ದಕ್ಷಿಣ ಕನ್ನಡ

ಸವಣೂರು-ಬೆಳ್ಳಾರೆ ರಸ್ತೆಯಲ್ಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ದಾರಿ ಸೂಚನಾ ಫಲಕ ಅನಾವರಣ

ಸವಣೂರು: ಬೆಳ್ಳಾರೆ-ಸವಣೂರು ರಸ್ತೆಯ ಪರಣೆಯಲ್ಲಿ ಸವಣೂರು  ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ದಾರಿ ಸೂಚಿಸುವ ಫಲಕ ಇಂದು ಲೋಕರ್ಪಣೆಗೊಂಡಿತು. ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ ಅವರು ಸೂಚನಾ ಫಲಕವನ್ನು ಕೊಡುಗೆಯಾಗಿ ನೀಡಿದ್ದಾರೆ. ನಾಮಫಲಕ ಲೋಕಾರ್ಪಣಾ ಸಂದರ್ಭದಲ್ಲಿ ಸವಣೂರು ಶ್ರೀ  ವಿಷ್ಣುಮೂರ್ತಿ  ದೇವಾಲಯದ ಜಾತ್ರೋತ್ಸವ ಸಮಿತಿ ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ಸವಣೂರು ಗ್ರಾಮ ದೈವ ಶ್ರೀರಾಡಿ‌ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಪೂರ್ವಾಧ್ಯಕ್ಷ ಪ್ರಜ್ವಲ್ ಕೆ.ಆರ್. ಕೋಡಿಬೈಲು, […]

ಸವಣೂರು-ಬೆಳ್ಳಾರೆ ರಸ್ತೆಯಲ್ಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ದಾರಿ ಸೂಚನಾ ಫಲಕ ಅನಾವರಣ Read More »

ಉಜಿರೆಯ ಎಸ್.ಡಿ.ಯಂ ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ

ಬೆಳ್ತಂಗಡಿ : ಉಜಿರೆಯ ಎಸ್.ಡಿ.ಯಂ ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ. ಇವರು ಡಾ.ಎ.ಜಯಕುಮಾರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಮತ್ತು ಅಭಿವೃದ್ಧಿ- ರುಡ್‍ ಸೆಟ್‍ ನ್ನು ಅನುಲಕ್ಷಿಸಿ ಎಂಬ ವಿಷಯದ ಕುರಿತು ಮಹಾಪ್ರಬಂಧ ರಚಿಸಿ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು. ಪ್ರಸ್ತುತ ಇವರು ಎಸ್.ಡಿ.ಯಂ ಕಾಲೇಜಿನ ಸಮಾಜಕಾರ್ಯ ವಿಭಾಗದಲ್ಲಿ ಕಳೆದ 15 ವರ್ಷಗಳಿಂದ ಪ್ರಾಧ್ಯಾಪಕರಾಗಿ ಮತ್ತು ಕಾಲೇಜಿನ B.voc ವಿಭಾಗದ

ಉಜಿರೆಯ ಎಸ್.ಡಿ.ಯಂ ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ Read More »

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ನಡುತೋಟ ಆಯ್ಕೆ

ಮಂಗಳೂರು: ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷ ಮಹೇಶ್ ನಡುತೋಟರವರು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಚುಣಾವಣೆಯಲ್ಲಿ ಸ್ಫರ್ಧಿಸಿ ಅತ್ಯಧಿಕ ಮತಗಳಿಂದ ಚುನಾಯಿತರಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಮಹೇಶ್‍ ನಡುತೋಟ ಅವರು ಸುಬ್ರಹ್ಮಣ್ಯದ ಬಿಳಿನೆಲೆ ಗ್ರಾಮದ ಕೈಕಂಬದ ನಡುತೊಟ ಮನೆಯವರು. ಮಂಗಳೂರಿನಲ್ಲಿ ಉದ್ಯಮಿ ಯಾಗಿ ಕಳೆದ 15 ವರುಷದಿಂದ ನೆಲೆಸಿದ್ದಾರೆ. ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ನಿರ್ದೇಶಕರಾಗಿದ್ದಾರೆ. ದಿವಂಗತ ಚೆನ್ನಕೇಶವ ಗೌಡ ನಡುತೋಟ ಮತ್ತು ರುಕ್ಮಿಣಿ ದಂಪತಿ

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ನಡುತೋಟ ಆಯ್ಕೆ Read More »

ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕರ ಸಂಘದ ಕಾರ್ಯಕಾರಿ ಸಮಿತಿಗೆ ಎನ್ನೆಂಸಿಯ ಡಾ. ಅನುರಾಧಾ ಕುರುಂಜಿ ಆಯ್ಕೆ

