ಕಾರು ಬೈಕ್ ಡಿಕ್ಕಿ : ಅಪಘಾತದಲ್ಲಿ ಸುಳ್ಯದ ಯುವಕ ಸಾವು
ಸುಳ್ಯ : ಬೆಂಗಳೂರಿನಲ್ಲಿ ನಡೆದ ಕಾರು ಬೈಕ್ ಡಿಕ್ಕಿ ಅಪಘಾತದಲ್ಲಿ ಕೊಲ್ಲಮೊಗ್ರ ನಿವಾಸಿಯೋರ್ವರು ಸಾವನಪ್ಪಿರುವ ಘಟನೆ ಏ.25 ರಂದು ಸಂಭವಿಸಿದೆ. ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ವಿಮಲಾಕ್ಷಿ ದಂಪತಿಯ ಪುತ್ರ ಯತೀಶ್ ಬಾಳೆಬೈಲು(30) ಮೃತಪಟ್ಟವರು. ಸೋಮವಾರ ಬೆಳಗ್ಗೆ ಯತೀಶ್ ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಯತೀಶ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅವಿವಾಹಿತರಾಗಿರುವ ಯತೀಶ್ ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದರು. ಮೃತರು […]
ಕಾರು ಬೈಕ್ ಡಿಕ್ಕಿ : ಅಪಘಾತದಲ್ಲಿ ಸುಳ್ಯದ ಯುವಕ ಸಾವು Read More »