೇಟಿ ನೀಡಿ ವಾರದ ಕವಾಯತು ವೀಕ್ಷಣೆ ಮಾಡಿದರು ಚುನಾವಣಾ ಪೂರ್ವ ಸಿದ್ಧತಾ ಸಭೆ :-ಕವಾಯತು ಮುಗಿದ ನಂತರ ಗೃಹರಕ್ಷಕ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿದರು.. ಮುಂಬರುವ ವಿಧಾನ ಸಭಾ ಚುನಾವಣೆಗೆ ಎಲ್ಲಾ ಗೃಹರಕ್ಷಕರು ಕಡ್ಡಾಯವಾಗಿ ಹಾಜರಾಗಬೇಕು ಹಾಗೂ ಚುನಾವಣೆ ಕರ್ತವ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿಗಳಿಗೆ ಅಂಚೆ ಮತದಾನದ ಮೂಲಕ ಮತ ಚಲಾವಣೆ ಮಾಡಲು ಇಲಾಖಾ ಮುಖಾಂತರ ವ್ಯವಸ್ಥೆ ಮಾಡಲಾಗುವುದು

ಉಪ್ಪಿನಂಗಡಿ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಮುರಳಿ ಮೋಹನ್ ಚೂಂತಾರು ಭೇಟಿ Read More »

ಉಳ್ಳಾಲ : ಯುವಕನಿಗೆ ಚೂರಿ ಇರಿತ

ಮನೆಯಿಂದ ಹೊರಗೆ ಕರೆದು ಮರಣಾಂತಿಕ ಹಲ್ಲೆ ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರದಲ್ಲಿ ಆತನ ಮನೆಯ ಎದುರೇ ಸಂಭವಿಸಿದೆ. ಶುಕ್ರವಾರ ತಡರಾತ್ರಿ ವೇಳೆ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಎಂಬವರು ಕೊಲೆಯತ್ನಕ್ಕೆ ಒಳಗಾದವರು. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಹಾಗೂ ಇನ್ನಿಬ್ಬರು ಸೇರಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ

ಉಳ್ಳಾಲ : ಯುವಕನಿಗೆ ಚೂರಿ ಇರಿತ Read More »

ಮಾ.7 : ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್ 24ನೇ ವರ್ಷದ ಸಂಸ್ಥಾಪನಾ ದಿನಾಚರಣೆ

ಪುತ್ತೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್‌ನ 28ನೇ ವರ್ಷದ ಸಂಸ್ಥಾಪನಾ ದಿನಾಚರಣೆ ದ.ಕ.ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಎಲ್ಲಾ ಕ್ಷೇತ್ರಗಳ, ವಲಯಗಳ ಸಹಕಾರದೊಂದಿಗೆ ಮಾ. 7ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಕೆ.ಎಸ್.ಟಿ.ಎ. ಜಿಲ್ಲಾ ಸಮಿತಿ ಅಧ್ಯಕ್ಷ ಜಯಂತ್ ಉರ್ಲಾಂಡಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ಬಜೆಟ್ ಮಂಡನೆ ಮೊದಲು ನಮ್ಮ ಮೂರು ಬೇಡಿಕೆಯಾದ ಪೆನ್ಶನ್, ಟೈಲರ್ ವೃತ್ತಿಯಲ್ಲಿರುವವರ ಮಕ್ಕಳಿಗೆ ಸ್ಕಾಲರ್ ಶಿಪ್ ಹಾಗೂ ಆರೋಗ್ಯ ವಿಮೆ ನೀಡುವಂತೆ ಸಚಿವ ಕೋಟ

ಮಾ.7 : ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್ 24ನೇ ವರ್ಷದ ಸಂಸ್ಥಾಪನಾ ದಿನಾಚರಣೆ Read More »

ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮೆಡಿಕಲ್‍ ಅಸೋಸಿಯೇಶನ್‍ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ | ಸರಕಾರದ ಗಮನ ಸೆಳೆಯುವಂತೆ ಆಗ್ರಹ

ಪುತ್ತೂರು: ಯಶಸ್ವಿನಿ ಯೋಜನೆಯಲ್ಲಿ ಚಿಕಿತ್ಸಾ ದರ ಪರಿಷ್ಕರಿಸುವ ಸಹಿತ ವಿವಿಧ ಬೇಡಿಕೆಗಳನ್ನು ಸರಕಾರದ ಗಮನ ಸೆಳೆಯಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ನಿರ್ಧಾರವನ್ನು ಮೆಡಿಕಲ್‍ ಅಸೋಸಿಯೇಶನ್‍ ಕೈಗೊಂಡಿದೆ ಎಂದು ಅಸೋಸಿಯೇಶನ್‍ ಅಧ್ಯಕ್ಷ ಡಾ.ಶ್ರೀಪತಿ ರಾವ್‍ ತಿಳಿಸಿದ್ದಾರೆ.. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಎಲ್ಲಾ ಹಣವನ್ನು ಕೂಡಲೇ ಸಂದಾಯ ಮಾಡಬೇಕು, ರೋಗಿಗಳು ಆಸ್ಪತ್ರೆಗೆ ಸೇರುವಾಗ ಇರುವ ನಿಬಂಧನೆಗಳನ್ನು ಸಡಿಲಿಕರಣಗೊಳಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ತಿಳಿಸಿದರು. ಪುತ್ತೂರಿನ ಆಸ್ಪತ್ರೆಗಳಲ್ಲಿ ಸರಕಾರಿ ಯೋಜನೆಗಳಾದ ಇಎಸ್‌ಐ, ಯಶಸ್ವಿನಿ

ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮೆಡಿಕಲ್‍ ಅಸೋಸಿಯೇಶನ್‍ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ | ಸರಕಾರದ ಗಮನ ಸೆಳೆಯುವಂತೆ ಆಗ್ರಹ Read More »

ಸಣ್ಣ ನೀರಾವರಿ ಇಲಾಖೆಯಡಿ 3 ಕೋಟಿ ರೂ. ವೆಚ್ಚದಲ್ಲಿ ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಶಾಸಕ ಸಂಜೀವ ಮಠಂದೂರು ಶಂಕು ಸ್ಥಾಪನೆ

ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಬಳಿಯ ಕುಮಾರಧಾರ ನದಿಗೆ ಸಣ್ಣ ನೀರಾವರಿ ಇಲಾಖೆಯಡಿ 2 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ರಚನೆ ಹಾಗೂ ಸಿ.ಎ.ಬ್ಯಾಂಕ್ ಬಳಿ ನೇತ್ರಾವತಿ ನದಿಗೆ 1 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ರಚನೆ ಕಾಮಗಾರಿಗೆ ಶಂಕು ಸ್ಥಾಪನೆ ಸೋಮವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಮಳೆಗಾಲದಲ್ಲಿ ತುಂಬಿ ಹರಿಯುವ ನದಿಯಿಂದಾಗಿ ಸಾರ್ವಜನಿಕ ಸೊತ್ತುಗಳಿಗೆ ಯಾವುದೇ ಹಾನಿಯಾಗಬಾರದು ಎಂಬ ನಿಟ್ಟಿನಲ್ಲಿ ತಡೆಗೋಡೆ ಕಾಮಗಾರಿಗೆ ಸಣ್ಣ

ಸಣ್ಣ ನೀರಾವರಿ ಇಲಾಖೆಯಡಿ 3 ಕೋಟಿ ರೂ. ವೆಚ್ಚದಲ್ಲಿ ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಶಾಸಕ ಸಂಜೀವ ಮಠಂದೂರು ಶಂಕು ಸ್ಥಾಪನೆ Read More »

ಪರಿಸರ ದಿನಾಚರಣೆಗಷ್ಟೇ ಸೀಮಿತವೇ ಗಿಡ ನೆಡುವ ಕಾರ್ಯಕ್ರಮ

ಕಾರ್ಕಳ : ಸ್ವಚ್ಛ ಸುಂದರ ಪ್ರಕೃತಿಯಿಂದಲೇ ಪ್ರಸಿದ್ಧಿ ಪಡೆಯುತ್ತಿರುವ ಕಾರ್ಕಳದ ಕೆಲವು ಪ್ರದೇಶದಲ್ಲಿ ವಿವಿಧ ಸಂಘ ಸಂಸ್ಥೆಗಳು ಪರಿಸರ ದಿನಾಚರಣೆ ಮತ್ತಿತರ ಸಂದರ್ಭಗಳಲ್ಲಿ ನೆಟ್ಟ ಗಿಡಗಳು ಕೇವಲ ಆ ಒಂದು ದಿನದ ಸಂಭ್ರಮಕ್ಕೆ ಮಾತ್ರ ಸೀಮಿತವಾಗುತ್ತಿರುವದು ವಿಷಾದದ ಸಂಗತಿ. ಜನತೆಗೆ ಪರಿಸರದ ಮಹತ್ವ ಸಾರುವ ಹಾಗೂ ಜಾಗೃತಿಗೊಳಿಸುವ ಉದ್ದೇಶದಿಂದ ವಿಶ್ವಸಂಸ್ಥೆ ಜೂನ್‌ 5 ರಂದು ವಿಶ್ವ ಪರಿಸರ ದಿನಾಚರಣೆ ಪ್ರಾರಂಭ ಮಾಡಿದೆ. ಆದರೆ ಇದೀಗ ಗಿಡ ನೆಡುವುದು, ಅದರ ಪೋಷಣೆ ಕೇವಲ ಪರಿಸರ ದಿನಾಚರಣೆಗೆ ಮಾತ್ರ ಸೀಮಿತವಾಗುತ್ತಿದೆ.

ಪರಿಸರ ದಿನಾಚರಣೆಗಷ್ಟೇ ಸೀಮಿತವೇ ಗಿಡ ನೆಡುವ ಕಾರ್ಯಕ್ರಮ Read More »

error: Content is protected !!
Scroll to Top