ಸುಳ್ಯ : ಮಂಗಳೂರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ. ಅನುರಾಧಾ ಕುರುಂಜಿಯವರು ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘ, ವಿಕಾಸದ ಕಾರ್ಯಕಾರಿ ಸಮಿತಿಗೆ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಈ ಸಮಿತಿಯು  ಮುಂದಿನ ಎರಡು ವರ್ಷಗಳ ಕಾಲ ಮುಂದುವರಿಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘ, ವಿಕಾಸದ ಕಾರ್ಯಕಾರಿ ಸಮಿತಿಗೆ ಸಹ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕರ ಸಂಘದ ಕಾರ್ಯಕಾರಿ ಸಮಿತಿಗೆ ಎನ್ನೆಂಸಿಯ ಡಾ. ಅನುರಾಧಾ ಕುರುಂಜಿ ಆಯ್ಕೆ Read More »

ಫೆ. 9: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿ ಚುನಾವಣೆ

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಆಡಳಿತ ಮಂಡಳಿಯ ನಿರ್ದೇಶಕರುಗಳ ಚುನಾವಣೆ ಫೆ. 9ರಂದು ನಡೆಯಲಿದೆ. ಸಹಕಾರ ಭಾರತಿಯ ಬೆಂಬಲಿತ ಅಭ್ಯರ್ಥಿಯಾಗಿ ಒಟ್ಟು 17 ಅಭ್ಯರ್ಥಿಗಳು ಕಣಕಿಳಿಯಲಿದ್ದಾರೆ. ಈ ಪೈಕಿ ಸಾಮಾನ್ಯ ಕ್ಷೇತ್ರದಿಂದ 11 ಅಭ್ಯರ್ಥಿಗಳು, ಮಹಿಳಾ ಮೀಸಲಾತಿಯಿಂದ 2 ಅಭ್ಯರ್ಥಿಗಳು, ಹಿಂದುಳಿದ  ‘ ಎ ‘ ವರ್ಗದಿಂದ 1 ಅಭ್ಯರ್ಥಿ, ಹಿಂದುಳಿದ ‘ ಬಿ ‘ ವರ್ಗದಿಂದ 1 ಅಭ್ಯರ್ಥಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡ ದಿಂದ 1

ಫೆ. 9: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿ ಚುನಾವಣೆ Read More »

ದ. ಕ. ಗ್ಯಾರೇಜ್ ಮಾಲಕರ ಸಂಘ ಮಂಗಳೂರು , ವಿಟ್ಲ ವಲಯಕ್ಕೆ ಜಿಲ್ಲಾಧ್ಯಕ್ಷರ ಅಧಿಕೃತ ಬೇಟಿ

ವಿಟ್ಲ :  ದ. ಕ. ಗ್ಯಾರೇಜ್ ಮಾಲಕರ ಸಂಘ ಮಂಗಳೂರು, ವಿಟ್ಲ ವಲಯಕ್ಕೆ ಜಿಲ್ಲಾಧ್ಯಕ್ಷರ ಅಧಿಕೃತ ಬೇಟಿ ಕಾರ್ಯಕ್ರಮ ಚಂದಳಿಕೆ ಭಾರತ್ ಆಡಿಟೋರಿಯಂ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷ  ದಿನಕರ ಕುಲಾಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಂಚೆ ಇಲಾಖೆಯ ಜೀವ ವಿಮೆಯ ಮಾಹಿತಿಯನ್ನು ಪುತ್ತೂರು ಅಂಚೆ ಕಚೇರಿಯ ಮಾರ್ಕೆಟಿಂಗ್ ಮ್ಯಾನೇಜರ್ ಗುರುಪ್ರಸಾದ್ ನೀಡಿದರು. ಬಳಿಕ ವಿಟ್ಲ ವಲಯದ ಸದಸ್ಯರ ವಿಮಾ ನೊಂದಾವಣೆ ಮಾಡಲಾಯಿತು. ವಿಟ್ಲ ವಲಯದ ಅಧ್ಯಕ್ಷ ಲೀಯೋ ಡಿ ಲಸ್ರಾದೊ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ 

ದ. ಕ. ಗ್ಯಾರೇಜ್ ಮಾಲಕರ ಸಂಘ ಮಂಗಳೂರು , ವಿಟ್ಲ ವಲಯಕ್ಕೆ ಜಿಲ್ಲಾಧ್ಯಕ್ಷರ ಅಧಿಕೃತ ಬೇಟಿ Read More »

ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ  ಸಾಮೂಹಿಕ ಧರಣಿ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ನಂತೂರು ಜಂಕ್ಷನ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಿತು. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರ, ಭ್ರಮರಕೊಟ್ಲು ಟೋಲ್ ಗೇಟ್ ತೆರವು, ಹೊಸ ಟೋಲ್ ಗೇಟ್ ನಿರ್ಮಿಸುವ ಮುನ್ನ ಟೋಲ್ ಗೇಟ್ ನಿಯಮಾವಳಿ ಪಾಲನೆ, ನಂತೂರು ಮೇಲ್ಸೇತುವೆ ಹಾಗೂ ಕೂಳೂರು ಸೇತುವೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಮಿತಿ ಮುಂದಿಟ್ಟಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮುನೀರ್ ಕಾಟಿಪಳ್ಳ

ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ  ಸಾಮೂಹಿಕ ಧರಣಿ Read More »

ಕಾಂಗ್ರೆಸ್ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್

ವಿಟ್ಲ : ಇಂಟೆಕ್ ಪ್ರಮುಖ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ತಿಳಿದು ಬಂದಿದೆ ಎಂಬುವುದು ವರದಿಯಾಗಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಫೈರಿಂಗ್ ನಡೆದಿದೆ ಎನ್ನಲಾಗಿದ್ದು, ಅವರು ಯಾಕೆ ಅಲ್ಲಿ  ಹೋಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿಲ್ಲ. ಆತನ ಗನ್ ನಿಂದ ಮಿಸ್ ಫೈರಿಂಗ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಖಚಿತವಾದ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಗಾಯಗೊಂಡ ಚಿತ್ತರಂಜನ್ ಶೆಟ್ಟಿ ಅವರನ್ನು ಮಂಗಳೂರು ಖಾಸಗಿ

ಕಾಂಗ್ರೆಸ್ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್ Read More »

ಕರಾವಳಿಯಲ್ಲಿ ಮತ್ತೆ ಚಿಕಾನ್‍ ಪಾಕ್ಸ್

ಮಂಗಳೂರು : ಕರಾವಳಿಯ ಹಲವೆಡೆ ಚಿಕನ್ ಪಾಕ್ಸ್ ಕಂಡುಬಂದಿದ್ದು, ಇದೀಗ ಕಡಬ ತಾಲೂಕಿನ ವಿವಿಧ ಶಾಲೆಗಳಲ್ಲಿ  21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್ ಕಾಣಿಸಿಕೊಂಡಿದೆ ಎಂಬುವುದು ವರದಿಯಾಗಿದೆ. ಮಾಹಿತಿ ಪ್ರಕಾರ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು 9 ಮಕ್ಕಳಿಗೆ, ಸುಬ್ರಹ್ಮಣ್ಯದಲ್ಲಿ 6 ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು ಮಗುವಿಗೆ, ಲಾವತ್ತಡ್ಕದಲ್ಲಿ ಒಂದು ಮಗುವಿಗೆ, ಗೊಳಿತ್ತೊಟ್ಟುವಿನಲ್ಲಿ ಒಂದು ಮಗುವಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್ ಪಾಕ್ಸ್ ಹರಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕರಾವಳಿಯಲ್ಲಿ ಮತ್ತೆ ಚಿಕಾನ್‍ ಪಾಕ್ಸ್ Read More »

ಬೈಕ್‍ ಸವಾರನ ಮೇಲೆ ಬಿದ್ದ ಮರ | ಸವಾರನಿಗೆ ಗಂಭೀರ ಗಾಯ

ಕಡಬ : ಚಲಿಸುತ್ತಿದ್ದ ಬೈಕ್ ಮೇಲೆ ದೂಪದ ಮರ ಬಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಕಡಬ -ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ ಸಂಜೆ ನಡೆದಿದೆ. ಈ ಘಟನೆಯಲ್ಲಿ ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬವರು ಗಾಯಗೊಂಡ ಬೈಕ್‍ ಸವಾರ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕ್ನಿ ಕಲೆಕ್ಟರ್ ಕೆಲಸ ಮಾಡುತ್ತಿದ್ದ ಇವರು, ಕೆಲಸ ಮುಗಿಸಿ ಹಿಂತಿರುಗುವಾಗ ಈ ಘಟನೆ ಸಂಭವಿಸಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ

ಬೈಕ್‍ ಸವಾರನ ಮೇಲೆ ಬಿದ್ದ ಮರ | ಸವಾರನಿಗೆ ಗಂಭೀರ ಗಾಯ Read More »

error: Content is protected !!
Scroll to Top